< שיר השירים 1 >
שִׁ יר הַשִּׁירִים אֲשֶׁר לִשְׁלֹמֹֽה׃ | 1 |
ಸೊಲೊಮೋನನ ಪರಮಗೀತೆ.
יִשָּׁקֵנִי מִנְּשִׁיקוֹת פִּיהוּ כִּֽי־טוֹבִים דֹּדֶיךָ מִיָּֽיִן׃ | 2 |
ಬಾಯಿಯ ಮುದ್ದುಗಳಿಂದ ನನಗೆ ಮುದ್ದಿಡಲಿ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
לְרֵיחַ שְׁמָנֶיךָ טוֹבִים שֶׁמֶן תּוּרַק שְׁמֶךָ עַל־כֵּן עֲלָמוֹת אֲהֵבֽוּךָ׃ | 3 |
ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ. ನಿನ್ನ ಹೆಸರು ಸುರಿದ ಸುಗಂಧ ತೈಲವಾಗಿದೆ. ಆದ್ದರಿಂದ ಕನ್ಯೆಯರು ನಿನ್ನನ್ನು ಪ್ರೀತಿ ಮಾಡುತ್ತಾರೆ!
מׇשְׁכֵנִי אַחֲרֶיךָ נָּרוּצָה הֱבִיאַנִי הַמֶּלֶךְ חֲדָרָיו נָגִילָה וְנִשְׂמְחָה בָּךְ נַזְכִּירָה דֹדֶיךָ מִיַּיִן מֵישָׁרִים אֲהֵבֽוּךָ׃ | 4 |
ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಲು ಅವಸರಪಡು! ಅರಸನು ನನ್ನನ್ನು ತನ್ನ ಕೊಠಡಿಯೊಳಗೆ ಕರೆದುಕೊಂಡು ಬರಲಿ. ಸ್ನೇಹಿತರು ನಾವು ನಿನ್ನಲ್ಲಿ ಉಲ್ಲಾಸಪಟ್ಟು, ಸಂತೋಷ ಪಡುತ್ತೇವೆ. ದ್ರಾಕ್ಷಾರಸಕ್ಕಿಂತ ಹೆಚ್ಚಾಗಿ ನಿನ್ನ ಪ್ರೀತಿಯನ್ನು ಹೊಗಳುತ್ತೇವೆ. ಪ್ರಿಯತಮೆ ಅವರು ಯಥಾರ್ಥವಾಗಿ ನಿನ್ನನ್ನು ಮೆಚ್ಚುತ್ತಾರೆ!
שְׁחוֹרָה אֲנִי וְֽנָאוָה בְּנוֹת יְרוּשָׁלָ͏ִם כְּאׇהֳלֵי קֵדָר כִּירִיעוֹת שְׁלֹמֹֽה׃ | 5 |
ಯೆರೂಸಲೇಮಿನ ಪುತ್ರಿಯರೇ, ನಾನು ಕಪ್ಪಾದವಳು ಆದರೂ ಸುಂದರಿ. ಕೇದಾರಿನ ಗುಡಾರಗಳಂತೆಯೂ, ಸೊಲೊಮೋನನ ಡೇರೆಯ ತೆರೆಗಳಂತೆಯೂ ಚೆಲುವೆ.
אַל־תִּרְאוּנִי שֶׁאֲנִי שְׁחַרְחֹרֶת שֶׁשְּׁזָפַתְנִי הַשָּׁמֶשׁ בְּנֵי אִמִּי נִֽחֲרוּ־בִי שָׂמֻנִי נֹטֵרָה אֶת־הַכְּרָמִים כַּרְמִי שֶׁלִּי לֹא נָטָֽרְתִּי׃ | 6 |
ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ. ನನ್ನ ಸಹೋದರರು ನನ್ನ ಮೇಲೆ ಕೋಪಮಾಡಿಕೊಂಡು, ದ್ರಾಕ್ಷಿತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ಆದರೆ ನನ್ನ ಸ್ವಂತ ದ್ರಾಕ್ಷಿತೋಟವನ್ನು ನಾನು ಅಲಕ್ಷ್ಯ ಮಾಡಬೇಕಾಯಿತು.
הַגִּידָה לִּי שֶׁאָֽהֲבָה נַפְשִׁי אֵיכָה תִרְעֶה אֵיכָה תַּרְבִּיץ בַּֽצׇּהֳרָיִם שַׁלָּמָה אֶֽהְיֶה כְּעֹטְיָה עַל עֶדְרֵי חֲבֵרֶֽיךָ׃ | 7 |
ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸುವುದು ಎಲ್ಲಿ? ಮಧ್ಯಾಹ್ನದಲ್ಲಿ ನೀನು ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ? ನನಗೆ ತಿಳಿಸು. ನಾನು ನಿನ್ನ ಜೊತೆಗಾರರ ಮಂದೆಗಳ ಬಳಿಯಲ್ಲಿ ಮುಸುಕು ಹಾಕಿದವಳಂತೆ ಏಕೆ ಅಲೆಯಬೇಕು?
אִם־לֹא תֵֽדְעִי לָךְ הַיָּפָה בַּנָּשִׁים צְֽאִי־לָךְ בְּעִקְבֵי הַצֹּאן וּרְעִי אֶת־גְּדִיֹּתַיִךְ עַל מִשְׁכְּנוֹת הָרֹעִֽים׃ | 8 |
ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನಿನಗೆ ಗೊತ್ತಿಲ್ಲವಾದರೆ, ನೀನು ಮಂದೆಯ ಜಾಡಿನಲ್ಲಿಯೇ ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
לְסֻֽסָתִי בְּרִכְבֵי פַרְעֹה דִּמִּיתִיךְ רַעְיָתִֽי׃ | 9 |
ನನ್ನ ಪ್ರಿಯಳೇ, ಫರೋಹನ ರಥಕ್ಕೆ ಕಟ್ಟಿದ ಕುದುರೆಗೆ ನಿನ್ನನ್ನು ಹೋಲಿಸಿದ್ದೇನೆ.
נָאווּ לְחָיַיִךְ בַּתֹּרִים צַוָּארֵךְ בַּחֲרוּזִֽים׃ | 10 |
ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ, ನಿನ್ನ ಕೊರಳು ಕಂಠ ಮಾಲೆಗಳಿಂದಲೂ ರಮ್ಯವಾಗಿವೆ.
תּוֹרֵי זָהָב נַֽעֲשֶׂה־לָּךְ עִם נְקֻדּוֹת הַכָּֽסֶף׃ | 11 |
ನಾವು ನಿನಗೋಸ್ಕರ ಬಂಗಾರದ ಕಿವಿಯೋಲೆಗಳನ್ನು ಬೆಳ್ಳಿಯ ಸರಪಳಿಗಳೊಂದಿಗೆ ಮಾಡಿಸುವೆವು.
עַד־שֶׁהַמֶּלֶךְ בִּמְסִבּוֹ נִרְדִּי נָתַן רֵיחֽוֹ׃ | 12 |
ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ, ನನ್ನ ಪರಿಮಳ ತೈಲವು ಸುವಾಸನೆಯನ್ನು ಬೀರುತ್ತಿತ್ತು.
צְרוֹר הַמֹּר ׀ דּוֹדִי לִי בֵּין שָׁדַי יָלִֽין׃ | 13 |
ನನ್ನ ಪ್ರಿಯತಮನು ನನ್ನ ಸ್ತನಗಳ ಮಧ್ಯದಲ್ಲಿ ವಿಶ್ರಾಂತಿ ಪಡೆಯುವ ರಕ್ತಬೋಳದ ಚೀಲದಂತಿರುವನು.
אֶשְׁכֹּל הַכֹּפֶר ׀ דּוֹדִי לִי בְּכַרְמֵי עֵין גֶּֽדִי׃ | 14 |
ನನ್ನ ಪ್ರಿಯನು ನನಗೆ ಏನ್ಗೆದಿಯ ದ್ರಾಕ್ಷಿ ತೋಟಗಳಲ್ಲಿರುವ ಗೋರಂಟಿ ಹೂಗೊಂಚಲಿನಂತೆ ಇರುವನು.
הִנָּךְ יָפָה רַעְיָתִי הִנָּךְ יָפָה עֵינַיִךְ יוֹנִֽים׃ | 15 |
ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ! ಆಹಾ, ನೀನು ಸೌಂದರ್ಯವಂತಳೇ! ನಿನ್ನ ಕಣ್ಣುಗಳು ಪಾರಿವಾಳಗಳಂತಿವೆ.
הִנְּךָ יָפֶה דוֹדִי אַף נָעִים אַף־עַרְשֵׂנוּ רַעֲנָנָֽה׃ | 16 |
ನನ್ನ ಪ್ರಿಯನೇ, ಇಗೋ, ನೀನು ಎಷ್ಟು ಸೌಂದರ್ಯವಂತನು! ಹೌದು, ರಮ್ಯವಾದವನು! ಹಸಿರು ಚಿಗುರುಗಳೇ ನಮ್ಮ ಮಂಚವಾಗಿದೆ.
קֹרוֹת בָּתֵּינוּ אֲרָזִים (רחיטנו) [רַהִיטֵנוּ] בְּרוֹתִֽים׃ | 17 |
ನಮ್ಮ ಮನೆಯ ತೊಲೆಗಳು ದೇವದಾರು ಮರಗಳು. ನಮ್ಮ ಮೇಲ್ಛಾವಣಿ ತುರಾಯಿ ಮರಗಳು.