< תהילים 52 >

לַמְנַצֵּחַ מַשְׂכִּיל לְדָוִֽד׃ בְּבוֹא ׀ דּוֹאֵג הָאֲדֹמִי וַיַּגֵּד לְשָׁאוּל וַיֹּאמֶר לוֹ בָּא דָוִד אֶל־בֵּית אֲחִימֶֽלֶךְ׃ מַה־תִּתְהַלֵּל בְּרָעָה הַגִּבּוֹר חֶסֶד אֵל כׇּל־הַיּֽוֹם׃ 1
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ, ಮಸ್ಕೀಲ್ ರಾಗದಲ್ಲಿ ದಾವೀದನು ರಚಿಸಿದ ಪದ್ಯ. ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.
הַוּוֹת תַּחְשֹׁב לְשׁוֹנֶךָ כְּתַעַר מְלֻטָּשׁ עֹשֵׂה רְמִיָּֽה׃ 2
ಮೋಸ ಮಾಡುವವನೇ, ಹದವಾದ ಕ್ಷೌರ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡನ್ನು ಕಲ್ಪಿಸುತ್ತದೆ.
אָהַבְתָּ רָּע מִטּוֹב שֶׁקֶר ׀ מִדַּבֵּר צֶדֶק סֶֽלָה׃ 3
ಒಳ್ಳೆಯದಕ್ಕಿಂತ ಕೆಟ್ಟದ್ದನ್ನೇ ನೀನು ಪ್ರೀತಿಸುತ್ತಿ. ಸತ್ಯವನಾಡುವುದಕ್ಕಿಂತ ಸುಳ್ಳನ್ನೇ ನೀನು ಮಾತನಾಡುತ್ತಿ.
אָהַבְתָּ כׇֽל־דִּבְרֵי־בָלַע לְשׁוֹן מִרְמָֽה׃ 4
ಮೋಸದ ನಾಲಿಗೆಯೇ, ನಿನಗೆ ಹಾನಿಕರವಾದ ಮಾತುಗಳೇ ಇಷ್ಟ.
גַּם־אֵל יִתׇּצְךָ לָנֶצַח יַחְתְּךָ וְיִסָּחֲךָ מֵאֹהֶל וְשֵׁרֶשְׁךָ מֵאֶרֶץ חַיִּים סֶֽלָה׃ 5
ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು.
וְיִרְאוּ צַדִּיקִים וְיִירָאוּ וְעָלָיו יִשְׂחָֽקוּ׃ 6
ನೀತಿವಂತರು ಇದನ್ನು ಕಂಡು ಭಯಪಡುವರು. ಅವರು ನಿನ್ನ ಬಗ್ಗೆ ನಗಾಡಿ ಹೀಗನ್ನುವರು,
הִנֵּה הַגֶּבֶר לֹא יָשִׂים אֱלֹהִים מָעוּזּוֹ וַיִּבְטַח בְּרֹב עׇשְׁרוֹ יָעֹז בְּהַוָּתֽוֹ׃ 7
“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!”
וַאֲנִי ׀ כְּזַיִת רַעֲנָן בְּבֵית אֱלֹהִים בָּטַחְתִּי בְחֶסֶד־אֱלֹהִים עוֹלָם וָעֶֽד׃ 8
ನಾನಾದರೋ ದೇವರ ಆಲಯದಲ್ಲಿರುವ ಅಭಿವರ್ದಿಸುವ ಓಲಿವ್ ಮರದ ಹಾಗೆ ಇರುವೆನು. ದೇವರ ಒಡಂಬಡಿಕೆಯ ಪ್ರೀತಿಯಲ್ಲಿ ಯುಗಯುಗಾಂತರವೂ ಭರವಸವಿಟ್ಟಿರುವೆನು.
אוֹדְךָ לְעוֹלָם כִּי עָשִׂיתָ וַאֲקַוֶּה שִׁמְךָ כִי־טוֹב נֶגֶד חֲסִידֶֽיךָ׃ 9
ದೇವರೇ ನಿಮ್ಮ ಉಪಕಾರಕ್ಕಾಗಿ ಯಾವಾಗಲೂ ನಿಮ್ಮ ಭಕ್ತರ ಮುಂದೆ ನಿಮ್ಮನ್ನು ಸ್ತುತಿಸುತ್ತಿರುವೆನು. ನಿಮ್ಮ ಹೆಸರು ಒಳ್ಳೆಯದು. ಆದುದರಿಂದ ನಿಮ್ಮ ಹೆಸರನ್ನೇ ನಿರೀಕ್ಷಿಸಿಕೊಂಡಿರುವೆನು.

< תהילים 52 >