< איוב 39 >
הֲיָדַעְתָּ עֵת לֶדֶת יַעֲלֵי־סָלַע חֹלֵל אַיָּלוֹת תִּשְׁמֹֽר׃ | 1 |
೧ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ?
תִּסְפֹּר יְרָחִים תְּמַלֶּאנָה וְיָדַעְתָּ עֵת לִדְתָּֽנָה׃ | 2 |
೨ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ಗೊತ್ತುಮಾಡುವೆಯೋ?
תִּכְרַעְנָה יַלְדֵיהֶן תְּפַלַּחְנָה חֶבְלֵיהֶם תְּשַׁלַּֽחְנָה׃ | 3 |
೩ಅವು ಮರಿಗಳನ್ನು ಹಾಕಿದೊಡನೆಯೇ ತಮ್ಮ ವೇದನೆಯನ್ನೂ ತೊರೆದುಬಿಡುವವು.
יַחְלְמוּ בְנֵיהֶם יִרְבּוּ בַבָּר יָצְאוּ וְלֹא־שָׁבוּ לָֽמוֹ׃ | 4 |
೪ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವುದೇ ಇಲ್ಲ.
מִי־שִׁלַּח פֶּרֶא חׇפְשִׁי וּמֹסְרוֹת עָרוֹד מִי פִתֵּֽחַ׃ | 5 |
೫ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? ಅದರ ಕಟ್ಟನ್ನು ಬಿಚ್ಚಿದವರು ಯಾರು?
אֲשֶׁר־שַׂמְתִּי עֲרָבָה בֵיתוֹ וּֽמִשְׁכְּנוֹתָיו מְלֵחָֽה׃ | 6 |
೬ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ, ಮರುಭೂಮಿಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನಷ್ಟೆ.
יִשְׂחַק לַהֲמוֹן קִרְיָה תְּשֻׁאוֹת נֹגֵשׂ לֹא יִשְׁמָֽע׃ | 7 |
೭ಅದು ಊರುಗದ್ದಲವನ್ನು ಧಿಕ್ಕರಿಸಿ, ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ.
יְתוּר הָרִים מִרְעֵהוּ וְאַחַר כׇּל־יָרוֹק יִדְרֽוֹשׁ׃ | 8 |
೮ಅದರ ಕಾವಲು ವಿಶಾಲವಾದ ಬೆಟ್ಟಗಳೇ. ಹಸಿರು ಎಲ್ಲಿದ್ದರೂ ಅದನ್ನು ಹುಡುಕುತ್ತಲೇ ಇರುವುದು.
הֲיֹאבֶה רֵּים עׇבְדֶךָ אִם־יָלִין עַל־אֲבוּסֶֽךָ׃ | 9 |
೯ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ, ನಿನ್ನ ಗೋದಲಿಯ ಹತ್ತಿರ ತಂಗುವುದೋ?
הֲֽתִקְשׇׁר־רֵים בְּתֶלֶם עֲבֹתוֹ אִם־יְשַׂדֵּד עֲמָקִים אַחֲרֶֽיךָ׃ | 10 |
೧೦ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ? ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?
הֲֽתִבְטַח־בּוֹ כִּֽי־רַב כֹּחוֹ וְתַעֲזֹב אֵלָיו יְגִיעֶֽךָ׃ | 11 |
೧೧ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?
הֲתַאֲמִין בּוֹ כִּֽי־[יָשִׁיב] (ישוב) זַרְעֶךָ וְֽגׇרְנְךָ יֶאֱסֹֽף׃ | 12 |
೧೨ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ, ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸವಿಡುವೆಯಾ?
כְּנַף־רְנָנִים נֶעֱלָסָה אִם־אֶבְרָה חֲסִידָה וְנֹצָֽה׃ | 13 |
೧೩ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ?
כִּי־תַעֲזֹב לָאָרֶץ בֵּצֶיהָ וְֽעַל־עָפָר תְּחַמֵּֽם׃ | 14 |
೧೪ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ.
וַתִּשְׁכַּח כִּי־רֶגֶל תְּזוּרֶהָ וְחַיַּת הַשָּׂדֶה תְדוּשֶֽׁהָ׃ | 15 |
೧೫ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ.
הִקְשִׁיחַ בָּנֶיהָ לְּלֹא־לָהּ לְרִיק יְגִיעָהּ בְּלִי־פָֽחַד׃ | 16 |
೧೬ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.
כִּי־הִשָּׁהּ אֱלוֹהַּ חׇכְמָה וְלֹא־חָלַק לָהּ בַּבִּינָֽה׃ | 17 |
೧೭ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!
כָּעֵת בַּמָּרוֹם תַּמְרִיא תִּֽשְׂחַק לַסּוּס וּלְרֹכְבֽוֹ׃ | 18 |
೧೮ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು.
הֲתִתֵּן לַסּוּס גְּבוּרָה הֲתַלְבִּישׁ צַוָּארוֹ רַעְמָֽה׃ | 19 |
೧೯ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು, ಅದರ ಕೊರಳಿಗೆ ಗುಡುಗನ್ನು ಕಟ್ಟಿದವನು ನಿನಲ್ಲವೇ?
הֲֽתַרְעִישֶׁנּוּ כָּֽאַרְבֶּה הוֹד נַחְרוֹ אֵימָֽה׃ | 20 |
೨೦ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ.
יַחְפְּרוּ בָעֵמֶק וְיָשִׂישׂ בְּכֹחַ יֵצֵא לִקְרַאת־נָֽשֶׁק׃ | 21 |
೨೧ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ, ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು.
יִשְׂחַק לְפַחַד וְלֹא יֵחָת וְלֹא־יָשׁוּב מִפְּנֵי־חָֽרֶב׃ | 22 |
೨೨ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರ ಮಾಡುವುದು.
עָלָיו תִּרְנֶה אַשְׁפָּה לַהַב חֲנִית וְכִידֽוֹן׃ | 23 |
೨೩ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ, ಈಟಿಯೂ ಅದರ ಮೇಲೆ ಜಣಜಣಿಸುವವು.
בְּרַעַשׁ וְרֹגֶז יְגַמֶּא־אָרֶץ וְלֹא־יַאֲמִין כִּי־קוֹל שׁוֹפָֽר׃ | 24 |
೨೪ಅದು ತುತ್ತೂರಿಯ ಶಬ್ದವನ್ನು ಕೇಳಿದರೂ, ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವುದೋ ಎಂಬಂತೆ ಓಡುವುದು.
בְּדֵי שֹׁפָר ׀ יֹאמַר הֶאָח וּֽמֵרָחוֹק יָרִיחַ מִלְחָמָה רַעַם שָׂרִים וּתְרוּעָֽה׃ | 25 |
೨೫ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು.
הֲֽמִבִּינָתְךָ יַאֲבֶר־נֵץ יִפְרֹשׂ כְּנָפָו לְתֵימָֽן׃ | 26 |
೨೬ಗಿಡಗವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದಿಕ್ಕಿಗೆ ಹಾರುವುದು ನಿನ್ನ ವಿವೇಕದಿಂದಲೋ?
אִם־עַל־פִּיךָ יַגְבִּיהַּ נָשֶׁר וְכִי יָרִים קִנּֽוֹ׃ | 27 |
೨೭ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ?
סֶלַע יִשְׁכֹּן וְיִתְלֹנָן עַל שֶׁן־סֶלַע וּמְצוּדָֽה׃ | 28 |
೨೮ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು.
מִשָּׁם חָֽפַר־אֹכֶל לְמֵרָחוֹק עֵינָיו יַבִּֽיטוּ׃ | 29 |
೨೯ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ; ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವುದು.
וְאֶפְרֹחָו יְעַלְעוּ־דָם וּבַאֲשֶׁר חֲלָלִים שָׁם הֽוּא׃ | 30 |
೩೦ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು;