< תהילים 114 >
בְּצֵאת יִשְׂרָאֵל מִמִּצְרָיִם בֵּית יַעֲקֹב מֵעַם לֹעֵֽז׃ | 1 |
೧ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,
הָיְתָה יְהוּדָה לְקׇדְשׁוֹ יִשְׂרָאֵל מַמְשְׁלוֹתָֽיו׃ | 2 |
೨ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, ಇಸ್ರಾಯೇಲ್ ಆತನ ರಾಜ್ಯವೂ ಆಯಿತು.
הַיָּם רָאָה וַיָּנֹס הַיַּרְדֵּן יִסֹּב לְאָחֽוֹר׃ | 3 |
೩ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.
הֶהָרִים רָקְדוּ כְאֵילִים גְּבָעוֹת כִּבְנֵי־צֹֽאן׃ | 4 |
೪ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.
מַה־לְּךָ הַיָּם כִּי תָנוּס הַיַּרְדֵּן תִּסֹּב לְאָחֽוֹר׃ | 5 |
೫ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ?
הֶהָרִים תִּרְקְדוּ כְאֵילִים גְּבָעוֹת כִּבְנֵי־צֹֽאן׃ | 6 |
೬ಪರ್ವತಗಳೇ, ನೀವು ಟಗರುಗಳಂತೆಯೂ, ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ?
מִלִּפְנֵי אָדוֹן חוּלִי אָרֶץ מִלִּפְנֵי אֱלוֹהַּ יַעֲקֹֽב׃ | 7 |
೭ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.
הַהֹפְכִי הַצּוּר אֲגַם־מָיִם חַלָּמִישׁ לְמַעְיְנוֹ־מָֽיִם׃ | 8 |
೮ಆತನು ಬಂಡೆಯನ್ನು ಕೆರೆಯನ್ನಾಗಿಯೂ, ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.