< דְּבָרִים 23 >

לֹֽא־יָבֹ֧א פְצֽוּעַ־דַּכָּ֛א וּכְר֥וּת שָׁפְכָ֖ה בִּקְהַ֥ל יְהוָֽה׃ ס 1
ಬೀಜ ಹೊಡಿಸಿಕೊಂಡವರು ಅಥವಾ ಜನನ ಇಂದ್ರಿಯ ಕತ್ತರಿಸಿಕೊಂಡವರು ಯೆಹೋವ ದೇವರ ಸಭೆಗೆ ಸೇರಬಾರದು.
לֹא־יָבֹ֥א מַמְזֵ֖ר בִּקְהַ֣ל יְהוָ֑ה גַּ֚ם דֹּ֣ור עֲשִׂירִ֔י לֹא־יָ֥בֹא לֹ֖ו בִּקְהַ֥ל יְהוָֽה׃ ס 2
ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲಾಂತರದವರೆಗೂ ಯೆಹೋವ ದೇವರ ಸಭೆಗೆ ಸೇರಬಾರದು.
לֹֽא־יָבֹ֧א עַמֹּונִ֛י וּמֹואָבִ֖י בִּקְהַ֣ל יְהוָ֑ה גַּ֚ם דֹּ֣ור עֲשִׂירִ֔י לֹא־יָבֹ֥א לָהֶ֛ם בִּקְהַ֥ל יְהוָ֖ה עַד־עֹולָֽם׃ 3
ಅಮ್ಮೋನಿಯರು ಇಲ್ಲವೆ ಮೋವಾಬ್ಯರು ಯೆಹೋವ ದೇವರ ಸಭೆಗೆ ಸೇರಬಾರದು; ಹತ್ತನೆಯ ತಲಾಂತರವರೆಗೆ ಅವರು ಯೆಹೋವ ದೇವರ ಸಭೆಯಲ್ಲಿ ಸೇರಬಾರದು.
עַל־דְּבַ֞ר אֲשֶׁ֨ר לֹא־קִדְּמ֤וּ אֶתְכֶם֙ בַּלֶּ֣חֶם וּבַמַּ֔יִם בַּדֶּ֖רֶךְ בְּצֵאתְכֶ֣ם מִמִּצְרָ֑יִם וַאֲשֶׁר֩ שָׂכַ֨ר עָלֶ֜יךָ אֶת־בִּלְעָ֣ם בֶּן־בְּעֹ֗ור מִפְּתֹ֛ור אֲרַ֥ם נַהֲרַ֖יִם לְקַֽלְלֶֽךָּ׃ 4
ಏಕೆಂದರೆ ನೀವು ಈಜಿಪ್ಟನ್ನು ಬಿಟ್ಟು ಬರುವಾಗ, ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವುದಕ್ಕೆ ಎದುರುಗೊಳ್ಳಲಿಲ್ಲ. ನಿಮ್ಮನ್ನು ಶಪಿಸುವುದಕ್ಕೆ ಮೆಸೊಪೊತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ಬಿಳಾಮನಿಗೆ ಕೂಲಿ ಕೊಟ್ಟು ನಿಮಗೆ ವಿರೋಧವಾಗಿ ಕರೆಸಿದರು.
וְלֹֽא־אָבָ֞ה יְהוָ֤ה אֱלֹהֶ֙יךָ֙ לִשְׁמֹ֣עַ אֶל־בִּלְעָ֔ם וַיַּהֲפֹךְ֩ יְהוָ֨ה אֱלֹהֶ֧יךָ לְּךָ֛ אֶת־הַקְּלָלָ֖ה לִבְרָכָ֑ה כִּ֥י אֲהֵֽבְךָ֖ יְהוָ֥ה אֱלֹהֶֽיךָ׃ 5
ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.
לֹא־תִדְרֹ֥שׁ שְׁלֹמָ֖ם וְטֹבָתָ֑ם כָּל־יָמֶ֖יךָ לְעֹולָֽם׃ ס 6
ನೀವು ಇರುವವರೆಗೆ ಎಂದಿಗೂ ಅವರ ಏಳಿಗೆಯನ್ನು, ಕ್ಷೇಮವನ್ನು ಬಯಸಬಾರದು.
לֹֽא־תְתַעֵ֣ב אֲדֹמִ֔י כִּ֥י אָחִ֖יךָ ה֑וּא ס לֹא־תְתַעֵ֣ב מִצְרִ֔י כִּי־גֵ֖ר הָיִ֥יתָ בְאַרְצֹֽו׃ 7
ಎದೋಮ್ಯನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನು ನಿಮ್ಮ ಸಹೋದರನು; ಈಜಿಪ್ಟಿನವನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನ ದೇಶದಲ್ಲಿ ನೀವು ಪರವಾಸಿಯಾಗಿದ್ದಿರಿ.
בָּנִ֛ים אֲשֶׁר־יִוָּלְד֥וּ לָהֶ֖ם דֹּ֣ור שְׁלִישִׁ֑י יָבֹ֥א לָהֶ֖ם בִּקְהַ֥ל יְהוָֽה׃ ס 8
ಅವರಿಗೆ ಹುಟ್ಟುವ ಮಕ್ಕಳಲ್ಲಿ ಮೂರನೆಯ ತಲಾಂತರದವರು ಯೆಹೋವ ದೇವರ ಸಭೆಯಲ್ಲಿ ಸೇರಬಹುದು.
כִּֽי־תֵצֵ֥א מַחֲנֶ֖ה עַל־אֹיְבֶ֑יךָ וְנִ֨שְׁמַרְתָּ֔ מִכֹּ֖ל דָּבָ֥ר רָֽע׃ 9
ನೀವು ಶತ್ರುಗಳಿಗೆ ವಿರೋಧವಾಗಿ ಸೈನ್ಯವಾಗಿ ಹೊರಟರೆ, ಪಾಳೆಯದಲ್ಲಿ ಯಾವ ಅಶುದ್ಧ ಕಾರ್ಯಗಳು ಇಲ್ಲದಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.
כִּֽי־יִהְיֶ֤ה בְךָ֙ אִ֔ישׁ אֲשֶׁ֛ר לֹא־יִהְיֶ֥ה טָהֹ֖ור מִקְּרֵה־לָ֑יְלָה וְיָצָא֙ אֶל־מִח֣וּץ לַֽמַּחֲנֶ֔ה לֹ֥א יָבֹ֖א אֶל־תֹּ֥וךְ הַֽמַּחֲנֶֽה׃ 10
ರಾತ್ರಿಯಲ್ಲಿ ವೀರ್ಯ ವಿಸರ್ಜನೆಯ ದೆಸೆಯಿಂದ ಯಾವನಾದರು ಅಶುದ್ಧನಾದವನು ನಿಮ್ಮಲ್ಲಿದ್ದರೆ, ಅವನು ಪಾಳೆಯದ ಒಳಗೆ ಇರದೆ ಹೊರಗೆ ಇರಬೇಕು.
וְהָיָ֥ה לִפְנֹֽות־עֶ֖רֶב יִרְחַ֣ץ בַּמָּ֑יִם וּכְבֹ֣א הַשֶּׁ֔מֶשׁ יָבֹ֖א אֶל־תֹּ֥וךְ הַֽמַּחֲנֶה׃ 11
ಸಂಜೆ ಆಗುತ್ತಿರುವಾಗ ಅವನು ಸ್ನಾನಮಾಡಿ, ಸೂರ್ಯನು ಮುಳುಗಿದಾಗ ಪಾಳೆಯದ ಒಳಗೆ ತಿರುಗಿಬರಬಹುದು.
וְיָד֙ תִּהְיֶ֣ה לְךָ֔ מִח֖וּץ לַֽמַּחֲנֶ֑ה וְיָצָ֥אתָ שָׁ֖מָּה חֽוּץ׃ 12
ಇದಲ್ಲದೆ ನೀವು ಮಲವಿಸರ್ಜನೆಗೆ ಹೋಗಲು ಪಾಳೆಯದ ಹೊರಗೆ ಸ್ಥಳವಿರಬೇಕು.
וְיָתֵ֛ד תִּהְיֶ֥ה לְךָ֖ עַל־אֲזֵנֶ֑ךָ וְהָיָה֙ בְּשִׁבְתְּךָ֣ ח֔וּץ וְחָפַרְתָּ֣ה בָ֔הּ וְשַׁבְתָּ֖ וְכִסִּ֥יתָ אֶת־צֵאָתֶֽךָ׃ 13
ನಿಮ್ಮ ಆಯುಧಗಳ ಜೊತೆಯಲ್ಲಿ ಕಬ್ಬಿಣದ ಸಲಕೆ ಇರಬೇಕು. ನೀವು ಮಲವಿಸರ್ಜನೆ ಮಾಡಿದಾಗ, ಆ ಸಲಕೆಯಿಂದ ಅಗೆದು ಮುಚ್ಚಿಬಿಡಬೇಕು.
כִּי֩ יְהוָ֨ה אֱלֹהֶ֜יךָ מִתְהַלֵּ֣ךְ ׀ בְּקֶ֣רֶב מַחֲנֶ֗ךָ לְהַצִּֽילְךָ֙ וְלָתֵ֤ת אֹיְבֶ֙יךָ֙ לְפָנֶ֔יךָ וְהָיָ֥ה מַחֲנֶ֖יךָ קָדֹ֑ושׁ וְלֹֽא־יִרְאֶ֤ה בְךָ֙ עֶרְוַ֣ת דָּבָ֔ר וְשָׁ֖ב מֵאַחֲרֶֽיךָ׃ ס 14
ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು.
לֹא־תַסְגִּ֥יר עֶ֖בֶד אֶל־אֲדֹנָ֑יו אֲשֶׁר־יִנָּצֵ֥ל אֵלֶ֖יךָ מֵעִ֥ם אֲדֹנָֽיו׃ 15
ತನ್ನ ಯಜಮಾನನನ್ನು ಬಿಟ್ಟು, ನಿನ್ನ ಬಳಿಗೆ ತಪ್ಪಿಸಿಕೊಂಡು ಬಂದ ದಾಸನನ್ನು ಹಿಡಿದು ಯಜಮಾನನಿಗೆ ಒಪ್ಪಿಸಬಾರದು.
עִמְּךָ֞ יֵשֵׁ֣ב בְּקִרְבְּךָ֗ בַּמָּקֹ֧ום אֲשֶׁר־יִבְחַ֛ר בְּאַחַ֥ד שְׁעָרֶ֖יךָ בַּטֹּ֣וב לֹ֑ו לֹ֖א תֹּונֶֽנּוּ׃ ס 16
ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಒಳ್ಳೆಯದೆಂದು ತೋಚುತ್ತದೆಯೋ, ಅಲ್ಲಿಯೇ ವಾಸವಾಗಲಿ. ಅವನನ್ನು ನೀವು ಕುಗ್ಗಿಸಬಾರದು.
לֹא־תִהְיֶ֥ה קְדֵשָׁ֖ה מִבְּנֹ֣ות יִשְׂרָאֵ֑ל וְלֹֽא־יִהְיֶ֥ה קָדֵ֖שׁ מִבְּנֵ֥י יִשְׂרָאֵל׃ 17
ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ಗುಡಿ ವೇಶ್ಯೆಯಾಗಬಾರದು. ಇಸ್ರಾಯೇಲರಲ್ಲಿ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.
לֹא־תָבִיא֩ אֶתְנַ֨ן זֹונָ֜ה וּמְחִ֣יר כֶּ֗לֶב בֵּ֛ית יְהוָ֥ה אֱלֹהֶ֖יךָ לְכָל־נֶ֑דֶר כִּ֧י תֹועֲבַ֛ת יְהוָ֥ה אֱלֹהֶ֖יךָ גַּם־שְׁנֵיהֶֽם׃ 18
ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ.
לֹא־תַשִּׁ֣יךְ לְאָחִ֔יךָ נֶ֥שֶׁךְ כֶּ֖סֶף נֶ֣שֶׁךְ אֹ֑כֶל נֶ֕שֶׁךְ כָּל־דָּבָ֖ר אֲשֶׁ֥ר יִשָּֽׁךְ׃ 19
ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವನ್ನಾಗಲಿ, ಬೇರೆ ಯಾವುದನ್ನಾಗಲಿ ಬಡ್ಡಿಗೆ ಕೊಡಬಾರದು.
לַנָּכְרִ֣י תַשִּׁ֔יךְ וּלְאָחִ֖יךָ לֹ֣א תַשִּׁ֑יךְ לְמַ֨עַן יְבָרֶכְךָ֜ יְהוָ֣ה אֱלֹהֶ֗יךָ בְּכֹל֙ מִשְׁלַ֣ח יָדֶ֔ךָ עַל־הָאָ֕רֶץ אֲשֶׁר־אַתָּ֥ה בָא־שָׁ֖מָּה לְרִשְׁתָּֽהּ׃ ס 20
ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸಹೋದರನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೆಲಸಗಳನ್ನು ಆಶೀರ್ವದಿಸುತ್ತಾರೆ.
כִּֽי־תִדֹּ֥ר נֶ֙דֶר֙ לַיהוָ֣ה אֱלֹהֶ֔יךָ לֹ֥א תְאַחֵ֖ר לְשַׁלְּמֹ֑ו כִּֽי־דָּרֹ֨שׁ יִדְרְשֶׁ֜נּוּ יְהוָ֤ה אֱלֹהֶ֙יךָ֙ מֵֽעִמָּ֔ךְ וְהָיָ֥ה בְךָ֖ חֵֽטְא׃ 21
ನೀನು ನಿನ್ನ ದೇವರಾದ ಯೆಹೋವ ದೇವರಿಗೆ ಹರಕೆಮಾಡಿದ ಮೇಲೆ ಅದನ್ನು ಸಲ್ಲಿಸುವುದಕ್ಕೆ ತಡಮಾಡಬೇಡ. ಏಕೆಂದರೆ ನಿನ್ನ ದೇವರಾದ ಯೆಹೋವ ದೇವರು ಅದನ್ನು ನಿಶ್ಚಯವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವರು. ತೀರಿಸದೆ ಹೋಗುವದು ಪಾಪ.
וְכִ֥י תֶחְדַּ֖ל לִנְדֹּ֑ר לֹֽא־יִהְיֶ֥ה בְךָ֖ חֵֽטְא׃ 22
ಆದರೆ ನೀನು ಹರಕೆ ಮಾಡದಿದ್ದರೆ, ನೀನು ದೋಷಿಯಾಗುವುದಿಲ್ಲ.
מֹוצָ֥א שְׂפָתֶ֖יךָ תִּשְׁמֹ֣ר וְעָשִׂ֑יתָ כַּאֲשֶׁ֨ר נָדַ֜רְתָּ לַיהוָ֤ה אֱלֹהֶ֙יךָ֙ נְדָבָ֔ה אֲשֶׁ֥ר דִּבַּ֖רְתָּ בְּפִֽיךָ׃ ס 23
ನಿನ್ನ ತುಟಿಗಳಿಂದ ಹೊರಟಿದ್ದನ್ನು ಮಾಡುವುದಕ್ಕೆ ತಪ್ಪಬೇಡ. ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಬಾಯಿಯಿಂದಲೇ ನೀನು ಹರಕೆ ಮಾಡಿದಿಯಲ್ಲವೇ.
כִּ֤י תָבֹא֙ בְּכֶ֣רֶם רֵעֶ֔ךָ וְאָכַלְתָּ֧ עֲנָבִ֛ים כְּנַפְשְׁךָ֖ שָׂבְעֶ֑ךָ וְאֶֽל־כֶּלְיְךָ֖ לֹ֥א תִתֵּֽן׃ ס 24
ನಿನ್ನ ನೆರೆಯವನ ದ್ರಾಕ್ಷಿ ತೋಟಕ್ಕೆ ಬಂದರೆ, ನಿನ್ನ ಮನಸ್ಸು ತೃಪ್ತಿಯಾಗುವವರೆಗೆ ಹಣ್ಣುಗಳನ್ನು ತಿನ್ನಬಹುದು. ಆದರೆ ನಿನ್ನ ಚೀಲದಲ್ಲಿ ಹಾಕಿಕೊಳ್ಳಬಾರದು.
כִּ֤י תָבֹא֙ בְּקָמַ֣ת רֵעֶ֔ךָ וְקָטַפְתָּ֥ מְלִילֹ֖ת בְּיָדֶ֑ךָ וְחֶרְמֵשׁ֙ לֹ֣א תָנִ֔יף עַ֖ל קָמַ֥ת רֵעֶֽךָ׃ ס 25
ನಿನ್ನ ನೆರೆಯವನ ಪೈರಿನ ಬಳಿಗೆ ಹಾದುಹೋಗುವಾಗ, ಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲು ಹಾಕಿ ಕೊಯ್ಯಬಾರದು.

< דְּבָרִים 23 >