< מִשְׁלֵי 28 >
נָסוּ וְאֵין־רֹדֵף רָשָׁע וְצַדִּיקִים כִּכְפִיר יִבְטָֽח׃ | 1 |
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
בְּפֶשַֽׁע אֶרֶץ רַבִּים שָׂרֶיהָ וּבְאָדָם מֵבִין יֹדֵעַ כֵּן יַאֲרִֽיךְ׃ | 2 |
ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು.
גֶּֽבֶר־רָשׁ וְעֹשֵׁק דַּלִּים מָטָר סֹחֵף וְאֵין לָֽחֶם׃ | 3 |
ಬಡವರನ್ನು ಹಿಂಸಿಸುವ ಅಧಿಕಾರಿಯು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
עֹזְבֵי תוֹרָה יְהַלְלוּ רָשָׁע וְשֹׁמְרֵי תוֹרָה יִתְגָּרוּ בָֽם׃ | 4 |
ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.
אַנְשֵׁי־רָע לֹא־יָבִינוּ מִשְׁפָּט וּמְבַקְשֵׁי יְהֹוָה יָבִינוּ כֹֽל׃ | 5 |
ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
טֽוֹב־רָשׁ הוֹלֵךְ בְּתֻמּוֹ מֵעִקֵּשׁ דְּרָכַיִם וְהוּא עָשִֽׁיר׃ | 6 |
ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ ನಿರ್ದೋಷಿಯಾಗಿ ನಡೆಯುವ ದರಿದ್ರನು ಶ್ರೇಷ್ಠನು.
נוֹצֵר תּוֹרָה בֵּן מֵבִין וְרֹעֶה זוֹלְלִים יַכְלִים אָבִֽיו׃ | 7 |
ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು. ಆದರೆ ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
מַרְבֶּה הוֹנוֹ בְּנֶשֶׁךְ (ובתרבית) [וְתַרְבִּית] לְחוֹנֵן דַּלִּים יִקְבְּצֶֽנּוּ׃ | 8 |
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.
מֵסִיר אׇזְנוֹ מִשְּׁמֹעַ תּוֹרָה גַּם תְּפִלָּתוֹ תּוֹעֵבָֽה׃ | 9 |
ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.
מַשְׁגֶּה יְשָׁרִים ׀ בְּדֶרֶךְ רָע בִּשְׁחוּתוֹ הֽוּא־יִפּוֹל וּתְמִימִים יִנְחֲלוּ־טֽוֹב׃ | 10 |
ಪ್ರಾಮಾಣಿಕರನ್ನು ದುರ್ಮಾರ್ಗದಲ್ಲಿ ದಾರಿತಪ್ಪಿಸುವವನು, ತಾನೇ ತೋಡಿದ ಗುಂಡಿಯಲ್ಲಿ ಬೀಳುವನು. ನಿರ್ದೋಷಿಗಳಾದರೋ ಒಳ್ಳೆಯ ಸೊತ್ತನ್ನು ಪಡೆಯುವರು.
חָכָם בְּעֵינָיו אִישׁ עָשִׁיר וְדַל מֵבִין יַחְקְרֶֽנּוּ׃ | 11 |
ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು.
בַּעֲלֹץ צַדִּיקִים רַבָּה תִפְאָרֶת וּבְקוּם רְשָׁעִים יְחֻפַּשׂ אָדָֽם׃ | 12 |
ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.
מְכַסֶּה פְשָׁעָיו לֹא יַצְלִיחַ וּמוֹדֶה וְעֹזֵב יְרֻחָֽם׃ | 13 |
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.
אַשְׁרֵי אָדָם מְפַחֵד תָּמִיד וּמַקְשֶׁה לִבּוֹ יִפּוֹל בְּרָעָֽה׃ | 14 |
ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
אֲֽרִי־נֹהֵם וְדֹב שׁוֹקֵק מוֹשֵׁל רָשָׁע עַל עַם־דָּֽל׃ | 15 |
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.
נָגִיד חֲסַר תְּבוּנוֹת וְרַב מַעֲשַׁקּוֹת (שנאי) [שֹׂנֵא] בֶצַע יַאֲרִיךְ יָמִֽים׃ | 16 |
ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು.
אָ דָ ם עָשֻׁק בְּדַם־נָפֶשׁ עַד־בּוֹר יָנוּס אַל־יִתְמְכוּ־בֽוֹ׃ | 17 |
ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.
הוֹלֵךְ תָּמִים יִוָּשֵׁעַ וְנֶעְקַשׁ דְּרָכַיִם יִפּוֹל בְּאֶחָֽת׃ | 18 |
ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.
עֹבֵד אַדְמָתוֹ יִֽשְׂבַּֽע־לָחֶם וּמְרַדֵּף רֵיקִים יִֽשְׂבַּֽע־רִֽישׁ׃ | 19 |
ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು. ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವುದು.
אִישׁ אֱמוּנוֹת רַב־בְּרָכוֹת וְאָץ לְהַעֲשִׁיר לֹא יִנָּקֶֽה׃ | 20 |
ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.
הַֽכֵּר־פָּנִים לֹא־טוֹב וְעַל־פַּת־לֶחֶם יִפְשַׁע־גָּֽבֶר׃ | 21 |
ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು.
נִבְהָֽל לַהוֹן אִישׁ רַע עָיִן וְלֹא־יֵדַע כִּי־חֶסֶר יְבֹאֶֽנּוּ׃ | 22 |
ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.
מוֹכִיחַ אָדָם אַחֲרַי חֵן יִמְצָא מִֽמַּחֲלִיק לָשֽׁוֹן׃ | 23 |
ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
גּוֹזֵל ׀ אָבִיו וְאִמּוֹ וְאֹמֵר אֵֽין־פָּשַׁע חָבֵר הוּא לְאִישׁ מַשְׁחִֽית׃ | 24 |
ತನ್ನ ತಂದೆಯಾನ್ನಾಗಲಿ, ತಾಯಿಯನ್ನಾಗಲಿ ದೋಚಿಕೊಂಡು, “ಇದು ದೋಷವಲ್ಲ,” ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
רְחַב־נֶפֶשׁ יְגָרֶה מָדוֹן וּבֹטֵחַ עַל־יְהֹוָה יְדֻשָּֽׁן׃ | 25 |
ದುರಾಶೆಯುಳ್ಳವನು ಕಲಹವನ್ನೆಬ್ಬಿಸುವನು; ಯೆಹೋವ ದೇವರಲ್ಲಿ ಭರವಸವಿಡುವವನು ಪುಷ್ಟನಾಗುವನು.
בּוֹטֵחַ בְּלִבּוֹ הוּא כְסִיל וְהוֹלֵךְ בְּחׇכְמָה הוּא יִמָּלֵֽט׃ | 26 |
ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.
נוֹתֵן לָרָשׁ אֵין מַחְסוֹר וּמַעְלִים עֵינָיו רַב־מְאֵרֽוֹת׃ | 27 |
ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.
בְּקוּם רְשָׁעִים יִסָּתֵר אָדָם וּבְאׇבְדָם יִרְבּוּ צַדִּיקִֽים׃ | 28 |
ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ.