< שופטים 19 >
וַֽיְהִי בַּיָּמִים הָהֵם וּמֶלֶךְ אֵין בְּיִשְׂרָאֵל וַיְהִי ׀ אִישׁ לֵוִי גָּר בְּיַרְכְּתֵי הַר־אֶפְרַיִם וַיִּֽקַּֽח־לוֹ אִשָּׁה פִילֶגֶשׁ מִבֵּית לֶחֶם יְהוּדָֽה׃ | 1 |
೧ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.
וַתִּזְנֶה עָלָיו פִּֽילַגְשׁוֹ וַתֵּלֶךְ מֵֽאִתּוֹ אֶל־בֵּית אָבִיהָ אֶל־בֵּית לֶחֶם יְהוּדָה וַתְּהִי־שָׁם יָמִים אַרְבָּעָה חֳדָשִֽׁים׃ | 2 |
೨ಆಕೆಯು ಇವನನ್ನು ಬಿಟ್ಟು ಜಾರತ್ವಮಾಡಿ, ಯೆಹೂದದ ಬೇತ್ಲೆಹೇಮಿನಲ್ಲಿದ್ದ ತನ್ನ ತವರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.
וַיָּקׇם אִישָׁהּ וַיֵּלֶךְ אַחֲרֶיהָ לְדַבֵּר עַל־לִבָּהּ (להשיבו) [לַהֲשִׁיבָהּ] וְנַעֲרוֹ עִמּוֹ וְצֶמֶד חֲמֹרִים וַתְּבִיאֵהוּ בֵּית אָבִיהָ וַיִּרְאֵהוּ אֲבִי הַֽנַּעֲרָה וַיִּשְׂמַח לִקְרָאתֽוֹ׃ | 3 |
೩ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತನಾಡಿಸಿ ತಿರುಗಿ ಮನೆಗೆ ಕರೆದುಕೊಂಡು ಹೋಗಬೇಕೆಂದು ಒಬ್ಬ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತವರುಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.
וַיַּחֲזֶק־בּוֹ חֹתְנוֹ אֲבִי הַֽנַּעֲרָה וַיֵּשֶׁב אִתּוֹ שְׁלֹשֶׁת יָמִים וַיֹּאכְלוּ וַיִּשְׁתּוּ וַיָּלִינוּ שָֽׁם׃ | 4 |
೪ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿನ ಅಲ್ಲೇ ಉಳಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.
וַֽיְהִי בַּיּוֹם הָרְבִיעִי וַיַּשְׁכִּימוּ בַבֹּקֶר וַיָּקׇם לָלֶכֶת וַיֹּאמֶר אֲבִי הַֽנַּעֲרָה אֶל־חֲתָנוֹ סְעָד לִבְּךָ פַּת־לֶחֶם וְאַחַר תֵּלֵֽכוּ׃ | 5 |
೫ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲು
וַיֵּשְׁבוּ וַיֹּאכְלוּ שְׁנֵיהֶם יַחְדָּו וַיִּשְׁתּוּ וַיֹּאמֶר אֲבִי הַֽנַּעֲרָה אֶל־הָאִישׁ הוֹאֶל־נָא וְלִין וְיִיטַב לִבֶּֽךָ׃ | 6 |
೬ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು;
וַיָּקׇם הָאִישׁ לָלֶכֶת וַיִּפְצַר־בּוֹ חֹֽתְנוֹ וַיָּשׇׁב וַיָּלֶן שָֽׁם׃ | 7 |
೭ಆದರೆ ಅವನ ಮಾವನು ಬಹಳ ಒತ್ತಾಯ ಮಾಡಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು.
וַיַּשְׁכֵּם בַּבֹּקֶר בַּיּוֹם הַחֲמִישִׁי לָלֶכֶת וַיֹּאמֶר ׀ אֲבִי הַֽנַּעֲרָה סְעׇד־נָא לְבָבְךָ וְהִֽתְמַהְמְהוּ עַד־נְטוֹת הַיּוֹם וַיֹּאכְלוּ שְׁנֵיהֶֽם׃ | 8 |
೮ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು, “ದಯವಿಟ್ಟು ಮಧ್ಯಾಹ್ನದವರೆಗೆ ಇಲ್ಲೇ ಇದ್ದು ಬಲಹೊಂದು” ಎಂದು ಅವನನ್ನು ಬೇಡಿಕೊಳ್ಳಲು ಅವರು ತಿರುಗಿ ಊಟಕ್ಕೆ ನಿಂತನು.
וַיָּקׇם הָאִישׁ לָלֶכֶת הוּא וּפִילַגְשׁוֹ וְנַעֲרוֹ וַיֹּאמֶר לוֹ חֹתְנוֹ אֲבִי הַֽנַּעֲרָה הִנֵּה נָא רָפָה הַיּוֹם לַעֲרוֹב לִֽינוּ־נָא הִנֵּה חֲנוֹת הַיּוֹם לִין פֹּה וְיִיטַב לְבָבֶךָ וְהִשְׁכַּמְתֶּם מָחָר לְדַרְכְּכֶם וְהָלַכְתָּ לְאֹהָלֶֽךָ׃ | 9 |
೯ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.
וְלֹֽא־אָבָה הָאִישׁ לָלוּן וַיָּקׇם וַיֵּלֶךְ וַיָּבֹא עַד־נֹכַח יְבוּס הִיא יְרוּשָׁלָ͏ִם וְעִמּוֹ צֶמֶד חֲמוֹרִים חֲבוּשִׁים וּפִילַגְשׁוֹ עִמּֽוֹ׃ | 10 |
೧೦ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.
הֵם עִם־יְבוּס וְהַיּוֹם רַד מְאֹד וַיֹּאמֶר הַנַּעַר אֶל־אֲדֹנָיו לְכָה־נָּא וְנָסוּרָה אֶל־עִֽיר־הַיְבוּסִי הַזֹּאת וְנָלִין בָּֽהּ׃ | 11 |
೧೧ಅವರು ಯೆಬೂಸಿಯರ ಊರಾದ ಯೆರೂಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತುಮುಳುಗುವ ಸಮಯವಾಗಿದ್ದರಿಂದ ಸೇವಕನು ದಣಿಗೆ, “ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ, ಅಲ್ಲಿ ರಾತ್ರಿಯನ್ನು ಕಳೆಯೋಣ” ಅಂದನು.
וַיֹּאמֶר אֵלָיו אֲדֹנָיו לֹא נָסוּר אֶל־עִיר נׇכְרִי אֲשֶׁר לֹא־מִבְּנֵי יִשְׂרָאֵל הֵנָּה וְעָבַרְנוּ עַד־גִּבְעָֽה׃ | 12 |
೧೨ಆಗ ದಣಿಯು, “ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ” ಅಂದನು.
וַיֹּאמֶר לְנַֽעֲרוֹ לְךָ וְנִקְרְבָה בְּאַחַד הַמְּקֹמוֹת וְלַנּוּ בַגִּבְעָה אוֹ בָרָמָֽה׃ | 13 |
೧೩ಅವನು ತಿರುಗಿ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ರಾಮದಲ್ಲಾಗಲಿ ಇಳಿದುಕೊಳ್ಳೋಣ ಬಾ” ಅಂದನು.
וַיַּעַבְרוּ וַיֵּלֵכוּ וַתָּבֹא לָהֶם הַשֶּׁמֶשׁ אֵצֶל הַגִּבְעָה אֲשֶׁר לְבִנְיָמִֽן׃ | 14 |
೧೪ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.
וַיָּסֻרוּ שָׁם לָבוֹא לָלוּן בַּגִּבְעָה וַיָּבֹא וַיֵּשֶׁב בִּרְחוֹב הָעִיר וְאֵין אִישׁ מְאַסֵּֽף־אוֹתָם הַבַּיְתָה לָלֽוּן׃ | 15 |
೧೫ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು.
וְהִנֵּה ׀ אִישׁ זָקֵן בָּא מִֽן־מַעֲשֵׂהוּ מִן־הַשָּׂדֶה בָּעֶרֶב וְהָאִישׁ מֵהַר אֶפְרַיִם וְהוּא־גָר בַּגִּבְעָה וְאַנְשֵׁי הַמָּקוֹם בְּנֵי יְמִינִֽי׃ | 16 |
೧೬ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.
וַיִּשָּׂא עֵינָיו וַיַּרְא אֶת־הָאִישׁ הָאֹרֵחַ בִּרְחֹב הָעִיר וַיֹּאמֶר הָאִישׁ הַזָּקֵן אָנָה תֵלֵךְ וּמֵאַיִן תָּבֽוֹא׃ | 17 |
೧೭ಈ ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು
וַיֹּאמֶר אֵלָיו עֹבְרִים אֲנַחְנוּ מִבֵּֽית־לֶחֶם יְהוּדָה עַד־יַרְכְּתֵי הַר־אֶפְרַיִם מִשָּׁם אָנֹכִי וָאֵלֵךְ עַד־בֵּית לֶחֶם יְהוּדָה וְאֶת־בֵּית יְהֹוָה אֲנִי הֹלֵךְ וְאֵין אִישׁ מְאַסֵּף אוֹתִי הַבָּֽיְתָה׃ | 18 |
೧೮ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.
וְגַם־תֶּבֶן גַּם־מִסְפּוֹא יֵשׁ לַחֲמוֹרֵינוּ וְגַם לֶחֶם וָיַיִן יֶשׁ־לִי וְלַאֲמָתֶךָ וְלַנַּעַר עִם־עֲבָדֶיךָ אֵין מַחְסוֹר כׇּל־דָּבָֽר׃ | 19 |
೧೯ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು.
וַיֹּאמֶר הָאִישׁ הַזָּקֵן שָׁלוֹם לָךְ רַק כׇּל־מַחְסוֹרְךָ עָלָי רַק בָּרְחוֹב אַל־תָּלַֽן׃ | 20 |
೨೦ಆಗ ಆ ಮುದುಕನು, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;
וַיְבִיאֵהוּ לְבֵיתוֹ (ויבול) [וַיָּבׇל] לַחֲמוֹרִים וַֽיִּרְחֲצוּ רַגְלֵיהֶם וַיֹּאכְלוּ וַיִּשְׁתּֽוּ׃ | 21 |
೨೧ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.
הֵמָּה מֵיטִיבִים אֶת־לִבָּם וְהִנֵּה אַנְשֵׁי הָעִיר אַנְשֵׁי בְנֵי־בְלִיַּעַל נָסַבּוּ אֶת־הַבַּיִת מִֽתְדַּפְּקִים עַל־הַדָּלֶת וַיֹּאמְרוּ אֶל־הָאִישׁ בַּעַל הַבַּיִת הַזָּקֵן לֵאמֹר הוֹצֵא אֶת־הָאִישׁ אֲשֶׁר־בָּא אֶל־בֵּיתְךָ וְנֵדָעֶֽנּוּ׃ | 22 |
೨೨ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.
וַיֵּצֵא אֲלֵיהֶם הָאִישׁ בַּעַל הַבַּיִת וַיֹּאמֶר אֲלֵהֶם אַל־אַחַי אַל־תָּרֵעוּ נָא אַחֲרֵי אֲשֶׁר־בָּא הָאִישׁ הַזֶּה אֶל־בֵּיתִי אַֽל־תַּעֲשׂוּ אֶת־הַנְּבָלָה הַזֹּֽאת׃ | 23 |
೨೩ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.
הִנֵּה בִתִּי הַבְּתוּלָה וּפִילַגְשֵׁהוּ אֽוֹצִיאָה־נָּא אוֹתָם וְעַנּוּ אוֹתָם וַעֲשׂוּ לָהֶם הַטּוֹב בְּעֵינֵיכֶם וְלָאִישׁ הַזֶּה לֹא תַֽעֲשׂוּ דְּבַר הַנְּבָלָה הַזֹּֽאת׃ | 24 |
೨೪ಇನ್ನೂ ಮದುವೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ” ಅಂದನು.
וְלֹֽא־אָבוּ הָֽאֲנָשִׁים לִשְׁמֹעַֽ לוֹ וַיַּחֲזֵק הָאִישׁ בְּפִילַגְשׁוֹ וַיֹּצֵא אֲלֵיהֶם הַחוּץ וַיֵּדְעוּ אוֹתָהּ וַיִּֽתְעַלְּלוּ־בָהּ כׇּל־הַלַּיְלָה עַד־הַבֹּקֶר וַֽיְשַׁלְּחוּהָ (בעלות) [כַּעֲלוֹת] הַשָּֽׁחַר׃ | 25 |
೨೫ಆದರೆ ಅವರು ಆ ಮುದುಕನಿಗೆ ಕಿವಿಗೊಡದೆ ಹೋದುದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಬಳಿಗೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ, ರಾತ್ರಿಯೆಲ್ಲಾ ಬಹುಕ್ರೂರತನದಿಂದ ವರ್ತಿಸಿ, ಬೆಳಗಾಗುವಾಗ ಆಕೆಯನ್ನು ಬಿಟ್ಟುಹೋದರು.
וַתָּבֹא הָאִשָּׁה לִפְנוֹת הַבֹּקֶר וַתִּפֹּל פֶּתַח בֵּית־הָאִישׁ אֲשֶׁר־אֲדוֹנֶיהָ שָּׁם עַד־הָאֽוֹר׃ | 26 |
೨೬ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳಿದುಕೊಂಡಿದ್ದ ಮನೆಯ ಬಾಗಿಲಲ್ಲಿ ಬಂದು ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.
וַיָּקׇם אֲדֹנֶיהָ בַּבֹּקֶר וַיִּפְתַּח דַּלְתוֹת הַבַּיִת וַיֵּצֵא לָלֶכֶת לְדַרְכּוֹ וְהִנֵּה הָאִשָּׁה פִֽילַגְשׁוֹ נֹפֶלֶת פֶּתַח הַבַּיִת וְיָדֶיהָ עַל־הַסַּֽף׃ | 27 |
೨೭ಆಕೆಯ ಪತಿಯು ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆಯಲು, ತನ್ನ ಉಪಪತ್ನಿಯು ಬಾಗಿಲ ಮುಂದೆ ಬಿದ್ದಿರುವುದನ್ನೂ, ಆಕೆಯ ಕೈಗಳು ಹೊಸ್ತಿಲಿನ ಮೇಲಿರುವುದನ್ನೂ ಕಂಡನು.
וַיֹּאמֶר אֵלֶיהָ קוּמִי וְנֵלֵכָה וְאֵין עֹנֶה וַיִּקָּחֶהָ עַֽל־הַחֲמוֹר וַיָּקׇם הָאִישׁ וַיֵּלֶךְ לִמְקֹמֽוֹ׃ | 28 |
೨೮ಅವನು, “ಏಳು, ಹೋಗೋಣ” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಮನೆಗೆ ಹೋದನು.
וַיָּבֹא אֶל־בֵּיתוֹ וַיִּקַּח אֶת־הַֽמַּאֲכֶלֶת וַיַּחֲזֵק בְּפִֽילַגְשׁוֹ וַֽיְנַתְּחֶהָ לַעֲצָמֶיהָ לִשְׁנֵים עָשָׂר נְתָחִים וַֽיְשַׁלְּחֶהָ בְּכֹל גְּבוּל יִשְׂרָאֵֽל׃ | 29 |
೨೯ಅವನು ತನ್ನ ಮನೆಗೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು, ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ, ಅವುಗಳನ್ನು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.
וְהָיָה כׇל־הָרֹאֶה וְאָמַר לֹֽא־נִהְיְתָה וְלֹֽא־נִרְאֲתָה כָּזֹאת לְמִיּוֹם עֲלוֹת בְּנֵֽי־יִשְׂרָאֵל מֵאֶרֶץ מִצְרַיִם עַד הַיּוֹם הַזֶּה שִׂימוּ־לָכֶם עָלֶיהָ עֻצוּ וְדַבֵּֽרוּ׃ | 30 |
೩೦ಅವುಗಳನ್ನು ಕಂಡವರೆಲ್ಲರೂ, “ಇಸ್ರಾಯೇಲರು ಐಗುಪ್ತವನ್ನು ಬಿಟ್ಟು ಬಂದ ದಿನದಿಂದ ಈ ದಿನದವರೆಗೆ ಇಂಥ ಕೃತ್ಯವು ನಡೆಯಲೇ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು” ಅಂದುಕೊಂಡರು.