< ירמיה 30 >

הַדָּבָר אֲשֶׁר הָיָה אֶֽל־יִרְמְיָהוּ מֵאֵת יְהֹוָה לֵאמֹֽר׃ 1
ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
כֹּֽה־אָמַר יְהֹוָה אֱלֹהֵי יִשְׂרָאֵל לֵאמֹר כְּתׇב־לְךָ אֵת כׇּל־הַדְּבָרִים אֲשֶׁר־דִּבַּרְתִּי אֵלֶיךָ אֶל־סֵֽפֶר׃ 2
“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ.
כִּי הִנֵּה יָמִים בָּאִים נְאֻם־יְהֹוָה וְשַׁבְתִּי אֶת־שְׁבוּת עַמִּי יִשְׂרָאֵל וִֽיהוּדָה אָמַר יְהֹוָה וַהֲשִׁבֹתִים אֶל־הָאָרֶץ אֲשֶׁר־נָתַתִּי לַאֲבוֹתָם וִֽירֵשֽׁוּהָ׃ 3
ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.
וְאֵלֶּה הַדְּבָרִים אֲשֶׁר דִּבֶּר יְהֹוָה אֶל־יִשְׂרָאֵל וְאֶל־יְהוּדָֽה׃ 4
ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು,
כִּי־כֹה אָמַר יְהֹוָה קוֹל חֲרָדָה שָׁמָעְנוּ פַּחַד וְאֵין שָׁלֽוֹם׃ 5
“ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;
שַׁאֲלוּ־נָא וּרְאוּ אִם־יֹלֵד זָכָר מַדּוּעַ רָאִיתִי כׇל־גֶּבֶר יָדָיו עַל־חֲלָצָיו כַּיּוֹלֵדָה וְנֶהֶפְכוּ כׇל־פָּנִים לְיֵרָקֽוֹן׃ 6
ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?
הוֹי כִּי גָדוֹל הַיּוֹם הַהוּא מֵאַיִן כָּמֹהוּ וְעֵֽת־צָרָה הִיא לְיַֽעֲקֹב וּמִמֶּנָּה יִוָּשֵֽׁעַ׃ 7
ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”
וְהָיָה בַיּוֹם הַהוּא נְאֻם ׀ יְהֹוָה צְבָאוֹת אֶשְׁבֹּר עֻלּוֹ מֵעַל צַוָּארֶךָ וּמוֹסְרוֹתֶיךָ אֲנַתֵּק וְלֹא־יַעַבְדוּ־בוֹ עוֹד זָרִֽים׃ 8
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.
וְעָבְדוּ אֵת יְהֹוָה אֱלֹֽהֵיהֶם וְאֵת דָּוִד מַלְכָּם אֲשֶׁר אָקִים לָהֶֽם׃ 9
ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”
וְאַתָּה אַל־תִּירָא עַבְדִּי יַעֲקֹב נְאֻם־יְהֹוָה וְאַל־תֵּחַת יִשְׂרָאֵל כִּי הִנְנִי מוֹשִֽׁיעֲךָ מֵֽרָחוֹק וְאֶֽת־זַרְעֲךָ מֵאֶרֶץ שִׁבְיָם וְשָׁב יַעֲקֹב וְשָׁקַט וְשַׁאֲנַן וְאֵין מַחֲרִֽיד׃ 10
೧೦ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”
כִּֽי־אִתְּךָ אֲנִי נְאֻם־יְהֹוָה לְהֽוֹשִׁיעֶךָ כִּי אֶעֱשֶׂה כָלָה בְּכׇֽל־הַגּוֹיִם ׀ אֲשֶׁר הֲפִצוֹתִיךָ שָּׁם אַךְ אֹֽתְךָ לֹֽא־אֶעֱשֶׂה כָלָה וְיִסַּרְתִּיךָ לַמִּשְׁפָּט וְנַקֵּה לֹא אֲנַקֶּֽךָּ׃ 11
೧೧ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”
כִּי כֹה אָמַר יְהֹוָה אָנוּשׁ לְשִׁבְרֵךְ נַחְלָה מַכָּתֵֽךְ׃ 12
೧೨ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
אֵֽין־דָּן דִּינֵךְ לְמָזוֹר רְפֻאוֹת תְּעָלָה אֵין לָֽךְ׃ 13
೧೩ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ.
כׇּל־מְאַהֲבַיִךְ שְׁכֵחוּךְ אוֹתָךְ לֹא יִדְרֹשׁוּ כִּי מַכַּת אוֹיֵב הִכִּיתִיךְ מוּסַר אַכְזָרִי עַל רֹב עֲוֺנֵךְ עָצְמוּ חַטֹּאתָֽיִךְ׃ 14
೧೪ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.
מַה־תִּזְעַק עַל־שִׁבְרֵךְ אָנוּשׁ מַכְאֹבֵךְ עַל ׀ רֹב עֲוֺנֵךְ עָֽצְמוּ חַטֹּאתַיִךְ עָשִׂיתִי אֵלֶּה לָֽךְ׃ 15
೧೫ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.
לָכֵן כׇּל־אֹכְלַיִךְ יֵאָכֵלוּ וְכׇל־צָרַיִךְ כֻּלָּם בַּשְּׁבִי יֵלֵכוּ וְהָיוּ שֹׁאסַיִךְ לִמְשִׁסָּה וְכׇל־בֹּזְזַיִךְ אֶתֵּן לָבַֽז׃ 16
೧೬ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”
כִּי אַעֲלֶה אֲרֻכָה לָךְ וּמִמַּכּוֹתַיִךְ אֶרְפָּאֵךְ נְאֻם־יְהֹוָה כִּי נִדָּחָה קָרְאוּ לָךְ צִיּוֹן הִיא דֹּרֵשׁ אֵין לָֽהּ׃ 17
೧೭ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”
כֹּה ׀ אָמַר יְהֹוָה הִנְנִי־שָׁב שְׁבוּת אׇהֳלֵי יַֽעֲקוֹב וּמִשְׁכְּנֹתָיו אֲרַחֵם וְנִבְנְתָה עִיר עַל־תִּלָּהּ וְאַרְמוֹן עַל־מִשְׁפָּטוֹ יֵשֵֽׁב׃ 18
೧೮ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.
וְיָצָא מֵהֶם תּוֹדָה וְקוֹל מְשַׂחֲקִים וְהִרְבִּתִים וְלֹא יִמְעָטוּ וְהִכְבַּדְתִּים וְלֹא יִצְעָֽרוּ׃ 19
೧೯ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.
וְהָיוּ בָנָיו כְּקֶדֶם וַעֲדָתוֹ לְפָנַי תִּכּוֹן וּפָקַדְתִּי עַל כׇּל־לֹחֲצָֽיו׃ 20
೨೦ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.
וְהָיָה אַדִּירוֹ מִמֶּנּוּ וּמֹֽשְׁלוֹ מִקִּרְבּוֹ יֵצֵא וְהִקְרַבְתִּיו וְנִגַּשׁ אֵלָי כִּי מִי הוּא־זֶה עָרַב אֶת־לִבּוֹ לָגֶשֶׁת אֵלַי נְאֻם־יְהֹוָֽה׃ 21
೨೧ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”
וִהְיִיתֶם לִי לְעָם וְאָנֹכִי אֶהְיֶה לָכֶם לֵאלֹהִֽים׃ 22
೨೨ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.
הִנֵּה ׀ סַעֲרַת יְהֹוָה חֵמָה יָֽצְאָה סַעַר מִתְגּוֹרֵר עַל רֹאשׁ רְשָׁעִים יָחֽוּל׃ 23
೨೩ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
לֹא יָשׁוּב חֲרוֹן אַף־יְהֹוָה עַד־עֲשֹׂתוֹ וְעַד־הֲקִימוֹ מְזִמּוֹת לִבּוֹ בְּאַחֲרִית הַיָּמִים תִּתְבּוֹנְנוּ בָֽהּ׃ 24
೨೪ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.

< ירמיה 30 >