< דְּבָרִים 26 >
וְהָיָה֙ כִּֽי־תָבֹ֣וא אֶל־הָאָ֔רֶץ אֲשֶׁר֙ יְהוָ֣ה אֱלֹהֶ֔יךָ נֹתֵ֥ן לְךָ֖ נַחֲלָ֑ה וִֽירִשְׁתָּ֖הּ וְיָשַׁ֥בְתָּ בָּֽהּ׃ | 1 |
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವತ್ತಾಗಿ ಕೊಡುವ ದೇಶಕ್ಕೆ ನೀವು ಬಂದು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಿರಿ.
וְלָקַחְתָּ֞ מֵרֵאשִׁ֣ית ׀ כָּל־פְּרִ֣י הָאֲדָמָ֗ה אֲשֶׁ֨ר תָּבִ֧יא מֵֽאַרְצְךָ֛ אֲשֶׁ֨ר יְהוָ֧ה אֱלֹהֶ֛יךָ נֹתֵ֥ן לָ֖ךְ וְשַׂמְתָּ֣ בַטֶּ֑נֶא וְהָֽלַכְתָּ֙ אֶל־הַמָּקֹ֔ום אֲשֶׁ֤ר יִבְחַר֙ יְהוָ֣ה אֱלֹהֶ֔יךָ לְשַׁכֵּ֥ן שְׁמֹ֖ו שָֽׁם׃ | 2 |
ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
וּבָאתָ֙ אֶל־הַכֹּהֵ֔ן אֲשֶׁ֥ר יִהְיֶ֖ה בַּיָּמִ֣ים הָהֵ֑ם וְאָמַרְתָּ֣ אֵלָ֗יו הִגַּ֤דְתִּי הַיֹּום֙ לַיהוָ֣ה אֱלֹהֶ֔יךָ כִּי־בָ֙אתִי֙ אֶל־הָאָ֔רֶץ אֲשֶׁ֨ר נִשְׁבַּ֧ע יְהוָ֛ה לַאֲבֹתֵ֖ינוּ לָ֥תֶת לָֽנוּ׃ | 3 |
ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ, “ಯೆಹೋವ ದೇವರು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನಾನು ಸೇರಿದ್ದಾಯಿತೆಂದು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಈಗ ನಾನು ಒಪ್ಪಿಕೊಳ್ಳುತ್ತೇನೆ,” ಎಂದು ಹೇಳಬೇಕು.
וְלָקַ֧ח הַכֹּהֵ֛ן הַטֶּ֖נֶא מִיָּדֶ֑ךָ וְהִ֨נִּיחֹ֔ו לִפְנֵ֕י מִזְבַּ֖ח יְהוָ֥ה אֱלֹהֶֽיךָ׃ | 4 |
ಆಗ ಯಾಜಕನು ಆ ಬುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದು, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮುಂದೆ ಇಡಬೇಕು.
וְעָנִ֨יתָ וְאָמַרְתָּ֜ לִפְנֵ֣י ׀ יְהוָ֣ה אֱלֹהֶ֗יךָ אֲרַמִּי֙ אֹבֵ֣ד אָבִ֔י וַיֵּ֣רֶד מִצְרַ֔יְמָה וַיָּ֥גָר שָׁ֖ם בִּמְתֵ֣י מְעָ֑ט וֽ͏ַיְהִי־שָׁ֕ם לְגֹ֥וי גָּדֹ֖ול עָצ֥וּם וָרָֽב׃ | 5 |
ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.
וַיָּרֵ֧עוּ אֹתָ֛נוּ הַמִּצְרִ֖ים וַיְעַנּ֑וּנוּ וַיִּתְּנ֥וּ עָלֵ֖ינוּ עֲבֹדָ֥ה קָשָֽׁה׃ | 6 |
ಆದರೆ ಈಜಿಪ್ಟಿನವರು ನಮ್ಮನ್ನು ಕ್ರೂರವಾಗಿ ನಡೆಸಿ, ನಮ್ಮ ಮೇಲೆ ದಬ್ಬಾಳಿಕೆ ಮಾಡಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.
וַנִּצְעַ֕ק אֶל־יְהוָ֖ה אֱלֹהֵ֣י אֲבֹתֵ֑ינוּ וַיִּשְׁמַ֤ע יְהוָה֙ אֶת־קֹלֵ֔נוּ וַיַּ֧רְא אֶת־עָנְיֵ֛נוּ וְאֶת־עֲמָלֵ֖נוּ וְאֶת־לַחֲצֵֽנוּ׃ | 7 |
ಆಗ ನಾವು ನಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ಮೊರೆಯಿಟ್ಟೆವು. ಯೆಹೋವ ದೇವರು ನಮ್ಮ ಸ್ವರವನ್ನು ಕೇಳಿ, ನಮ್ಮ ಸಂಕಟವನ್ನೂ ಕಷ್ಟವನ್ನೂ ದಬ್ಬಾಳಿಕೆಯನ್ನೂ ನೋಡಿದರು.
וַיֹּוצִאֵ֤נוּ יְהוָה֙ מִמִּצְרַ֔יִם בְּיָ֤ד חֲזָקָה֙ וּבִזְרֹ֣עַ נְטוּיָ֔ה וּבְמֹרָ֖א גָּדֹ֑ל וּבְאֹתֹ֖ות וּבְמֹפְתִֽים׃ | 8 |
ಯೆಹೋವ ದೇವರು ನಮ್ಮನ್ನು ತಮ್ಮ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ, ಸೂಚಕಕಾರ್ಯಗಳಿಂದಲೂ, ಅದ್ಭುತಗಳಿಂದಲೂ, ಈಜಿಪ್ಟಿನಿಂದ ಹೊರಗೆ ಬರಮಾಡಿ,
וַיְבִאֵ֖נוּ אֶל־הַמָּקֹ֣ום הַזֶּ֑ה וַיִּתֶּן־לָ֙נוּ֙ אֶת־הָאָ֣רֶץ הַזֹּ֔את אֶ֛רֶץ זָבַ֥ת חָלָ֖ב וּדְבָֽשׁ׃ | 9 |
ನಮ್ಮನ್ನು ಈ ಸ್ಥಳಕ್ಕೆ ಕರೆತಂದು, ಹಾಲೂ ಜೇನೂ ಹರಿಯುವ ದೇಶವಾಗಿರುವ ಈ ದೇಶವನ್ನು ನಮಗೆ ಕೊಟ್ಟಿದ್ದಾರೆ.
וְעַתָּ֗ה הִנֵּ֤ה הֵבֵ֙אתִי֙ אֶת־רֵאשִׁית֙ פְּרִ֣י הָאֲדָמָ֔ה אֲשֶׁר־נָתַ֥תָּה לִּ֖י יְהוָ֑ה וְהִנַּחְתֹּ֗ו לִפְנֵי֙ יְהוָ֣ה אֱלֹהֶ֔יךָ וְהִֽשְׁתַּחֲוִ֔יתָ לִפְנֵ֖י יְהוָ֥ה אֱלֹהֶֽיךָ׃ | 10 |
ಹೀಗಿರುವುದರಿಂದ ಯೆಹೋವ ದೇವರೇ, ನೀವು ನಮಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿದ್ದೇವೆ,” ಎಂದು ಹೇಳಬೇಕು. ಆಗ ಅದನ್ನು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿಟ್ಟು, ಅವರನ್ನು ಆರಾಧಿಸಬೇಕು.
וְשָׂמַחְתָּ֣ בְכָל־הַטֹּ֗וב אֲשֶׁ֧ר נָֽתַן־לְךָ֛ יְהוָ֥ה אֱלֹהֶ֖יךָ וּלְבֵיתֶ֑ךָ אַתָּה֙ וְהַלֵּוִ֔י וְהַגֵּ֖ר אֲשֶׁ֥ר בְּקִרְבֶּֽךָ׃ ס | 11 |
ನಿಮ್ಮ ದೇವರಾದ ಯೆಹೋವ ದೇವರು ನಿಮಗೂ ನಿಮ್ಮ ಮನೆಗೂ ಲೇವಿಯರಿಗೂ ನಿಮ್ಮ ಸಂಗಡ ಇರುವ ಪರವಾಸಿಗಳಿಗೂ ನೀಡಿರುವ ಸೌಲಭ್ಯಕ್ಕಾಗಿ ಸಂತೋಷ ಪಡಬೇಕು.
כִּ֣י תְכַלֶּ֞ה לַ֠עְשֵׂר אֶת־כָּל־מַעְשַׂ֧ר תְּבוּאָתְךָ֛ בַּשָּׁנָ֥ה הַשְּׁלִישִׁ֖ת שְׁנַ֣ת הַֽמַּעֲשֵׂ֑ר וְנָתַתָּ֣ה לַלֵּוִ֗י לַגֵּר֙ לַיָּתֹ֣ום וְלֽ͏ָאַלְמָנָ֔ה וְאָכְל֥וּ בִשְׁעָרֶ֖יךָ וְשָׂבֵֽעוּ׃ | 12 |
ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು.
וְאָמַרְתָּ֡ לִפְנֵי֩ יְהוָ֨ה אֱלֹהֶ֜יךָ בִּעַ֧רְתִּי הַקֹּ֣דֶשׁ מִן־הַבַּ֗יִת וְגַ֨ם נְתַתִּ֤יו לַלֵּוִי֙ וְלַגֵּר֙ לַיָּתֹ֣ום וְלָאַלְמָנָ֔ה כְּכָל־מִצְוָתְךָ֖ אֲשֶׁ֣ר צִוִּיתָ֑נִי לֹֽא־עָבַ֥רְתִּי מִמִּצְוֹתֶ֖יךָ וְלֹ֥א שָׁכָֽחְתִּי׃ | 13 |
ಆಗ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, “ನಾವು ಮೀಸಲಿಟ್ಟ ಪರಿಶುದ್ಧ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದು, ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರಿಗೆ, ಪರದೇಶಿಗೆ, ತಂದೆತಾಯಿ ಇಲ್ಲದವರಿಗೆ, ವಿಧವೆಯರಿಗೆ ಕೊಟ್ಟಿದ್ದೇವೆ. ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ.
לֹא־אָכַ֨לְתִּי בְאֹנִ֜י מִמֶּ֗נּוּ וְלֹא־בִעַ֤רְתִּי מִמֶּ֙נּוּ֙ בְּטָמֵ֔א וְלֹא־נָתַ֥תִּי מִמֶּ֖נּוּ לְמֵ֑ת שָׁמַ֗עְתִּי בְּקֹול֙ יְהוָ֣ה אֱלֹהָ֔י עָשִׂ֕יתִי כְּכֹ֖ל אֲשֶׁ֥ר צִוִּיתָֽנִי׃ | 14 |
ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ.
הַשְׁקִיפָה֩ מִמְּעֹ֨ון קָדְשְׁךָ֜ מִן־הַשָּׁמַ֗יִם וּבָרֵ֤ךְ אֶֽת־עַמְּךָ֙ אֶת־יִשְׂרָאֵ֔ל וְאֵת֙ הָאֲדָמָ֔ה אֲשֶׁ֥ר נָתַ֖תָּה לָ֑נוּ כַּאֲשֶׁ֤ר נִשְׁבַּ֙עְתָּ֙ לַאֲבֹתֵ֔ינוּ אֶ֛רֶץ זָבַ֥ת חָלָ֖ב וּדְבָֽשׁ׃ ס | 15 |
ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.
הַיֹּ֣ום הַזֶּ֗ה יְהוָ֨ה אֱלֹהֶ֜יךָ מְצַוְּךָ֧ לַעֲשֹׂ֛ות אֶת־הַחֻקִּ֥ים הָאֵ֖לֶּה וְאֶת־הַמִּשְׁפָּטִ֑ים וְשָׁמַרְתָּ֤ וְעָשִׂ֙יתָ֙ אֹותָ֔ם בְּכָל־לְבָבְךָ֖ וּבְכָל־נַפְשֶֽׁךָ׃ | 16 |
ಈ ತೀರ್ಪುಗಳನ್ನೂ ನಿಯಮಗಳನ್ನೂ ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದ್ದರಿಂದ ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.
אֶת־יְהוָ֥ה הֶאֱמַ֖רְתָּ הַיֹּ֑ום לִהְיֹות֩ לְךָ֨ לֽ͏ֵאלֹהִ֜ים וְלָלֶ֣כֶת בִּדְרָכָ֗יו וְלִשְׁמֹ֨ר חֻקָּ֧יו וּמִצְוֹתָ֛יו וּמִשְׁפָּטָ֖יו וְלִשְׁמֹ֥עַ בְּקֹלֹֽו׃ | 17 |
ನೀವು ಈ ಹೊತ್ತು, ಯೆಹೋವ ದೇವರೇ ನಮಗೆ ದೇವರು ಎಂದೂ, ಅವರ ಮಾರ್ಗಗಳಲ್ಲಿ ನಡೆದು, ಅವರು ಹೇಳಿದ ಆಜ್ಞಾವಿಧಿನಿಯಮಗಳನ್ನು ಪಾಲಿಸಿ, ಅವರ ಮಾತಿಗೆ ವಿಧೇಯರಾಗಿರುತ್ತೇವೆ ಎಂದೂ ದೃಢವಾಗಿ ಹೇಳಿದ್ದೀರಿ.
וַֽיהוָ֞ה הֶאֱמִֽירְךָ֣ הַיֹּ֗ום לִהְיֹ֥ות לֹו֙ לְעַ֣ם סְגֻלָּ֔ה כַּאֲשֶׁ֖ר דִּבֶּר־לָ֑ךְ וְלִשְׁמֹ֖ר כָּל־מִצְוֹתָֽיו׃ | 18 |
ಈ ಹೊತ್ತು ನಿಮಗೆ ಯೆಹೋವ ದೇವರು ಘೋಷಿಸಿದಂತೆ, ನೀವು ಅವರ ಜನರೂ ಅವರ ಸಂಗ್ರಹಿಸಿದ ಆಸ್ತಿಯೂ ಆಗಿದ್ದೀರೆಂದು ವಾಗ್ದಾನಮಾಡಿದ್ದಾರೆ. ನೀವು ಅವರ ಎಲ್ಲಾ ಆಜ್ಞೆಗಳನ್ನು ಪಾಲಿಸಿರಿ.
וּֽלְתִתְּךָ֣ עֶלְיֹ֗ון עַ֤ל כָּל־הַגֹּויִם֙ אֲשֶׁ֣ר עָשָׂ֔ה לִתְהִלָּ֖ה וּלְשֵׁ֣ם וּלְתִפְאָ֑רֶת וְלִֽהְיֹתְךָ֧ עַם־קָדֹ֛שׁ לַיהוָ֥ה אֱלֹהֶ֖יךָ כַּאֲשֶׁ֥ר דִּבֵּֽר׃ ס | 19 |
ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ.