< תהילים 8 >

לַמְנַצֵּחַ עַֽל־הַגִּתִּית מִזְמוֹר לְדָוִֽד׃ יְהֹוָה אֲדֹנֵינוּ מָֽה־אַדִּיר שִׁמְךָ בְּכׇל־הָאָרֶץ אֲשֶׁר תְּנָה הוֹדְךָ עַל־הַשָּׁמָֽיִם׃ 1
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು. ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.
מִפִּי עוֹלְלִים ׀ וְֽיֹנְקִים יִסַּדְתָּ עֹז לְמַעַן צוֹרְרֶיךָ לְהַשְׁבִּית אוֹיֵב וּמִתְנַקֵּֽם׃ 2
ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
כִּֽי־אֶרְאֶה שָׁמֶיךָ מַעֲשֵׂה אֶצְבְּעֹתֶיךָ יָרֵחַ וְכוֹכָבִים אֲשֶׁר כּוֹנָֽנְתָּה׃ 3
ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,
מָה־אֱנוֹשׁ כִּֽי־תִזְכְּרֶנּוּ וּבֶן־אָדָם כִּי תִפְקְדֶֽנּוּ׃ 4
ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
וַתְּחַסְּרֵהוּ מְּעַט מֵאֱלֹהִים וְכָבוֹד וְהָדָר תְּעַטְּרֵֽהוּ׃ 5
ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.
תַּמְשִׁילֵהוּ בְּמַעֲשֵׂי יָדֶיךָ כֹּל שַׁתָּה תַֽחַת־רַגְלָֽיו׃ 6
ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.
צֹנֶה וַאֲלָפִים כֻּלָּם וְגַם בַּהֲמוֹת שָׂדָֽי׃ 7
ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,
צִפּוֹר שָׁמַיִם וּדְגֵי הַיָּם עֹבֵר אׇרְחוֹת יַמִּֽים׃ 8
ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.
יְהֹוָה אֲדֹנֵינוּ מָה־אַדִּיר שִׁמְךָ בְּכׇל־הָאָֽרֶץ׃ 9
ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.

< תהילים 8 >