< דְּבָרִים 30 >

וְהָיָה֩ כִֽי־יָבֹ֨אוּ עָלֶ֜יךָ כָּל־הַדְּבָרִ֣ים הָאֵ֗לֶּה הַבְּרָכָה֙ וְהַקְּלָלָ֔ה אֲשֶׁ֥ר נָתַ֖תִּי לְפָנֶ֑יךָ וַהֲשֵׁבֹתָ֙ אֶל־לְבָבֶ֔ךָ בְּכָל־הַגֹּויִ֔ם אֲשֶׁ֧ר הִדִּיחֲךָ֛ יְהוָ֥ה אֱלֹהֶ֖יךָ שָֽׁמָּה׃ 1
ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,
וְשַׁבְתָּ֞ עַד־יְהוָ֤ה אֱלֹהֶ֙יךָ֙ וְשָׁמַעְתָּ֣ בְקֹלֹ֔ו כְּכֹ֛ל אֲשֶׁר־אָנֹכִ֥י מְצַוְּךָ֖ הַיֹּ֑ום אַתָּ֣ה וּבָנֶ֔יךָ בְּכָל־לְבָבְךָ֖ וּבְכָל־נַפְשֶֽׁךָ׃ 2
ನಿಮ್ಮ ಮಕ್ಕಳ ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರುಗಿ ಬಂದು, ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ವಿಧೇಯರಾದರೆ,
וְשָׁ֨ב יְהוָ֧ה אֱלֹהֶ֛יךָ אֶת־שְׁבוּתְךָ֖ וְרִחֲמֶ֑ךָ וְשָׁ֗ב וְקִבֶּצְךָ֙ מִכָּל־הָ֣עַמִּ֔ים אֲשֶׁ֧ר הֱפִֽיצְךָ֛ יְהוָ֥ה אֱלֹהֶ֖יךָ שָֽׁמָּה׃ 3
ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.
אִם־יִהְיֶ֥ה נִֽדַּחֲךָ֖ בִּקְצֵ֣ה הַשָּׁמָ֑יִם מִשָּׁ֗ם יְקַבֶּצְךָ֙ יְהוָ֣ה אֱלֹהֶ֔יךָ וּמִשָּׁ֖ם יִקָּחֶֽךָ׃ 4
ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.
וֶהֱבִֽיאֲךָ֞ יְהוָ֣ה אֱלֹהֶ֗יךָ אֶל־הָאָ֛רֶץ אֲשֶׁר־יָרְשׁ֥וּ אֲבֹתֶ֖יךָ וִֽירִשְׁתָּ֑הּ וְהֵיטִֽבְךָ֥ וְהִרְבְּךָ֖ מֵאֲבֹתֶֽיךָ׃ 5
ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.
וּמָ֨ל יְהוָ֧ה אֱלֹהֶ֛יךָ אֶת־לְבָבְךָ֖ וְאֶת־לְבַ֣ב זַרְעֶ֑ךָ לְאַהֲבָ֞ה אֶת־יְהוָ֧ה אֱלֹהֶ֛יךָ בְּכָל־לְבָבְךָ֥ וּבְכָל־נַפְשְׁךָ֖ לְמַ֥עַן חַיֶּֽיךָ׃ 6
ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.
וְנָתַן֙ יְהוָ֣ה אֱלֹהֶ֔יךָ אֵ֥ת כָּל־הָאָלֹ֖ות הָאֵ֑לֶּה עַל־אֹיְבֶ֥יךָ וְעַל־שֹׂנְאֶ֖יךָ אֲשֶׁ֥ר רְדָפֽוּךָ׃ 7
ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ, ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
וְאַתָּ֣ה תָשׁ֔וּב וְשָׁמַעְתָּ֖ בְּקֹ֣ול יְהוָ֑ה וְעָשִׂ֙יתָ֙ אֶת־כָּל־מִצְוֹתָ֔יו אֲשֶׁ֛ר אָנֹכִ֥י מְצַוְּךָ֖ הַיֹּֽום׃ 8
ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ.
וְהֹותִֽירְךָ֩ יְהוָ֨ה אֱלֹהֶ֜יךָ בְּכֹ֣ל ׀ מַעֲשֵׂ֣ה יָדֶ֗ךָ בִּפְרִ֨י בִטְנְךָ֜ וּבִפְרִ֧י בְהֶמְתְּךָ֛ וּבִפְרִ֥י אַדְמָתְךָ֖ לְטֹובָ֑ה כִּ֣י ׀ יָשׁ֣וּב יְהוָ֗ה לָשׂ֤וּשׂ עָלֶ֙יךָ֙ לְטֹ֔וב כַּאֲשֶׁר־שָׂ֖שׂ עַל־אֲבֹתֶֽיךָ׃ 9
ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.
כִּ֣י תִשְׁמַ֗ע בְּקֹול֙ יְהוָ֣ה אֱלֹהֶ֔יךָ לִשְׁמֹ֤ר מִצְוֹתָיו֙ וְחֻקֹּתָ֔יו הַכְּתוּבָ֕ה בְּסֵ֥פֶר הַתֹּורָ֖ה הַזֶּ֑ה כִּ֤י תָשׁוּב֙ אֶל־יְהוָ֣ה אֱלֹהֶ֔יךָ בְּכָל־לְבָבְךָ֖ וּבְכָל־נַפְשֶֽׁךָ׃ פ 10
೧೦ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.
כִּ֚י הַמִּצְוָ֣ה הַזֹּ֔את אֲשֶׁ֛ר אָנֹכִ֥י מְצַוְּךָ֖ הַיֹּ֑ום לֹֽא־נִפְלֵ֥את הִוא֙ מִמְּךָ֔ וְלֹ֥א רְחֹקָ֖ה הִֽוא׃ 11
೧೧ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.
לֹ֥א בַשָּׁמַ֖יִם הִ֑וא לֵאמֹ֗ר מִ֣י יַעֲלֶה־לָּ֤נוּ הַשָּׁמַ֙יְמָה֙ וְיִקָּחֶ֣הָ לָּ֔נוּ וְיַשְׁמִעֵ֥נוּ אֹתָ֖הּ וְנַעֲשֶֽׂנָּה׃ 12
೧೨ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.
וְלֹֽא־מֵעֵ֥בֶר לַיָּ֖ם הִ֑וא לֵאמֹ֗ר מִ֣י יַעֲבָר־לָ֜נוּ אֶל־עֵ֤בֶר הַיָּם֙ וְיִקָּחֶ֣הָ לָּ֔נוּ וְיַשְׁמִעֵ֥נוּ אֹתָ֖הּ וְנַעֲשֶֽׂנָּה׃ 13
೧೩ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.
כִּֽי־קָרֹ֥וב אֵלֶ֛יךָ הַדָּבָ֖ר מְאֹ֑ד בְּפִ֥יךָ וּבִֽלְבָבְךָ֖ לַעֲשֹׂתֹֽו׃ ס 14
೧೪ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ.
רְאֵ֨ה נָתַ֤תִּי לְפָנֶ֙יךָ֙ הַיֹּ֔ום אֶת־הַֽחַיִּ֖ים וְאֶת־הַטֹּ֑וב וְאֶת־הַמָּ֖וֶת וְאֶת־הָרָֽע׃ 15
೧೫“ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
אֲשֶׁ֨ר אָנֹכִ֣י מְצַוְּךָ֮ הַיֹּום֒ לְאַהֲבָ֞ה אֶת־יְהוָ֤ה אֱלֹהֶ֙יךָ֙ לָלֶ֣כֶת בִּדְרָכָ֔יו וְלִשְׁמֹ֛ר מִצְוֹתָ֥יו וְחֻקֹּתָ֖יו וּמִשְׁפָּטָ֑יו וְחָיִ֣יתָ וְרָבִ֔יתָ וּבֵֽרַכְךָ֙ יְהוָ֣ה אֱלֹהֶ֔יךָ בָּאָ֕רֶץ אֲשֶׁר־אַתָּ֥ה בָא־שָׁ֖מָּה לְרִשְׁתָּֽהּ׃ 16
೧೬ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
וְאִם־יִפְנֶ֥ה לְבָבְךָ֖ וְלֹ֣א תִשְׁמָ֑ע וְנִדַּחְתָּ֗ וְהִֽשְׁתַּחֲוִ֛יתָ לֵאלֹהִ֥ים אֲחֵרִ֖ים וַעֲבַדְתָּֽם׃ 17
೧೭ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,
הִגַּ֤דְתִּי לָכֶם֙ הַיֹּ֔ום כִּ֥י אָבֹ֖ד תֹּאבֵד֑וּן לֹא־תַאֲרִיכֻ֤ן יָמִים֙ עַל־הָ֣אֲדָמָ֔ה אֲשֶׁ֨ר אַתָּ֤ה עֹבֵר֙ אֶת־הַיַּרְדֵּ֔ן לָבֹ֥א שָׁ֖מָּה לְרִשְׁתָּֽהּ׃ 18
೧೮ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
הַעִידֹ֨תִי בָכֶ֣ם הַיֹּום֮ אֶת־הַשָּׁמַ֣יִם וְאֶת־הָאָרֶץ֒ הַחַיִּ֤ים וְהַמָּ֙וֶת֙ נָתַ֣תִּי לְפָנֶ֔יךָ הַבְּרָכָ֖ה וְהַקְּלָלָ֑ה וּבָֽחַרְתָּ֙ בַּֽחַיִּ֔ים לְמַ֥עַן תִּחְיֶ֖ה אַתָּ֥ה וְזַרְעֶֽךָ׃ 19
೧೯ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
לְאַֽהֲבָה֙ אֶת־יְהוָ֣ה אֱלֹהֶ֔יךָ לִשְׁמֹ֥עַ בְּקֹלֹ֖ו וּלְדָבְקָה־בֹ֑ו כִּ֣י ה֤וּא חַיֶּ֙יךָ֙ וְאֹ֣רֶךְ יָמֶ֔יךָ לָשֶׁ֣בֶת עַל־הָאֲדָמָ֗ה אֲשֶׁר֩ נִשְׁבַּ֨ע יְהוָ֧ה לַאֲבֹתֶ֛יךָ לְאַבְרָהָ֛ם לְיִצְחָ֥ק וּֽלְיַעֲקֹ֖ב לָתֵ֥ת לָהֶֽם׃ פ 20
೨೦ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.

< דְּבָרִים 30 >