< שופטים 14 >

וַיֵּרֶד שִׁמְשׁוֹן תִּמְנָתָה וַיַּרְא אִשָּׁה בְּתִמְנָתָה מִבְּנוֹת פְּלִשְׁתִּֽים׃ 1
ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ, ತಿರುಗಿ ತಂದೆತಾಯಿಗಳ ಬಳಿಗೆ ಬಂದು
וַיַּעַל וַיַּגֵּד לְאָבִיו וּלְאִמּוֹ וַיֹּאמֶר אִשָּׁה רָאִיתִי בְתִמְנָתָה מִבְּנוֹת פְּלִשְׁתִּים וְעַתָּה קְחוּ־אוֹתָהּ לִי לְאִשָּֽׁה׃ 2
ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು.
וַיֹּאמֶר לוֹ אָבִיו וְאִמּוֹ הַאֵין בִּבְנוֹת אַחֶיךָ וּבְכׇל־עַמִּי אִשָּׁה כִּֽי־אַתָּה הוֹלֵךְ לָקַחַת אִשָּׁה מִפְּלִשְׁתִּים הָעֲרֵלִים וַיֹּאמֶר שִׁמְשׁוֹן אֶל־אָבִיו אוֹתָהּ קַֽח־לִי כִּי־הִיא יָשְׁרָה בְעֵינָֽי׃ 3
ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು.
וְאָבִיו וְאִמּוֹ לֹא יָדְעוּ כִּי מֵֽיְהֹוָה הִיא כִּֽי־תֹאֲנָה הֽוּא־מְבַקֵּשׁ מִפְּלִשְׁתִּים וּבָעֵת הַהִיא פְּלִשְׁתִּים מֹשְׁלִים בְּיִשְׂרָאֵֽל׃ 4
ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.
וַיֵּרֶד שִׁמְשׁוֹן וְאָבִיו וְאִמּוֹ תִּמְנָתָה וַיָּבֹאוּ עַד־כַּרְמֵי תִמְנָתָה וְהִנֵּה כְּפִיר אֲרָיוֹת שֹׁאֵג לִקְרָאתֽוֹ׃ 5
ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.
וַתִּצְלַח עָלָיו רוּחַ יְהֹוָה וַֽיְשַׁסְּעֵהוּ כְּשַׁסַּע הַגְּדִי וּמְאוּמָה אֵין בְּיָדוֹ וְלֹא הִגִּיד לְאָבִיו וּלְאִמּוֹ אֵת אֲשֶׁר עָשָֽׂה׃ 6
ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.
וַיֵּרֶד וַיְדַבֵּר לָֽאִשָּׁה וַתִּישַׁר בְּעֵינֵי שִׁמְשֽׁוֹן׃ 7
ಅನಂತರ ಅವನು ಊರೊಳಗೆ ಹೋಗಿ ಆ ಸ್ತ್ರೀಯನ್ನು ಮಾತನಾಡಿಸಿ ಆಕೆಯನ್ನು ಮೆಚ್ಚಿಕೊಂಡನು.
וַיָּשׇׁב מִיָּמִים לְקַחְתָּהּ וַיָּסַר לִרְאוֹת אֵת מַפֶּלֶת הָאַרְיֵה וְהִנֵּה עֲדַת דְּבוֹרִים בִּגְוִיַּת הָאַרְיֵה וּדְבָֽשׁ׃ 8
ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು,
וַיִּרְדֵּהוּ אֶל־כַּפָּיו וַיֵּלֶךְ הָלוֹךְ וְאָכֹל וַיֵּלֶךְ אֶל־אָבִיו וְאֶל־אִמּוֹ וַיִּתֵּן לָהֶם וַיֹּאכֵלוּ וְלֹא־הִגִּיד לָהֶם כִּי מִגְּוִיַּת הָאַרְיֵה רָדָה הַדְּבָֽשׁ׃ 9
ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ.
וַיֵּרֶד אָבִיהוּ אֶל־הָֽאִשָּׁה וַיַּעַשׂ שָׁם שִׁמְשׁוֹן מִשְׁתֶּה כִּי כֵּן יַעֲשׂוּ הַבַּחוּרִֽים׃ 10
೧೦ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.
וַיְהִי כִּרְאוֹתָם אוֹתוֹ וַיִּקְחוּ שְׁלֹשִׁים מֵרֵעִים וַיִּהְיוּ אִתּֽוֹ׃ 11
೧೧ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.
וַיֹּאמֶר לָהֶם שִׁמְשׁוֹן אָחֽוּדָה־נָּא לָכֶם חִידָה אִם־הַגֵּד תַּגִּידוּ אוֹתָהּ לִי שִׁבְעַת יְמֵי הַמִּשְׁתֶּה וּמְצָאתֶם וְנָתַתִּי לָכֶם שְׁלֹשִׁים סְדִינִים וּשְׁלֹשִׁים חֲלִפֹת בְּגָדִֽים׃ 12
೧೨ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.
וְאִם־לֹא תוּכְלוּ לְהַגִּיד לִי וּנְתַתֶּם אַתֶּם לִי שְׁלֹשִׁים סְדִינִים וּשְׁלֹשִׁים חֲלִיפוֹת בְּגָדִים וַיֹּאמְרוּ לוֹ חוּדָה חִידָתְךָ וְנִשְׁמָעֶֽנָּה׃ 13
೧೩ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಅನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು.
וַיֹּאמֶר לָהֶם מֵהָֽאֹכֵל יָצָא מַאֲכָל וּמֵעַז יָצָא מָתוֹק וְלֹא יָכְלוּ לְהַגִּיד הַחִידָה שְׁלֹשֶׁת יָמִֽים׃ 14
೧೪ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.
וַיְהִי ׀ בַּיּוֹם הַשְּׁבִיעִי וַיֹּאמְרוּ לְאֵֽשֶׁת־שִׁמְשׁוֹן פַּתִּי אֶת־אִישֵׁךְ וְיַגֶּד־לָנוּ אֶת־הַחִידָה פֶּן־נִשְׂרֹף אוֹתָךְ וְאֶת־בֵּית אָבִיךְ בָּאֵשׁ הַלְיׇרְשֵׁנוּ קְרָאתֶם לָנוּ הֲלֹֽא׃ 15
೧೫ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು.
וַתֵּבְךְּ אֵשֶׁת שִׁמְשׁוֹן עָלָיו וַתֹּאמֶר רַק־שְׂנֵאתַנִי וְלֹא אֲהַבְתָּנִי הַחִידָה חַדְתָּ לִבְנֵי עַמִּי וְלִי לֹא הִגַּדְתָּה וַיֹּאמֶר לָהּ הִנֵּה לְאָבִי וּלְאִמִּי לֹא הִגַּדְתִּי וְלָךְ אַגִּֽיד׃ 16
೧೬ಆಕೆಯು ಸಂಸೋನನ ಮುಂದೆ ಅಳುತ್ತಾ, “ನೀನು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ತೊಂದರೆಪಡಿಸಿದಳು. ಅವನು ಆಕೆಗೆ, “ಅದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರ ಕೊಟ್ಟನು.
וַתֵּבְךְּ עָלָיו שִׁבְעַת הַיָּמִים אֲשֶׁר־הָיָה לָהֶם הַמִּשְׁתֶּה וַיְהִי ׀ בַּיּוֹם הַשְּׁבִיעִי וַיַּגֶּד־לָהּ כִּי הֱצִיקַתְהוּ וַתַּגֵּד הַחִידָה לִבְנֵי עַמָּֽהּ׃ 17
೧೭ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.
וַיֹּאמְרוּ לוֹ אַנְשֵׁי הָעִיר בַּיּוֹם הַשְּׁבִיעִי בְּטֶרֶם יָבֹא הַחַרְסָה מַה־מָּתוֹק מִדְּבַשׁ וּמֶה עַז מֵאֲרִי וַיֹּאמֶר לָהֶם לוּלֵא חֲרַשְׁתֶּם בְּעֶגְלָתִי לֹא מְצָאתֶם חִידָתִֽי׃ 18
೧೮ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು.
וַתִּצְלַח עָלָיו רוּחַ יְהֹוָה וַיֵּרֶד אַשְׁקְלוֹן וַיַּךְ מֵהֶם ׀ שְׁלֹשִׁים אִישׁ וַיִּקַּח אֶת־חֲלִיצוֹתָם וַיִּתֵּן הַחֲלִיפוֹת לְמַגִּידֵי הַחִידָה וַיִּחַר אַפּוֹ וַיַּעַל בֵּית אָבִֽיהוּ׃ 19
೧೯ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.
וַתְּהִי אֵשֶׁת שִׁמְשׁוֹן לְמֵרֵעֵהוּ אֲשֶׁר רֵעָה לֽוֹ׃ 20
೨೦ಇತ್ತ ಸಂಸೋನನ ಹೆಂಡತಿಯನ್ನು ಆ ಮೂವತ್ತು ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿಕೊಟ್ಟರು.

< שופטים 14 >