< 2 דִּבְרֵי הַיָּמִים 24 >
בֶּן־שֶׁ֤בַע שָׁנִים֙ יֹאָ֣שׁ בְּמָלְכֹ֔ו וְאַרְבָּעִ֣ים שָׁנָ֔ה מָלַ֖ךְ בִּֽירוּשָׁלָ֑͏ִם וְשֵׁ֣ם אִמֹּ֔ו צִבְיָ֖ה מִבְּאֵ֥ר שָֽׁבַע׃ | 1 |
೧ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
וַיַּ֧עַשׂ יֹואָ֛שׁ הַיָּשָׁ֖ר בְּעֵינֵ֣י יְהוָ֑ה כָּל־יְמֵ֖י יְהֹויָדָ֥ע הַכֹּהֵֽן׃ | 2 |
೨ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.
וַיִּשָּׂא־לֹ֥ו יְהֹויָדָ֖ע נָשִׁ֣ים שְׁתָּ֑יִם וַיֹּ֖ולֶד בָּנִ֥ים וּבָנֹֽות׃ | 3 |
೩ಯೆಹೋಯಾದನು, ಯೆಹೋವಾಷನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.
וַיְהִ֖י אַחֲרֵיכֵ֑ן הָיָה֙ עִם־לֵ֣ב יֹואָ֔שׁ לְחַדֵּ֖שׁ אֶת־בֵּ֥ית יְהוָֽה׃ | 4 |
೪ಕ್ರಮೇಣ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡುವುದಕ್ಕೆ ಮನಸ್ಸು ಮಾಡಿದನು.
וַיִּקְבֹּץ֮ אֶת־הַכֹּהֲנִ֣ים וְהַלְוִיִּם֒ וַיֹּ֣אמֶר לָהֶ֡ם צְא֣וּ לְעָרֵ֪י יְהוּדָ֟ה וְקִבְצוּ֩ מִכָּל־יִשְׂרָאֵ֨ל כֶּ֜סֶף לְחַזֵּ֣ק ׀ אֶת־בֵּ֣ית אֱלֹֽהֵיכֶ֗ם מִדֵּ֤י שָׁנָה֙ בְּשָׁנָ֔ה וְאַתֶּ֖ם תְּמַהֲר֣וּ לַדָּבָ֑ר וְלֹ֥א מִֽהֲר֖וּ הַֽלְוִיִּֽם׃ | 5 |
೫ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, “ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಆಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ” ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ.
וַיִּקְרָ֣א הַמֶּלֶךְ֮ לִֽיהֹויָדָ֣ע הָרֹאשׁ֒ וַיֹּ֣אמֶר לֹ֗ו מַדּ֙וּעַ֙ לֹֽא־דָרַ֣שְׁתָּ עַל־הַלְוִיִּ֔ם לְהָבִ֞יא מִֽיהוּדָ֣ה וּמִֽירוּשָׁלַ֗͏ִם אֶת־מַשְׂאַת֙ מֹשֶׁ֣ה עֶֽבֶד־יְהוָ֔ה וְהַקָּהָ֖ל לְיִשְׂרָאֵ֑ל לְאֹ֖הֶל הָעֵדֽוּת׃ | 6 |
೬ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
כִּ֤י עֲתַלְיָ֙הוּ֙ הַמִּרְשַׁ֔עַת בָּנֶ֥יהָ פָרְצ֖וּ אֶת־בֵּ֣ית הָאֱלֹהִ֑ים וְגַם֙ כָּל־קָדְשֵׁ֣י בֵית־יְהוָ֔ה עָשׂ֖וּ לַבְּעָלִֽים׃ | 7 |
೭ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು.
וַיֹּ֣אמֶר הַמֶּ֔לֶךְ וַֽיַּעֲשׂ֖וּ אֲרֹ֣ון אֶחָ֑ד וַֽיִּתְּנֻ֛הוּ בְּשַׁ֥עַר בֵּית־יְהוָ֖ה חֽוּצָה׃ | 8 |
೮ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು.
וַיִּתְּנוּ־קֹ֞ול בִּֽיהוּדָ֣ה וּבִֽירוּשָׁלַ֗͏ִם לְהָבִ֤יא לַֽיהוָה֙ מַשְׂאַ֞ת מֹשֶׁ֧ה עֶֽבֶד־הָאֱלֹהִ֛ים עַל־יִשְׂרָאֵ֖ל בַּמִּדְבָּֽר׃ | 9 |
೯ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.
וַיִּשְׂמְח֥וּ כָל־הַשָּׂרִ֖ים וְכָל־הָעָ֑ם וַיָּבִ֛יאוּ וַיַּשְׁלִ֥יכוּ לָאָרֹ֖ון עַד־לְכַלֵּֽה׃ | 10 |
೧೦ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.
וַיְהִ֡י בְּעֵת֩ יָבִ֨יא אֶת־הֽ͏ָאָרֹ֜ון אֶל־פְּקֻדַּ֣ת הַמֶּלֶךְ֮ בְּיַ֣ד הַלְוִיִּם֒ וְכִרְאֹותָ֞ם כִּי־רַ֣ב הַכֶּ֗סֶף וּבָ֨א סֹופֵ֤ר הַמֶּ֙לֶךְ֙ וּפְקִיד֙ כֹּהֵ֣ן הָרֹ֔אשׁ וִיעָ֙רוּ֙ אֶת־הָ֣אָרֹ֔ון וְיִשָּׂאֻ֖הוּ וִֽישִׁיבֻ֣הוּ אֶל־מְקֹמֹ֑ו כֹּ֤ה עָשׂוּ֙ לְיֹ֣ום ׀ בְּיֹ֔ום וַיַּֽאַסְפוּ־כֶ֖סֶף לָרֹֽב׃ | 11 |
೧೧ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡು ಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು, ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಲೇಖಕನೂ, ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದನ್ನು ಅದರ ಸ್ಥಳದಲ್ಲಿಡುತ್ತಿದ್ದರು.
וַיִּתְּנֵ֨הוּ הַמֶּ֜לֶךְ וִֽיהֹויָדָ֗ע אֶל־עֹושֵׂה֙ מְלֶ֙אכֶת֙ עֲבֹודַ֣ת בֵּית־יְהוָ֔ה וַיִּֽהְי֤וּ שֹׂכְרִים֙ חֹצְבִ֣ים וְחָרָשִׁ֔ים לְחַדֵּ֖שׁ בֵּ֣ית יְהוָ֑ה וְ֠גַם לְחָרָשֵׁ֤י בַרְזֶל֙ וּנְחֹ֔שֶׁת לְחַזֵּ֖ק אֶת־בֵּ֥ית יְהוָֽה׃ | 12 |
೧೨ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.
וַֽיַּעֲשׂוּ֙ עֹשֵׂ֣י הַמְּלָאכָ֔ה וַתַּ֧עַל אֲרוּכָ֛ה לַמְּלָאכָ֖ה בְּיָדָ֑ם וַֽיַּעֲמִ֜ידוּ אֶת־בֵּ֧ית הָֽאֱלֹהִ֛ים עַל־מַתְכֻּנְתֹּ֖ו וַֽיְאַמְּצֻֽהוּ׃ | 13 |
೧೩ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.
וּֽכְכַלֹּותָ֡ם הֵבִ֣יאוּ לִפְנֵי֩ הַמֶּ֨לֶךְ וִֽיהֹויָדָ֜ע אֶת־שְׁאָ֣ר הַכֶּ֗סֶף וַיַּעֲשֵׂ֨הוּ כֵלִ֤ים לְבֵית־יְהוָה֙ כְּלֵ֣י שָׁרֵ֔ת וְהַעֲלֹ֣ות וְכַפֹּ֔ות וּכְלֵ֥י זָהָ֖ב וָכָ֑סֶף וַ֠יִּֽהְיוּ מַעֲלִ֨ים עֹלֹ֤ות בְּבֵית־יְהוָה֙ תָּמִ֔יד כֹּ֖ל יְמֵ֥י יְהֹויָדָֽע׃ פ | 14 |
೧೪ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.
וַיִּזְקַ֧ן יְהֹויָדָ֛ע וַיִּשְׂבַּ֥ע יָמִ֖ים וַיָּמֹ֑ת בֶּן־מֵאָ֧ה וּשְׁלֹשִׁ֛ים שָׁנָ֖ה בְּמֹותֹֽו׃ | 15 |
೧೫ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.
וַיִּקְבְּרֻ֥הוּ בְעִיר־דָּוִ֖יד עִם־הַמְּלָכִ֑ים כִּֽי־עָשָׂ֤ה טֹובָה֙ בְּיִשְׂרָאֵ֔ל וְעִ֥ם הָאֱלֹהִ֖ים וּבֵיתֹֽו׃ ס | 16 |
೧೬ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.
וְאַֽחֲרֵ֥י מֹות֙ יְהֹ֣ויָדָ֔ע בָּ֚אוּ שָׂרֵ֣י יְהוּדָ֔ה וַיִּֽשְׁתַּחֲו֖וּ לַמֶּ֑לֶךְ אָ֛ז שָׁמַ֥ע הַמֶּ֖לֶךְ אֲלֵיהֶֽם׃ | 17 |
೧೭ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.
וַיַּֽעַזְב֗וּ אֶת־בֵּ֤ית יְהוָה֙ אֱלֹהֵ֣י אֲבֹותֵיהֶ֔ם וַיַּֽעַבְד֥וּ אֶת־הָאֲשֵׁרִ֖ים וְאֶת־הָֽעֲצַבִּ֑ים וַֽיְהִי־קֶ֗צֶף עַל־יְהוּדָה֙ וִיר֣וּשָׁלַ֔͏ִם בְּאַשְׁמָתָ֖ם זֹֽאת׃ | 18 |
೧೮ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.
וַיִּשְׁלַ֤ח בָּהֶם֙ נְבִאִ֔ים לַהֲשִׁיבָ֖ם אֶל־יְהוָ֑ה וַיָּעִ֥ידוּ בָ֖ם וְלֹ֥א הֶאֱזִֽינוּ׃ ס | 19 |
೧೯ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
וְר֣וּחַ אֱלֹהִ֗ים לָֽבְשָׁה֙ אֶת־זְכַרְיָה֙ בֶּן־יְהֹויָדָ֣ע הַכֹּהֵ֔ן וַֽיַּעֲמֹ֖ד מֵעַ֣ל לָעָ֑ם וַיֹּ֨אמֶר לָהֶ֜ם כֹּ֣ה ׀ אָמַ֣ר הָאֱלֹהִ֗ים לָמָה֩ אַתֶּ֨ם עֹבְרִ֜ים אֶת־מִצְוֹ֤ת יְהוָה֙ וְלֹ֣א תַצְלִ֔יחוּ כִּֽי־עֲזַבְתֶּ֥ם אֶת־יְהוָ֖ה וַיַּֽעֲזֹ֥ב אֶתְכֶֽם׃ | 20 |
೨೦ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.
וַיִּקְשְׁר֣וּ עָלָ֔יו וַיִּרְגְּמֻ֥הוּ אֶ֖בֶן בְּמִצְוַ֣ת הַמֶּ֑לֶךְ בַּחֲצַ֖ר בֵּ֥ית יְהוָֽה׃ | 21 |
೨೧ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
וְלֹא־זָכַ֞ר יֹואָ֣שׁ הַמֶּ֗לֶךְ הַחֶ֙סֶד֙ אֲשֶׁ֨ר עָשָׂ֜ה יְהֹויָדָ֤ע אָבִיו֙ עִמֹּ֔ו וַֽיַּהֲרֹ֖ג אֶת־בְּנֹ֑ו וּכְמֹותֹ֣ו אָמַ֔ר יֵ֥רֶא יְהוָ֖ה וְיִדְרֹֽשׁ׃ פ | 22 |
೨೨ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.
וַיְהִ֣י ׀ לִתְקוּפַ֣ת הַשָּׁנָ֗ה עָלָ֣ה עָלָיו֮ חֵ֣יל אֲרָם֒ וַיָּבֹ֗אוּ אֶל־יְהוּדָה֙ וִיר֣וּשָׁלַ֔͏ִם וַיַּשְׁחִ֛יתוּ אֶת־כָּל־שָׂרֵ֥י הָעָ֖ם מֵעָ֑ם וְכָל־שְׁלָלָ֥ם שִׁלְּח֖וּ לְמֶ֥לֶךְ דַּרְמָֽשֶׂק׃ | 23 |
೨೩ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು.
כִּי֩ בְמִצְעַ֨ר אֲנָשִׁ֜ים בָּ֣אוּ ׀ חֵ֣יל אֲרָ֗ם וַֽיהוָה֙ נָתַ֨ן בְּיָדָ֥ם חַ֙יִל֙ לָרֹ֣ב מְאֹ֔ד כִּ֣י עָֽזְב֔וּ אֶת־יְהוָ֖ה אֱלֹהֵ֣י אֲבֹותֵיהֶ֑ם וְאֶת־יֹואָ֖שׁ עָשׂ֥וּ שְׁפָטִֽים׃ | 24 |
೨೪ಅರಾಮ್ಯ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ಯರ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು.
וּבְלֶכְתָּ֣ם מִמֶּ֗נּוּ כִּֽי־עָזְב֣וּ אֹתֹו֮ בְּמַחֲלִיִּים (בְּמַחֲלוּיִ֣ם) רַבִּים֒ הִתְקַשְּׁר֨וּ עָלָ֜יו עֲבָדָ֗יו בִּדְמֵי֙ בְּנֵי֙ יְהֹויָדָ֣ע הַכֹּהֵ֔ן וַיַּֽהַרְגֻ֥הוּ עַל־מִטָּתֹ֖ו וַיָּמֹ֑ת וַֽיִּקְבְּרֻ֙הוּ֙ בְּעִ֣יר דָּוִ֔יד וְלֹ֥א קְבָרֻ֖הוּ בְּקִבְרֹ֥ות הַמְּלָכִֽים׃ ס | 25 |
೨೫ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.
וְאֵ֖לֶּה הַמִּתְקַשְּׁרִ֣ים עָלָ֑יו זָבָ֗ד בֶּן־שִׁמְעָת֙ הָֽעַמֹּונִ֔ית וִיהֹ֣וזָבָ֔ד בֶּן־שִׁמְרִ֖ית הַמֹּואָבִֽית׃ | 26 |
೨೬ಅಮ್ಮೋನಿಯರ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರಾತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು.
וּבָנָ֞יו וְרֹב (יִ֧רֶ֞ב) הַמַּשָּׂ֣א עָלָ֗יו וִיסֹוד֙ בֵּ֣ית הָאֱלֹהִ֔ים הִנָּ֣ם כְּתוּבִ֔ים עַל־מִדְרַ֖שׁ סֵ֣פֶר הַמְּלָכִ֑ים וַיִּמְלֹ֛ךְ אֲמַצְיָ֥הוּ בְנֹ֖ו תַּחְתָּֽיו׃ פ | 27 |
೨೭ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.