< תהילים 143 >

מִזְמוֹר לְדָוִד יְהֹוָה ׀ שְׁמַע תְּפִלָּתִי הַאֲזִינָה אֶל־תַּחֲנוּנַי בֶּאֱמֻנָֽתְךָ עֲנֵנִי בְּצִדְקָתֶֽךָ׃ 1
ದಾವೀದನ ಕೀರ್ತನೆ. ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ವಿಜ್ಞಾಪನೆಗಳಿಗೆ ಕಿವಿಗೊಡಿರಿ; ನಿಮ್ಮ ನಂಬಿಗಸ್ತಿಕೆಯಲ್ಲಿಯೂ, ನಿಮ್ಮ ನೀತಿಯಲ್ಲಿಯೂ ನನಗೆ ಉತ್ತರಕೊಡಿರಿ.
וְאַל־תָּבוֹא בְמִשְׁפָּט אֶת־עַבְדֶּךָ כִּי לֹֽא־יִצְדַּק לְפָנֶיךָ כׇל־חָֽי׃ 2
ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.
כִּי רָדַף אוֹיֵב ׀ נַפְשִׁי דִּכָּא לָאָרֶץ חַיָּתִי הוֹשִׁבַנִי בְמַחֲשַׁכִּים כְּמֵתֵי עוֹלָֽם׃ 3
ಏಕೆಂದರೆ ಶತ್ರುವು ನನ್ನನ್ನು ಬೆನ್ನಟ್ಟಿ, ನಾನು ನೆಲಕಚ್ಚುವಂತೆ ಮಾಡಿದ್ದಾನೆ. ಬಹುಕಾಲದ ಹಿಂದೆ ಸತ್ತವರ ಹಾಗೆ ನನ್ನನ್ನು ಕತ್ತಲೆಯಲ್ಲಿ ವಾಸಿಸುವಂತೆ ಮಾಡಿದ್ದಾನೆ.
וַתִּתְעַטֵּף עָלַי רוּחִי בְּתוֹכִי יִשְׁתּוֹמֵם לִבִּֽי׃ 4
ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.
זָכַרְתִּי יָמִים ׀ מִקֶּדֶם הָגִיתִי בְכׇל־פׇּעֳלֶךָ בְּֽמַעֲשֵׂה יָדֶיךָ אֲשׂוֹחֵֽחַ׃ 5
ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿಮ್ಮ ಕೈಕೆಲಸವನ್ನು ಆಲೋಚಿಸುತ್ತೇನೆ.
פֵּרַשְׂתִּי יָדַי אֵלֶיךָ נַפְשִׁי ׀ כְּאֶרֶץ־עֲיֵפָה לְךָ סֶֽלָה׃ 6
ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.
מַהֵר עֲנֵנִי ׀ יְהֹוָה כָּלְתָה רוּחִי אַל־תַּסְתֵּר פָּנֶיךָ מִמֶּנִּי וְנִמְשַׁלְתִּי עִם־יֹרְדֵי בֽוֹר׃ 7
ಯೆಹೋವ ದೇವರೇ, ನನಗೆ ಬೇಗನೆ ಉತ್ತರಕೊಡಿರಿ; ನನ್ನ ಪ್ರಾಣವು ಕುಂದಿಹೋಗಿದೆ; ನಿಮ್ಮ ಮುಖವನ್ನು ನನಗೆ ಮರೆಮಾಡಬೇಡ; ಇಲ್ಲವಾದರೆ ಸಮಾಧಿಯಲ್ಲಿ ಇಳಿಯುವವರಿಗೆ ಸಮಾನನಾಗಿಬಿಡುತ್ತೇನೆ.
הַשְׁמִיעֵנִי בַבֹּקֶר ׀ חַסְדֶּךָ כִּֽי־בְךָ בָטָחְתִּי הוֹדִיעֵנִי דֶּֽרֶךְ־זוּ אֵלֵךְ כִּי־אֵלֶיךָ נָשָׂאתִי נַפְשִֽׁי׃ 8
ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ; ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ, ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ.
הַצִּילֵנִי מֵאֹיְבַי ׀ יְהֹוָה אֵלֶיךָ כִסִּֽתִי׃ 9
ಯೆಹೋವ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ; ನಾನು ನಿಮ್ಮಲ್ಲಿ ಅಡಗಿಕೊಳ್ಳುವಂತೆ ನಿಮ್ಮ ಬಳಿಗೆ ಬಂದಿದ್ದೇನೆ.
לַמְּדֵנִי ׀ לַעֲשׂוֹת רְצוֹנֶךָ כִּֽי־אַתָּה אֱלוֹהָי רוּחֲךָ טוֹבָה תַּנְחֵנִי בְּאֶרֶץ מִישֽׁוֹר׃ 10
ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ, ಏಕೆಂದರೆ ನೀವು ನನ್ನ ದೇವರು; ನಿಮ್ಮ ಒಳ್ಳೆಯ ಆತ್ಮವು ನನ್ನನ್ನು ಸಮಹಾದಿಯಲ್ಲಿ ನಡೆಸಲಿ.
לְמַעַן־שִׁמְךָ יְהֹוָה תְּחַיֵּנִי בְּצִדְקָתְךָ ׀ תּוֹצִיא מִצָּרָה נַפְשִֽׁי׃ 11
ಯೆಹೋವ ದೇವರೇ, ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ಜೀವಿಸಮಾಡಿರಿ, ನಿಮ್ಮ ನೀತಿಗನುಸಾರ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಬಿಡಿಸಿರಿ.
וּֽבְחַסְדְּךָ תַּצְמִית אֹיְבָי וְֽהַאֲבַדְתָּ כׇּל־צֹרְרֵי נַפְשִׁי כִּי אֲנִי עַבְדֶּֽךָ׃ 12
ನಿಮ್ಮ ಒಂಡಬಡಿಕೆಯ ಪ್ರೀತಿಯಿಂದ ನನ್ನ ಶತ್ರುಗಳನ್ನು ಸುಮ್ಮನಿರಿಸುವೆನು, ನನ್ನ ವೈರಿಗಳೆಲ್ಲರೂ ನಾಶವಾಗಲಿ, ನಾನು ನಿಮ್ಮ ಸೇವಕನಾಗಿದ್ದೇನೆ.

< תהילים 143 >