< במדבר 20 >
וַיָּבֹאוּ בְנֵֽי־יִשְׂרָאֵל כׇּל־הָעֵדָה מִדְבַּר־צִן בַּחֹדֶשׁ הָֽרִאשׁוֹן וַיֵּשֶׁב הָעָם בְּקָדֵשׁ וַתָּמׇת שָׁם מִרְיָם וַתִּקָּבֵר שָֽׁם׃ | 1 |
೧ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.
וְלֹא־הָיָה מַיִם לָעֵדָה וַיִּקָּהֲלוּ עַל־מֹשֶׁה וְעַֽל־אַהֲרֹֽן׃ | 2 |
೨ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು.
וַיָּרֶב הָעָם עִם־מֹשֶׁה וַיֹּאמְרוּ לֵאמֹר וְלוּ גָוַעְנוּ בִּגְוַע אַחֵינוּ לִפְנֵי יְהֹוָֽה׃ | 3 |
೩ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತುಹೋದಾಗಲೇ ನಾವೂ ಸಹ ಸತ್ತುಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
וְלָמָה הֲבֵאתֶם אֶת־קְהַל יְהֹוָה אֶל־הַמִּדְבָּר הַזֶּה לָמוּת שָׁם אֲנַחְנוּ וּבְעִירֵֽנוּ׃ | 4 |
೪ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?
וְלָמָה הֶֽעֱלִיתֻנוּ מִמִּצְרַיִם לְהָבִיא אֹתָנוּ אֶל־הַמָּקוֹם הָרָע הַזֶּה לֹא ׀ מְקוֹם זֶרַע וּתְאֵנָה וְגֶפֶן וְרִמּוֹן וּמַיִם אַיִן לִשְׁתּֽוֹת׃ | 5 |
೫ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು.
וַיָּבֹא מֹשֶׁה וְאַהֲרֹן מִפְּנֵי הַקָּהָל אֶל־פֶּתַח אֹהֶל מוֹעֵד וַֽיִּפְּלוּ עַל־פְּנֵיהֶם וַיֵּרָא כְבוֹד־יְהֹוָה אֲלֵיהֶֽם׃ | 6 |
೬ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
וַיְדַבֵּר יְהֹוָה אֶל־מֹשֶׁה לֵּאמֹֽר׃ | 7 |
೭ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ,
קַח אֶת־הַמַּטֶּה וְהַקְהֵל אֶת־הָעֵדָה אַתָּה וְאַהֲרֹן אָחִיךָ וְדִבַּרְתֶּם אֶל־הַסֶּלַע לְעֵינֵיהֶם וְנָתַן מֵימָיו וְהוֹצֵאתָ לָהֶם מַיִם מִן־הַסֶּלַע וְהִשְׁקִיתָ אֶת־הָעֵדָה וְאֶת־בְּעִירָֽם׃ | 8 |
೮“ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.
וַיִּקַּח מֹשֶׁה אֶת־הַמַּטֶּה מִלִּפְנֵי יְהֹוָה כַּאֲשֶׁר צִוָּֽהוּ׃ | 9 |
೯ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡನು.
וַיַּקְהִלוּ מֹשֶׁה וְאַהֲרֹן אֶת־הַקָּהָל אֶל־פְּנֵי הַסָּלַע וַיֹּאמֶר לָהֶם שִׁמְעוּ־נָא הַמֹּרִים הֲמִן־הַסֶּלַע הַזֶּה נוֹצִיא לָכֶם מָֽיִם׃ | 10 |
೧೦ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?”
וַיָּרֶם מֹשֶׁה אֶת־יָדוֹ וַיַּךְ אֶת־הַסֶּלַע בְּמַטֵּהוּ פַּעֲמָיִם וַיֵּצְאוּ מַיִם רַבִּים וַתֵּשְׁתְּ הָעֵדָה וּבְעִירָֽם׃ | 11 |
೧೧ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.
וַיֹּאמֶר יְהֹוָה אֶל־מֹשֶׁה וְאֶֽל־אַהֲרֹן יַעַן לֹא־הֶאֱמַנְתֶּם בִּי לְהַקְדִּישֵׁנִי לְעֵינֵי בְּנֵי יִשְׂרָאֵל לָכֵן לֹא תָבִיאוּ אֶת־הַקָּהָל הַזֶּה אֶל־הָאָרֶץ אֲשֶׁר־נָתַתִּי לָהֶֽם׃ | 12 |
೧೨ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.
הֵמָּה מֵי מְרִיבָה אֲשֶׁר־רָבוּ בְנֵֽי־יִשְׂרָאֵל אֶת־יְהֹוָה וַיִּקָּדֵשׁ בָּֽם׃ | 13 |
೧೩ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.
וַיִּשְׁלַח מֹשֶׁה מַלְאָכִים מִקָּדֵשׁ אֶל־מֶלֶךְ אֱדוֹם כֹּה אָמַר אָחִיךָ יִשְׂרָאֵל אַתָּה יָדַעְתָּ אֵת כׇּל־הַתְּלָאָה אֲשֶׁר מְצָאָֽתְנוּ׃ | 14 |
೧೪ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.
וַיֵּרְדוּ אֲבֹתֵינוּ מִצְרַיְמָה וַנֵּשֶׁב בְּמִצְרַיִם יָמִים רַבִּים וַיָּרֵעוּ לָנוּ מִצְרַיִם וְלַאֲבֹתֵֽינוּ׃ | 15 |
೧೫ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.
וַנִּצְעַק אֶל־יְהֹוָה וַיִּשְׁמַע קֹלֵנוּ וַיִּשְׁלַח מַלְאָךְ וַיֹּצִאֵנוּ מִמִּצְרָיִם וְהִנֵּה אֲנַחְנוּ בְקָדֵשׁ עִיר קְצֵה גְבוּלֶֽךָ׃ | 16 |
೧೬ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.
נַעְבְּרָה־נָּא בְאַרְצֶךָ לֹא נַעֲבֹר בְּשָׂדֶה וּבְכֶרֶם וְלֹא נִשְׁתֶּה מֵי בְאֵר דֶּרֶךְ הַמֶּלֶךְ נֵלֵךְ לֹא נִטֶּה יָמִין וּשְׂמֹאול עַד אֲשֶֽׁר־נַעֲבֹר גְּבֻלֶֽךָ׃ | 17 |
೧೭ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.
וַיֹּאמֶר אֵלָיו אֱדוֹם לֹא תַעֲבֹר בִּי פֶּן־בַּחֶרֶב אֵצֵא לִקְרָאתֶֽךָ׃ | 18 |
೧೮ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.
וַיֹּאמְרוּ אֵלָיו בְּנֵֽי־יִשְׂרָאֵל בַּֽמְסִלָּה נַעֲלֶה וְאִם־מֵימֶיךָ נִשְׁתֶּה אֲנִי וּמִקְנַי וְנָתַתִּי מִכְרָם רַק אֵין־דָּבָר בְּרַגְלַי אֶֽעֱבֹֽרָה׃ | 19 |
೧೯ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.
וַיֹּאמֶר לֹא תַעֲבֹר וַיֵּצֵא אֱדוֹם לִקְרָאתוֹ בְּעַם כָּבֵד וּבְיָד חֲזָקָֽה׃ | 20 |
೨೦ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.
וַיְמָאֵן ׀ אֱדוֹם נְתֹן אֶת־יִשְׂרָאֵל עֲבֹר בִּגְבֻלוֹ וַיֵּט יִשְׂרָאֵל מֵעָלָֽיו׃ | 21 |
೨೧ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.
וַיִּסְעוּ מִקָּדֵשׁ וַיָּבֹאוּ בְנֵֽי־יִשְׂרָאֵל כׇּל־הָעֵדָה הֹר הָהָֽר׃ | 22 |
೨೨ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.
וַיֹּאמֶר יְהֹוָה אֶל־מֹשֶׁה וְאֶֽל־אַהֲרֹן בְּהֹר הָהָר עַל־גְּבוּל אֶֽרֶץ־אֱדוֹם לֵאמֹֽר׃ | 23 |
೨೩ಯೆಹೋವನು ಎದೋಮ್ಯರ ದೇಶದ ಗಡಿಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
יֵאָסֵף אַהֲרֹן אֶל־עַמָּיו כִּי לֹא יָבֹא אֶל־הָאָרֶץ אֲשֶׁר נָתַתִּי לִבְנֵי יִשְׂרָאֵל עַל אֲשֶׁר־מְרִיתֶם אֶת־פִּי לְמֵי מְרִיבָֽה׃ | 24 |
೨೪“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.
קַח אֶֽת־אַהֲרֹן וְאֶת־אֶלְעָזָר בְּנוֹ וְהַעַל אֹתָם הֹר הָהָֽר׃ | 25 |
೨೫ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.
וְהַפְשֵׁט אֶֽת־אַהֲרֹן אֶת־בְּגָדָיו וְהִלְבַּשְׁתָּם אֶת־אֶלְעָזָר בְּנוֹ וְאַהֲרֹן יֵאָסֵף וּמֵת שָֽׁם׃ | 26 |
೨೬ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು” ಎಂದು ಆಜ್ಞಾಪಿಸಿದನು.
וַיַּעַשׂ מֹשֶׁה כַּאֲשֶׁר צִוָּה יְהֹוָה וַֽיַּעֲלוּ אֶל־הֹר הָהָר לְעֵינֵי כׇּל־הָעֵדָֽה׃ | 27 |
೨೭ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು.
וַיַּפְשֵׁט מֹשֶׁה אֶֽת־אַהֲרֹן אֶת־בְּגָדָיו וַיַּלְבֵּשׁ אֹתָם אֶת־אֶלְעָזָר בְּנוֹ וַיָּמׇת אַהֲרֹן שָׁם בְּרֹאשׁ הָהָר וַיֵּרֶד מֹשֶׁה וְאֶלְעָזָר מִן־הָהָֽר׃ | 28 |
೨೮ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.
וַיִּרְאוּ כׇּל־הָעֵדָה כִּי גָוַע אַהֲרֹן וַיִּבְכּוּ אֶֽת־אַהֲרֹן שְׁלֹשִׁים יוֹם כֹּל בֵּית יִשְׂרָאֵֽל׃ | 29 |
೨೯ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.