< בראשית 43 >

וְהָרָעָב כָּבֵד בָּאָֽרֶץ׃ 1
ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.
וַיְהִי כַּאֲשֶׁר כִּלּוּ לֶאֱכֹל אֶת־הַשֶּׁבֶר אֲשֶׁר הֵבִיאוּ מִמִּצְרָיִם וַיֹּאמֶר אֲלֵיהֶם אֲבִיהֶם שֻׁבוּ שִׁבְרוּ־לָנוּ מְעַט־אֹֽכֶל׃ 2
ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು.
וַיֹּאמֶר אֵלָיו יְהוּדָה לֵאמֹר הָעֵד הֵעִד בָּנוּ הָאִישׁ לֵאמֹר לֹֽא־תִרְאוּ פָנַי בִּלְתִּי אֲחִיכֶם אִתְּכֶֽם׃ 3
ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.
אִם־יֶשְׁךָ מְשַׁלֵּחַ אֶת־אָחִינוּ אִתָּנוּ נֵרְדָה וְנִשְׁבְּרָה לְךָ אֹֽכֶל׃ 4
ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ.
וְאִם־אֵינְךָ מְשַׁלֵּחַ לֹא נֵרֵד כִּֽי־הָאִישׁ אָמַר אֵלֵינוּ לֹֽא־תִרְאוּ פָנַי בִּלְתִּי אֲחִיכֶם אִתְּכֶֽם׃ 5
ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ ಆ “ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು” ಎಂದು ಹೇಳಿದ್ದಾನೆ.
וַיֹּאמֶר יִשְׂרָאֵל לָמָה הֲרֵעֹתֶם לִי לְהַגִּיד לָאִישׁ הַעוֹד לָכֶם אָֽח׃ 6
ಅದಕ್ಕೆ ಇಸ್ರಾಯೇಲನು, “ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?” ಎಂದು ಹೇಳಿದನು.
וַיֹּאמְרוּ שָׁאוֹל שָֽׁאַל־הָאִישׁ לָנוּ וּלְמֽוֹלַדְתֵּנוּ לֵאמֹר הַעוֹד אֲבִיכֶם חַי הֲיֵשׁ לָכֶם אָח וַנַּגֶּד־לוֹ עַל־פִּי הַדְּבָרִים הָאֵלֶּה הֲיָדוֹעַ נֵדַע כִּי יֹאמַר הוֹרִידוּ אֶת־אֲחִיכֶֽם׃ 7
ಅವರು, “ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿದನು, ಮತ್ತೆ ಅವನು ನಿಮ್ಮ ತಂದೆಯು ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ನಾವು ಉತ್ತರಕೊಟ್ಟೆವು. ಅವನು ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂದು ನಮಗೆ ಹೇಗೆ ತಿಳಿಯುವುದು” ಎಂದರು.
וַיֹּאמֶר יְהוּדָה אֶל־יִשְׂרָאֵל אָבִיו שִׁלְחָה הַנַּעַר אִתִּי וְנָקוּמָה וְנֵלֵכָה וְנִֽחְיֶה וְלֹא נָמוּת גַּם־אֲנַחְנוּ גַם־אַתָּה גַּם־טַפֵּֽנוּ׃ 8
ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು.
אָֽנֹכִי אֶֽעֶרְבֶנּוּ מִיָּדִי תְּבַקְשֶׁנּוּ אִם־לֹא הֲבִיאֹתִיו אֵלֶיךָ וְהִצַּגְתִּיו לְפָנֶיךָ וְחָטָאתִֽי לְךָ כׇּל־הַיָּמִֽים׃ 9
ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ.
כִּי לוּלֵא הִתְמַהְמָהְנוּ כִּֽי־עַתָּה שַׁבְנוּ זֶה פַעֲמָֽיִם׃ 10
೧೦ನಾವು ತಡಮಾಡದೆ ಹೋಗಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು” ಎಂದು ಹೇಳಿದನು.
וַיֹּאמֶר אֲלֵהֶם יִשְׂרָאֵל אֲבִיהֶם אִם־כֵּן ׀ אֵפוֹא זֹאת עֲשׂוּ קְחוּ מִזִּמְרַת הָאָרֶץ בִּכְלֵיכֶם וְהוֹרִידוּ לָאִישׁ מִנְחָה מְעַט צֳרִי וּמְעַט דְּבַשׁ נְכֹאת וָלֹט בׇּטְנִים וּשְׁקֵדִֽים׃ 11
೧೧ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
וְכֶסֶף מִשְׁנֶה קְחוּ בְיֶדְכֶם וְאֶת־הַכֶּסֶף הַמּוּשָׁב בְּפִי אַמְתְּחֹֽתֵיכֶם תָּשִׁיבוּ בְיֶדְכֶם אוּלַי מִשְׁגֶּה הֽוּא׃ 12
೧೨ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು.
וְאֶת־אֲחִיכֶם קָחוּ וְקוּמוּ שׁוּבוּ אֶל־הָאִֽישׁ׃ 13
೧೩ನಿಮ್ಮ ತಮ್ಮನನ್ನೂ ಕರೆದುಕೊಂಡು, ತಿರುಗಿ ಆ ಮನುಷ್ಯನ ಬಳಿಗೆ ಹೋಗಿರಿ.
וְאֵל שַׁדַּי יִתֵּן לָכֶם רַחֲמִים לִפְנֵי הָאִישׁ וְשִׁלַּח לָכֶם אֶת־אֲחִיכֶם אַחֵר וְאֶת־בִּנְיָמִין וַאֲנִי כַּאֲשֶׁר שָׁכֹלְתִּי שָׁכָֽלְתִּי׃ 14
೧೪ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.
וַיִּקְחוּ הָֽאֲנָשִׁים אֶת־הַמִּנְחָה הַזֹּאת וּמִשְׁנֶה־כֶּסֶף לָקְחוּ בְיָדָם וְאֶת־בִּנְיָמִן וַיָּקֻמוּ וַיֵּרְדוּ מִצְרַיִם וַיַּֽעַמְדוּ לִפְנֵי יוֹסֵֽף׃ 15
೧೫ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.
וַיַּרְא יוֹסֵף אִתָּם אֶת־בִּנְיָמִין וַיֹּאמֶר לַֽאֲשֶׁר עַל־בֵּיתוֹ הָבֵא אֶת־הָאֲנָשִׁים הַבָּיְתָה וּטְבֹחַ טֶבַח וְהָכֵן כִּי אִתִּי יֹאכְלוּ הָאֲנָשִׁים בַּֽצׇּהֳרָֽיִם׃ 16
೧೬ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು.
וַיַּעַשׂ הָאִישׁ כַּֽאֲשֶׁר אָמַר יוֹסֵף וַיָּבֵא הָאִישׁ אֶת־הָאֲנָשִׁים בֵּיתָה יוֹסֵֽף׃ 17
೧೭ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು.
וַיִּֽירְאוּ הָֽאֲנָשִׁים כִּי הֽוּבְאוּ בֵּית יוֹסֵף וַיֹּאמְרוּ עַל־דְּבַר הַכֶּסֶף הַשָּׁב בְּאַמְתְּחֹתֵינוּ בַּתְּחִלָּה אֲנַחְנוּ מֽוּבָאִים לְהִתְגֹּלֵל עָלֵינוּ וּלְהִתְנַפֵּל עָלֵינוּ וְלָקַחַת אֹתָנוּ לַעֲבָדִים וְאֶת־חֲמֹרֵֽינוּ׃ 18
೧೮ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ” ಎಂದುಕೊಂಡರು.
וַֽיִּגְּשׁוּ אֶל־הָאִישׁ אֲשֶׁר עַל־בֵּית יוֹסֵף וַיְדַבְּרוּ אֵלָיו פֶּתַח הַבָּֽיִת׃ 19
೧೯ಆಗ ಅವರು ಯೋಸೇಫನ ಗೃಹನಿರ್ವಾಹಕನ ಬಳಿಗೆ ಹೋಗಿ ಮನೆಯ ಬಾಗಿಲ ಬಳಿ ನಿಂತುಕೊಂಡು ಅವನ ಸಂಗಡ ಮಾತನಾಡಿ ಅವನಿಗೆ,
וַיֹּאמְרוּ בִּי אֲדֹנִי יָרֹד יָרַדְנוּ בַּתְּחִלָּה לִשְׁבׇּר־אֹֽכֶל׃ 20
೨೦“ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು.
וַֽיְהִי כִּי־בָאנוּ אֶל־הַמָּלוֹן וַֽנִּפְתְּחָה אֶת־אַמְתְּחֹתֵינוּ וְהִנֵּה כֶֽסֶף־אִישׁ בְּפִי אַמְתַּחְתּוֹ כַּסְפֵּנוּ בְּמִשְׁקָלוֹ וַנָּשֶׁב אֹתוֹ בְּיָדֵֽנוּ׃ 21
೨೧ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.
וְכֶסֶף אַחֵר הוֹרַדְנוּ בְיָדֵנוּ לִשְׁבׇּר־אֹכֶל לֹא יָדַעְנוּ מִי־שָׂם כַּסְפֵּנוּ בְּאַמְתְּחֹתֵֽינוּ׃ 22
೨೨ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು” ಎಂದು ಹೇಳಿದರು.
וַיֹּאמֶר שָׁלוֹם לָכֶם אַל־תִּירָאוּ אֱלֹהֵיכֶם וֵֽאלֹהֵי אֲבִיכֶם נָתַן לָכֶם מַטְמוֹן בְּאַמְתְּחֹתֵיכֶם כַּסְפְּכֶם בָּא אֵלָי וַיּוֹצֵא אֲלֵהֶם אֶת־שִׁמְעֽוֹן׃ 23
೨೩ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.
וַיָּבֵא הָאִישׁ אֶת־הָאֲנָשִׁים בֵּיתָה יוֹסֵף וַיִּתֶּן־מַיִם וַיִּרְחֲצוּ רַגְלֵיהֶם וַיִּתֵּן מִסְפּוֹא לַחֲמֹֽרֵיהֶֽם׃ 24
೨೪ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು.
וַיָּכִינוּ אֶת־הַמִּנְחָה עַד־בּוֹא יוֹסֵף בַּֽצׇּהֳרָיִם כִּי שָֽׁמְעוּ כִּי־שָׁם יֹאכְלוּ לָֽחֶם׃ 25
೨೫ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.
וַיָּבֹא יוֹסֵף הַבַּיְתָה וַיָּבִיאּוּ לוֹ אֶת־הַמִּנְחָה אֲשֶׁר־בְּיָדָם הַבָּיְתָה וַיִּשְׁתַּחֲווּ־לוֹ אָֽרְצָה׃ 26
೨೬ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.
וַיִּשְׁאַל לָהֶם לְשָׁלוֹם וַיֹּאמֶר הֲשָׁלוֹם אֲבִיכֶם הַזָּקֵן אֲשֶׁר אֲמַרְתֶּם הַעוֹדֶנּוּ חָֽי׃ 27
೨೭ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು.
וַיֹּאמְרוּ שָׁלוֹם לְעַבְדְּךָ לְאָבִינוּ עוֹדֶנּוּ חָי וַֽיִּקְּדוּ (וישתחו) [וַיִּֽשְׁתַּחֲוֽוּ]׃ 28
೨೮ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.
וַיִּשָּׂא עֵינָיו וַיַּרְא אֶת־בִּנְיָמִין אָחִיו בֶּן־אִמּוֹ וַיֹּאמֶר הֲזֶה אֲחִיכֶם הַקָּטֹן אֲשֶׁר אֲמַרְתֶּם אֵלָי וַיֹּאמַר אֱלֹהִים יׇחְנְךָ בְּנִֽי׃ 29
೨೯ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.
וַיְמַהֵר יוֹסֵף כִּֽי־נִכְמְרוּ רַחֲמָיו אֶל־אָחִיו וַיְבַקֵּשׁ לִבְכּוֹת וַיָּבֹא הַחַדְרָה וַיֵּבְךְּ שָֽׁמָּה׃ 30
೩೦ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
וַיִּרְחַץ פָּנָיו וַיֵּצֵא וַיִּתְאַפַּק וַיֹּאמֶר שִׂימוּ לָֽחֶם׃ 31
೩೧ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, “ಊಟಕ್ಕೆ ಬಡಿಸಿರಿ” ಎಂದು ಅಪ್ಪಣೆ ಕೊಟ್ಟನು.
וַיָּשִׂימוּ לוֹ לְבַדּוֹ וְלָהֶם לְבַדָּם וְלַמִּצְרִים הָאֹכְלִים אִתּוֹ לְבַדָּם כִּי לֹא יוּכְלוּן הַמִּצְרִים לֶאֱכֹל אֶת־הָֽעִבְרִים לֶחֶם כִּי־תוֹעֵבָה הִוא לְמִצְרָֽיִם׃ 32
೩೨ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.
וַיֵּשְׁבוּ לְפָנָיו הַבְּכֹר כִּבְכֹרָתוֹ וְהַצָּעִיר כִּצְעִרָתוֹ וַיִּתְמְהוּ הָאֲנָשִׁים אִישׁ אֶל־רֵעֵֽהוּ׃ 33
೩೩ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು.
וַיִּשָּׂא מַשְׂאֹת מֵאֵת פָּנָיו אֲלֵהֶם וַתֵּרֶב מַשְׂאַת בִּנְיָמִן מִמַּשְׂאֹת כֻּלָּם חָמֵשׁ יָדוֹת וַיִּשְׁתּוּ וַֽיִּשְׁכְּרוּ עִמּֽוֹ׃ 34
೩೪ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.

< בראשית 43 >