< תהילים 77 >

לַמְנַצֵּחַ עַֽל־[יְדוּתוּן] (ידיתון) לְאָסָף מִזְמֽוֹר׃ קוֹלִי אֶל־אֱלֹהִים וְאֶצְעָקָה קוֹלִי אֶל־אֱלֹהִים וְהַאֲזִין אֵלָֽי׃ 1
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ. ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.
בְּיוֹם צָרָתִי אֲדֹנָי דָּרָשְׁתִּי יָדִי ׀ לַיְלָה נִגְּרָה וְלֹא תָפוּג מֵאֲנָה הִנָּחֵם נַפְשִֽׁי׃ 2
ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.
אֶזְכְּרָה אֱלֹהִים וְאֶהֱמָיָה אָשִׂיחָה ׀ וְתִתְעַטֵּף רוּחִי סֶֽלָה׃ 3
ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.
אָחַזְתָּ שְׁמֻרוֹת עֵינָי נִפְעַמְתִּי וְלֹא אֲדַבֵּֽר׃ 4
ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು.
חִשַּׁבְתִּי יָמִים מִקֶּדֶם שְׁנוֹת עוֹלָמִֽים׃ 5
ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.
אֶזְכְּרָה נְגִינָתִי בַּלָּיְלָה עִם־לְבָבִי אָשִׂיחָה וַיְחַפֵּשׂ רוּחִֽי׃ 6
ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ,
הַלְעוֹלָמִים יִזְנַח ׀ אֲדֹנָי וְלֹא־יֹסִיף לִרְצוֹת עֽוֹד׃ 7
“ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ?
הֶאָפֵס לָנֶצַח חַסְדּוֹ גָּמַר אֹמֶר לְדֹר וָדֹֽר׃ 8
ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?
הֲשָׁכַח חַנּוֹת אֵל אִם־קָפַץ בְּאַף רַחֲמָיו סֶֽלָה׃ 9
ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು (ಸೆಲಾ)
וָאֹמַר חַלּוֹתִי הִיא שְׁנוֹת יְמִין עֶלְיֽוֹן׃ 10
೧೦ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.
(אזכיר) [אֶזְכּוֹר] מַעַלְלֵי־יָהּ כִּֽי־אֶזְכְּרָה מִקֶּדֶם פִּלְאֶֽךָ׃ 11
೧೧ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.
וְהָגִיתִי בְכׇל־פׇּעֳלֶךָ וּֽבַעֲלִילוֹתֶיךָ אָשִֽׂיחָה׃ 12
೧೨ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.
אֱלֹהִים בַּקֹּדֶשׁ דַּרְכֶּךָ מִי־אֵל גָּדוֹל כֵּאלֹהִֽים׃ 13
೧೩ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?
אַתָּה הָאֵל עֹשֵׂה פֶלֶא הוֹדַעְתָּ בָעַמִּים עֻזֶּֽךָ׃ 14
೧೪ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
גָּאַלְתָּ בִּזְרוֹעַ עַמֶּךָ בְּנֵֽי־יַעֲקֹב וְיוֹסֵף סֶֽלָה׃ 15
೧೫ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. (ಸೆಲಾ)
רָאוּךָ מַּיִם ׀ אֱֽלֹהִים רָאוּךָ מַּיִם יָחִילוּ אַף יִרְגְּזוּ תְהֹמֽוֹת׃ 16
೧೬ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.
זֹרְמוּ מַיִם ׀ עָבוֹת קוֹל נָֽתְנוּ שְׁחָקִים אַף־חֲצָצֶיךָ יִתְהַלָּֽכוּ׃ 17
೧೭ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
קוֹל רַֽעַמְךָ ׀ בַּגַּלְגַּל הֵאִירוּ בְרָקִים תֵּבֵל רָגְזָה וַתִּרְעַשׁ הָאָֽרֶץ׃ 18
೧೮ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.
בַּיָּם דַּרְכֶּךָ (ושביליך) [וּֽשְׁבִילְךָ] בְּמַיִם רַבִּים וְעִקְּבוֹתֶיךָ לֹא נֹדָֽעוּ׃ 19
೧೯ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.
נָחִיתָ כַצֹּאן עַמֶּךָ בְּֽיַד־מֹשֶׁה וְאַהֲרֹֽן׃ 20
೨೦ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.

< תהילים 77 >