< דְּבָרִים 20 >
כִּֽי־תֵצֵ֨א לַמִּלְחָמָ֜ה עַל־אֹיְבֶ֗יךָ וְֽרָאִ֜יתָ ס֤וּס וָרֶ֙כֶב֙ עַ֚ם רַ֣ב מִמְּךָ֔ לֹ֥א תִירָ֖א מֵהֶ֑ם כִּֽי־יְהוָ֤ה אֱלֹהֶ֙יךָ֙ עִמָּ֔ךְ הַמַּֽעַלְךָ֖ מֵאֶ֥רֶץ מִצְרָֽיִם׃ | 1 |
೧ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.
וְהָיָ֕ה כְּקָֽרָבְכֶ֖ם אֶל־הַמִּלְחָמָ֑ה וְנִגַּ֥שׁ הַכֹּהֵ֖ן וְדִבֶּ֥ר אֶל־הָעָֽם׃ | 2 |
೨ನಿಮಗೆ ಯುದ್ಧ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರ ಸಂಗಡ ಮಾತನಾಡಿ ಅವರಿಗೆ,
וְאָמַ֤ר אֲלֵהֶם֙ שְׁמַ֣ע יִשְׂרָאֵ֔ל אַתֶּ֨ם קְרֵבִ֥ים הַיֹּ֛ום לַמִּלְחָמָ֖ה עַל־אֹיְבֵיכֶ֑ם אַל־יֵרַ֣ךְ לְבַבְכֶ֗ם אַל־תִּֽירְא֧וּ וְאַֽל־תַּחְפְּז֛וּ וְאַל־תּֽ͏ַעַרְצ֖וּ מִפְּנֵיהֶֽם׃ | 3 |
೩“ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.
כִּ֚י יְהוָ֣ה אֱלֹֽהֵיכֶ֔ם הַהֹלֵ֖ךְ עִמָּכֶ֑ם לְהִלָּחֵ֥ם לָכֶ֛ם עִם־אֹיְבֵיכֶ֖ם לְהֹושִׁ֥יעַ אֶתְכֶֽם׃ | 4 |
೪ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.
וְדִבְּר֣וּ הַשֹּֽׁטְרִים֮ אֶל־הָעָ֣ם לֵאמֹר֒ מִֽי־הָאִ֞ישׁ אֲשֶׁ֨ר בָּנָ֤ה בַֽיִת־חָדָשׁ֙ וְלֹ֣א חֲנָכֹ֔ו יֵלֵ֖ךְ וְיָשֹׁ֣ב לְבֵיתֹ֑ו פֶּן־יָמוּת֙ בַּמִּלְחָמָ֔ה וְאִ֥ישׁ אַחֵ֖ר יַחְנְכֶֽנּוּ׃ | 5 |
೫ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.
וּמִֽי־הָאִ֞ישׁ אֲשֶׁר־נָטַ֥ע כֶּ֙רֶם֙ וְלֹ֣א חִלְּלֹ֔ו יֵלֵ֖ךְ וְיָשֹׁ֣ב לְבֵיתֹ֑ו פֶּן־יָמוּת֙ בַּמִּלְחָמָ֔ה וְאִ֥ישׁ אַחֵ֖ר יְחַלְּלֶֽנּוּ׃ | 6 |
೬ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.
וּמִֽי־הָאִ֞ישׁ אֲשֶׁר־אֵרַ֤שׂ אִשָּׁה֙ וְלֹ֣א לְקָחָ֔הּ יֵלֵ֖ךְ וְיָשֹׁ֣ב לְבֵיתֹ֑ו פֶּן־יָמוּת֙ בַּמִּלְחָמָ֔ה וְאִ֥ישׁ אַחֵ֖ר יִקָּחֶֽנָּה׃ | 7 |
೭ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು.
וְיָסְפ֣וּ הַשֹּׁטְרִים֮ לְדַבֵּ֣ר אֶל־הָעָם֒ וְאָמְר֗וּ מִי־הָאִ֤ישׁ הַיָּרֵא֙ וְרַ֣ךְ הַלֵּבָ֔ב יֵלֵ֖ךְ וְיָשֹׁ֣ב לְבֵיתֹ֑ו וְלֹ֥א יִמַּ֛ס אֶת־לְבַ֥ב אֶחָ֖יו כִּלְבָבֹֽו׃ | 8 |
೮ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.
וְהָיָ֛ה כְּכַלֹּ֥ת הַשֹּׁטְרִ֖ים לְדַבֵּ֣ר אֶל־הָעָ֑ם וּפָ֥קְד֛וּ שָׂרֵ֥י צְבָאֹ֖ות בְּרֹ֥אשׁ הָעָֽם׃ ס | 9 |
೯ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು.
כִּֽי־תִקְרַ֣ב אֶל־עִ֔יר לְהִלָּחֵ֖ם עָלֶ֑יהָ וְקָרָ֥אתָ אֵלֶ֖יהָ לְשָׁלֹֽום׃ | 10 |
೧೦ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.
וְהָיָה֙ אִם־שָׁלֹ֣ום תַּֽעַנְךָ֔ וּפָתְחָ֖ה לָ֑ךְ וְהָיָ֞ה כָּל־הָעָ֣ם הַנִּמְצָא־בָ֗הּ יִהְי֥וּ לְךָ֛ לָמַ֖ס וַעֲבָדֽוּךָ׃ | 11 |
೧೧ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.
וְאִם־לֹ֤א תַשְׁלִים֙ עִמָּ֔ךְ וְעָשְׂתָ֥ה עִמְּךָ֖ מִלְחָמָ֑ה וְצַרְתָּ֖ עָלֶֽיהָ׃ | 12 |
೧೨ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.
וּנְתָנָ֛הּ יְהוָ֥ה אֱלֹהֶ֖יךָ בְּיָדֶ֑ךָ וְהִכִּיתָ֥ אֶת־כָּל־זְכוּרָ֖הּ לְפִי־חָֽרֶב׃ | 13 |
೧೩ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.
רַ֣ק הַ֠נָּשִׁים וְהַטַּ֨ף וְהַבְּהֵמָ֜ה וְכֹל֩ אֲשֶׁ֨ר יִהְיֶ֥ה בָעִ֛יר כָּל־שְׁלָלָ֖הּ תָּבֹ֣ז לָ֑ךְ וְאָֽכַלְתָּ֙ אֶת־שְׁלַ֣ל אֹיְבֶ֔יךָ אֲשֶׁ֥ר נָתַ֛ן יְהוָ֥ה אֱלֹהֶ֖יךָ לָֽךְ׃ | 14 |
೧೪ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.
כֵּ֤ן תַּעֲשֶׂה֙ לְכָל־הֶ֣עָרִ֔ים הָרְחֹקֹ֥ת מִמְּךָ֖ מְאֹ֑ד אֲשֶׁ֛ר לֹא־מֵעָרֵ֥י הַגֹּֽויִם־הָאֵ֖לֶּה הֵֽנָּה׃ | 15 |
೧೫ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.
רַ֗ק מֵעָרֵ֤י הָֽעַמִּים֙ הָאֵ֔לֶּה אֲשֶׁר֙ יְהוָ֣ה אֱלֹהֶ֔יךָ נֹתֵ֥ן לְךָ֖ נַחֲלָ֑ה לֹ֥א תְחַיֶּ֖ה כָּל־נְשָׁמָֽה׃ | 16 |
೧೬ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.
כִּֽי־הַחֲרֵ֣ם תַּחֲרִימֵ֗ם הַחִתִּ֤י וְהָאֱמֹרִי֙ הַכְּנַעֲנִ֣י וְהַפְּרִזִּ֔י הַחִוִּ֖י וְהַיְבוּסִ֑י כַּאֲשֶׁ֥ר צִוְּךָ֖ יְהוָ֥ה אֱלֹהֶֽיךָ׃ | 17 |
೧೭ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.
לְמַ֗עַן אֲשֶׁ֨ר לֹֽא־יְלַמְּד֤וּ אֶתְכֶם֙ לַעֲשֹׂ֔ות כְּכֹל֙ תֹּֽועֲבֹתָ֔ם אֲשֶׁ֥ר עָשׂ֖וּ לֵֽאלֹהֵיהֶ֑ם וַחֲטָאתֶ֖ם לַיהוָ֥ה אֱלֹהֵיכֶֽם׃ ס | 18 |
೧೮ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.
כִּֽי־תָצ֣וּר אֶל־עִיר֩ יָמִ֨ים רַבִּ֜ים לְֽהִלָּחֵ֧ם עָלֶ֣יהָ לְתָפְשָׂ֗הּ לֹֽא־תַשְׁחִ֤ית אֶת־עֵצָהּ֙ לִנְדֹּ֤חַ עָלָיו֙ גַּרְזֶ֔ן כִּ֚י מִמֶּ֣נּוּ תֹאכֵ֔ל וְאֹתֹ֖ו לֹ֣א תִכְרֹ֑ת כִּ֤י הֽ͏ָאָדָם֙ עֵ֣ץ הַשָּׂדֶ֔ה לָבֹ֥א מִפָּנֶ֖יךָ בַּמָּצֹֽור׃ | 19 |
೧೯ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?
רַ֞ק עֵ֣ץ אֲשֶׁר־תֵּדַ֗ע כִּֽי־לֹא־עֵ֤ץ מַאֲכָל֙ ה֔וּא אֹתֹ֥ו תַשְׁחִ֖ית וְכָרָ֑תָּ וּבָנִ֣יתָ מָצֹ֗ור עַל־הָעִיר֙ אֲשֶׁר־הִ֨וא עֹשָׂ֧ה עִמְּךָ֛ מִלְחָמָ֖ה עַ֥ד רִדְתָּֽהּ׃ פ | 20 |
೨೦ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.