< 1 שְׁמוּאֵל 1 >
וַיְהִי֩ אִ֨ישׁ אֶחָ֜ד מִן־הָרָמָתַ֛יִם צֹופִ֖ים מֵהַ֣ר אֶפְרָ֑יִם וּשְׁמֹ֡ו אֶ֠לְקָנָה בֶּן־יְרֹחָ֧ם בֶּן־אֱלִיה֛וּא בֶּן־תֹּ֥חוּ בֶן־צ֖וּף אֶפְרָתִֽי׃ | 1 |
ಎಫ್ರಾಯೀಮ್ ಬೆಟ್ಟದ ಪ್ರದೇಶ ರಾಮತಾಯೀಮ್ ಚೋಫಿಮಿನಲ್ಲಿ ಎಲ್ಕಾನ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ಯನಾದ ಚೂಫನ ಮೊಮ್ಮಗನೂ ತೋಹುವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.
וְלֹו֙ שְׁתֵּ֣י נָשִׁ֔ים שֵׁ֤ם אַחַת֙ חַנָּ֔ה וְשֵׁ֥ם הַשֵּׁנִ֖ית פְּנִנָּ֑ה וַיְהִ֤י לִפְנִנָּה֙ יְלָדִ֔ים וּלְחַנָּ֖ה אֵ֥ין יְלָדִֽים׃ | 2 |
ಅವನಿಗೆ ಇಬ್ಬರು ಹೆಂಡತಿಯರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.
וְעָלָה֩ הָאִ֨ישׁ הַה֤וּא מֵֽעִירֹו֙ מִיָּמִ֣ים ׀ יָמִ֔ימָה לְהִֽשְׁתַּחֲוֹ֧ת וְלִזְבֹּ֛חַ לַיהוָ֥ה צְבָאֹ֖ות בְּשִׁלֹ֑ה וְשָׁ֞ם שְׁנֵ֣י בְנֵֽי־עֵלִ֗י חָפְנִי֙ וּפִ֣נְחָ֔ס כֹּהֲנִ֖ים לַיהוָֽה׃ | 3 |
ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು.
וַיְהִ֣י הַיֹּ֔ום וַיִּזְבַּ֖ח אֶלְקָנָ֑ה וְנָתַ֞ן לִפְנִנָּ֣ה אִשְׁתֹּ֗ו וּֽלְכָל־בָּנֶ֛יהָ וּבְנֹותֶ֖יהָ מָנֹֽות׃ | 4 |
ಎಲ್ಕಾನನು ಬಲಿ ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿ ಪೆನಿನ್ನಳಿಗೂ, ಅವಳ ಸಮಸ್ತ ಪುತ್ರಪುತ್ರಿಯರಿಗೂ ಪಾಲನ್ನು ಕೊಡುತ್ತಿದ್ದನು.
וּלְחַנָּ֕ה יִתֵּ֛ן מָנָ֥ה אַחַ֖ת אַפָּ֑יִם כִּ֤י אֶת־חַנָּה֙ אָהֵ֔ב וַֽיהוָ֖ה סָגַ֥ר רַחְמָֽהּ׃ | 5 |
ಅವನು ಹನ್ನಳನ್ನು ಪ್ರೀತಿಸಿದ್ದರಿಂದ ಹನ್ನಳಿಗೆ ಎರಡಷ್ಟು ಪಾಲನ್ನು ಕೊಡುತ್ತಿದ್ದನು. ಆದರೆ ಯೆಹೋವ ದೇವರು ಹನ್ನಳ ಗರ್ಭವನ್ನು ಮುಚ್ಚಿಬಿಟ್ಟಿದ್ದರು.
וְכִֽעֲסַ֤תָּה צָֽרָתָהּ֙ גַּם־כַּ֔עַס בַּעֲב֖וּר הַרְּעִמָ֑הּ כִּֽי־סָגַ֥ר יְהוָ֖ה בְּעַ֥ד רַחְמָֽהּ׃ | 6 |
ಯೆಹೋವ ದೇವರು ಅವಳ ಗರ್ಭವನ್ನು ಮುಚ್ಚಿದ್ದರಿಂದ, ಅವಳ ಪ್ರತಿಸ್ಪರ್ಧಿಯಾದ ಪೆನಿನ್ನಳು ಹನ್ನಳಿಗೆ ಮನಗುಂದುವ ಹಾಗೆ ಬಹಳ ಕೆಣಕಿ ಬಾಧಿಸಿದಳು.
וְכֵ֨ן יַעֲשֶׂ֜ה שָׁנָ֣ה בְשָׁנָ֗ה מִדֵּ֤י עֲלֹתָהּ֙ בְּבֵ֣ית יְהוָ֔ה כֵּ֖ן תַּכְעִסֶ֑נָּה וַתִּבְכֶּ֖ה וְלֹ֥א תֹאכַֽל׃ | 7 |
ಹೀಗೆಯೇ ಅವನು ಪ್ರತಿ ಸಂವತ್ಸರದಲ್ಲಿಯೂ ಮಾಡುತ್ತಿದ್ದನು, ಇವಳು ಯೆಹೋವ ದೇವರ ಮನೆಗೆ ಹೋಗುತ್ತಿರುವಾಗ ಆ ರೀತಿಯಾಗಿ ಹನ್ನಳನ್ನು ಬಾಧಿಸುತ್ತಿದ್ದಳು. ಅದರಿಂದ ಹನ್ನಳು ಊಟಮಾಡದೆ ಅಳುತ್ತಾ ಇದ್ದಳು.
וַיֹּ֨אמֶר לָ֜הּ אֶלְקָנָ֣ה אִישָׁ֗הּ חַנָּה֙ לָ֣מֶה תִבְכִּ֗י וְלָ֙מֶה֙ לֹ֣א תֹֽאכְלִ֔י וְלָ֖מֶה יֵרַ֣ע לְבָבֵ֑ךְ הֲלֹ֤וא אָֽנֹכִי֙ טֹ֣וב לָ֔ךְ מֵעֲשָׂרָ֖ה בָּנִֽים׃ | 8 |
ಆಗ ಅವಳ ಗಂಡ ಎಲ್ಕಾನನು ಅವಳಿಗೆ, “ಹನ್ನಳೇ, ಏಕೆ ಅಳುತ್ತೀ? ಏಕೆ ಊಟಮಾಡದೆ ಇದ್ದೀ? ನಿನ್ನ ಮನ ಏಕೆ ಕುಂದಿದೆ? ಹತ್ತು ಮಂದಿ ಪುತ್ರರಿಗಿಂತ ನಾನು ನಿನಗೆ ಹೆಚ್ಚಲ್ಲವೆ?” ಎಂದನು.
וַתָּ֣קָם חַנָּ֔ה אַחֲרֵ֛י אָכְלָ֥ה בְשִׁלֹ֖ה וְאַחֲרֵ֣י שָׁתֹ֑ה וְעֵלִ֣י הַכֹּהֵ֗ן יֹשֵׁב֙ עַל־הַכִּסֵּ֔א עַל־מְזוּזַ֖ת הֵיכַ֥ל יְהוָֽה׃ | 9 |
ಅವರು ಶೀಲೋವಿನಲ್ಲಿ ಊಟಮಾಡಿದ ತರುವಾಯ ಹನ್ನಳು ಎದ್ದು ನಿಂತಳು. ಯಾಜಕನಾದ ಏಲಿ ಯೆಹೋವ ದೇವರ ಮಂದಿರದ ಸ್ತಂಭದ ಬಳಿ ಆಸನದ ಮೇಲೆ ಕುಳಿತಿರುವಾಗ,
וְהִ֖יא מָ֣רַת נָ֑פֶשׁ וַתִּתְפַּלֵּ֥ל עַל־יְהוָ֖ה וּבָכֹ֥ה תִבְכֶּֽה׃ | 10 |
ಅವಳು ಬಹಳ ಮನಗುಂದಿದವಳಾಗಿ ಯೆಹೋವ ದೇವರನ್ನು ಪ್ರಾರ್ಥಿಸಿ, ಅತ್ತು ಒಂದು
וַתִּדֹּ֨ר נֶ֜דֶר וַתֹּאמַ֗ר יְהוָ֨ה צְבָאֹ֜ות אִם־רָאֹ֥ה תִרְאֶ֣ה ׀ בָּעֳנִ֣י אֲמָתֶ֗ךָ וּזְכַרְתַּ֙נִי֙ וְלֹֽא־תִשְׁכַּ֣ח אֶת־אֲמָתֶ֔ךָ וְנָתַתָּ֥ה לַאֲמָתְךָ֖ זֶ֣רַע אֲנָשִׁ֑ים וּנְתַתִּ֤יו לַֽיהוָה֙ כָּל־יְמֵ֣י חַיָּ֔יו וּמֹורָ֖ה לֹא־יַעֲלֶ֥ה עַל־רֹאשֹֽׁו׃ | 11 |
ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.
וְהָיָה֙ כִּ֣י הִרְבְּתָ֔ה לְהִתְפַּלֵּ֖ל לִפְנֵ֣י יְהוָ֑ה וְעֵלִ֖י שֹׁמֵ֥ר אֶת־פִּֽיהָ׃ | 12 |
ಅವಳು ಯೆಹೋವ ದೇವರ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ, ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
וְחַנָּ֗ה הִ֚יא מְדַבֶּ֣רֶת עַל־לִבָּ֔הּ רַ֚ק שְׂפָתֶ֣יהָ נָּעֹ֔ות וְקֹולָ֖הּ לֹ֣א יִשָּׁמֵ֑עַ וַיַּחְשְׁבֶ֥הָ עֵלִ֖י לְשִׁכֹּרָֽה׃ | 13 |
ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ, ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದುದರಿಂದ ಅವಳ ಶಬ್ದವು ಕೇಳಿಸಲಿಲ್ಲ. ಆದ್ದರಿಂದ ಏಲಿಯು ಅವಳು ಅಮಲೇರಿದ್ದಾಳೆಂದು ನೆನಸಿದನು.
וַיֹּ֤אמֶר אֵלֶ֙יהָ֙ עֵלִ֔י עַד־מָתַ֖י תִּשְׁתַּכָּרִ֑ין הָסִ֥ירִי אֶת־יֵינֵ֖ךְ מֵעָלָֽיִךְ׃ | 14 |
ಏಲಿಯು ಅವಳಿಗೆ, “ಎಷ್ಟರವರೆಗೂ ಅಮಲೇರಿದವಳಾಗಿರುವೆ? ನಿನ್ನ ಬಳಿಯಿಂದ ನಿನ್ನ ದ್ರಾಕ್ಷಾರಸವನ್ನು ತೊರೆದುಬಿಡು,” ಎಂದನು.
וַתַּ֨עַן חַנָּ֤ה וַתֹּ֙אמֶר֙ לֹ֣א אֲדֹנִ֔י אִשָּׁ֤ה קְשַׁת־ר֙וּחַ֙ אָנֹ֔כִי וְיַ֥יִן וְשֵׁכָ֖ר לֹ֣א שָׁתִ֑יתִי וָאֶשְׁפֹּ֥ךְ אֶת־נַפְשִׁ֖י לִפְנֵ֥י יְהוָֽה׃ | 15 |
ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ.
אַל־תִּתֵּן֙ אֶת־אֲמָ֣תְךָ֔ לִפְנֵ֖י בַּת־בְּלִיָּ֑עַל כִּֽי־מֵרֹ֥ב שִׂיחִ֛י וְכַעְסִ֖י דִּבַּ֥רְתִּי עַד־הֵֽנָּה׃ | 16 |
ನಿನ್ನ ದಾಸಿಯನ್ನು ದುಷ್ಟಳೆಂದು ನೆನಸಬೇಡ. ನನ್ನ ಹೆಚ್ಚಾದ ಚಿಂತೆಯಿಂದಲೂ, ದುಃಖದಿಂದಲೂ ಈವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು,” ಎಂದಳು.
וַיַּ֧עַן עֵלִ֛י וַיֹּ֖אמֶר לְכִ֣י לְשָׁלֹ֑ום וֵאלֹהֵ֣י יִשְׂרָאֵ֗ל יִתֵּן֙ אֶת־שֵׁ֣לָתֵ֔ךְ אֲשֶׁ֥ר שָׁאַ֖לְתְּ מֵעִמֹּֽו׃ | 17 |
ಆಗ ಏಲಿಯು ಅವಳಿಗೆ, “ಸಮಾಧಾನದಿಂದ ಹೋಗು. ಇಸ್ರಾಯೇಲಿನ ದೇವರು, ಅವರಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯಂತೆ ನಿನಗೆ ಕೊಡಲಿ,” ಎಂದನು.
וַתֹּ֕אמֶר תִּמְצָ֧א שִׁפְחָתְךָ֛ חֵ֖ן בְּעֵינֶ֑יךָ וַתֵּ֨לֶךְ הָאִשָּׁ֤ה לְדַרְכָּהּ֙ וַתֹּאכַ֔ל וּפָנֶ֥יהָ לֹא־הָיוּ־לָ֖הּ עֹֽוד׃ | 18 |
ಅದಕ್ಕವಳು, “ನಿನ್ನ ಸೇವಕಿಗೆ ನಿನ್ನ ದೃಷ್ಟಿಯಲ್ಲಿ ದಯೆ ತೋರಲಿ,” ಎಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು. ಆಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.
וַיַּשְׁכִּ֣מוּ בַבֹּ֗קֶר וַיִּֽשְׁתַּחֲווּ֙ לִפְנֵ֣י יְהוָ֔ה וַיָּשֻׁ֛בוּ וַיָּבֹ֥אוּ אֶל־בֵּיתָ֖ם הָרָמָ֑תָה וַיֵּ֤דַע אֶלְקָנָה֙ אֶת־חַנָּ֣ה אִשְׁתֹּ֔ו וַיּֽ͏ִזְכְּרֶ֖הָ יְהוָֽה׃ | 19 |
ಅವರು ಉದಯದಲ್ಲಿ ಎದ್ದು, ಯೆಹೋವ ದೇವರನ್ನು ಆರಾಧಿಸಿ, ಹಿಂದಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಸಂಗಮಿಸಲು, ಆಗ ಯೆಹೋವ ದೇವರು ಅವಳನ್ನು ಜ್ಞಾಪಕಮಾಡಿಕೊಂಡರು.
וַיְהִי֙ לִתְקֻפֹ֣ות הַיָּמִ֔ים וַתַּ֥הַר חַנָּ֖ה וַתֵּ֣לֶד בֵּ֑ן וַתִּקְרָ֤א אֶת־שְׁמֹו֙ שְׁמוּאֵ֔ל כִּ֥י מֵיְהוָ֖ה שְׁאִלְתִּֽיו׃ | 20 |
ಹನ್ನಳು ಗರ್ಭವತಿಯಾಗಿ, ಕಾಲವು ಪೂರ್ತಿಯಾದ ತರುವಾಯ ಮಗನನ್ನು ಹೆತ್ತು, “ನಾನು ಇವನಿಗಾಗಿ ಯೆಹೋವ ದೇವರನ್ನು ಬೇಡಿ ಪಡೆದುಕೊಂಡೆನು,” ಎಂದು ಹೇಳಿ ಅವನಿಗೆ, ಸಮುಯೇಲ ಎಂದು ಹೆಸರಿಟ್ಟಳು.
וַיַּ֛עַל הָאִ֥ישׁ אֶלְקָנָ֖ה וְכָל־בֵּיתֹ֑ו לִזְבֹּ֧חַ לַֽיהוָ֛ה אֶת־זֶ֥בַח הַיָּמִ֖ים וְאֶת־נִדְרֹֽו׃ | 21 |
ಎಲ್ಕಾನನು ಯೆಹೋವ ದೇವರಿಗೆ ಪ್ರತಿ ವರುಷದ ಬಲಿಯನ್ನೂ, ತನ್ನ ಹರಕೆಯನ್ನೂ ಸಲ್ಲಿಸುವುದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ,
וְחַנָּ֖ה לֹ֣א עָלָ֑תָה כִּֽי־אָמְרָ֣ה לְאִישָׁ֗הּ עַ֣ד יִגָּמֵ֤ל הַנַּ֙עַר֙ וַהֲבִאֹתִ֗יו וְנִרְאָה֙ אֶת־פְּנֵ֣י יְהוָ֔ה וְיָ֥שַׁב שָׁ֖ם עַד־עֹולָֽם׃ | 22 |
ಹನ್ನಳು ಹೋಗದೆ ತನ್ನ ಗಂಡನಿಗೆ, “ಮಗುವು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ನಾನು ಬರುವುದಿಲ್ಲ. ಅವನು ಯೆಹೋವ ದೇವರ ಸನ್ನಿಧಿಯ ದರ್ಶನಕ್ಕೂ ಅಲ್ಲಿ ಎಂದೆಂದಿಗೂ ಇರುವುದಕ್ಕೂ ನಾನು ಅವನನ್ನು ಆಮೇಲೆ ತೆಗೆದುಕೊಂಡು ಬರುವೆನು,” ಎಂದಳು.
וַיֹּ֣אמֶר לָהּ֩ אֶלְקָנָ֨ה אִישָׁ֜הּ עֲשִׂ֧י הַטֹּ֣וב בְּעֵינַ֗יִךְ שְׁבִי֙ עַד־גָּמְלֵ֣ךְ אֹתֹ֔ו אַ֛ךְ יָקֵ֥ם יְהוָ֖ה אֶת־דְּבָרֹ֑ו וַתֵּ֤שֶׁב הָֽאִשָּׁה֙ וַתֵּ֣ינֶק אֶת־בְּנָ֔הּ עַד־גָמְלָ֖הּ אֹתֹֽו׃ | 23 |
ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ, “ನೀನು ನಿನಗೆ ಒಳ್ಳೆಯದಾಗಿ ತೋರುವ ಹಾಗೆ ಮಾಡು. ಅವನು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ಕಾದುಕೊಂಡಿರು. ಯೆಹೋವ ದೇವರು ತಮ್ಮ ವಾಕ್ಯವನ್ನು ಪೂರೈಸಲಿ,” ಎಂದನು. ಹಾಗೆಯೇ ಅವಳು ನಿಂತು ತನ್ನ ಮಗುವು ಎದೆಹಾಲು ಬಿಡುವವರೆಗೂ ಅವನಿಗೆ ಎದೆಹಾಲು ಕೊಡುತ್ತಿದ್ದಳು.
וַתַּעֲלֵ֨הוּ עִמָּ֜הּ כַּאֲשֶׁ֣ר גְּמָלַ֗תּוּ בְּפָרִ֤ים שְׁלֹשָׁה֙ וְאֵיפָ֨ה אַחַ֥ת קֶ֙מַח֙ וְנֵ֣בֶל יַ֔יִן וַתְּבִאֵ֥הוּ בֵית־יְהוָ֖ה שִׁלֹ֑ו וְהַנַּ֖עַר נָֽעַר׃ | 24 |
ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು.
וַֽיִּשְׁחֲט֖וּ אֶת־הַפָּ֑ר וַיָּבִ֥יאוּ אֶת־הַנַּ֖עַר אֶל־עֵלִֽי׃ | 25 |
ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಹೋರಿಯನ್ನು ಸಮರ್ಪಣೆ ಮಾಡಿದ ತರುವಾಯ, ಮಗುವನ್ನು ಏಲಿಯ ಬಳಿಗೆ ತಂದರು.
וַתֹּ֙אמֶר֙ בִּ֣י אֲדֹנִ֔י חֵ֥י נַפְשְׁךָ֖ אֲדֹנִ֑י אֲנִ֣י הָאִשָּׁ֗ה הַנִּצֶּ֤בֶת עִמְּכָה֙ בָּזֶ֔ה לְהִתְפַּלֵּ֖ל אֶל־יְהוָֽה׃ | 26 |
“ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ಇಲ್ಲಿ ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.
אֶל־הַנַּ֥עַר הַזֶּ֖ה הִתְפַּלָּ֑לְתִּי וַיִּתֵּ֨ן יְהוָ֥ה לִי֙ אֶת־שְׁאֵ֣לָתִ֔י אֲשֶׁ֥ר שָׁאַ֖לְתִּי מֵעִמֹּֽו׃ | 27 |
ನಾನು ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದನ್ನು ಅವರು ನನಗೆ ಕೊಟ್ಟರು.
וְגַ֣ם אָנֹכִ֗י הִשְׁאִלְתִּ֙הוּ֙ לַֽיהוָ֔ה כָּל־הַיָּמִים֙ אֲשֶׁ֣ר הָיָ֔ה ה֥וּא שָׁא֖וּל לַֽיהוָ֑ה וַיִּשְׁתַּ֥חוּ שָׁ֖ם לַיהוָֽה׃ פ | 28 |
ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.