< במדבר 14 >
וַתִּשָּׂא כׇּל־הָעֵדָה וַֽיִּתְּנוּ אֶת־קוֹלָם וַיִּבְכּוּ הָעָם בַּלַּיְלָה הַהֽוּא׃ | 1 |
೧ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.
וַיִּלֹּנוּ עַל־מֹשֶׁה וְעַֽל־אַהֲרֹן כֹּל בְּנֵי יִשְׂרָאֵל וַֽיֹּאמְרוּ אֲלֵהֶם כׇּל־הָעֵדָה לוּ־מַתְנוּ בְּאֶרֶץ מִצְרַיִם אוֹ בַּמִּדְבָּר הַזֶּה לוּ־מָֽתְנוּ׃ | 2 |
೨ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು
וְלָמָה יְהֹוָה מֵבִיא אֹתָנוּ אֶל־הָאָרֶץ הַזֹּאת לִנְפֹּל בַּחֶרֶב נָשֵׁינוּ וְטַפֵּנוּ יִהְיוּ לָבַז הֲלוֹא טוֹב לָנוּ שׁוּב מִצְרָֽיְמָה׃ | 3 |
೩ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.
וַיֹּאמְרוּ אִישׁ אֶל־אָחִיו נִתְּנָה רֹאשׁ וְנָשׁוּבָה מִצְרָֽיְמָה׃ | 4 |
೪ಹೀಗೆ ಅವರು ಒಬ್ಬರ ಸಂಗಡಲೊಬ್ಬರು, “ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ” ಎಂದು ಮಾತನಾಡಿಕೊಂಡರು.
וַיִּפֹּל מֹשֶׁה וְאַהֲרֹן עַל־פְּנֵיהֶם לִפְנֵי כׇּל־קְהַל עֲדַת בְּנֵי יִשְׂרָאֵֽל׃ | 5 |
೫ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.
וִיהוֹשֻׁעַ בִּן־נוּן וְכָלֵב בֶּן־יְפֻנֶּה מִן־הַתָּרִים אֶת־הָאָרֶץ קָרְעוּ בִּגְדֵיהֶֽם׃ | 6 |
೬ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.
וַיֹּאמְרוּ אֶל־כׇּל־עֲדַת בְּנֵֽי־יִשְׂרָאֵל לֵאמֹר הָאָרֶץ אֲשֶׁר עָבַרְנוּ בָהּ לָתוּר אֹתָהּ טוֹבָה הָאָרֶץ מְאֹד מְאֹֽד׃ | 7 |
೭ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು.
אִם־חָפֵץ בָּנוּ יְהֹוָה וְהֵבִיא אֹתָנוּ אֶל־הָאָרֶץ הַזֹּאת וּנְתָנָהּ לָנוּ אֶרֶץ אֲשֶׁר־הִוא זָבַת חָלָב וּדְבָֽשׁ׃ | 8 |
೮ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.
אַךְ בַּיהֹוָה אַל־תִּמְרֹדוּ וְאַתֶּם אַל־תִּֽירְאוּ אֶת־עַם הָאָרֶץ כִּי לַחְמֵנוּ הֵם סָר צִלָּם מֵעֲלֵיהֶם וַֽיהֹוָה אִתָּנוּ אַל־תִּירָאֻֽם׃ | 9 |
೯ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.
וַיֹּֽאמְרוּ כׇּל־הָעֵדָה לִרְגּוֹם אֹתָם בָּאֲבָנִים וּכְבוֹד יְהֹוָה נִרְאָה בְּאֹהֶל מוֹעֵד אֶֽל־כׇּל־בְּנֵי יִשְׂרָאֵֽל׃ | 10 |
೧೦ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.
וַיֹּאמֶר יְהֹוָה אֶל־מֹשֶׁה עַד־אָנָה יְנַאֲצֻנִי הָעָם הַזֶּה וְעַד־אָנָה לֹא־יַאֲמִינוּ בִי בְּכֹל הָֽאֹתוֹת אֲשֶׁר עָשִׂיתִי בְּקִרְבּֽוֹ׃ | 11 |
೧೧ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?
אַכֶּנּוּ בַדֶּבֶר וְאוֹרִשֶׁנּוּ וְאֶֽעֱשֶׂה אֹֽתְךָ לְגוֹי־גָּדוֹל וְעָצוּם מִמֶּֽנּוּ׃ | 12 |
೧೨ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
וַיֹּאמֶר מֹשֶׁה אֶל־יְהֹוָה וְשָׁמְעוּ מִצְרַיִם כִּֽי־הֶעֱלִיתָ בְכֹחֲךָ אֶת־הָעָם הַזֶּה מִקִּרְבּֽוֹ׃ | 13 |
೧೩ಅದಕ್ಕೆ ಮೋಶೆಯು ಯೆಹೋವನಿಗೆ, “ನೀನು ಹೀಗೆ ಮಾಡುವುದಾದರೆ ಐಗುಪ್ತ್ಯರು ಈ ಸುದ್ದಿಯನ್ನು ಕೇಳುವರು. ಅವರ ಕೈಯಿಂದ ನೀನು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಈ ಸಂಗತಿಯನ್ನು ಈ ಕಾನಾನ್ ದೇಶದ ನಿವಾಸಿಗಳಿಗೆ ತಿಳಿಸುವರು.
וְאָמְרוּ אֶל־יוֹשֵׁב הָאָרֶץ הַזֹּאת שָֽׁמְעוּ כִּֽי־אַתָּה יְהֹוָה בְּקֶרֶב הָעָם הַזֶּה אֲשֶׁר־עַיִן בְּעַיִן נִרְאָה ׀ אַתָּה יְהֹוָה וַעֲנָֽנְךָ עֹמֵד עֲלֵהֶם וּבְעַמֻּד עָנָן אַתָּה הֹלֵךְ לִפְנֵיהֶם יוֹמָם וּבְעַמּוּד אֵשׁ לָֽיְלָה׃ | 14 |
೧೪ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.
וְהֵמַתָּה אֶת־הָעָם הַזֶּה כְּאִישׁ אֶחָד וְאָֽמְרוּ הַגּוֹיִם אֲשֶׁר־שָׁמְעוּ אֶֽת־שִׁמְעֲךָ לֵאמֹֽר׃ | 15 |
೧೫ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗದವರು ನಿನ್ನ ವಿಷಯದಲ್ಲಿ,
מִבִּלְתִּי יְכֹלֶת יְהֹוָה לְהָבִיא אֶת־הָעָם הַזֶּה אֶל־הָאָרֶץ אֲשֶׁר־נִשְׁבַּע לָהֶם וַיִּשְׁחָטֵם בַּמִּדְבָּֽר׃ | 16 |
೧೬“‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು’ ಎಂದು ಮಾತನಾಡಿಕೊಳ್ಳುವರು.
וְעַתָּה יִ גְדַּל־נָא כֹּחַ אֲדֹנָי כַּאֲשֶׁר דִּבַּרְתָּ לֵאמֹֽר׃ | 17 |
೧೭ಈಗ ನೀನು ಹೇಳಿದ ಪ್ರಕಾರ ಯೆಹೋವನ ಬಲವು ದೊಡ್ಡದಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ನಿನ್ನ ವಿಷಯದಲ್ಲಿ,
יְהֹוָה אֶרֶךְ אַפַּיִם וְרַב־חֶסֶד נֹשֵׂא עָוֺן וָפָשַׁע וְנַקֵּה לֹא יְנַקֶּה פֹּקֵד עֲוֺן אָבוֹת עַל־בָּנִים עַל־שִׁלֵּשִׁים וְעַל־רִבֵּעִֽים׃ | 18 |
೧೮‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.
סְלַֽח־נָא לַעֲוֺן הָעָם הַזֶּה כְּגֹדֶל חַסְדֶּךָ וְכַאֲשֶׁר נָשָׂאתָה לָעָם הַזֶּה מִמִּצְרַיִם וְעַד־הֵֽנָּה׃ | 19 |
೧೯ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
וַיֹּאמֶר יְהֹוָה סָלַחְתִּי כִּדְבָרֶֽךָ׃ | 20 |
೨೦ಅದಕ್ಕೆ ಯೆಹೋವನು, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ.
וְאוּלָם חַי־אָנִי וְיִמָּלֵא כְבוֹד־יְהֹוָה אֶת־כׇּל־הָאָֽרֶץ׃ | 21 |
೨೧ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.
כִּי כׇל־הָאֲנָשִׁים הָרֹאִים אֶת־כְּבֹדִי וְאֶת־אֹתֹתַי אֲשֶׁר־עָשִׂיתִי בְמִצְרַיִם וּבַמִּדְבָּר וַיְנַסּוּ אֹתִי זֶה עֶשֶׂר פְּעָמִים וְלֹא שָׁמְעוּ בְּקוֹלִֽי׃ | 22 |
೨೨ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ
אִם־יִרְאוּ אֶת־הָאָרֶץ אֲשֶׁר נִשְׁבַּעְתִּי לַאֲבֹתָם וְכׇל־מְנַאֲצַי לֹא יִרְאֽוּהָ׃ | 23 |
೨೩ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.
וְעַבְדִּי כָלֵב עֵקֶב הָֽיְתָה רוּחַ אַחֶרֶת עִמּוֹ וַיְמַלֵּא אַחֲרָי וַהֲבִֽיאֹתִיו אֶל־הָאָרֶץ אֲשֶׁר־בָּא שָׁמָּה וְזַרְעוֹ יוֹרִשֶֽׁנָּה׃ | 24 |
೨೪ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.
וְהָעֲמָֽלֵקִי וְהַֽכְּנַעֲנִי יוֹשֵׁב בָּעֵמֶק מָחָר פְּנוּ וּסְעוּ לָכֶם הַמִּדְבָּר דֶּרֶךְ יַם־סֽוּף׃ | 25 |
೨೫ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು.
וַיְדַבֵּר יְהֹוָה אֶל־מֹשֶׁה וְאֶֽל־אַהֲרֹן לֵאמֹֽר׃ | 26 |
೨೬ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
עַד־מָתַי לָעֵדָה הָֽרָעָה הַזֹּאת אֲשֶׁר הֵמָּה מַלִּינִים עָלָי אֶת־תְּלֻנּוֹת בְּנֵי יִשְׂרָאֵל אֲשֶׁר הֵמָּה מַלִּינִים עָלַי שָׁמָֽעְתִּי׃ | 27 |
೨೭“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.
אֱמֹר אֲלֵהֶם חַי־אָנִי נְאֻם־יְהֹוָה אִם־לֹא כַּאֲשֶׁר דִּבַּרְתֶּם בְּאׇזְנָי כֵּן אֶֽעֱשֶׂה לָכֶֽם׃ | 28 |
೨೮ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.
בַּמִּדְבָּר הַזֶּה יִפְּלוּ פִגְרֵיכֶם וְכׇל־פְּקֻדֵיכֶם לְכׇל־מִסְפַּרְכֶם מִבֶּן עֶשְׂרִים שָׁנָה וָמָעְלָה אֲשֶׁר הֲלִֽינֹתֶם עָלָֽי׃ | 29 |
೨೯ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.
אִם־אַתֶּם תָּבֹאוּ אֶל־הָאָרֶץ אֲשֶׁר נָשָׂאתִי אֶת־יָדִי לְשַׁכֵּן אֶתְכֶם בָּהּ כִּי אִם־כָּלֵב בֶּן־יְפֻנֶּה וִיהוֹשֻׁעַ בִּן־נֽוּן׃ | 30 |
೩೦ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.
וְטַפְּכֶם אֲשֶׁר אֲמַרְתֶּם לָבַז יִהְיֶה וְהֵבֵיאתִי אֹתָם וְיָֽדְעוּ אֶת־הָאָרֶץ אֲשֶׁר מְאַסְתֶּם בָּֽהּ׃ | 31 |
೩೧ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.
וּפִגְרֵיכֶם אַתֶּם יִפְּלוּ בַּמִּדְבָּר הַזֶּֽה׃ | 32 |
೩೨ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ.
וּבְנֵיכֶם יִהְיוּ רֹעִים בַּמִּדְבָּר אַרְבָּעִים שָׁנָה וְנָשְׂאוּ אֶת־זְנוּתֵיכֶם עַד־תֹּם פִּגְרֵיכֶם בַּמִּדְבָּֽר׃ | 33 |
೩೩ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.
בְּמִסְפַּר הַיָּמִים אֲשֶׁר־תַּרְתֶּם אֶת־הָאָרֶץ אַרְבָּעִים יוֹם יוֹם לַשָּׁנָה יוֹם לַשָּׁנָה תִּשְׂאוּ אֶת־עֲוֺנֹתֵיכֶם אַרְבָּעִים שָׁנָה וִֽידַעְתֶּם אֶת־תְּנוּאָתִֽי׃ | 34 |
೩೪ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.
אֲנִי יְהֹוָה דִּבַּרְתִּי אִם־לֹא ׀ זֹאת אֶֽעֱשֶׂה לְכׇל־הָעֵדָה הָֽרָעָה הַזֹּאת הַנּוֹעָדִים עָלָי בַּמִּדְבָּר הַזֶּה יִתַּמּוּ וְשָׁם יָמֻֽתוּ׃ | 35 |
೩೫ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.
וְהָאֲנָשִׁים אֲשֶׁר־שָׁלַח מֹשֶׁה לָתוּר אֶת־הָאָרֶץ וַיָּשֻׁבוּ (וילונו) [וַיַּלִּינוּ] עָלָיו אֶת־כׇּל־הָעֵדָה לְהוֹצִיא דִבָּה עַל־הָאָֽרֶץ׃ | 36 |
೩೬ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.
וַיָּמֻתוּ הָֽאֲנָשִׁים מוֹצִאֵי דִבַּת־הָאָרֶץ רָעָה בַּמַּגֵּפָה לִפְנֵי יְהֹוָֽה׃ | 37 |
೩೭ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
וִיהוֹשֻׁעַ בִּן־נוּן וְכָלֵב בֶּן־יְפֻנֶּה חָיוּ מִן־הָאֲנָשִׁים הָהֵם הַהֹֽלְכִים לָתוּר אֶת־הָאָֽרֶץ׃ | 38 |
೩೮ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.
וַיְדַבֵּר מֹשֶׁה אֶת־הַדְּבָרִים הָאֵלֶּה אֶֽל־כׇּל־בְּנֵי יִשְׂרָאֵל וַיִּֽתְאַבְּלוּ הָעָם מְאֹֽד׃ | 39 |
೩೯ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.
וַיַּשְׁכִּמוּ בַבֹּקֶר וַיַּֽעֲלוּ אֶל־רֹאשׁ־הָהָר לֵאמֹר הִנֶּנּוּ וְעָלִינוּ אֶל־הַמָּקוֹם אֲשֶׁר־אָמַר יְהֹוָה כִּי חָטָֽאנוּ׃ | 40 |
೪೦ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು.
וַיֹּאמֶר מֹשֶׁה לָמָּה זֶּה אַתֶּם עֹבְרִים אֶת־פִּי יְהֹוָה וְהִוא לֹא תִצְלָֽח׃ | 41 |
೪೧ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ.
אַֽל־תַּעֲלוּ כִּי אֵין יְהֹוָה בְּקִרְבְּכֶם וְלֹא תִּנָּגְפוּ לִפְנֵי אֹיְבֵיכֶֽם׃ | 42 |
೪೨ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.
כִּי הָעֲמָלֵקִי וְהַכְּנַעֲנִי שָׁם לִפְנֵיכֶם וּנְפַלְתֶּם בֶּחָרֶב כִּֽי־עַל־כֵּן שַׁבְתֶּם מֵאַחֲרֵי יְהֹוָה וְלֹא־יִהְיֶה יְהֹוָה עִמָּכֶֽם׃ | 43 |
೪೩ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.
וַיַּעְפִּלוּ לַעֲלוֹת אֶל־רֹאשׁ הָהָר וַאֲרוֹן בְּרִית־יְהֹוָה וּמֹשֶׁה לֹא־מָשׁוּ מִקֶּרֶב הַֽמַּחֲנֶֽה׃ | 44 |
೪೪ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.
וַיֵּרֶד הָעֲמָלֵקִי וְהַֽכְּנַעֲנִי הַיֹּשֵׁב בָּהָר הַהוּא וַיַּכּוּם וַֽיַּכְּתוּם עַד־הַֽחׇרְמָֽה׃ | 45 |
೪೫ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.