< דָּנִיֵּאל 12 >
וּבָעֵ֣ת הַהִיא֩ יַעֲמֹ֨ד מִֽיכָאֵ֜ל הַשַּׂ֣ר הַגָּדֹ֗ול הָעֹמֵד֮ עַל־בְּנֵ֣י עַמֶּךָ֒ וְהָיְתָה֙ עֵ֣ת צָרָ֔ה אֲשֶׁ֤ר לֹֽא־נִהְיְתָה֙ מִֽהְיֹ֣ות גֹּ֔וי עַ֖ד הָעֵ֣ת הַהִ֑יא וּבָעֵ֤ת הַהִיא֙ יִמָּלֵ֣ט עַמְּךָ֔ כָּל־הַנִּמְצָ֖א כָּת֥וּב בַּסֵּֽפֶר׃ | 1 |
೧“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.
וְרַבִּ֕ים מִיְּשֵׁנֵ֥י אַדְמַת־עָפָ֖ר יָקִ֑יצוּ אֵ֚לֶּה לְחַיֵּ֣י עֹולָ֔ם וְאֵ֥לֶּה לַחֲרָפֹ֖ות לְדִרְאֹ֥ון עֹולָֽם׃ ס | 2 |
೨ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
וְהַ֨מַּשְׂכִּלִ֔ים יַזְהִ֖רוּ כְּזֹ֣הַר הָרָקִ֑יעַ וּמַצְדִּיקֵי֙ הָֽרַבִּ֔ים כַּכֹּוכָבִ֖ים לְעֹולָ֥ם וָעֶֽד׃ פ | 3 |
೩ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
וְאַתָּ֣ה דָֽנִיֵּ֗אל סְתֹ֧ם הַדְּבָרִ֛ים וַחֲתֹ֥ם הַסֵּ֖פֶר עַד־עֵ֣ת קֵ֑ץ יְשֹׁטְט֥וּ רַבִּ֖ים וְתִרְבֶּ֥ה הַדָּֽעַת׃ | 4 |
೪ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
וְרָאִ֙יתִי֙ אֲנִ֣י דָנִיֵּ֔אל וְהִנֵּ֛ה שְׁנַ֥יִם אֲחֵרִ֖ים עֹמְדִ֑ים אֶחָ֥ד הֵ֙נָּה֙ לִשְׂפַ֣ת הַיְאֹ֔ר וְאֶחָ֥ד הֵ֖נָּה לִשְׂפַ֥ת הַיְאֹֽר׃ | 5 |
೫ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.
וַיֹּ֗אמֶר לָאִישׁ֙ לְב֣וּשׁ הַבַּדִּ֔ים אֲשֶׁ֥ר מִמַּ֖עַל לְמֵימֵ֣י הַיְאֹ֑ר עַד־מָתַ֖י קֵ֥ץ הַפְּלָאֹֽות׃ | 6 |
೬ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು.
וָאֶשְׁמַ֞ע אֶת־הָאִ֣ישׁ ׀ לְב֣וּשׁ הַבַּדִּ֗ים אֲשֶׁ֣ר מִמַּעַל֮ לְמֵימֵ֣י הַיְאֹר֒ וַיָּ֨רֶם יְמִינֹ֤ו וּשְׂמֹאלֹו֙ אֶל־הַשָּׁמַ֔יִם וַיִּשָּׁבַ֖ע בְּחֵ֣י הָעֹולָ֑ם כִּי֩ לְמֹועֵ֨ד מֹֽועֲדִ֜ים וָחֵ֗צִי וּכְכַלֹּ֛ות נַפֵּ֥ץ יַד־עַם־קֹ֖דֶשׁ תִּכְלֶ֥ינָה כָל־אֵֽלֶּה׃ | 7 |
೭ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
וַאֲנִ֥י שָׁמַ֖עְתִּי וְלֹ֣א אָבִ֑ין וָאֹ֣מְרָ֔ה אֲדֹנִ֕י מָ֥ה אַחֲרִ֖ית אֵֽלֶּה׃ פ | 8 |
೮ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು,
וַיֹּ֖אמֶר לֵ֣ךְ דָּנִיֵּ֑אל כִּֽי־סְתֻמִ֧ים וַחֲתֻמִ֛ים הַדְּבָרִ֖ים עַד־עֵ֥ת קֵֽץ׃ | 9 |
೯ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.
יִ֠תְבָּֽרֲרוּ וְיִֽתְלַבְּנ֤וּ וְיִצָּֽרְפוּ֙ רַבִּ֔ים וְהִרְשִׁ֣יעוּ רְשָׁעִ֔ים וְלֹ֥א יָבִ֖ינוּ כָּל־רְשָׁעִ֑ים וְהַמַּשְׂכִּלִ֖ים יָבִֽינוּ׃ | 10 |
೧೦ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.
וּמֵעֵת֙ הוּסַ֣ר הַתָּמִ֔יד וְלָתֵ֖ת שִׁקּ֣וּץ שֹׁמֵ֑ם יָמִ֕ים אֶ֖לֶף מָאתַ֥יִם וְתִשְׁעִֽים׃ | 11 |
೧೧ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.
אַשְׁרֵ֥י הַֽמְחַכֶּ֖ה וְיַגִּ֑יעַ לְיָמִ֕ים אֶ֕לֶף שְׁלֹ֥שׁ מֵאֹ֖ות שְׁלֹשִׁ֥ים וַחֲמִשָּֽׁה׃ | 12 |
೧೨ಕಾದುಕೊಂಡು, ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳುವವನು ಧನ್ಯನು.
וְאַתָּ֖ה לֵ֣ךְ לַקֵּ֑ץ וְתָנ֛וּחַ וְתַעֲמֹ֥ד לְגֹרָלְךָ֖ לְקֵ֥ץ הַיָּמִֽין׃ | 13 |
೧೩ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.