< יהושע 23 >
וַֽיְהִי מִיָּמִים רַבִּים אַחֲרֵי אֲשֶׁר־הֵנִיחַ יְהֹוָה לְיִשְׂרָאֵל מִכׇּל־אֹיְבֵיהֶם מִסָּבִיב וִיהוֹשֻׁעַ זָקֵן בָּא בַּיָּמִֽים׃ | 1 |
ಯೆಹೋವ ದೇವರು ಇಸ್ರಾಯೇಲರನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅವರಿಗೆ ವಿಶ್ರಾಂತಿಕೊಟ್ಟ ಬಹಳ ದಿವಸಗಳ ತರುವಾಯ ಯೆಹೋಶುವನ ದಿವಸಗಳು ಗತಿಸಿ ವೃದ್ಧನಾದನು.
וַיִּקְרָא יְהוֹשֻׁעַ לְכׇל־יִשְׂרָאֵל לִזְקֵנָיו וּלְרָאשָׁיו וּלְשֹׁפְטָיו וּלְשֹׁטְרָיו וַיֹּאמֶר אֲלֵהֶם אֲנִי זָקַנְתִּי בָּאתִי בַּיָּמִֽים׃ | 2 |
ಒಂದು ದಿನ ಅವನು ಸಮಸ್ತ ಇಸ್ರಾಯೇಲರನ್ನೂ ಅವರ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿ ಅವರಿಗೆ, “ನಾನು ದಿನತುಂಬಿದ ವೃದ್ಧನಾಗಿದ್ದೇನೆ.
וְאַתֶּם רְאִיתֶם אֵת כׇּל־אֲשֶׁר עָשָׂה יְהֹוָה אֱלֹהֵיכֶם לְכׇל־הַגּוֹיִם הָאֵלֶּה מִפְּנֵיכֶם כִּי יְהֹוָה אֱלֹהֵיכֶם הוּא הַנִּלְחָם לָכֶֽם׃ | 3 |
ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿದ ಎಲ್ಲವನ್ನೂ ನೋಡಿದ್ದೀರಿ. ನಿಮಗೋಸ್ಕರವಾಗಿ ಯುದ್ಧ ಮಾಡಿದವರು ನಿಮ್ಮ ದೇವರಾದ ಯೆಹೋವ ದೇವರು.
רְאוּ הִפַּלְתִּי לָכֶם אֶֽת־הַגּוֹיִם הַנִּשְׁאָרִים הָאֵלֶּה בְּנַחֲלָה לְשִׁבְטֵיכֶם מִן־הַיַּרְדֵּן וְכׇל־הַגּוֹיִם אֲשֶׁר הִכְרַתִּי וְהַיָּם הַגָּדוֹל מְבוֹא הַשָּֽׁמֶשׁ׃ | 4 |
ನಾನು ಯೊರ್ದನ್ ನದಿ ಮೊದಲುಗೊಂಡು ಪಶ್ಚಿಮಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ರಾಷ್ಟ್ರಗಳನ್ನು ಸೋಲಿಸಿ, ಉಳಿದ ಸಕಲ ನಾಡನ್ನು ನಿಮ್ಮ ಗೋತ್ರಗಳಿಗೆ ಸೊತ್ತಾಗಿ ಕೊಟ್ಟಿದ್ದೇನೆ.
וַיהֹוָה אֱלֹהֵיכֶם הוּא יֶהְדֳּפֵם מִפְּנֵיכֶם וְהוֹרִישׁ אֹתָם מִלִּפְנֵיכֶם וִֽירִשְׁתֶּם אֶת־אַרְצָם כַּאֲשֶׁר דִּבֶּר יְהֹוָה אֱלֹהֵיכֶם לָכֶֽם׃ | 5 |
ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಉಳಿದವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು, ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿ ಬಿಡುವರು. ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
וַחֲזַקְתֶּם מְאֹד לִשְׁמֹר וְלַֽעֲשׂוֹת אֵת כׇּל־הַכָּתוּב בְּסֵפֶר תּוֹרַת מֹשֶׁה לְבִלְתִּי סוּר־מִמֶּנּוּ יָמִין וּשְׂמֹֽאול׃ | 6 |
“ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.
לְבִלְתִּי־בֹא בַּגּוֹיִם הָאֵלֶּה הַנִּשְׁאָרִים הָאֵלֶּה אִתְּכֶם וּבְשֵׁם אֱלֹהֵיהֶם לֹֽא־תַזְכִּירוּ וְלֹא תַשְׁבִּיעוּ וְלֹא תַעַבְדוּם וְלֹא תִֽשְׁתַּחֲווּ לָהֶֽם׃ | 7 |
ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವರುಗಳ ಹೆಸರುಗಳನ್ನು ಸ್ಮರಿಸಲೂ ಬೇಡಿರಿ. ಅವುಗಳ ಮೇಲೆ ಆಣೆಯೂ ಇಡಬೇಡಿರಿ. ಅವುಗಳಿಗೆ ಆರಾಧನೆ ಮಾಡಬಾರದು. ಅಡ್ಡಬೀಳಲೂಬಾರದು.
כִּי אִם־בַּיהֹוָה אֱלֹהֵיכֶם תִּדְבָּקוּ כַּאֲשֶׁר עֲשִׂיתֶם עַד הַיּוֹם הַזֶּֽה׃ | 8 |
ಆದರೆ, ಈವರೆಗೂ ಹೇಗೋ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿರಿ.
וַיּוֹרֶשׁ יְהֹוָה מִפְּנֵיכֶם גּוֹיִם גְּדֹלִים וַעֲצוּמִים וְאַתֶּם לֹא־עָמַד אִישׁ בִּפְנֵיכֶם עַד הַיּוֹם הַזֶּֽה׃ | 9 |
“ಯೆಹೋವ ದೇವರು ನಿಮ್ಮ ಮುಂದೆ ಬಲವಾದ ದೊಡ್ಡ ರಾಷ್ಟ್ರಗಳನ್ನು ಸಹ ಹೊರಡಿಸಿಬಿಟ್ಟರು. ನಿಮ್ಮ ಮುಂದೆ ಈವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
אִישׁ־אֶחָד מִכֶּם יִרְדׇּף־אָלֶף כִּי ׀ יְהֹוָה אֱלֹהֵיכֶם הוּא הַנִּלְחָם לָכֶם כַּאֲשֶׁר דִּבֶּר לָכֶֽם׃ | 10 |
ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.
וְנִשְׁמַרְתֶּם מְאֹד לְנַפְשֹֽׁתֵיכֶם לְאַהֲבָה אֶת־יְהֹוָה אֱלֹֽהֵיכֶֽם׃ | 11 |
ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವ ದೇವರನ್ನೇ ಪ್ರೀತಿಸಿರಿ.
כִּי ׀ אִם־שׁוֹב תָּשׁוּבוּ וּדְבַקְתֶּם בְּיֶתֶר הַגּוֹיִם הָאֵלֶּה הַנִּשְׁאָרִים הָאֵלֶּה אִתְּכֶם וְהִֽתְחַתַּנְתֶּם בָּהֶם וּבָאתֶם בָּהֶם וְהֵם בָּכֶֽם׃ | 12 |
“ಆದರೆ, ನೀವು ದೇವರಿಂದ ತಿರುಗಿಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಂಡು ಅವರೊಂದಿಗೆ ಮದುವೆ ಮಾಡಿಕೊಟ್ಟರೆ, ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ,
יָדוֹעַ תֵּֽדְעוּ כִּי לֹא יוֹסִיף יְהֹוָה אֱלֹהֵיכֶם לְהוֹרִישׁ אֶת־הַגּוֹיִם הָאֵלֶּה מִלִּפְנֵיכֶם וְהָיוּ לָכֶם לְפַח וּלְמוֹקֵשׁ וּלְשֹׁטֵט בְּצִדֵּיכֶם וְלִצְנִנִים בְּעֵינֵיכֶם עַד־אֲבׇדְכֶם מֵעַל הָאֲדָמָה הַטּוֹבָה הַזֹּאת אֲשֶׁר נָתַן לָכֶם יְהֹוָה אֱלֹהֵיכֶֽם׃ | 13 |
ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.
וְהִנֵּה אָנֹכִי הוֹלֵךְ הַיּוֹם בְּדֶרֶךְ כׇּל־הָאָרֶץ וִידַעְתֶּם בְּכׇל־לְבַבְכֶם וּבְכׇל־נַפְשְׁכֶם כִּי לֹֽא־נָפַל דָּבָר אֶחָד מִכֹּל ׀ הַדְּבָרִים הַטּוֹבִים אֲשֶׁר דִּבֶּר יְהֹוָה אֱלֹֽהֵיכֶם עֲלֵיכֶם הַכֹּל בָּאוּ לָכֶם לֹא־נָפַל מִמֶּנּוּ דָּבָר אֶחָֽד׃ | 14 |
“ಭೂನಿವಾಸಿಗಳೆಲ್ಲರು ಹೋಗುವ ಮಾರ್ಗವಾಗಿ ಇಂದು ನಾನು ಹೋಗಬೇಕಾಗಿದೆ. ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೆಯ ವಾಗ್ದಾನಗಳಲ್ಲಿ ಒಂದೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ. ಅವುಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
וְהָיָה כַּאֲשֶׁר־בָּא עֲלֵיכֶם כׇּל־הַדָּבָר הַטּוֹב אֲשֶׁר דִּבֶּר יְהֹוָה אֱלֹהֵיכֶם אֲלֵיכֶם כֵּן יָבִיא יְהֹוָה עֲלֵיכֶם אֵת כׇּל־הַדָּבָר הָרָע עַד־הַשְׁמִידוֹ אוֹתְכֶם מֵעַל הָאֲדָמָה הַטּוֹבָה הַזֹּאת אֲשֶׁר נָתַן לָכֶם יְהֹוָה אֱלֹהֵיכֶֽם׃ | 15 |
ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಒಳ್ಳೆಯ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ
בְּעׇבְרְכֶם אֶת־בְּרִית יְהֹוָה אֱלֹֽהֵיכֶם אֲשֶׁר צִוָּה אֶתְכֶם וַהֲלַכְתֶּם וַֽעֲבַדְתֶּם אֱלֹהִים אֲחֵרִים וְהִשְׁתַּחֲוִיתֶם לָהֶם וְחָרָה אַף־יְהֹוָה בָּכֶם וַאֲבַדְתֶּם מְהֵרָה מֵעַל הָאָרֶץ הַטּוֹבָה אֲשֶׁר נָתַן לָכֶֽם׃ | 16 |
ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.