< תהילים 144 >
לְדָוִד ׀ בָּרוּךְ יְהֹוָה ׀ צוּרִי הַֽמְלַמֵּד יָדַי לַקְרָב אֶצְבְּעוֹתַי לַמִּלְחָמָֽה׃ | 1 |
೧ದಾವೀದನ ಕೀರ್ತನೆ. ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
חַסְדִּי וּמְצוּדָתִי מִשְׂגַּבִּי וּֽמְפַלְטִי ־ לִי מָגִנִּי וּבוֹ חָסִיתִי הָרוֹדֵד עַמִּי תַחְתָּֽי׃ | 2 |
೨ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.
יְֽהֹוָה מָֽה־אָדָם וַתֵּדָעֵהוּ בֶּן־אֱנוֹשׁ וַתְּחַשְּׁבֵֽהוּ׃ | 3 |
೩ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
אָדָם לַהֶבֶל דָּמָה יָמָיו כְּצֵל עוֹבֵֽר׃ | 4 |
೪ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
יְהֹוָה הַט־שָׁמֶיךָ וְתֵרֵד גַּע בֶּהָרִים וְֽיֶעֱשָֽׁנוּ׃ | 5 |
೫ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.
בְּרוֹק בָּרָק וּתְפִיצֵם שְׁלַח חִצֶּיךָ וּתְהֻמֵּֽם׃ | 6 |
೬ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು, ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.
שְׁלַח יָדֶיךָ מִמָּרוֹם פְּצֵנִי וְהַצִּילֵנִי מִמַּיִם רַבִּים מִיַּד בְּנֵי נֵכָֽר׃ | 7 |
೭ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.
אֲשֶׁר פִּיהֶם דִּבֶּר־שָׁוְא וִימִינָם יְמִין שָֽׁקֶר׃ | 8 |
೮ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು.
אֱֽלֹהִים שִׁיר חָדָשׁ אָשִׁירָה לָּךְ בְּנֵבֶל עָשׂוֹר אֲזַמְּרָה־לָּֽךְ׃ | 9 |
೯ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
הַנּוֹתֵן תְּשׁוּעָה לַמְּלָכִים הַפּוֹצֶה אֶת־דָּוִד עַבְדּוֹ מֵחֶרֶב רָעָֽה׃ | 10 |
೧೦ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
פְּצֵנִי וְהַצִּילֵנִי מִיַּד בְּֽנֵי־נֵכָר אֲשֶׁר פִּיהֶם דִּבֶּר־שָׁוְא וִימִינָם יְמִין שָֽׁקֶר׃ | 11 |
೧೧ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.
אֲשֶׁר בָּנֵינוּ ׀ כִּנְטִעִים מְגֻדָּלִים בִּֽנְעוּרֵיהֶם בְּנוֹתֵינוּ כְזָוִיֹּת מְחֻטָּבוֹת תַּבְנִית הֵיכָֽל׃ | 12 |
೧೨ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
מְזָוֵינוּ מְלֵאִים מְפִיקִים מִזַּן אֶל ־ זַן צֹאונֵנוּ מַאֲלִיפוֹת מְרֻבָּבוֹת בְּחוּצוֹתֵֽינוּ׃ | 13 |
೧೩ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.
אַלּוּפֵינוּ מְֽסֻבָּלִים אֵֽין־פֶּרֶץ וְאֵין יוֹצֵאת וְאֵין צְוָחָה בִּרְחֹבֹתֵֽינוּ׃ | 14 |
೧೪ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.
אַשְׁרֵי הָעָם שֶׁכָּכָה לּוֹ אַֽשְׁרֵי הָעָם שֱׁיְהֹוָה אֱלֹהָֽיו׃ | 15 |
೧೫ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.