< דְּבָרִים 33 >
וְזֹ֣את הַבְּרָכָ֗ה אֲשֶׁ֨ר בֵּרַ֥ךְ מֹשֶׁ֛ה אִ֥ישׁ הָאֱלֹהִ֖ים אֶת־בְּנֵ֣י יִשְׂרָאֵ֑ל לִפְנֵ֖י מֹותֹֽו׃ | 1 |
೧ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:
וַיֹּאמַ֗ר יְהוָ֞ה מִסִּינַ֥י בָּא֙ וְזָרַ֤ח מִשֵּׂעִיר֙ לָ֔מֹו הֹופִ֙יעַ֙ מֵהַ֣ר פָּארָ֔ן וְאָתָ֖ה מֵרִבְבֹ֣ת קֹ֑דֶשׁ מִֽימִינֹ֕ו אֵשְׁדָּת (אֵ֥שׁ דָּ֖ת) לָֽמֹו׃ | 2 |
೨“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
אַ֚ף חֹבֵ֣ב עַמִּ֔ים כָּל־קְדֹשָׁ֖יו בְּיָדֶ֑ךָ וְהֵם֙ תֻּכּ֣וּ לְרַגְלֶ֔ךָ יִשָּׂ֖א מִדַּבְּרֹתֶֽיךָ׃ | 3 |
೩“ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.
תֹּורָ֥ה צִוָּה־לָ֖נוּ מֹשֶׁ֑ה מֹורָשָׁ֖ה קְהִלַּ֥ת יַעֲקֹֽב׃ | 4 |
೪ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ.
וַיְהִ֥י בִישֻׁר֖וּן מֶ֑לֶךְ בְּהִתְאַסֵּף֙ רָ֣אשֵׁי עָ֔ם יַ֖חַד שִׁבְטֵ֥י יִשְׂרָאֵֽל׃ | 5 |
೫ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.
יְחִ֥י רְאוּבֵ֖ן וְאַל־יָמֹ֑ת וִיהִ֥י מְתָ֖יו מִסְפָּֽר׃ ס | 6 |
೬“ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.
וְזֹ֣את לִֽיהוּדָה֮ וַיֹּאמַר֒ שְׁמַ֤ע יְהוָה֙ קֹ֣ול יְהוּדָ֔ה וְאֶל־עַמֹּ֖ו תְּבִיאֶ֑נּוּ יָדָיו֙ רָ֣ב לֹ֔ו וְעֵ֥זֶר מִצָּרָ֖יו תִּהְיֶֽה׃ ס | 7 |
೭“ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು.
וּלְלֵוִ֣י אָמַ֔ר תֻּמֶּ֥יךָ וְאוּרֶ֖יךָ לְאִ֣ישׁ חֲסִידֶ֑ךָ אֲשֶׁ֤ר נִסִּיתֹו֙ בְּמַסָּ֔ה תְּרִיבֵ֖הוּ עַל־מֵ֥י מְרִיבָֽה׃ | 8 |
೮ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.
הָאֹמֵ֞ר לְאָבִ֤יו וּלְאִמֹּו֙ לֹ֣א רְאִיתִ֔יו וְאֶת־אֶחָיו֙ לֹ֣א הִכִּ֔יר וְאֶת־בָּנֹו (בָּנָ֖יו) לֹ֣א יָדָ֑ע כִּ֤י שָֽׁמְרוּ֙ אִמְרָתֶ֔ךָ וּבְרִֽיתְךָ֖ יִנְצֹֽרוּ׃ | 9 |
೯ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.
יֹור֤וּ מִשְׁפָּטֶ֙יךָ֙ לְיַעֲקֹ֔ב וְתֹורָתְךָ֖ לְיִשְׂרָאֵ֑ל יָשִׂ֤ימוּ קְטֹורָה֙ בְּאַפֶּ֔ךָ וְכָלִ֖יל עַֽל־מִזְבְּחֶֽךָ׃ | 10 |
೧೦ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.
בָּרֵ֤ךְ יְהוָה֙ חֵילֹ֔ו וּפֹ֥עַל יָדָ֖יו תִּרְצֶ֑ה מְחַ֨ץ מָתְנַ֧יִם קָמָ֛יו וּמְשַׂנְאָ֖יו מִן־יְקוּמֽוּן׃ ס | 11 |
೧೧ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.
לְבִנְיָמִ֣ן אָמַ֔ר יְדִ֣יד יְהֹוָ֔ה יִשְׁכֹּ֥ן לָבֶ֖טַח עָלָ֑יו חֹפֵ֤ף עָלָיו֙ כָּל־הַיֹּ֔ום וּבֵ֥ין כְּתֵיפָ֖יו שָׁכֵֽן׃ ס | 12 |
೧೨ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.
וּלְיֹוסֵ֣ף אָמַ֔ר מְבֹרֶ֥כֶת יְהֹוָ֖ה אַרְצֹ֑ו מִמֶּ֤גֶד שָׁמַ֙יִם֙ מִטָּ֔ל וּמִתְּהֹ֖ום רֹבֶ֥צֶת תָּֽחַת׃ | 13 |
೧೩ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,
וּמִמֶּ֖גֶד תְּבוּאֹ֣ת שָׁ֑מֶשׁ וּמִמֶּ֖גֶד גֶּ֥רֶשׁ יְרָחִֽים׃ | 14 |
೧೪ವರ್ಷ ವರ್ಷಕ್ಕೂ, ತಿಂಗಳು ತಿಂಗಳಿಗೂ ಆಗುವ ಬೆಳೆ,
וּמֵרֹ֖אשׁ הַרְרֵי־קֶ֑דֶם וּמִמֶּ֖גֶד גִּבְעֹ֥ות עֹולָֽם׃ | 15 |
೧೫ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,
וּמִמֶּ֗גֶד אֶ֚רֶץ וּמְלֹאָ֔הּ וּרְצֹ֥ון שֹׁכְנִ֖י סְנֶ֑ה תָּבֹ֙ואתָה֙ לְרֹ֣אשׁ יֹוסֵ֔ף וּלְקָדְקֹ֖ד נְזִ֥יר אֶחָֽיו׃ | 16 |
೧೬ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.
בְּכֹ֨ור שֹׁורֹ֜ו הָדָ֣ר לֹ֗ו וְקַרְנֵ֤י רְאֵם֙ קַרְנָ֔יו בָּהֶ֗ם עַמִּ֛ים יְנַגַּ֥ח יַחְדָּ֖ו אַפְסֵי־אָ֑רֶץ וְהֵם֙ רִבְבֹ֣ות אֶפְרַ֔יִם וְהֵ֖ם אַלְפֵ֥י מְנַשֶּֽׁה׃ ס | 17 |
೧೭ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.
וְלִזְבוּלֻ֣ן אָמַ֔ר שְׂמַ֥ח זְבוּלֻ֖ן בְּצֵאתֶ֑ךָ וְיִשָּׂשכָ֖ר בְּאֹהָלֶֽיךָ׃ | 18 |
೧೮ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ.
עַמִּים֙ הַר־יִקְרָ֔אוּ שָׁ֖ם יִזְבְּח֣וּ זִבְחֵי־צֶ֑דֶק כִּ֣י שֶׁ֤פַע יַמִּים֙ יִינָ֔קוּ וּשְׂפוּנֵ֖י טְמ֥וּנֵי חֹֽול׃ ס | 19 |
೧೯ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ, ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು” ಎಂದು ಹೇಳಿದನು.
וּלְגָ֣ד אָמַ֔ר בָּר֖וּךְ מַרְחִ֣יב גָּ֑ד כְּלָבִ֣יא שָׁכֵ֔ן וְטָרַ֥ף זְרֹ֖ועַ אַף־קָדְקֹֽד׃ | 20 |
೨೦ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.
וַיַּ֤רְא רֵאשִׁית֙ לֹ֔ו כִּי־שָׁ֛ם חֶלְקַ֥ת מְחֹקֵ֖ק סָפ֑וּן וַיֵּתֵא֙ רָ֣אשֵׁי עָ֔ם צִדְקַ֤ת יְהוָה֙ עָשָׂ֔ה וּמִשְׁפָּטָ֖יו עִם־יִשְׂרָאֵֽל׃ ס | 21 |
೨೧ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು” ಎಂದು ಹೇಳಿದನು.
וּלְדָ֣ן אָמַ֔ר דָּ֖ן גּ֣וּר אַרְיֵ֑ה יְזַנֵּ֖ק מִן־הַבָּשָֽׁן׃ | 22 |
೨೨ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು.
וּלְנַפְתָּלִ֣י אָמַ֔ר נַפְתָּלִי֙ שְׂבַ֣ע רָצֹ֔ון וּמָלֵ֖א בִּרְכַּ֣ת יְהוָ֑ה יָ֥ם וְדָרֹ֖ום יְרָֽשָׁה׃ ס | 23 |
೨೩ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.
וּלְאָשֵׁ֣ר אָמַ֔ר בָּר֥וּךְ מִבָּנִ֖ים אָשֵׁ֑ר יְהִ֤י רְצוּי֙ אֶחָ֔יו וְטֹבֵ֥ל בַּשֶּׁ֖מֶן רַגְלֹֽו׃ | 24 |
೨೪ಆಶೇರ್ ಕುಲದ ವಿಷಯದಲ್ಲಿ, “ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.
בַּרְזֶ֥ל וּנְחֹ֖שֶׁת מִנְעָלֶ֑יךָ וּכְיָמֶ֖יךָ דָּבְאֶֽךָ׃ | 25 |
೨೫ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.
אֵ֥ין כָּאֵ֖ל יְשֻׁר֑וּן רֹכֵ֤ב שָׁמַ֙יִם֙ בְעֶזְרֶ֔ךָ וּבְגַאֲוָתֹ֖ו שְׁחָקִֽים׃ | 26 |
೨೬ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.
מְעֹנָה֙ אֱלֹ֣הֵי קֶ֔דֶם וּמִתַּ֖חַת זְרֹעֹ֣ת עֹולָ֑ם וַיְגָ֧רֶשׁ מִפָּנֶ֛יךָ אֹויֵ֖ב וַיֹּ֥אמֶר הַשְׁמֵֽד׃ | 27 |
೨೭ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;
וַיִּשְׁכֹּן֩ יִשְׂרָאֵ֨ל בֶּ֤טַח בָּדָד֙ עֵ֣ין יַעֲקֹ֔ב אֶל־אֶ֖רֶץ דָּגָ֣ן וְתִירֹ֑ושׁ אַף־שָׁמָ֖יו יַ֥עַרְפוּ טָֽל׃ | 28 |
೨೮ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.
אַשְׁרֶ֨יךָ יִשְׂרָאֵ֜ל מִ֣י כָמֹ֗וךָ עַ֚ם נֹושַׁ֣ע בַּֽיהוָ֔ה מָגֵ֣ן עֶזְרֶ֔ךָ וַאֲשֶׁר־חֶ֖רֶב גַּאֲוָתֶ֑ךָ וְיִכָּֽחֲשׁ֤וּ אֹיְבֶ֙יךָ֙ לָ֔ךְ וְאַתָּ֖ה עַל־בָּמֹותֵ֥ימֹו תִדְרֹֽךְ׃ ס | 29 |
೨೯“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.