< 1 שְׁמוּאֵל 12 >
וַיֹּ֤אמֶר שְׁמוּאֵל֙ אֶל־כָּל־יִשְׂרָאֵ֔ל הִנֵּה֙ שָׁמַ֣עְתִּי בְקֹֽלְכֶ֔ם לְכֹ֥ל אֲשֶׁר־אֲמַרְתֶּ֖ם לִ֑י וָאַמְלִ֥יךְ עֲלֵיכֶ֖ם מֶֽלֶךְ׃ | 1 |
೧ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು.
וְעַתָּ֞ה הִנֵּ֥ה הַמֶּ֣לֶךְ ׀ מִתְהַלֵּ֣ךְ לִפְנֵיכֶ֗ם וַאֲנִי֙ זָקַ֣נְתִּי וָשַׂ֔בְתִּי וּבָנַ֖י הִנָּ֣ם אִתְּכֶ֑ם וַאֲנִי֙ הִתְהַלַּ֣כְתִּי לִפְנֵיכֶ֔ם מִנְּעֻרַ֖י עַד־הַיֹּ֥ום הַזֶּֽה׃ | 2 |
೨ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.
הִנְנִ֣י עֲנ֣וּ בִי֩ נֶ֨גֶד יְהוָ֜ה וְנֶ֣גֶד מְשִׁיחֹ֗ו אֶת־שֹׁור֩ ׀ מִ֨י לָקַ֜חְתִּי וַחֲמֹ֧ור מִ֣י לָקַ֗חְתִּי וְאֶת־מִ֤י עָשַׁ֙קְתִּי֙ אֶת־מִ֣י רַצֹּ֔ותִי וּמִיַּד־מִי֙ לָקַ֣חְתִּי כֹ֔פֶר וְאַעְלִ֥ים עֵינַ֖י בֹּ֑ו וְאָשִׁ֖יב לָכֶֽם׃ | 3 |
೩ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.
וַיֹּ֣אמְר֔וּ לֹ֥א עֲשַׁקְתָּ֖נוּ וְלֹ֣א רַצֹּותָ֑נוּ וְלֹֽא־לָקַ֥חְתָּ מִיַּד־אִ֖ישׁ מְאֽוּמָה׃ | 4 |
೪ಅವರು, “ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ, ನಮ್ಮಿಂದ ಏನಾದರೂ ಕಸಿದುಕೊಂಡದ್ದಾಗಲಿ ಇರುವುದಿಲ್ಲ” ಎಂದು ಉತ್ತರ ಕೊಟ್ಟರು.
וַיֹּ֨אמֶר אֲלֵיהֶ֜ם עֵ֧ד יְהוָ֣ה בָּכֶ֗ם וְעֵ֤ד מְשִׁיחֹו֙ הַיֹּ֣ום הַזֶּ֔ה כִּ֣י לֹ֧א מְצָאתֶ֛ם בְּיָדִ֖י מְא֑וּמָה וַיֹּ֖אמֶר עֵֽד׃ פ | 5 |
೫ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು.
וַיֹּ֥אמֶר שְׁמוּאֵ֖ל אֶל־הָעָ֑ם יְהוָ֗ה אֲשֶׁ֤ר עָשָׂה֙ אֶת־מֹשֶׁ֣ה וְאֶֽת־אַהֲרֹ֔ן וַאֲשֶׁ֧ר הֶעֱלָ֛ה אֶת־אֲבֹתֵיכֶ֖ם מֵאֶ֥רֶץ מִצְרָֽיִם׃ | 6 |
೬ಆಗ ಸಮುವೇಲನು, “ನಿಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರೆತರುವುದಕ್ಕಾಗಿ ಮೋಶೆ ಹಾಗೂ ಆರೋನರನ್ನು ನೇಮಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.
וְעַתָּ֗ה הִֽתְיַצְּב֛וּ וְאִשָּׁפְטָ֥ה אִתְּכֶ֖ם לִפְנֵ֣י יְהוָ֑ה אֵ֚ת כָּל־צִדְקֹ֣ות יְהוָ֔ה אֲשֶׁר־עָשָׂ֥ה אִתְּכֶ֖ם וְאֶת־אֲבֹותֵיכֶֽם׃ | 7 |
೭ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನೀತಿಕಾರ್ಯಗಳನ್ನು ಕುರಿತು ಆತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.
כַּֽאֲשֶׁר־בָּ֥א יַעֲקֹ֖ב מִצְרָ֑יִם וַיִּזְעֲק֤וּ אֲבֹֽותֵיכֶם֙ אֶל־יְהוָ֔ה וַיִּשְׁלַ֨ח יְהוָ֜ה אֶת־מֹשֶׁ֣ה וְאֶֽת־אַהֲרֹ֗ן וַיֹּוצִ֤יאוּ אֶת־אֲבֹֽתֵיכֶם֙ מִמִּצְרַ֔יִם וַיֹּשִׁב֖וּם בַּמָּקֹ֥ום הַזֶּֽה׃ | 8 |
೮ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.
וַֽיִּשְׁכְּח֖וּ אֶת־יְהוָ֣ה אֱלֹהֵיהֶ֑ם וַיִּמְכֹּ֣ר אֹתָ֡ם בְּיַ֣ד סִֽיסְרָא֩ שַׂר־צְבָ֨א חָצֹ֜ור וּבְיַד־פְּלִשְׁתִּ֗ים וּבְיַד֙ מֶ֣לֶךְ מֹואָ֔ב וַיִּֽלָּחֲמ֖וּ בָּֽם׃ | 9 |
೯ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.
וַיִּזְעֲק֤וּ אֶל־יְהוָה֙ וַיֹּאמֶר (וַיֹּאמְר֣וּ) חָטָ֔אנוּ כִּ֤י עָזַ֙בְנוּ֙ אֶת־יְהוָ֔ה וַנַּעֲבֹ֥ד אֶת־הַבְּעָלִ֖ים וְאֶת־הָעַשְׁתָּרֹ֑ות וְעַתָּ֗ה הַצִּילֵ֛נוּ מִיַּ֥ד אֹיְבֵ֖ינוּ וְנַעַבְדֶֽךָּ׃ | 10 |
೧೦ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.
וַיִּשְׁלַ֤ח יְהוָה֙ אֶת־יְרֻבַּ֣עַל וְאֶת־בְּדָ֔ן וְאֶת־יִפְתָּ֖ח וְאֶת־שְׁמוּאֵ֑ל וַיַּצֵּ֨ל אֶתְכֶ֜ם מִיַּ֤ד אֹֽיְבֵיכֶם֙ מִסָּבִ֔יב וַתֵּשְׁב֖וּ בֶּֽטַח׃ | 11 |
೧೧ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.
וַתִּרְא֗וּ כִּֽי־נָחָ֞שׁ מֶ֣לֶךְ בְּנֵֽי־עַמֹּון֮ בָּ֣א עֲלֵיכֶם֒ וַתֹּ֣אמְרוּ לִ֔י לֹ֕א כִּי־מֶ֖לֶךְ יִמְלֹ֣ךְ עָלֵ֑ינוּ וַיהוָ֥ה אֱלֹהֵיכֶ֖ם מַלְכְּכֶֽם׃ | 12 |
೧೨ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.
וְעַתָּ֗ה הִנֵּ֥ה הַמֶּ֛לֶךְ אֲשֶׁ֥ר בְּחַרְתֶּ֖ם אֲשֶׁ֣ר שְׁאֶלְתֶּ֑ם וְהִנֵּ֨ה נָתַ֧ן יְהוָ֛ה עֲלֵיכֶ֖ם מֶֽלֶךְ׃ | 13 |
೧೩ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.
אִם־תִּֽירְא֣וּ אֶת־יְהוָ֗ה וַעֲבַדְתֶּ֤ם אֹתֹו֙ וּשְׁמַעְתֶּ֣ם בְּקֹלֹ֔ו וְלֹ֥א תַמְר֖וּ אֶת־פִּ֣י יְהוָ֑ה וִהְיִתֶ֣ם גַּם־אַתֶּ֗ם וְגַם־הַמֶּ֙לֶךְ֙ אֲשֶׁ֣ר מָלַ֣ךְ עֲלֵיכֶ֔ם אַחַ֖ר יְהוָ֥ה אֱלֹהֵיכֶֽם׃ | 14 |
೧೪ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.
וְאִם־לֹ֤א תִשְׁמְעוּ֙ בְּקֹ֣ול יְהוָ֔ה וּמְרִיתֶ֖ם אֶת־פִּ֣י יְהוָ֑ה וְהָיְתָ֧ה יַד־יְהוָ֛ה בָּכֶ֖ם וּבַאֲבֹתֵיכֶֽם׃ | 15 |
೧೫ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.
גַּם־עַתָּה֙ הִתְיַצְּב֣וּ וּרְא֔וּ אֶת־הַדָּבָ֥ר הַגָּדֹ֖ול הַזֶּ֑ה אֲשֶׁ֣ר יְהוָ֔ה עֹשֶׂ֖ה לְעֵינֵיכֶֽם׃ | 16 |
೧೬ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.
הֲלֹ֤וא קְצִיר־חִטִּים֙ הַיֹּ֔ום אֶקְרָא֙ אֶל־יְהוָ֔ה וְיִתֵּ֥ן קֹלֹ֖ות וּמָטָ֑ר וּדְע֣וּ וּרְא֗וּ כִּֽי־רָעַתְכֶ֤ם רַבָּה֙ אֲשֶׁ֤ר עֲשִׂיתֶם֙ בְּעֵינֵ֣י יְהוָ֔ה לִשְׁאֹ֥ול לָכֶ֖ם מֶֽלֶךְ׃ ס | 17 |
೧೭ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.
וַיִּקְרָ֤א שְׁמוּאֵל֙ אֶל־יְהוָ֔ה וַיִּתֵּ֧ן יְהוָ֛ה קֹלֹ֥ת וּמָטָ֖ר בַּיֹּ֣ום הַה֑וּא וַיִּירָ֨א כָל־הָעָ֥ם מְאֹ֛ד אֶת־יְהוָ֖ה וְאֶת־שְׁמוּאֵֽל׃ | 18 |
೧೮ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು
וַיֹּאמְר֨וּ כָל־הָעָ֜ם אֶל־שְׁמוּאֵ֗ל הִתְפַּלֵּ֧ל בְּעַד־עֲבָדֶ֛יךָ אֶל־יְהוָ֥ה אֱלֹהֶ֖יךָ וְאַל־נָמ֑וּת כִּֽי־יָסַ֤פְנוּ עַל־כָּל־חַטֹּאתֵ֙ינוּ֙ רָעָ֔ה לִשְׁאֹ֥ל לָ֖נוּ מֶֽלֶךְ׃ ס | 19 |
೧೯ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು
וַיֹּ֨אמֶר שְׁמוּאֵ֤ל אֶל־הָעָם֙ אַל־תִּירָ֔אוּ אַתֶּ֣ם עֲשִׂיתֶ֔ם אֵ֥ת כָּל־הָרָעָ֖ה הַזֹּ֑את אַ֗ךְ אַל־תָּס֙וּרוּ֙ מֵאַחֲרֵ֣י יְהוָ֔ה וַעֲבַדְתֶּ֥ם אֶת־יְהוָ֖ה בְּכָל־לְבַבְכֶֽם׃ | 20 |
೨೦ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.
וְלֹ֖א תָּס֑וּרוּ כִּ֣י ׀ אַחֲרֵ֣י הַתֹּ֗הוּ אֲשֶׁ֧ר לֹֽא־יֹועִ֛ילוּ וְלֹ֥א יַצִּ֖ילוּ כִּי־תֹ֥הוּ הֵֽמָּה׃ | 21 |
೨೧ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.
כִּ֠י לֹֽא־יִטֹּ֤שׁ יְהוָה֙ אֶת־עַמֹּ֔ו בַּעֲב֖וּר שְׁמֹ֣ו הַגָּדֹ֑ול כִּ֚י הֹואִ֣יל יְהוָ֔ה לַעֲשֹׂ֥ות אֶתְכֶ֛ם לֹ֖ו לְעָֽם׃ | 22 |
೨೨ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.
גַּ֣ם אָנֹכִ֗י חָלִ֤ילָה לִּי֙ מֵחֲטֹ֣א לַֽיהוָ֔ה מֵחֲדֹ֖ל לְהִתְפַּלֵּ֣ל בַּעַדְכֶ֑ם וְהֹורֵיתִ֣י אֶתְכֶ֔ם בְּדֶ֥רֶךְ הַטֹּובָ֖ה וְהַיְשָׁרָֽה׃ | 23 |
೨೩ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.
אַ֣ךְ ׀ יְר֣אוּ אֶת־יְהוָ֗ה וַעֲבַדְתֶּ֥ם אֹתֹ֛ו בֶּאֱמֶ֖ת בְּכָל־לְבַבְכֶ֑ם כִּ֣י רְא֔וּ אֵ֥ת אֲשֶׁר־הִגְדִּ֖ל עִמָּכֶֽם׃ | 24 |
೨೪ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
וְאִם־הָרֵ֖עַ תָּרֵ֑עוּ גַּם־אַתֶּ֥ם גַּֽם־מַלְכְּכֶ֖ם תִּסָּפֽוּ׃ פ | 25 |
೨೫ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.