< ירמיה 49 >

לִבְנֵי עַמּוֹן כֹּה אָמַר יְהֹוָה הֲבָנִים אֵין לְיִשְׂרָאֵל אִם־יוֹרֵשׁ אֵין לוֹ מַדּוּעַ יָרַשׁ מַלְכָּם אֶת־גָּד וְעַמּוֹ בְּעָרָיו יָשָֽׁב׃ 1
ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?
לָכֵן הִנֵּה יָמִים בָּאִים נְאֻם־יְהֹוָה וְהִשְׁמַעְתִּי אֶל־רַבַּת בְּנֵי־עַמּוֹן תְּרוּעַת מִלְחָמָה וְהָֽיְתָה לְתֵל שְׁמָמָה וּבְנֹתֶיהָ בָּאֵשׁ תִּצַּתְנָה וְיָרַשׁ יִשְׂרָאֵל אֶת־יֹרְשָׁיו אָמַר יְהֹוָֽה׃ 2
ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.
הֵילִילִי חֶשְׁבּוֹן כִּי שֻׁדְּדָה־עַי צְעַקְנָה בְּנוֹת רַבָּה חֲגֹרְנָה שַׂקִּים סְפֹדְנָה וְהִתְשׁוֹטַטְנָה בַּגְּדֵרוֹת כִּי מַלְכָּם בַּגּוֹלָה יֵלֵךְ כֹּהֲנָיו וְשָׂרָיו יַחְדָּֽיו׃ 3
“ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; ರಬ್ಬಾದ ನಿವಾಸಿಗಳೇ ಗೋಳಾಡಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು.
מַה־תִּתְהַֽלְלִי בָּעֲמָקִים זָב עִמְקֵךְ הַבַּת הַשּׁוֹבֵבָה הַבֹּֽטְחָה בְּאֹצְרֹתֶיהָ מִי יָבוֹא אֵלָֽי׃ 4
ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?
הִנְנִי מֵבִיא עָלַיִךְ פַּחַד נְאֻם־אֲדֹנָי יֱהֹוִה צְבָאוֹת מִכׇּל־סְבִיבָיִךְ וְנִדַּחְתֶּם אִישׁ לְפָנָיו וְאֵין מְקַבֵּץ לַנֹּדֵֽד׃ 5
ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.
וְאַחֲרֵי־כֵן אָשִׁיב אֶת־שְׁבוּת בְּנֵֽי־עַמּוֹן נְאֻם־יְהֹוָֽה׃ 6
“ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
לֶאֱדוֹם כֹּה אָמַר יְהֹוָה צְבָאוֹת הַאֵין עוֹד חׇכְמָה בְּתֵימָן אָבְדָה עֵצָה מִבָּנִים נִסְרְחָה חׇכְמָתָֽם׃ 7
ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?
נֻסוּ הׇפְנוּ הֶעְמִיקוּ לָשֶׁבֶת יֹשְׁבֵי דְּדָן כִּי אֵיד עֵשָׂו הֵבֵאתִי עָלָיו עֵת פְּקַדְתִּֽיו׃ 8
ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ.
אִם־בֹּֽצְרִים בָּאוּ לָךְ לֹא יַשְׁאִרוּ עוֹלֵלוֹת אִם־גַּנָּבִים בַּלַּיְלָה הִשְׁחִיתוּ דַיָּֽם׃ 9
ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ? ಕಳ್ಳರು ರಾತ್ರಿ ವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಕದಿಯುವುದಿಲ್ಲವೇ?
כִּֽי־אֲנִי חָשַׂפְתִּי אֶת־עֵשָׂו גִּלֵּיתִי אֶת־מִסְתָּרָיו וְנֶחְבָּה לֹא יוּכָל שֻׁדַּד זַרְעוֹ וְאֶחָיו וּשְׁכֵנָיו וְאֵינֶֽנּוּ׃ 10
ಆದರೆ ನಾನು ಏಸಾವನನ್ನು ಬರಿದು ಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ, ಅವನ ನೆರೆಯವರೂ, ಅವನೂ ಇಲ್ಲವಾದರು.
עׇזְבָה יְתֹמֶיךָ אֲנִי אֲחַיֶּה וְאַלְמְנוֹתֶיךָ עָלַי תִּבְטָֽחוּ׃ 11
ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.”
כִּי־כֹה ׀ אָמַר יְהֹוָה הִנֵּה אֲשֶׁר־אֵין מִשְׁפָּטָם לִשְׁתּוֹת הַכּוֹס שָׁתוֹ יִשְׁתּוּ וְאַתָּה הוּא נָקֹה תִּנָּקֶה לֹא תִנָּקֶה כִּי שָׁתֹה תִּשְׁתֶּֽה׃ 12
ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.
כִּי בִי נִשְׁבַּעְתִּי נְאֻם־יְהֹוָה כִּֽי־לְשַׁמָּה לְחֶרְפָּה לְחֹרֶב וְלִקְלָלָה תִּהְיֶה בׇצְרָה וְכׇל־עָרֶיהָ תִהְיֶינָה לְחׇרְבוֹת עוֹלָֽם׃ 13
ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.
שְׁמוּעָה שָׁמַעְתִּי מֵאֵת יְהֹוָה וְצִיר בַּגּוֹיִם שָׁלוּחַ הִֽתְקַבְּצוּ וּבֹאוּ עָלֶיהָ וְקוּמוּ לַמִּלְחָמָֽה׃ 14
ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!”
כִּֽי־הִנֵּה קָטֹן נְתַתִּיךָ בַּגּוֹיִם בָּזוּי בָּאָדָֽם׃ 15
“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.
תִּֽפְלַצְתְּךָ הִשִּׁיא אֹתָךְ זְדוֹן לִבֶּךָ שֹֽׁכְנִי בְּחַגְוֵי הַסֶּלַע תֹּֽפְשִׂי מְרוֹם גִּבְעָה כִּֽי־תַגְבִּיהַּ כַּנֶּשֶׁר קִנֶּךָ מִשָּׁם אוֹרִֽידְךָ נְאֻם־יְהֹוָֽה׃ 16
ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
וְהָיְתָה אֱדוֹם לְשַׁמָּה כֹּל עֹבֵר עָלֶיהָ יִשֹּׁם וְיִשְׁרֹק עַל־כׇּל־מַכּוֹתֶֽהָ׃ 17
“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.
כְּֽמַהְפֵּכַת סְדֹם וַעֲמֹרָה וּשְׁכֵנֶיהָ אָמַר יְהֹוָה לֹא־יֵשֵׁב שָׁם אִישׁ וְלֹא־יָגוּר בָּהּ בֶּן־אָדָֽם׃ 18
ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
הִנֵּה כְּאַרְיֵה יַעֲלֶה מִגְּאוֹן הַיַּרְדֵּן אֶל־נְוֵה אֵיתָן כִּֽי־אַרְגִּיעָה אֲרִיצֶנּוּ מֵעָלֶיהָ וּמִי בָחוּר אֵלֶיהָ אֶפְקֹד כִּי מִי כָמוֹנִי וּמִי יֹעִידֶנִּי וּמִי־זֶה רֹעֶה אֲשֶׁר יַעֲמֹד לְפָנָֽי׃ 19
“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”
לָכֵן שִׁמְעוּ עֲצַת־יְהֹוָה אֲשֶׁר יָעַץ אֶל־אֱדוֹם וּמַחְשְׁבוֹתָיו אֲשֶׁר חָשַׁב אֶל־יֹשְׁבֵי תֵימָן אִם־לוֹא יִסְחָבוּם צְעִירֵי הַצֹּאן אִם־לֹא יַשִּׁים עֲלֵיהֶם נְוֵהֶֽם׃ 20
ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
מִקּוֹל נִפְלָם רָעֲשָׁה הָאָרֶץ צְעָקָה בְּיַם־סוּף נִשְׁמַע קוֹלָֽהּ׃ 21
ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಪ್ರತಿಧ್ವನಿಸುವುದು.
הִנֵּה כַנֶּשֶׁר יַעֲלֶה וְיִדְאֶה וְיִפְרֹשׂ כְּנָפָיו עַל־בׇּצְרָה וְֽהָיָה לֵב גִּבּוֹרֵי אֱדוֹם בַּיּוֹם הַהוּא כְּלֵב אִשָּׁה מְצֵרָֽה׃ 22
ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು.
לְדַמֶּשֶׂק בּוֹשָֽׁה חֲמָת וְאַרְפָּד כִּֽי־שְׁמֻעָה רָעָה שָׁמְעוּ נָמֹגוּ בַּיָּם דְּאָגָה הַשְׁקֵט לֹא יוּכָֽל׃ 23
ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.
רָפְתָה דַמֶּשֶׂק הִפְנְתָה לָנוּס וְרֶטֶט ׀ הֶחֱזִיקָה צָרָה וַחֲבָלִים אֲחָזַתָּה כַּיּוֹלֵדָֽה׃ 24
ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ.
אֵיךְ לֹֽא־עֻזְּבָה עִיר (תהלה) [תְּהִלָּת] קִרְיַת מְשׂוֹשִֽׂי׃ 25
ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲಾಗಿದೆ ಅಲ್ಲವೋ?
לָכֵן יִפְּלוּ בַחוּרֶיהָ בִּרְחֹבֹתֶיהָ וְכׇל־אַנְשֵׁי הַמִּלְחָמָה יִדַּמּוּ בַּיּוֹם הַהוּא נְאֻם יְהֹוָה צְבָאֽוֹת׃ 26
ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು; ಯುದ್ಧಭಟರೆಲ್ಲರೂ ಆ ದಿವಸದಲ್ಲಿ ಕಡಿದುಹಾಕಲಾಗುವರು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
וְהִצַּתִּי אֵשׁ בְּחוֹמַת דַּמָּשֶׂק וְאָכְלָה אַרְמְנוֹת בֶּן־הֲדָֽד׃ 27
“ಏಕೆಂದರೆ ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವುದು.”
לְקֵדָר ׀ וּֽלְמַמְלְכוֹת חָצוֹר אֲשֶׁר הִכָּה (נבוכדראצור) [נְבוּכַדְרֶאצַּר] מֶלֶךְ־בָּבֶל כֹּה אָמַר יְהֹוָה קוּמוּ עֲלוּ אֶל־קֵדָר וְשָׁדְדוּ אֶת־בְּנֵי־קֶֽדֶם׃ 28
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.
אׇהֳלֵיהֶם וְצֹאנָם יִקָּחוּ יְרִיעוֹתֵיהֶם וְכׇל־כְּלֵיהֶם וּגְמַלֵּיהֶם יִשְׂאוּ לָהֶם וְקָרְאוּ עֲלֵיהֶם מָגוֹר מִסָּבִֽיב׃ 29
ಅವರ ಗುಡಾರಗಳನ್ನೂ, ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯ, ಎಂದು ಅವರಿಗೆ ಕೂಗುವರು.
נֻסוּ נֻּדוּ מְאֹד הֶעְמִיקוּ לָשֶׁבֶת יֹשְׁבֵי חָצוֹר נְאֻם־יְהֹוָה כִּֽי־יָעַץ עֲלֵיכֶם נְבוּכַדְרֶאצַּר מֶלֶךְ־בָּבֶל עֵצָה וְחָשַׁב (עליהם) [עֲלֵיכֶם] מַחֲשָׁבָֽה׃ 30
“ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ.
קוּמֽוּ עֲלוּ אֶל־גּוֹי שְׁלֵיו יוֹשֵׁב לָבֶטַח נְאֻם־יְהֹוָה לֹא־דְלָתַיִם וְלֹֽא־בְרִיחַ לוֹ בָּדָד יִשְׁכֹּֽנוּ׃ 31
“ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ.
וְהָיוּ גְמַלֵּיהֶם לָבַז וַהֲמוֹן מִקְנֵיהֶם לְשָׁלָל וְזֵרִתִים לְכׇל־רוּחַ קְצוּצֵי פֵאָה וּמִכׇּל־עֲבָרָיו אָבִיא אֶת־אֵידָם נְאֻם־יְהֹוָֽה׃ 32
ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
וְהָיְתָה חָצוֹר לִמְעוֹן תַּנִּים שְׁמָמָה עַד־עוֹלָם לֹא־יֵשֵׁב שָׁם אִישׁ וְלֹא־יָגוּר בָּהּ בֶּן־אָדָֽם׃ 33
ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.
אֲשֶׁר הָיָה דְבַר־יְהֹוָה אֶל־יִרְמְיָהוּ הַנָּבִיא אֶל־עֵילָם בְּרֵאשִׁית מַלְכוּת צִדְקִיָּה מֶלֶךְ־יְהוּדָה לֵאמֹֽר׃ 34
ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:
כֹּה אָמַר יְהֹוָה צְבָאוֹת הִנְנִי שֹׁבֵר אֶת־קֶשֶׁת עֵילָם רֵאשִׁית גְּבוּרָתָֽם׃ 35
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಏಲಾಮಿನ ಬಿಲ್ಲನ್ನೂ, ಅವರ ಪರಾಕ್ರಮವನ್ನೂ, ಶ್ರೇಷ್ಠತ್ವವನ್ನೂ ಮುರಿಯುತ್ತೇನೆ
וְהֵבֵאתִי אֶל־עֵילָם אַרְבַּע רוּחוֹת מֵֽאַרְבַּע קְצוֹת הַשָּׁמַיִם וְזֵרִתִים לְכֹל הָרֻחוֹת הָאֵלֶּה וְלֹא־יִהְיֶה הַגּוֹי אֲשֶׁר לֹא־יָבוֹא שָׁם נִדְּחֵי (עולם) [עֵילָֽם]׃ 36
ಆಕಾಶದ ನಾಲ್ಕು ದಿಕ್ಕುಗಳಿಂದ ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ತಂದು, ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿನಿಂದ ಓಡಿಸಲಾದವರು ಸೇರದ ಜನಾಂಗವು ಇರುವುದಿಲ್ಲ.
וְהַחְתַּתִּי אֶת־עֵילָם לִפְנֵי אֹיְבֵיהֶם וְלִפְנֵי ׀ מְבַקְשֵׁי נַפְשָׁם וְהֵבֵאתִי עֲלֵיהֶם ׀ רָעָה אֶת־חֲרוֹן אַפִּי נְאֻם־יְהֹוָה וְשִׁלַּחְתִּי אַֽחֲרֵיהֶם אֶת־הַחֶרֶב עַד כַּלּוֹתִי אוֹתָֽם׃ 37
ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; ಅವರ ಮೇಲೆ ಕೇಡನ್ನೂ, ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.
וְשַׂמְתִּי כִסְאִי בְּעֵילָם וְהַאֲבַדְתִּי מִשָּׁם מֶלֶךְ וְשָׂרִים נְאֻם־יְהֹוָֽה׃ 38
ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ, ಪ್ರಧಾನರನ್ನೂ ನಾಶಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
וְהָיָה ׀ בְּאַחֲרִית הַיָּמִים (אשוב) [אָשִׁיב] אֶת־[שְׁבוּת] (שבית) עֵילָם נְאֻם־יְהֹוָֽה׃ 39
“ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ, ನಾನು ಏಲಾಮಿನ ಸಮೃದ್ಧಿಯನ್ನು ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

< ירמיה 49 >