< תהילים 85 >
לַמְנַצֵּחַ ׀ לִבְנֵי־קֹרַח מִזְמֽוֹר׃ רָצִיתָ יְהֹוָה אַרְצֶךָ שַׁבְתָּ (שבות) [שְׁבִית] יַעֲקֹֽב׃ | 1 |
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ; ಕೋರಹೀಯರ ಕೀರ್ತನೆ. ಯೆಹೋವ ದೇವರೇ, ನಿಮ್ಮ ದೇಶವನ್ನು ನೀವು ದಯೆ ತೋರಿಸಿದ್ದೀರಿ. ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರಮಾಡಿದ್ದೀರಿ.
נָשָׂאתָ עֲוֺן עַמֶּךָ כִּסִּיתָ כׇל־חַטָּאתָם סֶֽלָה׃ | 2 |
ನಿಮ್ಮ ಜನರ ಅಕ್ರಮವನ್ನು ಪರಿಹರಿಸಿದ್ದೀರಿ. ಅವರ ಪಾಪವನ್ನೆಲ್ಲಾ ಮುಚ್ಚಿದ್ದೀರಿ.
אָסַפְתָּ כׇל־עֶבְרָתֶךָ הֱשִׁיבוֹתָ מֵחֲרוֹן אַפֶּֽךָ׃ | 3 |
ನಿಮ್ಮ ಕೋಪವನ್ನೆಲ್ಲಾ ತೆಗೆದುಬಿಟ್ಟಿದ್ದೀರಿ. ನಿಮ್ಮ ಬೇಸರದಿಂದ ತಿರುಗಿಕೊಂಡಿದ್ದೀರಿ.
שׁוּבֵנוּ אֱלֹהֵי יִשְׁעֵנוּ וְהָפֵר כַּעַסְךָ עִמָּֽנוּ׃ | 4 |
ನಮ್ಮ ರಕ್ಷಕ ಆಗಿರುವ ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ, ನಮ್ಮ ಮೇಲಿರುವ ನಿಮ್ಮ ಅಸಂತೋಷವನ್ನು ತೊಲಗಿಸಿರಿ.
הַלְעוֹלָם תֶּאֱנַף־בָּנוּ תִּמְשֹׁךְ אַפְּךָ לְדֹר וָדֹֽר׃ | 5 |
ಎಂದೆಂದಿಗೂ ನಮ್ಮ ಮೇಲೆ ಖಂಡಿಸುವಿರೋ? ತಲತಲಾಂತರಕ್ಕೂ ನಿಮ್ಮ ಬೇಸರ ಬೆಳೆಸುವಿರೋ?
הֲֽלֹא־אַתָּה תָּשׁוּב תְּחַיֵּנוּ וְעַמְּךָ יִשְׂמְחוּ־בָֽךְ׃ | 6 |
ನಿಮ್ಮ ಜನರು ನಿಮ್ಮಲ್ಲಿ ಸಂತೋಷಪಡುವಂತೆ ನೀವು ತಿರುಗಿ ನಮ್ಮನ್ನು ಉಜ್ಜೀವಿಸುವುದಿಲ್ಲವೋ?
הַרְאֵנוּ יְהֹוָה חַסְדֶּךָ וְיֶשְׁעֲךָ תִּתֶּן־לָֽנוּ׃ | 7 |
ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಮಗೆ ತೋರಿಸಿರಿ. ನಿಮ್ಮ ರಕ್ಷಣೆಯನ್ನು ನಮಗೆ ಕೊಡಿರಿ.
אֶשְׁמְעָה מַה־יְדַבֵּר הָאֵל ׀ יְהֹוָה כִּי ׀ יְדַבֵּר שָׁלוֹם אֶל־עַמּוֹ וְאֶל־חֲסִידָיו וְאַל־יָשׁוּבוּ לְכִסְלָֽה׃ | 8 |
ಯೆಹೋವ ದೇವರು ಏನು ಹೇಳುತ್ತಾರೋ ಅದನ್ನು ನಾನು ಕೇಳುವೆನು. ದೇವರು ತಮ್ಮ ಜನರಿಗೂ ತಮ್ಮ ಭಕ್ತರಿಗೂ ಸಮಾಧಾನವನ್ನು ವಾಗ್ದಾನಮಾಡುವರು. ಆದರೆ ಅವರ ಜನರು ಇನ್ನು ಬುದ್ಧಿಹೀನತೆಗೆ ತಿರುಗಿಕೊಳ್ಳದೆ ಇರಲಿ.
אַךְ קָרוֹב לִירֵאָיו יִשְׁעוֹ לִשְׁכֹּן כָּבוֹד בְּאַרְצֵֽנוּ׃ | 9 |
ನಿಶ್ಚಯವಾಗಿ ಮಹಿಮೆಯು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ದೇವರಿಗೆ ಭಯಪಡುವವರಿಗೆ ದೇವರ ರಕ್ಷಣೆಯು ಸಮೀಪವಾಗಿದೆ.
חֶסֶד־וֶאֱמֶת נִפְגָּשׁוּ צֶדֶק וְשָׁלוֹם נָשָֽׁקוּ׃ | 10 |
ಪ್ರೀತಿಯೂ ಸತ್ಯತೆಯೂ ಸಂಧಿಸಿಕೊಳ್ಳುತ್ತವೆ. ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುತ್ತವೆ.
אֱמֶת מֵאֶרֶץ תִּצְמָח וְצֶדֶק מִשָּׁמַיִם נִשְׁקָֽף׃ | 11 |
ಸತ್ಯವು ಭೂಮಿಯಿಂದ ಮೊಳೆಯುವುದು. ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
גַּם־יְהֹוָה יִתֵּן הַטּוֹב וְאַרְצֵנוּ תִּתֵּן יְבוּלָֽהּ׃ | 12 |
ಯೆಹೋವ ದೇವರು ಒಳ್ಳೆಯದನ್ನು ಕೊಡುವರು. ನಮ್ಮ ಭೂಮಿಯು ತನ್ನ ಸುಗ್ಗಿಯನ್ನು ಕೊಡುವುದು.
צֶדֶק לְפָנָיו יְהַלֵּךְ וְיָשֵׂם לְדֶרֶךְ פְּעָמָֽיו׃ | 13 |
ನೀತಿಯು ದೇವರ ಮುಂದೆ ನಡೆದುಕೊಂಡು ಹೋಗಿ, ದೇವರಿಗೆ ಮಾರ್ಗ ಸಿದ್ಧಪಡಿಸುವುದು.