< איוב 10 >
נָֽקְטָה נַפְשִׁי בְּחַיָּי אֶעֶזְבָה עָלַי שִׂיחִי אֲדַבְּרָה בְּמַר נַפְשִֽׁי׃ | 1 |
೧ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.
אֹמַר אֶל־אֱלוֹהַּ אַל־תַּרְשִׁיעֵנִי הוֹדִיעֵנִי עַל מַה־תְּרִיבֵֽנִי׃ | 2 |
೨ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.
הֲטוֹב לְךָ ׀ כִּֽי־תַעֲשֹׁק כִּֽי־תִמְאַס יְגִיעַ כַּפֶּיךָ וְעַל־עֲצַת רְשָׁעִים הוֹפָֽעְתָּ׃ | 3 |
೩ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ?
הַעֵינֵי בָשָׂר לָךְ אִם־כִּרְאוֹת אֱנוֹשׁ תִּרְאֶֽה׃ | 4 |
೪ನೀನು ಮಾಂಸದ ಕಣ್ಣುಳ್ಳವನೋ? ಮನುಷ್ಯರು ನೋಡುವಂತೆ ನೋಡುತ್ತೀಯಾ?
הֲכִימֵי אֱנוֹשׁ יָמֶיךָ אִם־שְׁנוֹתֶיךָ כִּימֵי גָֽבֶר׃ | 5 |
೫ನಿನ್ನ ದಿನಗಳು ಮನುಷ್ಯನ ದಿನಗಳಷ್ಟು ಅಲ್ಪವಾಗಿವೆಯೋ? ನಿನ್ನ ಸಂವತ್ಸರಗಳೂ ಮಾನವನ ದಿನಗಳಷ್ಟೇನೇ,
כִּֽי־תְבַקֵּשׁ לַעֲוֺנִי וּֽלְחַטָּאתִי תִדְרֽוֹשׁ׃ | 6 |
೬ನೀನು ಇಷ್ಟು ಅವಸರದಿಂದ ನನ್ನ ದೋಷವನ್ನು ಹುಡುಕಿ, ನನ್ನ ಪಾಪವನ್ನು ವಿಚಾರಿಸುವುದೇಕೆ?
עַֽל־דַּעְתְּךָ כִּי־לֹא אֶרְשָׁע וְאֵין מִיָּדְךָ מַצִּֽיל׃ | 7 |
೭ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?
יָדֶיךָ עִצְּבוּנִי וַֽיַּעֲשׂוּנִי יַחַד סָבִיב וַֽתְּבַלְּעֵֽנִי׃ | 8 |
೮ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ, ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ?
זְכׇר־נָא כִּֽי־כַחֹמֶר עֲשִׂיתָנִי וְֽאֶל־עָפָר תְּשִׁיבֵֽנִי׃ | 9 |
೯ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ?
הֲלֹא כֶחָלָב תַּתִּיכֵנִי וְכַגְּבִנָּה תַּקְפִּיאֵֽנִי׃ | 10 |
೧೦ನೀನು ನನ್ನನ್ನು ಹಾಲಿನಂತೆ ಹೊಯ್ದು, ಮೊಸರಿನ ಹಾಗೆ ಹೆಪ್ಪುಗಟ್ಟಿಸಿದಿಯಲ್ಲಾ.
עוֹר וּבָשָׂר תַּלְבִּישֵׁנִי וּֽבַעֲצָמוֹת וְגִידִים תְּשֹׂכְכֵֽנִי׃ | 11 |
೧೧ನನ್ನನ್ನು ಎಲುಬು ನರಗಳಿಂದ ಹೆಣೆದು ಮಾಂಸಚರ್ಮಗಳಿಂದ ಹೊದಿಸಿದಿ.
חַיִּים וָחֶסֶד עָשִׂיתָ עִמָּדִי וּפְקֻדָּתְךָ שָֽׁמְרָה רוּחִֽי׃ | 12 |
೧೨ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದಿ; ನಿನ್ನ ಪರಾಂಬರಿಕೆ ನನ್ನ ಆತ್ಮವನ್ನು ಕಾಪಾಡಿದೆ.
וְאֵלֶּה צָפַנְתָּ בִלְבָבֶךָ יָדַעְתִּי כִּי־זֹאת עִמָּֽךְ׃ | 13 |
೧೩ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು.
אִם־חָטָאתִי וּשְׁמַרְתָּנִי וּמֵעֲוֺנִי לֹא תְנַקֵּֽנִי׃ | 14 |
೧೪ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.
אִם־רָשַׁעְתִּי אַלְלַי לִי וְצָדַקְתִּי לֹא־אֶשָּׂא רֹאשִׁי שְׂבַע קָלוֹן וּרְאֵה עׇנְיִֽי׃ | 15 |
೧೫ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು.
וְיִגְאֶה כַּשַּׁחַל תְּצוּדֵנִי וְתָשֹׁב תִּתְפַּלָּא־בִֽי׃ | 16 |
೧೬ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ; ನಿನ್ನ ಅದ್ಭುತ ಚಮತ್ಕಾರವನ್ನು ತಿರುಗಿ ನನ್ನಲ್ಲಿ ತೋರಿಸುವಿ.
תְּחַדֵּשׁ עֵדֶיךָ ׀ נֶגְדִּי וְתֶרֶב כַּעַשְׂךָ עִמָּדִי חֲלִיפוֹת וְצָבָא עִמִּֽי׃ | 17 |
೧೭ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ.
וְלָמָּה מֵרֶחֶם הֹצֵאתָנִי אֶגְוַע וְעַיִן לֹֽא־תִרְאֵֽנִי׃ | 18 |
೧೮ನನ್ನನ್ನು ಗರ್ಭದಿಂದ ಏಕೆ ಹೊರತೆಗೆದೆ? ಯಾರೂ ನನ್ನನ್ನು ನೋಡದಿರುವಾಗಲೇ ನಾನು ಪ್ರಾಣಬಿಡಬೇಕಾಗಿತ್ತು.
כַּאֲשֶׁר לֹא־הָיִיתִי אֶהְיֶה מִבֶּטֶן לַקֶּבֶר אוּבָֽל׃ | 19 |
೧೯ಆಗ ನಾನು ಇರುತ್ತಿರಲಿಲ್ಲ; ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು.
הֲלֹֽא־מְעַט יָמַי (יחדל) [וַחֲדָל] (ישית) [וְשִׁית] מִמֶּנִּי וְאַבְלִיגָה מְּעָֽט׃ | 20 |
೨೦ನನ್ನ ದಿನಗಳು ಅಲ್ಪವಾಗಿರುತ್ತವಲ್ಲಾ? ಬಿಡು, ನಿನ್ನ ದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸು.
בְּטֶרֶם אֵלֵךְ וְלֹא אָשׁוּב אֶל־אֶרֶץ חֹשֶׁךְ וְצַלְמָֽוֶת׃ | 21 |
೨೧ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.
אֶרֶץ עֵפָתָה ׀ כְּמוֹ אֹפֶל צַלְמָוֶת וְלֹא סְדָרִים וַתֹּפַע כְּמוֹ־אֹֽפֶל׃ | 22 |
೨೨ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ಬೆಳಕಿನಂತೆ.”