< זכריה 7 >
וַֽיְהִי בִּשְׁנַת אַרְבַּע לְדָרְיָוֶשׁ הַמֶּלֶךְ הָיָה דְבַר־יְהֹוָה אֶל־זְכַרְיָה בְּאַרְבָּעָה לַחֹדֶשׁ הַתְּשִׁעִי בְּכִסְלֵֽו׃ | 1 |
ಅರಸನಾದ ದಾರ್ಯಾವೆಷನ ನಾಲ್ಕನೆಯ ವರ್ಷದಲ್ಲಿ ಒಂಬತ್ತನೆಯ ತಿಂಗಳಿನ ಅಂದರೆ ಕಿಸ್ಲೇವ್ ತಿಂಗಳಿನ ನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಬಂದಿತು.
וַיִּשְׁלַח בֵּֽית־אֵל שַׂר־אֶצֶר וְרֶגֶם מֶלֶךְ וַֽאֲנָשָׁיו לְחַלּוֹת אֶת־פְּנֵי יְהֹוָֽה׃ | 2 |
ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವರ ಮನುಷ್ಯರನ್ನೂ ಯೆಹೋವ ದೇವರ ಪ್ರಸನ್ನತೆಯನ್ನು ಕೋರಲು ದೇವಾಲಯಕ್ಕೆ ಕಳುಹಿಸಿದರು.
לֵאמֹר אֶל־הַכֹּֽהֲנִים אֲשֶׁר לְבֵית־יְהֹוָה צְבָאוֹת וְאֶל־הַנְּבִיאִים לֵאמֹר הַֽאֶבְכֶּה בַּחֹדֶשׁ הַחֲמִשִׁי הִנָּזֵר כַּאֲשֶׁר עָשִׂיתִי זֶה כַּמֶּה שָׁנִֽים׃ | 3 |
ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.
וַיְהִי דְּבַר־יְהֹוָה צְבָאוֹת אֵלַי לֵאמֹֽר׃ | 4 |
ಆಗ ಸರ್ವಶಕ್ತರಾದ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,
אֱמֹר אֶל־כׇּל־עַם הָאָרֶץ וְאֶל־הַכֹּהֲנִים לֵאמֹר כִּֽי־צַמְתֶּם וְסָפוֹד בַּחֲמִישִׁי וּבַשְּׁבִיעִי וְזֶה שִׁבְעִים שָׁנָה הֲצוֹם צַמְתֻּנִי אָֽנִי׃ | 5 |
“ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?
וְכִי תֹאכְלוּ וְכִי תִשְׁתּוּ הֲלוֹא אַתֶּם הָאֹכְלִים וְאַתֶּם הַשֹּׁתִֽים׃ | 6 |
ನೀವು ಉಂಡು ಕುಡಿಯುತ್ತಿದ್ದಾಗ, ನಿಮಗಾಗಿಯೇ ಉಂಡು ಕುಡಿದಿರಲ್ಲಾ?
הֲלוֹא אֶת־הַדְּבָרִים אֲשֶׁר קָרָא יְהֹוָה בְּיַד הַנְּבִיאִים הָרִֽאשֹׁנִים בִּהְיוֹת יְרוּשָׁלַ͏ִם יֹשֶׁבֶת וּשְׁלֵוָה וְעָרֶיהָ סְבִיבֹתֶיהָ וְהַנֶּגֶב וְהַשְּׁפֵלָה יֹשֵֽׁב׃ | 7 |
ಯೆರೂಸಲೇಮು, ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳವುಗಳಾಗಿಯೂ, ಸುಖವಾಗಿಯೂ, ಸಮೃದ್ಧಿಯಾಗಿಯೂ ದಕ್ಷಿಣವೂ, ಪಶ್ಚಿಮ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ, ಯೆಹೋವ ದೇವರು ಪೂರ್ವದ ಪ್ರವಾದಿಗಳ ಮೂಲಕ ಸಾರಿದ ಮಾತುಗಳು ಅವು ಅಲ್ಲವೋ?’ ಎಂಬುದು.”
וַֽיְהִי דְּבַר־יְהֹוָה אֶל־זְכַרְיָה לֵאמֹֽר׃ | 8 |
ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಪುನಃ ಬಂದು ಹೇಳಿದ್ದೇನೆಂದರೆ,
כֹּה אָמַר יְהֹוָה צְבָאוֹת לֵאמֹר מִשְׁפַּט אֱמֶת שְׁפֹטוּ וְחֶסֶד וְרַֽחֲמִים עֲשׂוּ אִישׁ אֶת־אָחִֽיו׃ | 9 |
“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;
וְאַלְמָנָה וְיָתוֹם גֵּר וְעָנִי אַֽל־תַּעֲשֹׁקוּ וְרָעַת אִישׁ אָחִיו אַֽל־תַּחְשְׁבוּ בִּלְבַבְכֶֽם׃ | 10 |
ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’” ಎಂಬುದು.
וַיְמָאֲנוּ לְהַקְשִׁיב וַיִּתְּנוּ כָתֵף סֹרָרֶת וְאׇזְנֵיהֶם הִכְבִּידוּ מִשְּׁמֽוֹעַ׃ | 11 |
“ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.
וְלִבָּם שָׂמוּ שָׁמִיר מִשְּׁמוֹעַ אֶת־הַתּוֹרָה וְאֶת־הַדְּבָרִים אֲשֶׁר שָׁלַח יְהֹוָה צְבָאוֹת בְּרוּחוֹ בְּיַד הַנְּבִיאִים הָרִֽאשֹׁנִים וַֽיְהִי קֶצֶף גָּדוֹל מֵאֵת יְהֹוָה צְבָאֽוֹת׃ | 12 |
ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.
וַיְהִי כַאֲשֶׁר־קָרָא וְלֹא שָׁמֵעוּ כֵּן יִקְרְאוּ וְלֹא אֶשְׁמָע אָמַר יְהֹוָה צְבָאֽוֹת׃ | 13 |
“ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
וְאֵסָעֲרֵם עַל כׇּל־הַגּוֹיִם אֲשֶׁר לֹֽא־יְדָעוּם וְהָאָרֶץ נָשַׁמָּה אַֽחֲרֵיהֶם מֵֽעֹבֵר וּמִשָּׁב וַיָּשִׂימוּ אֶֽרֶץ־חֶמְדָּה לְשַׁמָּֽה׃ | 14 |
ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”