< מִשְׁלֵי 9 >
חׇכְמוֹת בָּנְתָה בֵיתָהּ חָצְבָה עַמּוּדֶיהָ שִׁבְעָֽה׃ | 1 |
ಜ್ಞಾನ ಎಂಬಾಕೆಯು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬಗಳನ್ನು ಕೆತ್ತಿಸಿದ್ದಾಳೆ.
טָבְחָה טִבְחָהּ מָסְכָה יֵינָהּ אַף עָרְכָה שֻׁלְחָנָֽהּ׃ | 2 |
ಆಕೆಯು ಮಾಂಸದ ಆಹಾರನ್ನು ತಯಾರಿಸಿ, ತನ್ನ ದ್ರಾಕ್ಷಾರಸವನ್ನು ಬೆರೆಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
שָׁלְחָה נַעֲרֹתֶיהָ תִקְרָא עַל־גַּפֵּי מְרֹמֵי קָֽרֶת׃ | 3 |
ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ,
מִי־פֶתִי יָסֻר הֵנָּה חֲסַר־לֵב אָמְרָה לּֽוֹ׃ | 4 |
“ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ,
לְכוּ לַחֲמוּ בְֽלַחֲמִי וּשְׁתוּ בְּיַיִן מָסָֽכְתִּי׃ | 5 |
“ಬಾ, ನನ್ನ ಆಹಾರವನ್ನು ತಿಂದು, ನಾನು ಬೆರೆಸಿದ ದ್ರಾಕ್ಷಾರಸವನ್ನು ಕುಡಿ,” ಎಂದೂ
עִזְבוּ פְתָאיִם וִֽחְיוּ וְאִשְׁרוּ בְּדֶרֶךְ בִּינָֽה׃ | 6 |
“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.
יֹסֵר ׀ לֵץ לֹקֵחַֽ לוֹ קָלוֹן וּמוֹכִיחַ לְרָשָׁע מוּמֽוֹ׃ | 7 |
ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
אַל־תּוֹכַח לֵץ פֶּן־יִשְׂנָאֶךָּ הוֹכַח לְחָכָם וְיֶאֱהָבֶֽךָּ׃ | 8 |
ಪರಿಹಾಸ್ಯ ಮಾಡುವವನನ್ನು ಗದರಿಸಬೇಡ ಅವನು ನಿನ್ನನ್ನು ಹಗೆ ಮಾಡುವನು; ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
תֵּן לְחָכָם וְיֶחְכַּם־עוֹד הוֹדַע לְצַדִּיק וְיוֹסֶף לֶֽקַח׃ | 9 |
ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು.
תְּחִלַּת חׇכְמָה יִרְאַת יְהֹוָה וְדַעַת קְדֹשִׁים בִּינָֽה׃ | 10 |
ಯೆಹೋವ ದೇವರ ಭಯವೇ ಜ್ಞಾನಕ್ಕೆ ಮೂಲವು. ಪರಿಶುದ್ಧರ ಪರಿಜ್ಞಾನವೇ ತಿಳುವಳಿಕೆಯಾಗಿದೆ.
כִּי־בִי יִרְבּוּ יָמֶיךָ וְיוֹסִיפוּ לְּךָ שְׁנוֹת חַיִּֽים׃ | 11 |
ಏಕೆಂದರೆ ಜ್ಞಾನದ ಮೂಲಕ ನಿನ್ನ ಜೀವನದ ದಿನಗಳು ಹೆಚ್ಚುವುವು; ನಿನ್ನ ಜೀವನದ ವರ್ಷಗಳು ವೃದ್ಧಿಯಾಗುವುವು.
אִם־חָכַמְתָּ חָכַמְתָּ לָּךְ וְלַצְתָּ לְֽבַדְּךָ תִשָּֽׂא׃ | 12 |
ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು; ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ.
אֵשֶׁת כְּסִילוּת הֹמִיָּה פְּתַיּוּת וּבַל־יָדְעָה מָּֽה׃ | 13 |
ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು; ಅವಳು ಅರಿವಿಲ್ಲದವಳು, ಏನೂ ತಿಳಿಯದವಳು.
וְֽיָשְׁבָה לְפֶתַח בֵּיתָהּ עַל־כִּסֵּא מְרֹמֵי קָֽרֶת׃ | 14 |
ಅವಳು ತನ್ನ ಮನೆಯ ಬಾಗಿಲಿನಲ್ಲಿ ಕುಳಿತು, ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ನಿಂತು,
לִקְרֹא לְעֹֽבְרֵי־דָרֶךְ הַֽמְיַשְּׁרִים אֹֽרְחוֹתָֽם׃ | 15 |
ತಮ್ಮ ಮಾರ್ಗವನ್ನು ಹಿಡಿದು ಹೋಗುವ ಪ್ರಯಾಣಿಕರನ್ನು ಕರೆಯುತ್ತಾಳೆ,
מִי־פֶתִי יָסֻר הֵנָּה וַחֲסַר־לֵב וְאָמְרָה לּֽוֹ׃ | 16 |
“ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ,
מַֽיִם־גְּנוּבִים יִמְתָּקוּ וְלֶחֶם סְתָרִים יִנְעָֽם׃ | 17 |
“ಕದ್ದ ನೀರು ಸಿಹಿಯಾಗಿದೆ; ರಹಸ್ಯದಲ್ಲಿ ತಿನ್ನುವ ಆಹಾರವು ರುಚಿಯಾಗಿದೆ,” ಎಂದು ಹೇಳುತ್ತಾಳೆ.
וְֽלֹא־יָדַע כִּֽי־רְפָאִים שָׁם בְּעִמְקֵי שְׁאוֹל קְרֻאֶֽיהָ׃ (Sheol ) | 18 |
ಆದರೆ ಆ ಮನೆ ಸತ್ತವರ ಸ್ಥಾನವಾಗಿದೆ. ಅವಳ ಅತಿಥಿಗಳು ಪಾತಾಳದ ಅಗಾಧದಲ್ಲಿ ಬಿದ್ದಿದ್ದಾರೆಂದು ಅವನಿಗೆ ತಿಳಿಯದು. (Sheol )