< תהילים 142 >
מַשְׂכִּיל לְדָוִד בִּֽהְיוֹתוֹ בַמְּעָרָה תְפִלָּֽה׃ קוֹלִי אֶל־יְהֹוָה אֶזְעָק קוֹלִי אֶל־יְהֹוָה אֶתְחַנָּֽן׃ | 1 |
ದಾವೀದನ ಮಾಸ್ಕಿಲ ರಾಗದ ಪದ್ಯ. ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.
אֶשְׁפֹּךְ לְפָנָיו שִׂיחִי צָרָתִי לְפָנָיו אַגִּֽיד׃ | 2 |
ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ.
בְּהִתְעַטֵּף עָלַי ׀ רוּחִי וְאַתָּה יָדַעְתָּ נְֽתִיבָתִי בְּאֹֽרַח־זוּ אֲהַלֵּךְ טָמְנוּ פַח לִֽי׃ | 3 |
ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.
הַבֵּיט יָמִין ׀ וּרְאֵה וְאֵֽין־לִי מַכִּיר אָבַד מָנוֹס מִמֶּנִּי אֵין דּוֹרֵשׁ לְנַפְשִֽׁי׃ | 4 |
ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ.
זָעַקְתִּי אֵלֶיךָ יְהֹוָה אָמַרְתִּי אַתָּה מַחְסִי חֶלְקִי בְּאֶרֶץ הַחַיִּֽים׃ | 5 |
ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”
הַקְשִׁיבָה ׀ אֶֽל־רִנָּתִי כִּֽי־דַלּוֹתִי מְאֹד הַצִּילֵנִי מֵרֹדְפַי כִּי אָמְצוּ מִמֶּֽנִּי׃ | 6 |
ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.
הוֹצִיאָה מִמַּסְגֵּר ׀ נַפְשִׁי לְהוֹדוֹת אֶת־שְׁמֶךָ בִּי יַכְתִּרוּ צַדִּיקִים כִּי תִגְמֹל עָלָֽי׃ | 7 |
ನಿಮ್ಮ ಹೆಸರನ್ನು ಕೊಂಡಾಡುವ ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ; ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು ನೀತಿವಂತರು ನನ್ನ ಹತ್ತಿರ ಸೇರಿಬರುವರು.