< 1 שְׁמוּאֵל 14 >
וַיְהִ֣י הַיֹּ֗ום וַיֹּ֨אמֶר יֹונָתָ֤ן בֶּן־שָׁאוּל֙ אֶל־הַנַּ֙עַר֙ נֹשֵׂ֣א כֵלָ֔יו לְכָ֗ה וְנַעְבְּרָה֙ אֶל־מַצַּ֣ב פְּלִשְׁתִּ֔ים אֲשֶׁ֖ר מֵעֵ֣בֶר הַלָּ֑ז וּלְאָבִ֖יו לֹ֥א הִגִּֽיד׃ | 1 |
೧ಒಂದು ದಿನ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.
וְשָׁא֗וּל יֹושֵׁב֙ בִּקְצֵ֣ה הַגִּבְעָ֔ה תַּ֥חַת הָרִמֹּ֖ון אֲשֶׁ֣ר בְּמִגְרֹ֑ון וְהָעָם֙ אֲשֶׁ֣ר עִמֹּ֔ו כְּשֵׁ֥שׁ מֵאֹ֖ות אִֽישׁ׃ | 2 |
೨ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ,
וַאֲחִיָּ֣ה בֶן־אֲחִט֡וּב אֲחִ֡י אִיכָבֹ֣וד ׀ בֶּן־פִּינְחָ֨ס בֶּן־עֵלִ֜י כֹּהֵ֧ן ׀ יְהוָ֛ה בְּשִׁלֹ֖ו נֹשֵׂ֣א אֵפֹ֑וד וְהָעָם֙ לֹ֣א יָדַ֔ע כִּ֥י הָלַ֖ךְ יֹונָתָֽן׃ | 3 |
೩ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.
וּבֵ֣ין הַֽמַּעְבְּרֹ֗ות אֲשֶׁ֨ר בִּקֵּ֤שׁ יֹֽונָתָן֙ לַֽעֲבֹר֙ עַל־מַצַּ֣ב פְּלִשְׁתִּ֔ים שֵׁן־הַסֶּ֤לַע מֵהָעֵ֙בֶר֙ מִזֶּ֔ה וְשֵׁן־הַסֶּ֥לַע מֵהָעֵ֖בֶר מִזֶּ֑ה וְשֵׁ֤ם הָֽאֶחָד֙ בֹּוצֵ֔ץ וְשֵׁ֥ם הָאֶחָ֖ד סֶֽנֶּה׃ | 4 |
೪ಅವನು ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೊರಟಾಗ, ಕಣಿವೆಯ ಮಾರ್ಗದ ಎರಡು ಕಡೆಗಳಲ್ಲಿ ಬೋಚೇಚ್, ಸೆನೆ ಎಂಬ ಎರಡು ಕಡಿದಾದ ಬಂಡೆಗಳು ಇದ್ದವು.
הַשֵּׁ֧ן הָאֶחָ֛ד מָצ֥וּק מִצָּפֹ֖ון מ֣וּל מִכְמָ֑שׂ וְהָאֶחָ֥ד מִנֶּ֖גֶב מ֥וּל גָּֽבַע׃ ס | 5 |
೫ಅದರಲ್ಲಿ ಒಂದು ಬಂಡೆ ಉತ್ತರದಿಕ್ಕಿಗೆ ಎತ್ತರವಾಗಿ ಮಿಕ್ಮಾಷಿಗೂ, ಮತ್ತೊಂದು ದಕ್ಷಿಣದಿಕ್ಕಿನ ಗೆಬಕ್ಕೆ ಎದುರಾಗಿದ್ದವು.
וַיֹּ֨אמֶר יְהֹונָתָ֜ן אֶל־הַנַּ֣עַר ׀ נֹשֵׂ֣א כֵלָ֗יו לְכָה֙ וְנַעְבְּרָ֗ה אֶל־מַצַּב֙ הָעֲרֵלִ֣ים הָאֵ֔לֶּה אוּלַ֛י יַעֲשֶׂ֥ה יְהוָ֖ה לָ֑נוּ כִּ֣י אֵ֤ין לַֽיהוָה֙ מַעְצֹ֔ור לְהֹושִׁ֥יעַ בְּרַ֖ב אֹ֥ו בִמְעָֽט׃ | 6 |
೬ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.
וַיֹּ֤אמֶר לֹו֙ נֹשֵׂ֣א כֵלָ֔יו עֲשֵׂ֖ה כָּל־אֲשֶׁ֣ר בִּלְבָבֶ֑ךָ נְטֵ֣ה לָ֔ךְ הִנְנִ֥י עִמְּךָ֖ כִּלְבָבֶֽךָ׃ ס | 7 |
೭ಆಯುಧಗಳನ್ನು ಹೊರುವ ಸೇವಕನು, “ನಿನ್ನ ಮನಸ್ಸಿನಂತೆ ಮಾಡು, ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ” ಅಂದನು.
וַיֹּ֙אמֶר֙ יְהֹ֣ונָתָ֔ן הִנֵּ֛ה אֲנַ֥חְנוּ עֹבְרִ֖ים אֶל־הָאֲנָשִׁ֑ים וְנִגְלִ֖ינוּ אֲלֵיהֶֽם׃ | 8 |
೮ಆಗ ಯೋನಾತಾನನು ಅವನಿಗೆ, “ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ.
אִם־כֹּ֤ה יֹֽאמְרוּ֙ אֵלֵ֔ינוּ דֹּ֕מּוּ עַד־הַגִּיעֵ֖נוּ אֲלֵיכֶ֑ם וְעָמַ֣דְנוּ תַחְתֵּ֔ינוּ וְלֹ֥א נַעֲלֶ֖ה אֲלֵיהֶֽם׃ | 9 |
೯‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ’ ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ.
וְאִם־כֹּ֨ה יֹאמְר֜וּ עֲל֤וּ עָלֵ֙ינוּ֙ וְעָלִ֔ינוּ כִּֽי־נְתָנָ֥ם יְהוָ֖ה בְּיָדֵ֑נוּ וְזֶה־לָּ֖נוּ הָאֹֽות׃ | 10 |
೧೦ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ’ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆ ಎಂಬುದಕ್ಕೆ ಇದೇ ಗುರುತು ಎಂದು ತಿಳಿದು ಮೇಲೆ ಹೋಗೋಣ” ಎಂದನು.
וַיִּגָּל֣וּ שְׁנֵיהֶ֔ם אֶל־מַצַּ֖ב פְּלִשְׁתִּ֑ים וַיֹּאמְר֣וּ פְלִשְׁתִּ֔ים הִנֵּ֤ה עִבְרִים֙ יֹֽצְאִ֔ים מִן־הַחֹרִ֖ים אֲשֶׁ֥ר הִתְחַבְּאוּ־שָֽׁם׃ | 11 |
೧೧ಇವರಿಬ್ಬರೂ ಫಿಲಿಷ್ಟಿಯರ ಕಾವಲು ದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ” ಎಂದು ತಮ್ಮೊಳಗೆ ಮಾತನಾಡಿಕೊಂಡರು.
וַיַּעֲנוּ֩ אַנְשֵׁ֨י הַמַּצָּבָ֜ה אֶת־יֹונָתָ֣ן ׀ וְאֶת־נֹשֵׂ֣א כֵלָ֗יו וַיֹּֽאמְרוּ֙ עֲל֣וּ אֵלֵ֔ינוּ וְנֹודִ֥יעָה אֶתְכֶ֖ם דָּבָ֑ר פ וַיֹּ֨אמֶר יֹונָתָ֜ן אֶל־נֹשֵׂ֤א כֵלָיו֙ עֲלֵ֣ה אַחֲרַ֔י כִּֽי־נְתָנָ֥ם יְהוָ֖ה בְּיַ֥ד יִשְׂרָאֵֽל׃ | 12 |
೧೨ಅವರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ತೋರಿಸಿಬೇಕಾದ ಕಾರ್ಯ ಬಂದಿದೆ” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಿದನು.
וַיַּ֣עַל יֹונָתָ֗ן עַל־יָדָיו֙ וְעַל־רַגְלָ֔יו וְנֹשֵׂ֥א כֵלָ֖יו אַחֲרָ֑יו וַֽיִּפְּלוּ֙ לִפְנֵ֣י יֹונָתָ֔ן וְנֹשֵׂ֥א כֵלָ֖יו מְמֹותֵ֥ת אַחֲרָֽיו׃ | 13 |
೧೩ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು.
וַתְּהִ֞י הַמַּכָּ֣ה הָרִאשֹׁנָ֗ה אֲשֶׁ֨ר הִכָּ֧ה יֹונָתָ֛ן וְנֹשֵׂ֥א כֵלָ֖יו כְּעֶשְׂרִ֣ים אִ֑ישׁ כְּבַחֲצִ֥י מַעֲנָ֖ה צֶ֥מֶד שָׂדֶֽה׃ | 14 |
೧೪ಯೋನಾತಾನನು ಅವನ ಸೇವಕನು ಮಾಡಿದ ಮೊದಲ ದಾಳಿಯಲ್ಲಿ ಸುಮಾರು ಇಪ್ಪತ್ತು ಜನರು ಅರ್ಧ ಎಕರೆ ಭೂಮಿಯಲ್ಲಿ ಸತ್ತುಹೋದರು.
וַתְּהִי֩ חֲרָדָ֨ה בַמַּחֲנֶ֤ה בַשָּׂדֶה֙ וּבְכָל־הָעָ֔ם הַמַּצָּב֙ וְהַמַּשְׁחִ֔ית חָרְד֖וּ גַּם־הֵ֑מָּה וַתִּרְגַּ֣ז הָאָ֔רֶץ וַתְּהִ֖י לְחֶרְדַּ֥ת אֱלֹהִֽים׃ | 15 |
೧೫ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.
וַיִּרְא֤וּ הַצֹּפִים֙ לְשָׁא֔וּל בְּגִבְעַ֖ת בִּנְיָמִ֑ן וְהִנֵּ֧ה הֶהָמֹ֛ון נָמֹ֖וג וַיֵּ֥לֶךְ וַהֲלֹֽם׃ פ | 16 |
೧೬ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.
וַיֹּ֣אמֶר שָׁא֗וּל לָעָם֙ אֲשֶׁ֣ר אִתֹּ֔ו פִּקְדוּ־נָ֣א וּרְא֔וּ מִ֖י הָלַ֣ךְ מֵעִמָּ֑נוּ וַֽיִּפְקְד֔וּ וְהִנֵּ֛ה אֵ֥ין יֹונָתָ֖ן וְנֹשֵׂ֥א כֵלָֽיו׃ | 17 |
೧೭ಸೌಲನು ತನ್ನ ಜೊತೆಯಲ್ಲಿದ್ದವರಿಗೆ, “ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿರಿ” ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡಿದಾಗ ಯೋನಾತಾನನೂ, ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲವೆಂದು ತಿಳಿದುಬಂದಿತು.
וַיֹּ֤אמֶר שָׁאוּל֙ לַֽאֲחִיָּ֔ה הַגִּ֖ישָׁה אֲרֹ֣ון הָאֱלֹהִ֑ים כִּֽי־הָיָ֞ה אֲרֹ֧ון הָאֱלֹהִ֛ים בַּיֹּ֥ום הַה֖וּא וּבְנֵ֥י יִשְׂרָאֵֽל׃ | 18 |
೧೮ಅನಂತರ ಸೌಲನು ಅಹೀಯನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.
וַיְהִ֗י עַ֣ד דִּבֶּ֤ר שָׁאוּל֙ אֶל־הַכֹּהֵ֔ן וְהֶהָמֹ֗ון אֲשֶׁר֙ בְּמַחֲנֵ֣ה פְלִשְׁתִּ֔ים וַיֵּ֥לֶךְ הָלֹ֖וךְ וָרָ֑ב פ וַיֹּ֧אמֶר שָׁא֛וּל אֶל־הַכֹּהֵ֖ן אֱסֹ֥ף יָדֶֽךָ׃ | 19 |
೧೯ಸೌಲನು ಯಾಜಕನೊಡನೆ ಮಾತನಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆಗ ಸೌಲನು ಯಾಜಕನಿಗೆ, “ನಿನ್ನ ಕೈಯನ್ನು ತೆಗೆ” ಎಂದು ಹೇಳಿ
וַיִּזָּעֵ֣ק שָׁא֗וּל וְכָל־הָעָם֙ אֲשֶׁ֣ר אִתֹּ֔ו וַיָּבֹ֖אוּ עַד־הַמִּלְחָמָ֑ה וְהִנֵּ֨ה הָיְתָ֜ה חֶ֤רֶב אִישׁ֙ בְּרֵעֵ֔הוּ מְהוּמָ֖ה גְּדֹולָ֥ה מְאֹֽד׃ | 20 |
೨೦ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು.
וְהָעִבְרִ֗ים הָי֤וּ לַפְּלִשְׁתִּים֙ כְּאֶתְמֹ֣ול שִׁלְשֹׁ֔ום אֲשֶׁ֨ר עָל֥וּ עִמָּ֛ם בַּֽמַּחֲנֶ֖ה סָבִ֑יב וְגַם־הֵ֗מָּה לִֽהְיֹות֙ עִם־יִשְׂרָאֵ֔ל אֲשֶׁ֥ר עִם־שָׁא֖וּל וְיֹונָתָֽן׃ | 21 |
೨೧ಇದಲ್ಲದೆ ಮೊದಲಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು, ಸೌಲ ಮತ್ತು ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲರನ್ನು ಕೂಡಿಕೊಂಡರು.
וְכֹל֩ אִ֨ישׁ יִשְׂרָאֵ֜ל הַמִּֽתְחַבְּאִ֤ים בְּהַר־אֶפְרַ֙יִם֙ שָֽׁמְע֔וּ כִּֽי־נָ֖סוּ פְּלִשְׁתִּ֑ים וַֽיַּדְבְּק֥וּ גַם־הֵ֛מָּה אַחֲרֵיהֶ֖ם בַּמִּלְחָמָֽה׃ | 22 |
೨೨ಎಫ್ರಾಯೀಮಿನ ಪರ್ವತ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.
וַיֹּ֧ושַׁע יְהוָ֛ה בַּיֹּ֥ום הַה֖וּא אֶת־יִשְׂרָאֵ֑ל וְהַ֨מִּלְחָמָ֔ה עָבְרָ֖ה אֶת־בֵּ֥ית אָֽוֶן׃ | 23 |
೨೩ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು.
וְאִֽישׁ־יִשְׂרָאֵ֥ל נִגַּ֖שׂ בַּיֹּ֣ום הַה֑וּא וַיֹּאֶל֩ שָׁא֨וּל אֶת־הָעָ֜ם לֵאמֹ֗ר אָר֣וּר הָ֠אִישׁ אֲשֶׁר־יֹ֨אכַל לֶ֜חֶם עַד־הָעֶ֗רֶב וְנִקַּמְתִּי֙ מֵאֹ֣יְבַ֔י וְלֹֽא טָעַ֥ם כָּל־הָעָ֖ם לָֽחֶם׃ ס | 24 |
೨೪ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.
וְכָל־הָאָ֖רֶץ בָּ֣אוּ בַיָּ֑עַר וַיְהִ֥י דְבַ֖שׁ עַל־פְּנֵ֥י הַשָּׂדֶֽה׃ | 25 |
೨೫ಸೈನ್ಯದವರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.
וַיָּבֹ֤א הָעָם֙ אֶל־הַיַּ֔עַר וְהִנֵּ֖ה הֵ֣לֶךְ דְּבָ֑שׁ וְאֵין־מַשִּׂ֤יג יָדֹו֙ אֶל־פִּ֔יו כִּֽי־יָרֵ֥א הָעָ֖ם אֶת־הַשְּׁבֻעָֽה׃ | 26 |
೨೬ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ.
וְיֹונָתָ֣ן לֹֽא־שָׁמַ֗ע בְּהַשְׁבִּ֣יעַ אָבִיו֮ אֶת־הָעָם֒ וַיִּשְׁלַ֗ח אֶת־קְצֵ֤ה הַמַּטֶּה֙ אֲשֶׁ֣ר בְּיָדֹ֔ו וַיִּטְבֹּ֥ל אֹותָ֖הּ בְּיַעְרַ֣ת הַדְּבָ֑שׁ וַיָּ֤שֶׁב יָדֹו֙ אֶל־פִּ֔יו וַתָּרֹאנָה (וַתָּאֹ֖רְנָה) עֵינָֽיו׃ | 27 |
೨೭ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.
וַיַּעַן֩ אִ֨ישׁ מֵֽהָעָ֜ם וַיֹּ֗אמֶר הַשְׁבֵּעַ֩ הִשְׁבִּ֨יעַ אָבִ֤יךָ אֶת־הָעָם֙ לֵאמֹ֔ר אָר֥וּר הָאִ֛ישׁ אֲשֶׁר־יֹ֥אכַל לֶ֖חֶם הַיֹּ֑ום וַיָּ֖עַף הָעָֽם׃ | 28 |
೨೮ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.
וַיֹּ֙אמֶר֙ יֹֽונָתָ֔ן עָכַ֥ר אָבִ֖י אֶת־הָאָ֑רֶץ רְאוּ־נָא֙ כִּֽי־אֹ֣רוּ עֵינַ֔י כִּ֣י טָעַ֔מְתִּי מְעַ֖ט דְּבַ֥שׁ הַזֶּֽה׃ | 29 |
೨೯ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.
אַ֗ף כִּ֡י לוּא֩ אָכֹ֨ל אָכַ֤ל הַיֹּום֙ הָעָ֔ם מִשְּׁלַ֥ל אֹיְבָ֖יו אֲשֶׁ֣ר מָצָ֑א כִּ֥י עַתָּ֛ה לֹֽא־רָבְתָ֥ה מַכָּ֖ה בַּפְּלִשְׁתִּֽים׃ | 30 |
೩೦ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ” ಅಂದನು.
וַיַּכּ֞וּ בַּיֹּ֤ום הַהוּא֙ בַּפְּלִשְׁתִּ֔ים מִמִּכְמָ֖שׂ אַיָּלֹ֑נָה וַיָּ֥עַף הָעָ֖ם מְאֹֽד׃ | 31 |
೩೧ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.
וַיַּעַשׂ (וַיַּ֤עַט) הָעָם֙ אֶל־שָׁלָל (הַשָּׁלָ֔ל) וַיִּקְח֨וּ צֹ֧אן וּבָקָ֛ר וּבְנֵ֥י בָקָ֖ר וַיִּשְׁחֲטוּ־אָ֑רְצָה וַיֹּ֥אכַל הָעָ֖ם עַל־הַדָּֽם׃ | 32 |
೩೨ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸವನ್ನು ರಕ್ತದೊಡನೆ ತಿಂದರು.
וַיַּגִּ֤ידוּ לְשָׁאוּל֙ לֵאמֹ֔ר הִנֵּ֥ה הָעָ֛ם חֹטִ֥אים לַֽיהוָ֖ה לֶאֱכֹ֣ל עַל־הַדָּ֑ם וַיֹּ֣אמֶר בְּגַדְתֶּ֔ם גֹּֽלּוּ־אֵלַ֥י הַיֹּ֖ום אֶ֥בֶן גְּדֹולָֽה׃ | 33 |
೩೩ಆಗ ಕೆಲವರು ಸೌಲನಿಗೆ, “ನೋಡು, ಜನರು ರಕ್ತದೊಂದಿಗೆ ಊಟಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡುತ್ತಾರೆ” ಎಂದು ತಿಳಿಸಿದರು. ಸೌಲನು ಅವರಿಗೆ, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲೊಂದನ್ನು ಹೊರಳಿಸಿ ತಂದಿಟ್ಟು;
וַיֹּ֣אמֶר שָׁא֣וּל פֻּ֣צוּ בָעָ֡ם וַאֲמַרְתֶּ֣ם לָהֶ֡ם הַגִּ֣ישׁוּ אֵלַי֩ אִ֨ישׁ שֹׁורֹ֜ו וְאִ֣ישׁ שְׂיֵ֗הוּ וּשְׁחַטְתֶּ֤ם בָּזֶה֙ וַאֲכַלְתֶּ֔ם וְלֹֽא־תֶחֶטְא֥וּ לַֽיהוָ֖ה לֶאֱכֹ֣ל אֶל־הַדָּ֑ם וַיַּגִּ֨שׁוּ כָל־הָעָ֜ם אִ֣ישׁ שֹׁורֹ֧ו בְיָ֛דֹו הַלַּ֖יְלָה וַיִּשְׁחֲטוּ־שָֽׁם׃ | 34 |
೩೪ಜನರ ಬಳಿಗೆ ಹೋಗಿ ಅವರಿಗೆ, ‘ರಕ್ತದೊಂದಿಗೆ ಭೋಜನ ಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಬೇಡಿರಿ; ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿ ತಂದು, ಕೊಂದು ತಿನ್ನಬೇಕೆಂದು ಹೇಳಿರಿ’” ಅಂದನು. ಹಾಗೆಯೇ ಜನರೆಲ್ಲರೂ ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.
וַיִּ֧בֶן שָׁא֛וּל מִזְבֵּ֖חַ לַֽיהוָ֑ה אֹתֹ֣ו הֵחֵ֔ל לִבְנֹ֥ות מִזְבֵּ֖חַ לַֽיהוָֽה׃ פ | 35 |
೩೫ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.
וַיֹּ֣אמֶר שָׁא֡וּל נֵרְדָ֣ה אַחֲרֵי֩ פְלִשְׁתִּ֨ים ׀ לַ֜יְלָה וְֽנָבֹ֥זָה בָהֶ֣ם ׀ עַד־אֹ֣ור הַבֹּ֗קֶר וְלֹֽא־נַשְׁאֵ֤ר בָּהֶם֙ אִ֔ישׁ וַיֹּ֣אמְר֔וּ כָּל־הַטֹּ֥וב בְּעֵינֶ֖יךָ עֲשֵׂ֑ה ס וַיֹּ֙אמֶר֙ הַכֹּהֵ֔ן נִקְרְבָ֥ה הֲלֹ֖ם אֶל־הָאֱלֹהִֽים׃ | 36 |
೩೬ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು.
וַיִּשְׁאַ֤ל שָׁאוּל֙ בֵּֽאלֹהִ֔ים הַֽאֵרֵד֙ אַחֲרֵ֣י פְלִשְׁתִּ֔ים הֲתִתְּנֵ֖ם בְּיַ֣ד יִשְׂרָאֵ֑ל וְלֹ֥א עָנָ֖הוּ בַּיֹּ֥ום הַהֽוּא׃ | 37 |
೩೭ಆಗ ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿಕೊಂಡರೂ ದೇವರು ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ.
וַיֹּ֣אמֶר שָׁא֔וּל גֹּ֣שֽׁוּ הֲלֹ֔ם כֹּ֖ל פִּנֹּ֣ות הָעָ֑ם וּדְע֣וּ וּרְא֔וּ בַּמָּ֗ה הָֽיְתָ֛ה הַחַטָּ֥את הַזֹּ֖את הַיֹּֽום׃ | 38 |
೩೮ಆಗ ಸೌಲನು ಪ್ರಜೆಗಳ ಮುಖಂಡರಿಗೆ, “ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ.
כִּ֣י חַי־יְהוָ֗ה הַמֹּושִׁ֙יעַ֙ אֶת־יִשְׂרָאֵ֔ל כִּ֧י אִם־יֶשְׁנֹ֛ו בְּיֹונָתָ֥ן בְּנִ֖י כִּ֣י מֹ֣ות יָמ֑וּת וְאֵ֥ין עֹנֵ֖הוּ מִכָּל־הָעָֽם׃ | 39 |
೩೯ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು” ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು.
וַיֹּ֣אמֶר אֶל־כָּל־יִשְׂרָאֵ֗ל אַתֶּם֙ תִּֽהְיוּ֙ לְעֵ֣בֶר אֶחָ֔ד וַֽאֲנִי֙ וְיֹונָתָ֣ן בְּנִ֔י נִהְיֶ֖ה לְעֵ֣בֶר אֶחָ֑ד וַיֹּאמְר֤וּ הָעָם֙ אֶל־שָׁא֔וּל הַטֹּ֥וב בְּעֵינֶ֖יךָ עֲשֵֽׂה׃ ס | 40 |
೪೦ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು” ಅನ್ನಲು ಅವರು, “ನಿನ್ನ ಇಷ್ಟದಂತೆ ಆಗಲಿ” ಅಂದರು.
וַיֹּ֣אמֶר שָׁא֗וּל אֶל־יְהוָ֛ה אֱלֹהֵ֥י יִשְׂרָאֵ֖ל הָ֣בָה תָמִ֑ים וַיִּלָּכֵ֧ד יֹונָתָ֛ן וְשָׁא֖וּל וְהָעָ֥ם יָצָֽאוּ׃ | 41 |
೪೧ಅನಂತರ ಸೌಲನು, “ಇಸ್ರಾಯೇಲ್ಯರ ದೇವರೇ, ಸತ್ಯವನ್ನು ತಿಳಿಸು” ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಾಗ ಅದು ಅವನಿಗೂ ಯೋನಾತಾನನಿಗೂ ಬಂದಿತು, ಜನರು ಪಾರಾದರು.
וַיֹּ֣אמֶר שָׁא֔וּל הַפִּ֕ילוּ בֵּינִ֕י וּבֵ֖ין יֹונָתָ֣ן בְּנִ֑י וַיִּלָּכֵ֖ד יֹונָתָֽן׃ | 42 |
೪೨ಸೌಲನು ಪುನಃ, “ನಮ್ಮಿಬ್ಬರೊಳಗೆ ಚೀಟು ಹಾಕಿರಿ” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು.
וַיֹּ֤אמֶר שָׁאוּל֙ אֶל־יֹ֣ונָתָ֔ן הַגִּ֥ידָה לִּ֖י מֶ֣ה עָשִׂ֑יתָה וַיַּגֶּד־לֹ֣ו יֹונָתָ֗ן וַיֹּאמֶר֩ טָעֹ֨ם טָעַ֜מְתִּי בִּקְצֵ֨ה הַמַּטֶּ֧ה אֲשֶׁר־בְּיָדִ֛י מְעַ֥ט דְּבַ֖שׁ הִנְנִ֥י אָמֽוּת׃ | 43 |
೪೩ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದಿ, ಹೇಳು” ಎಂದು ಕೇಳಲು ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ನಾನು ಸಾಯುವುದಕ್ಕೆ ಸಿದ್ಧನಾಗಿದ್ದೇನೆ” ಎಂದು ಉತ್ತರಕೊಟ್ಟನು.
וַיֹּ֣אמֶר שָׁא֔וּל כֹּֽה־יַעֲשֶׂ֥ה אֱלֹהִ֖ים וְכֹ֣ה יֹוסִ֑ף כִּֽי־מֹ֥ות תָּמ֖וּת יֹונָתָֽן׃ | 44 |
೪೪ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.
וַיֹּ֨אמֶר הָעָ֜ם אֶל־שָׁא֗וּל הֲֽיֹונָתָ֤ן ׀ יָמוּת֙ אֲשֶׁ֣ר עָ֠שָׂה הַיְשׁוּעָ֨ה הַגְּדֹולָ֣ה הַזֹּאת֮ בְּיִשְׂרָאֵל֒ חָלִ֗ילָה חַי־יְהוָה֙ אִם־יִפֹּ֞ל מִשַּׂעֲרַ֤ת רֹאשֹׁו֙ אַ֔רְצָה כִּֽי־עִם־אֱלֹהִ֥ים עָשָׂ֖ה הַיֹּ֣ום הַזֶּ֑ה וַיִּפְדּ֥וּ הָעָ֛ם אֶת־יֹונָתָ֖ן וְלֹא־מֵֽת׃ ס | 45 |
೪೫ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.
וַיַּ֣עַל שָׁא֔וּל מֵאַחֲרֵ֖י פְּלִשְׁתִּ֑ים וּפְלִשְׁתִּ֖ים הָלְכ֥וּ לִמְקֹומָֽם׃ | 46 |
೪೬ಸೌಲನು ಆ ಮೇಲೆ ಫಿಲಿಷ್ಟಿಯರನ್ನು ಹಿಂದಟ್ಟದೆ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತ್ಯಕ್ಕೆ ಹೋದರು.
וְשָׁא֛וּל לָכַ֥ד הַמְּלוּכָ֖ה עַל־יִשְׂרָאֵ֑ל וַיִּלָּ֣חֶם סָבִ֣יב ׀ בְּֽכָל־אֹיְבָ֡יו בְּמֹואָ֣ב ׀ וּבִבְנֵי־עַמֹּ֨ון וּבֶאֱדֹ֜ום וּבְמַלְכֵ֤י צֹובָה֙ וּבַפְּלִשְׁתִּ֔ים וּבְכֹ֥ל אֲשֶׁר־יִפְנֶ֖ה יַרְשִֽׁיעַ׃ | 47 |
೪೭ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.
וַיַּ֣עַשׂ חַ֔יִל וַיַּ֖ךְ אֶת־עֲמָלֵ֑ק וַיַּצֵּ֥ל אֶת־יִשְׂרָאֵ֖ל מִיַּ֥ד שֹׁסֵֽהוּ׃ ס | 48 |
೪೮ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು.
וַיִּֽהְיוּ֙ בְּנֵ֣י שָׁא֔וּל יֹונָתָ֥ן וְיִשְׁוִ֖י וּמַלְכִּי־שׁ֑וּעַ וְשֵׁם֙ שְׁתֵּ֣י בְנֹתָ֔יו שֵׁ֤ם הַבְּכִירָה֙ מֵרַ֔ב וְשֵׁ֥ם הַקְּטַנָּ֖ה מִיכַֽל׃ | 49 |
೪೯ಸೌಲನ ಗಂಡು ಮಕ್ಕಳು - ಯೋನಾತಾನ, ಇಷ್ವಿ ಮತ್ತು ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್ ಮತ್ತು ಮೀಕಲ್.
וְשֵׁם֙ אֵ֣שֶׁת שָׁא֔וּל אֲחִינֹ֖עַם בַּת־אֲחִימָ֑עַץ וְשֵׁ֤ם שַׂר־צְבָאֹו֙ אֲבִינֵ֔ר בֶּן־נֵ֖ר דֹּ֥וד שָׁאֽוּל׃ | 50 |
೫೦ಅಹೀಮಾಚನ ಮಗಳಾದ ಅಹೀನೋವಮಳು ಸೌಲನ ಹೆಂಡತಿ. ನೇರನ ಮಗನಾದ ಅಬ್ನೇರನು ಅವನ ಸೇನಾಪತಿ. ನೇರನು ಸೌಲನು ಚಿಕ್ಕಪ್ಪನು.
וְקִ֧ישׁ אֲבִֽי־שָׁא֛וּל וְנֵ֥ר אֲבִֽי־אַבְנֵ֖ר בֶּן־אֲבִיאֵֽל׃ ס | 51 |
೫೧ಸೌಲನ ತಂದೆಯಾದ ಕೀಷನೂ, ಅಬ್ನೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು.
וַתְּהִ֤י הַמִּלְחָמָה֙ חֲזָקָ֣ה עַל־פְּלִשְׁתִּ֔ים כֹּ֖ל יְמֵ֣י שָׁא֑וּל וְרָאָ֨ה שָׁא֜וּל כָּל־אִ֤ישׁ גִּבֹּור֙ וְכָל־בֶּן־חַ֔יִל וַיַּאַסְפֵ֖הוּ אֵלָֽיו׃ ס | 52 |
೫೨ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧವಾಗುತ್ತಿದ್ದುದ್ದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ, ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.