< ירמיה 36 >

וַֽיְהִי בַּשָּׁנָה הָרְבִעִית לִיהוֹיָקִים בֶּן־יֹאשִׁיָּהוּ מֶלֶךְ יְהוּדָה הָיָה הַדָּבָר הַזֶּה אֶֽל־יִרְמְיָהוּ מֵאֵת יְהֹוָה לֵאמֹֽר׃ 1
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,
קַח־לְךָ מְגִלַּת־סֵפֶר וְכָתַבְתָּ אֵלֶיהָ אֵת כׇּל־הַדְּבָרִים אֲשֶׁר־דִּבַּרְתִּי אֵלֶיךָ עַל־יִשְׂרָאֵל וְעַל־יְהוּדָה וְעַל־כׇּל־הַגּוֹיִם מִיּוֹם דִּבַּרְתִּי אֵלֶיךָ מִימֵי יֹאשִׁיָּהוּ וְעַד הַיּוֹם הַזֶּֽה׃ 2
“ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.
אוּלַי יִשְׁמְעוּ בֵּית יְהוּדָה אֵת כׇּל־הָרָעָה אֲשֶׁר אָנֹכִי חֹשֵׁב לַעֲשׂוֹת לָהֶם לְמַעַן יָשׁוּבוּ אִישׁ מִדַּרְכּוֹ הָרָעָה וְסָלַחְתִּי לַעֲוֺנָם וּלְחַטָּאתָֽם׃ 3
ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.
וַיִּקְרָא יִרְמְיָהוּ אֶת־בָּרוּךְ בֶּן־נֵֽרִיָּה וַיִּכְתֹּב בָּרוּךְ מִפִּי יִרְמְיָהוּ אֵת כׇּל־דִּבְרֵי יְהֹוָה אֲשֶׁר־דִּבֶּר אֵלָיו עַל־מְגִלַּת־סֵֽפֶר׃ 4
ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.
וַיְצַוֶּה יִרְמְיָהוּ אֶת־בָּרוּךְ לֵאמֹר אֲנִי עָצוּר לֹא אוּכַל לָבוֹא בֵּית יְהֹוָֽה׃ 5
ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;
וּבָאתָ אַתָּה וְקָרָאתָ בַמְּגִלָּה אֲשֶׁר־כָּתַֽבְתָּ־מִפִּי אֶת־דִּבְרֵי יְהֹוָה בְּאׇזְנֵי הָעָם בֵּית יְהֹוָה בְּיוֹם צוֹם וְגַם בְּאׇזְנֵי כׇל־יְהוּדָה הַבָּאִים מֵעָרֵיהֶם תִּקְרָאֵֽם׃ 6
ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.
אוּלַי תִּפֹּל תְּחִנָּתָם לִפְנֵי יְהֹוָה וְיָשֻׁבוּ אִישׁ מִדַּרְכּוֹ הָרָעָה כִּֽי־גָדוֹל הָאַף וְהַחֵמָה אֲשֶׁר־דִּבֶּר יְהֹוָה אֶל־הָעָם הַזֶּֽה׃ 7
ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.
וַיַּעַשׂ בָּרוּךְ בֶּן־נֵרִיָּה כְּכֹל אֲשֶׁר־צִוָּהוּ יִרְמְיָהוּ הַנָּבִיא לִקְרֹא בַסֵּפֶר דִּבְרֵי יְהֹוָה בֵּית יְהֹוָֽה׃ 8
ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ಆಜ್ಞಾಪಿಸಿದಂತೆ ಮಾಡಿದನು.
וַיְהִי בַשָּׁנָה הַחֲמִשִׁית לִיהוֹיָקִים בֶּן־יֹאשִׁיָּהוּ מֶֽלֶךְ־יְהוּדָה בַּחֹדֶשׁ הַתְּשִׁעִי קָֽרְאוּ צוֹם לִפְנֵי יְהֹוָה כׇּל־הָעָם בִּירוּשָׁלָ͏ִם וְכׇל־הָעָם הַבָּאִים מֵעָרֵי יְהוּדָה בִּירוּשָׁלָֽ͏ִם׃ 9
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.
וַיִּקְרָא בָרוּךְ בַּסֵּפֶר אֶת־דִּבְרֵי יִרְמְיָהוּ בֵּית יְהֹוָה בְּלִשְׁכַּת גְּמַרְיָהוּ בֶן־שָׁפָן הַסֹּפֵר בֶּחָצֵר הָעֶלְיוֹן פֶּתַח שַׁעַר בֵּית־יְהֹוָה הֶחָדָשׁ בְּאׇזְנֵי כׇּל־הָעָֽם׃ 10
೧೦ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.
וַיִּשְׁמַע מִכָיְהוּ בֶן־גְּמַרְיָהוּ בֶן־שָׁפָן אֶת־כׇּל־דִּבְרֵי יְהֹוָה מֵעַל הַסֵּֽפֶר׃ 11
೧೧ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು.
וַיֵּרֶד בֵּית־הַמֶּלֶךְ עַל־לִשְׁכַּת הַסֹּפֵר וְהִנֵּה־שָׁם כׇּל־הַשָּׂרִים יוֹשְׁבִים אֱלִישָׁמָע הַסֹּפֵר וּדְלָיָהוּ בֶן־שְׁמַֽעְיָהוּ וְאֶלְנָתָן בֶּן־עַכְבּוֹר וּגְמַרְיָהוּ בֶן־שָׁפָן וְצִדְקִיָּהוּ בֶן־חֲנַנְיָהוּ וְכׇל־הַשָּׂרִֽים׃ 12
೧೨ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.
וַיַּגֵּד לָהֶם מִכָיְהוּ אֵת כׇּל־הַדְּבָרִים אֲשֶׁר שָׁמֵעַ בִּקְרֹא בָרוּךְ בַּסֵּפֶר בְּאׇזְנֵי הָעָֽם׃ 13
೧೩ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,
וַיִּשְׁלְחוּ כׇל־הַשָּׂרִים אֶל־בָּרוּךְ אֶת־יְהוּדִי בֶּן־נְתַנְיָהוּ בֶּן־שֶׁלֶמְיָהוּ בֶן־כּוּשִׁי לֵאמֹר הַמְּגִלָּה אֲשֶׁר קָרָאתָ בָּהּ בְּאׇזְנֵי הָעָם קָחֶנָּה בְיָדְךָ וָלֵךְ וַיִּקַּח בָּרוּךְ בֶּן־נֵרִיָּהוּ אֶת־הַמְּגִלָּה בְּיָדוֹ וַיָּבֹא אֲלֵיהֶֽם׃ 14
೧೪ಸಕಲ ಪ್ರಧಾನರು ಬಾರೂಕನಿಗೆ, “ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ” ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
וַיֹּאמְרוּ אֵלָיו שֵׁב נָא וּקְרָאֶנָּה בְּאׇזְנֵינוּ וַיִּקְרָא בָרוּךְ בְּאׇזְנֵיהֶֽם׃ 15
೧೫ಅವರು ಅವನಿಗೆ, “ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು” ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.
וַיְהִי כְּשׇׁמְעָם אֶת־כׇּל־הַדְּבָרִים פָּחֲדוּ אִישׁ אֶל־רֵעֵהוּ וַיֹּֽאמְרוּ אֶל־בָּרוּךְ הַגֵּיד נַגִּיד לַמֶּלֶךְ אֵת כׇּל־הַדְּבָרִים הָאֵֽלֶּה׃ 16
೧೬ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.
וְאֶת־בָּרוּךְ שָׁאֲלוּ לֵאמֹר הַגֶּד־נָא לָנוּ אֵיךְ כָּתַבְתָּ אֶת־כׇּל־הַדְּבָרִים הָאֵלֶּה מִפִּֽיו׃ 17
೧೭ಮತ್ತು, “ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು” ಎಂದು ಅವನನ್ನು ಕೇಳಿದರು.
וַיֹּאמֶר לָהֶם בָּרוּךְ מִפִּיו יִקְרָא אֵלַי אֵת כׇּל־הַדְּבָרִים הָאֵלֶּה וַאֲנִי כֹּתֵב עַל־הַסֵּפֶר בַּדְּיֽוֹ׃ 18
೧೮ಬಾರೂಕನು ಅವರಿಗೆ, “ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು” ಎಂದು ಉತ್ತರಕೊಟ್ಟನು.
וַיֹּאמְרוּ הַשָּׂרִים אֶל־בָּרוּךְ לֵךְ הִסָּתֵר אַתָּה וְיִרְמְיָהוּ וְאִישׁ אַל־יֵדַע אֵיפֹה אַתֶּֽם׃ 19
೧೯ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.
וַיָּבֹאוּ אֶל־הַמֶּלֶךְ חָצֵרָה וְאֶת־הַמְּגִלָּה הִפְקִדוּ בְּלִשְׁכַּת אֱלִֽישָׁמָע הַסֹּפֵר וַיַּגִּידוּ בְּאׇזְנֵי הַמֶּלֶךְ אֵת כׇּל־הַדְּבָרִֽים׃ 20
೨೦ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.
וַיִּשְׁלַח הַמֶּלֶךְ אֶת־יְהוּדִי לָקַחַת אֶת־הַמְּגִלָּה וַיִּקָּחֶהָ מִלִּשְׁכַּת אֱלִישָׁמָע הַסֹּפֵר וַיִּקְרָאֶהָ יְהוּדִי בְּאׇזְנֵי הַמֶּלֶךְ וּבְאׇזְנֵי כׇּל־הַשָּׂרִים הָעֹמְדִים מֵעַל הַמֶּֽלֶךְ׃ 21
೨೧ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.
וְהַמֶּלֶךְ יוֹשֵׁב בֵּית הַחֹרֶף בַּחֹדֶשׁ הַתְּשִׁיעִי וְאֶת־הָאָח לְפָנָיו מְבֹעָֽרֶת׃ 22
೨೨ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.
וַיְהִי ׀ כִּקְרוֹא יְהוּדִי שָׁלֹשׁ דְּלָתוֹת וְאַרְבָּעָה יִֽקְרָעֶהָ בְּתַעַר הַסֹּפֵר וְהַשְׁלֵךְ אֶל־הָאֵשׁ אֲשֶׁר אֶל־הָאָח עַד־תֹּם כׇּל־הַמְּגִלָּה עַל־הָאֵשׁ אֲשֶׁר עַל־הָאָֽח׃ 23
೨೩ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
וְלֹא פָחֲדוּ וְלֹא קָרְעוּ אֶת־בִּגְדֵיהֶם הַמֶּלֶךְ וְכׇל־עֲבָדָיו הַשֹּׁמְעִים אֵת כׇּל־הַדְּבָרִים הָאֵֽלֶּה׃ 24
೨೪ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.
וְגַם אֶלְנָתָן וּדְלָיָהוּ וּגְמַרְיָהוּ הִפְגִּעוּ בַמֶּלֶךְ לְבִלְתִּי שְׂרֹף אֶת־הַמְּגִלָּה וְלֹא שָׁמַע אֲלֵיהֶֽם׃ 25
೨೫ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.
וַיְצַוֶּה הַמֶּלֶךְ אֶת־יְרַחְמְאֵל בֶּן־הַמֶּלֶךְ וְאֶת־שְׂרָיָהוּ בֶן־עַזְרִיאֵל וְאֶת־שֶׁלֶמְיָהוּ בֶּֽן־עַבְדְּאֵל לָקַחַת אֶת־בָּרוּךְ הַסֹּפֵר וְאֵת יִרְמְיָהוּ הַנָּבִיא וַיַּסְתִּרֵם יְהֹוָֽה׃ 26
೨೬ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.
וַיְהִי דְבַר־יְהֹוָה אֶֽל־יִרְמְיָהוּ אַחֲרֵי ׀ שְׂרֹף הַמֶּלֶךְ אֶת־הַמְּגִלָּה וְאֶת־הַדְּבָרִים אֲשֶׁר כָּתַב בָּרוּךְ מִפִּי יִרְמְיָהוּ לֵאמֹֽר׃ 27
೨೭ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,
שׁוּב קַח־לְךָ מְגִלָּה אַחֶרֶת וּכְתֹב עָלֶיהָ אֵת כׇּל־הַדְּבָרִים הָרִאשֹׁנִים אֲשֶׁר הָיוּ עַל־הַמְּגִלָּה הָרִאשֹׁנָה אֲשֶׁר שָׂרַף יְהוֹיָקִים מֶלֶךְ־יְהוּדָֽה׃ 28
೨೮“ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.
וְעַל־יְהוֹיָקִים מֶֽלֶךְ־יְהוּדָה תֹּאמַר כֹּה אָמַר יְהֹוָה אַתָּה שָׂרַפְתָּ אֶת־הַמְּגִלָּה הַזֹּאת לֵאמֹר מַדּוּעַ כָּתַבְתָּ עָלֶיהָ לֵאמֹר בֹּֽא־יָבוֹא מֶֽלֶךְ־בָּבֶל וְהִשְׁחִית אֶת־הָאָרֶץ הַזֹּאת וְהִשְׁבִּית מִמֶּנָּה אָדָם וּבְהֵמָֽה׃ 29
೨೯ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.
לָכֵן כֹּֽה־אָמַר יְהֹוָה עַל־יְהֽוֹיָקִים מֶלֶךְ יְהוּדָה לֹא־יִֽהְיֶה־לּוֹ יוֹשֵׁב עַל־כִּסֵּא דָוִד וְנִבְלָתוֹ תִּהְיֶה מֻשְׁלֶכֶת לַחֹרֶב בַּיּוֹם וְלַקֶּרַח בַּלָּֽיְלָה׃ 30
೩೦ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.
וּפָקַדְתִּי עָלָיו וְעַל־זַרְעוֹ וְעַל־עֲבָדָיו אֶת־עֲוֺנָם וְהֵבֵאתִי עֲלֵיהֶם וְעַל־יֹשְׁבֵי יְרוּשָׁלַ͏ִם וְאֶל־אִישׁ יְהוּדָה אֵת כׇּל־הָרָעָה אֲשֶׁר־דִּבַּרְתִּי אֲלֵיהֶם וְלֹא שָׁמֵֽעוּ׃ 31
೩೧ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.
וְיִרְמְיָהוּ לָקַח ׀ מְגִלָּה אַחֶרֶת וַֽיִּתְּנָהּ אֶל־בָּרוּךְ בֶּן־נֵרִיָּהוּ הַסֹּפֵר וַיִּכְתֹּב עָלֶיהָ מִפִּי יִרְמְיָהוּ אֵת כׇּל־דִּבְרֵי הַסֵּפֶר אֲשֶׁר שָׂרַף יְהוֹיָקִים מֶלֶךְ־יְהוּדָה בָּאֵשׁ וְעוֹד נוֹסַף עֲלֵיהֶם דְּבָרִים רַבִּים כָּהֵֽמָּה׃ 32
೩೨ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.

< ירמיה 36 >