< זכריה 12 >
מַשָּׂא דְבַר־יְהֹוָה עַל־יִשְׂרָאֵל נְאֻם־יְהֹוָה נֹטֶה שָׁמַיִם וְיֹסֵד אָרֶץ וְיֹצֵר רֽוּחַ־אָדָם בְּקִרְבּֽוֹ׃ | 1 |
೧ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,
הִנֵּה אָנֹכִי שָׂם אֶת־יְרֽוּשָׁלַ͏ִם סַף־רַעַל לְכׇל־הָעַמִּים סָבִיב וְגַם עַל־יְהוּדָה יִהְיֶה בַמָּצוֹר עַל־יְרוּשָׁלָֽ͏ִם׃ | 2 |
೨“ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.
וְהָיָה בַיּוֹם־הַהוּא אָשִׂים אֶת־יְרוּשָׁלַ͏ִם אֶבֶן מַֽעֲמָסָה לְכׇל־הָעַמִּים כׇּל־עֹמְסֶיהָ שָׂרוֹט יִשָּׂרֵטוּ וְנֶאֶסְפוּ עָלֶיהָ כֹּל גּוֹיֵי הָאָֽרֶץ׃ | 3 |
೩ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”
בַּיּוֹם הַהוּא נְאֻם־יְהֹוָה אַכֶּה כׇל־סוּס בַּתִּמָּהוֹן וְרֹכְבוֹ בַּשִּׁגָּעוֹן וְעַל־בֵּית יְהוּדָה אֶפְקַח אֶת־עֵינַי וְכֹל סוּס הָעַמִּים אַכֶּה בַּעִוָּרֽוֹן׃ | 4 |
೪ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.
וְאָמְרוּ אַלֻּפֵי יְהוּדָה בְּלִבָּם אַמְצָה לִי יֹשְׁבֵי יְרוּשָׁלַ͏ִם בַּיהֹוָה צְבָאוֹת אֱלֹהֵיהֶֽם׃ | 5 |
೫ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು.
בַּיּוֹם הַהוּא אָשִׂים אֶת־אַלֻּפֵי יְהוּדָה כְּֽכִיּוֹר אֵשׁ בְּעֵצִים וּכְלַפִּיד אֵשׁ בְּעָמִיר וְאָכְלוּ עַל־יָמִין וְעַל־שְׂמֹאול אֶת־כׇּל־הָעַמִּים סָבִיב וְיָשְׁבָה יְרוּשָׁלַ͏ִם עוֹד תַּחְתֶּיהָ בִּירוּשָׁלָֽ͏ִם׃ | 6 |
೬“ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;
וְהוֹשִׁעַ יְהֹוָה אֶת־אׇהֳלֵי יְהוּדָה בָּרִֽאשֹׁנָה לְמַעַן לֹֽא־תִגְדַּל תִּפְאֶרֶת בֵּית־דָּוִיד וְתִפְאֶרֶת יֹשֵׁב יְרוּשָׁלַ͏ִם עַל־יְהוּדָֽה׃ | 7 |
೭ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;
בַּיּוֹם הַהוּא יָגֵן יְהֹוָה בְּעַד יוֹשֵׁב יְרוּשָׁלַ͏ִם וְהָיָה הַנִּכְשָׁל בָּהֶם בַּיּוֹם הַהוּא כְּדָוִיד וּבֵית דָּוִיד כֵּֽאלֹהִים כְּמַלְאַךְ יְהֹוָה לִפְנֵיהֶֽם׃ | 8 |
೮ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.
וְהָיָה בַּיּוֹם הַהוּא אֲבַקֵּשׁ לְהַשְׁמִיד אֶת־כׇּל־הַגּוֹיִם הַבָּאִים עַל־יְרוּשָׁלָֽ͏ִם׃ | 9 |
೯ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.”
וְשָׁפַכְתִּי עַל־בֵּית דָּוִיד וְעַל ׀ יוֹשֵׁב יְרוּשָׁלַ͏ִם רוּחַ חֵן וְתַחֲנוּנִים וְהִבִּיטוּ אֵלַי אֵת אֲשֶׁר־דָּקָרוּ וְסָפְדוּ עָלָיו כְּמִסְפֵּד עַל־הַיָּחִיד וְהָמֵר עָלָיו כְּהָמֵר עַֽל־הַבְּכֽוֹר׃ | 10 |
೧೦ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
בַּיּוֹם הַהוּא יִגְדַּל הַמִּסְפֵּד בִּירוּשָׁלַ͏ִם כְּמִסְפַּד הֲדַד־רִמּוֹן בְּבִקְעַת מְגִדּֽוֹן׃ | 11 |
೧೧ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು.
וְסָפְדָה הָאָרֶץ מִשְׁפָּחוֹת מִשְׁפָּחוֹת לְבָד מִשְׁפַּחַת בֵּית־דָּוִיד לְבָד וּנְשֵׁיהֶם לְבָד מִשְׁפַּחַת בֵּית־נָתָן לְבָד וּנְשֵׁיהֶם לְבָֽד׃ | 12 |
೧೨ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;
מִשְׁפַּחַת בֵּית־לֵוִי לְבָד וּנְשֵׁיהֶם לְבָד מִשְׁפַּחַת הַשִּׁמְעִי לְבָד וּנְשֵׁיהֶם לְבָֽד׃ | 13 |
೧೩ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ,
כֹּל הַמִּשְׁפָּחוֹת הַנִּשְׁאָרוֹת מִשְׁפָּחֹת מִשְׁפָּחֹת לְבָד וּנְשֵׁיהֶם לְבָֽד׃ | 14 |
೧೪ಉಳಿದ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು, ಗಂಡಸರು ಬೇರೆ ಬೇರೆ, ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು.