< הושע 7 >
כְּרׇפְאִי לְיִשְׂרָאֵל וְנִגְלָה עֲוֺן אֶפְרַיִם וְרָעוֹת שֹׁמְרוֹן כִּי פָעֲלוּ שָׁקֶר וְגַנָּב יָבוֹא פָּשַׁט גְּדוּד בַּחֽוּץ׃ | 1 |
೧ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.
וּבַל־יֹֽאמְרוּ לִלְבָבָם כׇּל־רָעָתָם זָכָרְתִּי עַתָּה סְבָבוּם מַעַלְלֵיהֶם נֶגֶד פָּנַי הָיֽוּ׃ | 2 |
೨ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.
בְּרָעָתָם יְשַׂמְּחוּ־מֶלֶךְ וּבְכַחֲשֵׁיהֶם שָׂרִֽים׃ | 3 |
೩ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ.
כֻּלָּם מְנָאֲפִים כְּמוֹ תַנּוּר בֹּעֵרָה מֵאֹפֶה יִשְׁבּוֹת מֵעִיר מִלּוּשׁ בָּצֵק עַד־חֻמְצָתֽוֹ׃ | 4 |
೪ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.
יוֹם מַלְכֵּנוּ הֶחֱלוּ שָׂרִים חֲמַת מִיָּיִן מָשַׁךְ יָדוֹ אֶת־לֹצְצִֽים׃ | 5 |
೫ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.
כִּֽי־קֵרְבוּ כַתַּנּוּר לִבָּם בְּאׇרְבָּם כׇּל־הַלַּיְלָה יָשֵׁן אֹֽפֵהֶם בֹּקֶר הוּא בֹעֵר כְּאֵשׁ לֶהָבָֽה׃ | 6 |
೬ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿ ಉರಿಯುತ್ತಿದ್ದಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ.
כֻּלָּם יֵחַמּוּ כַּתַּנּוּר וְאָכְלוּ אֶת־שֹׁפְטֵיהֶם כׇּל־מַלְכֵיהֶם נָפָלוּ אֵין־קֹרֵא בָהֶם אֵלָֽי׃ | 7 |
೭ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.
אֶפְרַיִם בָּעַמִּים הוּא יִתְבּוֹלָל אֶפְרַיִם הָיָה עֻגָה בְּלִי הֲפוּכָֽה׃ | 8 |
೮ಎಫ್ರಾಯೀಮು ಜನಾಂಗಗಳಲ್ಲಿ ಸೇರಿಕೊಳ್ಳುತ್ತದೆ; ಎಫ್ರಾಯೀಮು ತಿರುವಿಹಾಕದ ರೊಟ್ಟಿಯಂತಿದೆ.
אָכְלוּ זָרִים כֹּחוֹ וְהוּא לֹא יָדָע גַּם־שֵׂיבָה זָרְקָה בּוֹ וְהוּא לֹא יָדָֽע׃ | 9 |
೯ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.
וְעָנָה גְאֽוֹן־יִשְׂרָאֵל בְּפָנָיו וְלֹא־שָׁבוּ אֶל־יְהֹוָה אֱלֹהֵיהֶם וְלֹא בִקְשֻׁהוּ בְּכׇל־זֹֽאת׃ | 10 |
೧೦ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.
וַיְהִי אֶפְרַיִם כְּיוֹנָה פוֹתָה אֵין לֵב מִצְרַיִם קָרָאוּ אַשּׁוּר הָלָֽכוּ׃ | 11 |
೧೧ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.
כַּאֲשֶׁר יֵלֵכוּ אֶפְרוֹשׂ עֲלֵיהֶם רִשְׁתִּי כְּעוֹף הַשָּׁמַיִם אוֹרִידֵם אַיְסִירֵם כְּשֵׁמַע לַעֲדָתָֽם׃ | 12 |
೧೨ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ, ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು. ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.
אוֹי לָהֶם כִּֽי־נָדְדוּ מִמֶּנִּי שֹׁד לָהֶם כִּי־פָשְׁעוּ בִי וְאָנֹכִי אֶפְדֵּם וְהֵמָּה דִּבְּרוּ עָלַי כְּזָבִֽים׃ | 13 |
೧೩ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!
וְלֹא־זָעֲקוּ אֵלַי בְּלִבָּם כִּי יְיֵלִילוּ עַל־מִשְׁכְּבוֹתָם עַל־דָּגָן וְתִירוֹשׁ יִתְגּוֹרָרוּ יָסוּרוּ בִֽי׃ | 14 |
೧೪ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.
וַאֲנִי יִסַּרְתִּי חִזַּקְתִּי זְרוֹעֹתָם וְאֵלַי יְחַשְּׁבוּ־רָֽע׃ | 15 |
೧೫ಅವರಿಗೆ ಯುದ್ಧವನ್ನು ಕಲಿಸಿ, ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.
יָשׁוּבוּ ׀ לֹא עָל הָיוּ כְּקֶשֶׁת רְמִיָּה יִפְּלוּ בַחֶרֶב שָׂרֵיהֶם מִזַּעַם לְשׁוֹנָם זוֹ לַעְגָּם בְּאֶרֶץ מִצְרָֽיִם׃ | 16 |
೧೬ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು.