< איוב 15 >

וַיַּעַן אֱלִיפַז הַֽתֵּימָנִי וַיֹּאמַֽר׃ 1
ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,
הֶחָכָם יַעֲנֶה דַעַת־רוּחַ וִימַלֵּא קָדִים בִּטְנֽוֹ׃ 2
“ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ?
הוֹכֵחַ בְּדָבָר לֹא יִסְכּוֹן וּמִלִּים לֹא־יוֹעִיל בָּֽם׃ 3
ಪ್ರಯೋಜನವಿಲ್ಲದ ನುಡಿಯಿಂದಲೂ, ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವುದು ಯುಕ್ತವೋ?
אַף־אַתָּה תָּפֵר יִרְאָה וְתִגְרַע שִׂיחָה לִפְנֵי־אֵֽל׃ 4
ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ.
כִּי יְאַלֵּף עֲוֺנְךָ פִיךָ וְתִבְחַר לְשׁוֹן עֲרוּמִֽים׃ 5
ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ.
יַרְשִׁיעֲךָ פִיךָ וְלֹא־אָנִי וּשְׂפָתֶיךָ יַעֲנוּ־בָֽךְ׃ 6
ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ.
הֲרִאישׁוֹן אָדָם תִּוָּלֵד וְלִפְנֵי גְבָעוֹת חוֹלָֽלְתָּ׃ 7
ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ?
הַבְסוֹד אֱלוֹהַּ תִּשְׁמָע וְתִגְרַע אֵלֶיךָ חׇכְמָֽה׃ 8
ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?
מַה־יָּדַעְתָּ וְלֹא נֵדָע תָּבִין וְֽלֹא־עִמָּנוּ הֽוּא׃ 9
ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ? ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ?
גַּם־שָׂב גַּם־יָשִׁישׁ בָּנוּ כַּבִּיר מֵאָבִיךָ יָמִֽים׃ 10
೧೦ತಲೆನರೆತು ನಿನ್ನ ತಂದೆಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ.
הַמְעַט מִמְּךָ תַּנְחוּמוֹת אֵל וְדָבָר לָאַט עִמָּֽךְ׃ 11
೧೧ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ?
מַה־יִּקָּחֲךָ לִבֶּךָ וּֽמַה־יִּרְזְמוּן עֵינֶֽיךָ׃ 12
೧೨ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವುದು? ನಿನ್ನ ಕಣ್ಣುಗಳು ಕಿಡಿಕಿಡಿಯಾಗುವುದೇಕೆ?
כִּֽי־תָשִׁיב אֶל־אֵל רוּחֶךָ וְהֹצֵאתָ מִפִּיךָ מִלִּֽין׃ 13
೧೩ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!
מָה־אֱנוֹשׁ כִּֽי־יִזְכֶּה וְכִי־יִצְדַּק יְלוּד אִשָּֽׁה׃ 14
೧೪ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?
הֵן בִּקְדֹשָׁו לֹא יַאֲמִין וְשָׁמַיִם לֹא־זַכּוּ בְעֵינָֽיו׃ 15
೧೫ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.
אַף כִּי־נִתְעָב וְֽנֶאֱלָח אִישׁ־שֹׁתֶה כַמַּיִם עַוְלָֽה׃ 16
೧೬ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!
אֲחַוְךָ שְֽׁמַֽע־לִי וְזֶֽה־חָזִיתִי וַאֲסַפֵּֽרָה׃ 17
೧೭ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು, ಕಂಡದ್ದನ್ನೇ ವಿವರಿಸುವೆನು.
אֲשֶׁר־חֲכָמִים יַגִּידוּ וְלֹא כִחֲדוּ מֵאֲבוֹתָֽם׃ 18
೧೮ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ.
לָהֶם לְבַדָּם נִתְּנָה הָאָרֶץ וְלֹא־עָבַר זָר בְּתוֹכָֽם׃ 19
೧೯ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ.
כׇּל־יְמֵי רָשָׁע הוּא מִתְחוֹלֵל וּמִסְפַּר שָׁנִים נִצְפְּנוּ לֶעָרִֽיץ׃ 20
೨೦ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು.
קוֹל־פְּחָדִים בְּאׇזְנָיו בַּשָּׁלוֹם שׁוֹדֵד יְבוֹאֶֽנּוּ׃ 21
೨೧ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.
לֹא־יַאֲמִין שׁוּב מִנִּי־חֹשֶׁךְ (וצפו) [וְצָפוּי] הוּא אֱלֵי־חָֽרֶב׃ 22
೨೨ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
נֹדֵד הוּא לַלֶּחֶם אַיֵּה יָדַע ׀ כִּי־נָכוֹן בְּיָדוֹ יֽוֹם־חֹֽשֶׁךְ׃ 23
೨೩‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.
יְֽבַעֲתֻהוּ צַר וּמְצוּקָה תִּתְקְפֵהוּ כְּמֶלֶךְ ׀ עָתִיד לַכִּידֽוֹר׃ 24
೨೪ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.
כִּֽי־נָטָה אֶל־אֵל יָדוֹ וְאֶל־שַׁדַּי יִתְגַּבָּֽר׃ 25
೨೫ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ.
יָרוּץ אֵלָיו בְּצַוָּאר בַּעֲבִי גַּבֵּי מָגִנָּֽיו׃ 26
೨೬ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ ಆತನ ಮೇಲೆ ಬೀಳಬೇಕೆಂದು ಓಡಿದನು.
כִּֽי־כִסָּה פָנָיו בְּחֶלְבּוֹ וַיַּעַשׂ פִּימָה עֲלֵי־כָֽסֶל׃ 27
೨೭ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು.
וַיִּשְׁכּוֹן ׀ עָרִים נִכְחָדוֹת בָּתִּים לֹא־יֵשְׁבוּ לָמוֹ אֲשֶׁר הִתְעַתְּדוּ לְגַלִּֽים׃ 28
೨೮ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು, ‘ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ’ ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು.
לֹֽא־יֶעְשַׁר וְלֹא־יָקוּם חֵילוֹ וְלֹא־יִטֶּה לָאָרֶץ מִנְלָֽם׃ 29
೨೯ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ.
לֹֽא־יָסוּר ׀ מִנִּי־חֹשֶׁךְ יֹנַקְתּוֹ תְּיַבֵּשׁ שַׁלְהָבֶת וְיָסוּר בְּרוּחַ פִּֽיו׃ 30
೩೦ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.
אַל־יַאֲמֵן בַּשָּׁו נִתְעָה כִּי־שָׁוְא תִּהְיֶה תְמוּרָתֽוֹ׃ 31
೩೧ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,
בְּֽלֹא־יוֹמוֹ תִּמָּלֵא וְכִפָּתוֹ לֹא רַעֲנָֽנָה׃ 32
೩೨ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ,
יַחְמֹס כַּגֶּפֶן בִּסְרוֹ וְיַשְׁלֵךְ כַּזַּיִת נִצָּתֽוֹ׃ 33
೩೩ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು.
כִּֽי־עֲדַת חָנֵף גַּלְמוּד וְאֵשׁ אָכְלָה אׇהֳלֵי־שֹֽׁחַד׃ 34
೩೪ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು.
הָרֹה עָמָל וְיָלֹֽד אָוֶן וּבִטְנָם תָּכִין מִרְמָֽה׃ 35
೩೫ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”

< איוב 15 >