< תהילים 106 >
הַלְלוּ ־ יָהּ ׀ הוֹדוּ לַיהֹוָה כִּי־טוֹב כִּי לְעוֹלָם חַסְדּֽוֹ׃ | 1 |
೧ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
מִי יְמַלֵּל גְּבוּרוֹת יְהֹוָה יַשְׁמִיעַ כׇּל־תְּהִלָּתֽוֹ׃ | 2 |
೨ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?
אַשְׁרֵי שֹׁמְרֵי מִשְׁפָּט עֹשֵׂה צְדָקָה בְכׇל־עֵֽת׃ | 3 |
೩ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.
זׇכְרֵנִי יְהֹוָה בִּרְצוֹן עַמֶּךָ פׇּקְדֵנִי בִּישׁוּעָתֶֽךָ׃ | 4 |
೪ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,
לִרְאוֹת ׀ בְּטוֹבַת בְּחִירֶיךָ לִשְׂמֹחַ בְּשִׂמְחַת גּוֹיֶךָ לְהִתְהַלֵּל עִם־נַחֲלָתֶֽךָ׃ | 5 |
೫ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.
חָטָאנוּ עִם־אֲבוֹתֵינוּ הֶעֱוִינוּ הִרְשָֽׁעְנוּ׃ | 6 |
೬ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.
אֲבוֹתֵינוּ בְמִצְרַיִם ׀ לֹֽא־הִשְׂכִּילוּ נִפְלְאוֹתֶיךָ לֹא זָכְרוּ אֶת־רֹב חֲסָדֶיךָ וַיַּמְרוּ עַל־יָם בְּיַם־סֽוּף׃ | 7 |
೭ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
וַֽיּוֹשִׁיעֵם לְמַעַן שְׁמוֹ לְהוֹדִיעַ אֶת־גְּבוּרָתֽוֹ׃ | 8 |
೮ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.
וַיִּגְעַר בְּיַם־סוּף וַֽיֶּחֱרָב וַיּוֹלִיכֵם בַּתְּהֹמוֹת כַּמִּדְבָּֽר׃ | 9 |
೯ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
וַֽיּוֹשִׁיעֵם מִיַּד שׂוֹנֵא וַיִּגְאָלֵם מִיַּד אוֹיֵֽב׃ | 10 |
೧೦ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಯ ಹಸ್ತದಿಂದ ಬಿಡಿಸಿದನು.
וַיְכַסּוּ־מַיִם צָרֵיהֶם אֶחָד מֵהֶם לֹא נוֹתָֽר׃ | 11 |
೧೧ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ.
וַיַּאֲמִינוּ בִדְבָרָיו יָשִׁירוּ תְּהִלָּתֽוֹ׃ | 12 |
೧೨ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.
מִהֲרוּ שָׁכְחוּ מַֽעֲשָׂיו לֹא־חִכּוּ לַעֲצָתֽוֹ׃ | 13 |
೧೩ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,
וַיִּתְאַוּוּ תַאֲוָה בַּמִּדְבָּר וַיְנַסּוּ־אֵל בִּישִׁימֽוֹן׃ | 14 |
೧೪ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.
וַיִּתֵּן לָהֶם שֶׁאֱלָתָם וַיְשַׁלַּח רָזוֹן בְּנַפְשָֽׁם׃ | 15 |
೧೫ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.
וַיְקַנְאוּ לְמֹשֶׁה בַּֽמַּחֲנֶה לְאַהֲרֹן קְדוֹשׁ יְהֹוָֽה׃ | 16 |
೧೬ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,
תִּפְתַּח־אֶרֶץ וַתִּבְלַע דָּתָן וַתְּכַס עַל־עֲדַת אֲבִירָֽם׃ | 17 |
೧೭ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು.
וַתִּבְעַר־אֵשׁ בַּעֲדָתָם לֶהָבָה תְּלַהֵט רְשָׁעִֽים׃ | 18 |
೧೮ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.
יַעֲשׂוּ־עֵגֶל בְּחֹרֵב וַיִּשְׁתַּחֲווּ לְמַסֵּכָֽה׃ | 19 |
೧೯ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು.
וַיָּמִירוּ אֶת־כְּבוֹדָם בְּתַבְנִית שׁוֹר אֹכֵל עֵֽשֶׂב׃ | 20 |
೨೦ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು, ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು.
שָׁכְחוּ אֵל מוֹשִׁיעָם עֹשֶׂה גְדֹלוֹת בְּמִצְרָֽיִם׃ | 21 |
೨೧ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,
נִפְלָאוֹת בְּאֶרֶץ חָם נוֹרָאוֹת עַל־יַם־סֽוּף׃ | 22 |
೨೨ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.
וַיֹּאמֶר לְֽהַשְׁמִידָם לוּלֵי מֹשֶׁה בְחִירוֹ עָמַד בַּפֶּרֶץ לְפָנָיו לְהָשִׁיב חֲמָתוֹ מֵהַשְׁחִֽית׃ | 23 |
೨೩ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.
וַֽיִּמְאֲסוּ בְּאֶרֶץ חֶמְדָּה לֹא־הֶאֱמִינוּ לִדְבָרֽוֹ׃ | 24 |
೨೪ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.
וַיֵּרָגְנוּ בְאׇהֳלֵיהֶם לֹא שָׁמְעוּ בְּקוֹל יְהֹוָֽה׃ | 25 |
೨೫ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.
וַיִּשָּׂא יָדוֹ לָהֶם לְהַפִּיל אוֹתָם בַּמִּדְבָּֽר׃ | 26 |
೨೬ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,
וּלְהַפִּיל זַרְעָם בַּגּוֹיִם וּלְזָרוֹתָם בָּאֲרָצֽוֹת׃ | 27 |
೨೭ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.
וַיִּצָּמְדוּ לְבַעַל פְּעוֹר וַיֹּאכְלוּ זִבְחֵי מֵתִֽים׃ | 28 |
೨೮ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.
וַיַּכְעִיסוּ בְּמַעַלְלֵיהֶם וַתִּפְרׇץ־בָּם מַגֵּפָֽה׃ | 29 |
೨೯ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.
וַיַּעֲמֹד פִּֽינְחָס וַיְפַלֵּל וַתֵּעָצַר הַמַּגֵּפָֽה׃ | 30 |
೩೦ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು.
וַתֵּחָשֶׁב לוֹ לִצְדָקָה לְדֹר וָדֹר עַד־עוֹלָֽם׃ | 31 |
೩೧ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.
וַיַּקְצִיפוּ עַל־מֵי מְרִיבָה וַיֵּרַע לְמֹשֶׁה בַּעֲבוּרָֽם׃ | 32 |
೩೨ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.
כִּי־הִמְרוּ אֶת־רוּחוֹ וַיְבַטֵּא בִּשְׂפָתָֽיו׃ | 33 |
೩೩ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, ಮೋಶೆ ದುಡುಕಿ ಮಾತನಾಡಿದನು.
לֹֽא־הִשְׁמִידוּ אֶת־הָעַמִּים אֲשֶׁר אָמַר יְהֹוָה לָהֶֽם׃ | 34 |
೩೪ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ,
וַיִּתְעָרְבוּ בַגּוֹיִם וַֽיִּלְמְדוּ מַעֲשֵׂיהֶֽם׃ | 35 |
೩೫ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.
וַיַּעַבְדוּ אֶת־עֲצַבֵּיהֶם וַיִּהְיוּ לָהֶם לְמוֹקֵֽשׁ׃ | 36 |
೩೬ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.
וַיִּזְבְּחוּ אֶת־בְּנֵיהֶם וְאֶת־בְּנוֹתֵיהֶם לַשֵּׁדִֽים׃ | 37 |
೩೭ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.
וַיִּשְׁפְּכוּ דָם נָקִי דַּם־בְּנֵיהֶם וּֽבְנוֹתֵיהֶם אֲשֶׁר זִבְּחוּ לַעֲצַבֵּי כְנָעַן וַתֶּחֱנַף הָאָרֶץ בַּדָּמִֽים׃ | 38 |
೩೮ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.
וַיִּטְמְאוּ בְמַעֲשֵׂיהֶם וַיִּזְנוּ בְּמַעַלְלֵיהֶֽם׃ | 39 |
೩೯ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.
וַיִּֽחַר־אַף יְהֹוָה בְּעַמּוֹ וַיְתָעֵב אֶת־נַחֲלָתֽוֹ׃ | 40 |
೪೦ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,
וַיִּתְּנֵם בְּיַד־גּוֹיִם וַֽיִּמְשְׁלוּ בָהֶם שֹׂנְאֵיהֶֽם׃ | 41 |
೪೧ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;
וַיִּלְחָצוּם אוֹיְבֵיהֶם וַיִּכָּנְעוּ תַּחַת יָדָֽם׃ | 42 |
೪೨ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.
פְּעָמִים רַבּוֹת יַצִּילֵם וְהֵמָּה יַמְרוּ בַעֲצָתָם וַיָּמֹכּוּ בַּעֲוֺנָֽם׃ | 43 |
೪೩ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.
וַיַּרְא בַּצַּר לָהֶם בְּשׇׁמְעוֹ אֶת־רִנָּתָֽם׃ | 44 |
೪೪ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.
וַיִּזְכֹּר לָהֶם בְּרִיתוֹ וַיִּנָּחֵם כְּרֹב חֲסָדָֽו׃ | 45 |
೪೫ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
וַיִּתֵּן אוֹתָם לְרַחֲמִים לִפְנֵי כׇּל־שׁוֹבֵיהֶֽם׃ | 46 |
೪೬ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.
הוֹשִׁיעֵנוּ ׀ יְהֹוָה אֱלֹהֵינוּ וְקַבְּצֵנוּ מִֽן־הַגּוֹיִם לְהֹדוֹת לְשֵׁם קׇדְשֶׁךָ לְהִשְׁתַּבֵּחַ בִּתְהִלָּתֶֽךָ׃ | 47 |
೪೭ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.
בָּרֽוּךְ יְהֹוָה אֱלֹהֵי יִשְׂרָאֵל מִן־הָעוֹלָם ׀ וְעַד הָעוֹלָם וְאָמַר כׇּל־הָעָם אָמֵן הַֽלְלוּ־יָֽהּ׃ | 48 |
೪೮ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ “ಆಮೆನ್” ಎನ್ನಲಿ. ಯೆಹೋವನಿಗೆ ಸ್ತೋತ್ರ!