< ויקרא 5 >

וְנֶפֶשׁ כִּֽי־תֶחֱטָא וְשָֽׁמְעָה קוֹל אָלָה וְהוּא עֵד אוֹ רָאָה אוֹ יָדָע אִם־לוֹא יַגִּיד וְנָשָׂא עֲוֺנֽוֹ׃ 1
“‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
אוֹ נֶפֶשׁ אֲשֶׁר תִּגַּע בְּכׇל־דָּבָר טָמֵא אוֹ בְנִבְלַת חַיָּה טְמֵאָה אוֹ בְּנִבְלַת בְּהֵמָה טְמֵאָה אוֹ בְּנִבְלַת שֶׁרֶץ טָמֵא וְנֶעְלַם מִמֶּנּוּ וְהוּא טָמֵא וְאָשֵֽׁם׃ 2
“‘ಇಲ್ಲವೆ, ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಇವುಗಳ ಹೆಣವಾಗಲಿ, ಅಶುದ್ಧವಾದ ಹರಿದಾಡುವ ಕ್ರಿಮಿಗಳ ಹೆಣಗಳಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆ ಇದ್ದರೂ ಅವನು ಅಶುದ್ಧವಾಗಿದ್ದು ಅಪರಾಧಿಯಾಗಿರುವನು.
אוֹ כִי יִגַּע בְּטֻמְאַת אָדָם לְכֹל טֻמְאָתוֹ אֲשֶׁר יִטְמָא בָּהּ וְנֶעְלַם מִמֶּנּוּ וְהוּא יָדַע וְאָשֵֽׁם׃ 3
ಇಲ್ಲವೆ, ಅವನು ಮನುಷ್ಯನ ಅಶುದ್ಧತ್ವವನ್ನು ತಗಲಿದರೆ, ಮನುಷ್ಯನನ್ನು ಅಶುದ್ಧಪಡಿಸುವ ಯಾವುದೇ ಅಶುದ್ಧತ್ವವಾಗಿದ್ದರೂ ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಅವನು ಅಪರಾಧಿಯಾಗಿರುವನು.
אוֹ נֶפֶשׁ כִּי תִשָּׁבַע לְבַטֵּא בִשְׂפָתַיִם לְהָרַע ׀ אוֹ לְהֵיטִיב לְכֹל אֲשֶׁר יְבַטֵּא הָאָדָם בִּשְׁבֻעָה וְנֶעְלַם מִמֶּנּוּ וְהוּא־יָדַע וְאָשֵׁם לְאַחַת מֵאֵֽלֶּה׃ 4
ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.
וְהָיָה כִֽי־יֶאְשַׁם לְאַחַת מֵאֵלֶּה וְהִתְוַדָּה אֲשֶׁר חָטָא עָלֶֽיהָ׃ 5
ಅವನು ಇವುಗಳೊಂದರಲ್ಲಿ ಅಪರಾಧಿಯಾಗಿದ್ದು, ತಾನು ಅದರಲ್ಲಿ ಪಾಪಮಾಡಿದ್ದೇನೆಂದು ಅರಿಕೆ ಮಾಡುವುದಾದರೆ,
וְהֵבִיא אֶת־אֲשָׁמוֹ לַיהֹוָה עַל חַטָּאתוֹ אֲשֶׁר חָטָא נְקֵבָה מִן־הַצֹּאן כִּשְׂבָּה אֽוֹ־שְׂעִירַת עִזִּים לְחַטָּאת וְכִפֶּר עָלָיו הַכֹּהֵן מֵחַטָּאתֽוֹ׃ 6
ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.
וְאִם־לֹא תַגִּיעַ יָדוֹ דֵּי שֶׂה וְהֵבִיא אֶת־אֲשָׁמוֹ אֲשֶׁר חָטָא שְׁתֵּי תֹרִים אֽוֹ־שְׁנֵי בְנֵֽי־יוֹנָה לַֽיהֹוָה אֶחָד לְחַטָּאת וְאֶחָד לְעֹלָֽה׃ 7
“‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.
וְהֵבִיא אֹתָם אֶל־הַכֹּהֵן וְהִקְרִיב אֶת־אֲשֶׁר לַחַטָּאת רִאשׁוֹנָה וּמָלַק אֶת־רֹאשׁוֹ מִמּוּל עׇרְפּוֹ וְלֹא יַבְדִּֽיל׃ 8
ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಅವನು ಪಾಪ ಪರಿಹಾರದ ಬಲಿಗೆ ತಂದಿರುವುದನ್ನು ಮೊದಲು ಸಮರ್ಪಿಸಿ, ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು. ಆದರೆ ಅದನ್ನು ವಿಭಾಗಿಸಬಾರದು.
וְהִזָּה מִדַּם הַחַטָּאת עַל־קִיר הַמִּזְבֵּחַ וְהַנִּשְׁאָר בַּדָּם יִמָּצֵה אֶל־יְסוֹד הַמִּזְבֵּחַ חַטָּאת הֽוּא׃ 9
ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು.
וְאֶת־הַשֵּׁנִי יַעֲשֶׂה עֹלָה כַּמִּשְׁפָּט וְכִפֶּר עָלָיו הַכֹּהֵן מֵחַטָּאתוֹ אֲשֶׁר־חָטָא וְנִסְלַח לֽוֹ׃ 10
ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.
וְאִם־לֹא תַשִּׂיג יָדוֹ לִשְׁתֵּי תֹרִים אוֹ לִשְׁנֵי בְנֵי־יוֹנָה וְהֵבִיא אֶת־קׇרְבָּנוֹ אֲשֶׁר חָטָא עֲשִׂירִת הָאֵפָה סֹלֶת לְחַטָּאת לֹא־יָשִׂים עָלֶיהָ שֶׁמֶן וְלֹא־יִתֵּן עָלֶיהָ לְבֹנָה כִּי חַטָּאת הִֽוא׃ 11
“‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.
וֶהֱבִיאָהּ אֶל־הַכֹּהֵן וְקָמַץ הַכֹּהֵן ׀ מִמֶּנָּה מְלוֹא קֻמְצוֹ אֶת־אַזְכָּרָתָהּ וְהִקְטִיר הַמִּזְבֵּחָה עַל אִשֵּׁי יְהֹוָה חַטָּאת הִֽוא׃ 12
ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.
וְכִפֶּר עָלָיו הַכֹּהֵן עַל־חַטָּאתוֹ אֲשֶׁר־חָטָא מֵֽאַחַת מֵאֵלֶּה וְנִסְלַח לוֹ וְהָיְתָה לַכֹּהֵן כַּמִּנְחָֽה׃ 13
ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’”
וַיְדַבֵּר יְהֹוָה אֶל־מֹשֶׁה לֵּאמֹֽר׃ 14
ಯೆಹೋವ ದೇವರು ಮೋಶೆಗೆ,
נֶפֶשׁ כִּֽי־תִמְעֹל מַעַל וְחָֽטְאָה בִּשְׁגָגָה מִקׇּדְשֵׁי יְהֹוָה וְהֵבִיא אֶת־אֲשָׁמוֹ לַֽיהֹוָה אַיִל תָּמִים מִן־הַצֹּאן בְּעֶרְכְּךָ כֶּֽסֶף־שְׁקָלִים בְּשֶֽׁקֶל־הַקֹּדֶשׁ לְאָשָֽׁם׃ 15
“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.
וְאֵת אֲשֶׁר חָטָא מִן־הַקֹּדֶשׁ יְשַׁלֵּם וְאֶת־חֲמִֽישִׁתוֹ יוֹסֵף עָלָיו וְנָתַן אֹתוֹ לַכֹּהֵן וְהַכֹּהֵן יְכַפֵּר עָלָיו בְּאֵיל הָאָשָׁם וְנִסְלַח לֽוֹ׃ 16
ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು.
וְאִם־נֶפֶשׁ כִּי תֶֽחֱטָא וְעָֽשְׂתָה אַחַת מִכׇּל־מִצְוֺת יְהֹוָה אֲשֶׁר לֹא תֵעָשֶׂינָה וְלֹֽא־יָדַע וְאָשֵׁם וְנָשָׂא עֲוֺנֽוֹ׃ 17
“ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.
וְהֵבִיא אַיִל תָּמִים מִן־הַצֹּאן בְּעֶרְכְּךָ לְאָשָׁם אֶל־הַכֹּהֵן וְכִפֶּר עָלָיו הַכֹּהֵן עַל שִׁגְגָתוֹ אֲשֶׁר־שָׁגָג וְהוּא לֹֽא־יָדַע וְנִסְלַח לֽוֹ׃ 18
ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು.
אָשָׁם הוּא אָשֹׁם אָשַׁם לַיהֹוָֽה׃ 19
ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು.

< ויקרא 5 >