< תהילים 44 >
לַמְנַצֵּחַ ׀ לִבְנֵי־קֹרַח מַשְׂכִּֽיל׃ אֱלֹהִים ׀ בְּאׇזְנֵינוּ שָׁמַעְנוּ אֲבוֹתֵינוּ סִפְּרוּ־לָנוּ פֹּעַל פָּעַלְתָּ בִימֵיהֶם בִּימֵי קֶֽדֶם׃ | 1 |
೧ಪ್ರಧಾನಗಾಯಕನ ಕೀರ್ತನಸಂಹಗ್ರದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.
אַתָּה ׀ יָדְךָ גּוֹיִם הוֹרַשְׁתָּ וַתִּטָּעֵם תָּרַע לְאֻמִּים וַֽתְּשַׁלְּחֵֽם׃ | 2 |
೨ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
כִּי לֹא בְחַרְבָּם יָרְשׁוּ אָרֶץ וּזְרוֹעָם לֹא־הוֹשִׁיעָה לָּמוֹ כִּֽי־יְמִינְךָ וּזְרוֹעֲךָ וְאוֹר פָּנֶיךָ כִּי רְצִיתָֽם׃ | 3 |
೩ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
אַתָּה־הוּא מַלְכִּי אֱלֹהִים צַוֵּה יְשׁוּעוֹת יַעֲקֹֽב׃ | 4 |
೪ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.
בְּךָ צָרֵינוּ נְנַגֵּחַ בְּשִׁמְךָ נָבוּס קָמֵֽינוּ׃ | 5 |
೫ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.
כִּי לֹא בְקַשְׁתִּי אֶבְטָח וְחַרְבִּי לֹא תוֹשִׁיעֵֽנִי׃ | 6 |
೬ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ; ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.
כִּי הוֹשַׁעְתָּנוּ מִצָּרֵינוּ וּמְשַׂנְאֵינוּ הֱבִישֽׁוֹתָ׃ | 7 |
೭ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.
בֵּאלֹהִים הִלַּלְנוּ כׇל־הַיּוֹם וְשִׁמְךָ ׀ לְעוֹלָם נוֹדֶה סֶֽלָה׃ | 8 |
೮ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.
אַף־זָנַחְתָּ וַתַּכְלִימֵנוּ וְלֹא־תֵצֵא בְּצִבְאוֹתֵֽינוּ׃ | 9 |
೯ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.
תְּשִׁיבֵנוּ אָחוֹר מִנִּי־צָר וּמְשַׂנְאֵינוּ שָׁסוּ לָֽמוֹ׃ | 10 |
೧೦ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.
תִּתְּנֵנוּ כְּצֹאן מַאֲכָל וּבַגּוֹיִם זֵרִיתָֽנוּ׃ | 11 |
೧೧ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
תִּמְכֹּֽר־עַמְּךָ בְלֹא־הוֹן וְלֹֽא־רִבִּיתָ בִּמְחִירֵיהֶֽם׃ | 12 |
೧೨ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.
תְּשִׂימֵנוּ חֶרְפָּה לִשְׁכֵנֵינוּ לַעַג וָקֶלֶס לִסְבִיבוֹתֵֽינוּ׃ | 13 |
೧೩ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.
תְּשִׂימֵנוּ מָשָׁל בַּגּוֹיִם מְנֽוֹד־רֹאשׁ בַּלְאֻמִּֽים׃ | 14 |
೧೪ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.
כׇּל־הַיּוֹם כְּלִמָּתִי נֶגְדִּי וּבֹשֶׁת פָּנַי כִּסָּֽתְנִי׃ | 15 |
೧೫ದೂಷಕರ ನಿಂದಾವಚನಗಳಿಂದಲೂ, ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ,
מִקּוֹל מְחָרֵף וּמְגַדֵּף מִפְּנֵי אוֹיֵב וּמִתְנַקֵּֽם׃ | 16 |
೧೬ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.
כׇּל־זֹאת בָּאַתְנוּ וְלֹא שְׁכַחֲנוּךָ וְלֹֽא־שִׁקַּרְנוּ בִּבְרִיתֶֽךָ׃ | 17 |
೧೭ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!
לֹא־נָסוֹג אָחוֹר לִבֵּנוּ וַתֵּט אֲשֻׁרֵינוּ מִנִּי אׇרְחֶֽךָ׃ | 18 |
೧೮ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.
כִּי דִכִּיתָנוּ בִּמְקוֹם תַּנִּים וַתְּכַס עָלֵינוּ בְצַלְמָֽוֶת׃ | 19 |
೧೯ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
אִם־שָׁכַחְנוּ שֵׁם אֱלֹהֵינוּ וַנִּפְרֹשׂ כַּפֵּינוּ לְאֵל זָֽר׃ | 20 |
೨೦ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,
הֲלֹא אֱלֹהִים יַחֲקׇר־זֹאת כִּי־הוּא יֹדֵעַ תַּעֲלֻמוֹת לֵֽב׃ | 21 |
೨೧ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?
כִּֽי־עָלֶיךָ הֹרַגְנוּ כׇל־הַיּוֹם נֶחְשַׁבְנוּ כְּצֹאן טִבְחָֽה׃ | 22 |
೨೨ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.
עוּרָה ׀ לָמָּה תִישַׁן ׀ אֲדֹנָי הָקִיצָה אַל־תִּזְנַח לָנֶֽצַח׃ | 23 |
೨೩ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.
לָֽמָּה־פָנֶיךָ תַסְתִּיר תִּשְׁכַּח עׇנְיֵנוּ וְֽלַחֲצֵֽנוּ׃ | 24 |
೨೪ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?
כִּי שָׁחָה לֶעָפָר נַפְשֵׁנוּ דָּבְקָה לָאָרֶץ בִּטְנֵֽנוּ׃ | 25 |
೨೫ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.
קוּמָֽה עֶזְרָתָה לָּנוּ וּפְדֵנוּ לְמַעַן חַסְדֶּֽךָ׃ | 26 |
೨೬ಎದ್ದು ಬಂದು ಸಹಾಯಮಾಡು; ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು.