< דְּבָרִים 1 >
אֵ֣לֶּה הַדְּבָרִ֗ים אֲשֶׁ֨ר דִּבֶּ֤ר מֹשֶׁה֙ אֶל־כָּל־יִשְׂרָאֵ֔ל בְּעֵ֖בֶר הַיַּרְדֵּ֑ן בַּמִּדְבָּ֡ר בָּֽעֲרָבָה֩ מֹ֨ול ס֜וּף בֵּֽין־פָּארָ֧ן וּבֵֽין־תֹּ֛פֶל וְלָבָ֥ן וַחֲצֵרֹ֖ת וְדִ֥י זָהָֽב׃ | 1 |
೧ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.
אַחַ֨ד עָשָׂ֥ר יֹום֙ מֵֽחֹרֵ֔ב דֶּ֖רֶךְ הַר־שֵׂעִ֑יר עַ֖ד קָדֵ֥שׁ בַּרְנֵֽעַ׃ | 2 |
೨ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‌ಬರ್ನೇಯದ ತನಕ ಹನ್ನೊಂದು ದಿನದ ಪ್ರಯಾಣ.
וַיְהִי֙ בְּאַרְבָּעִ֣ים שָׁנָ֔ה בְּעַשְׁתֵּֽי־עָשָׂ֥ר חֹ֖דֶשׁ בְּאֶחָ֣ד לַחֹ֑דֶשׁ דִּבֶּ֤ר מֹשֶׁה֙ אֶל־בְּנֵ֣י יִשְׂרָאֵ֔ל כְּ֠כֹל אֲשֶׁ֨ר צִוָּ֧ה יְהוָ֛ה אֹתֹ֖ו אֲלֵהֶֽם׃ | 3 |
೩ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.
אַחֲרֵ֣י הַכֹּתֹ֗ו אֵ֚ת סִיחֹן֙ מֶ֣לֶךְ הָֽאֱמֹרִ֔י אֲשֶׁ֥ר יֹושֵׁ֖ב בְּחֶשְׁבֹּ֑ון וְאֵ֗ת עֹ֚וג מֶ֣לֶךְ הַבָּשָׁ֔ן אֲשֶׁר־יֹושֵׁ֥ב בְּעַשְׁתָּרֹ֖ת בְּאֶדְרֶֽעִי׃ | 4 |
೪ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು.
בְּעֵ֥בֶר הַיַּרְדֵּ֖ן בְּאֶ֣רֶץ מֹואָ֑ב הֹואִ֣יל מֹשֶׁ֔ה בֵּאֵ֛ר אֶת־הַתֹּורָ֥ה הַזֹּ֖את לֵאמֹֽר׃ | 5 |
೫ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು:
יְהוָ֧ה אֱלֹהֵ֛ינוּ דִּבֶּ֥ר אֵלֵ֖ינוּ בְּחֹרֵ֣ב לֵאמֹ֑ר רַב־לָכֶ֥ם שֶׁ֖בֶת בָּהָ֥ר הַזֶּֽה׃ | 6 |
೬“ಹೋರೇಬಿನಲ್ಲಿ ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈ ಬೆಟ್ಟದ ಬಳಿಯಲ್ಲಿ ವಾಸಿಸಿದ್ದು ಸಾಕು.
פְּנ֣וּ ׀ וּסְע֣וּ לָכֶ֗ם וּבֹ֨אוּ הַ֥ר הָֽאֱמֹרִי֮ וְאֶל־כָּל־שְׁכֵנָיו֒ בָּעֲרָבָ֥ה בָהָ֛ר וּבַשְּׁפֵלָ֥ה וּבַנֶּ֖גֶב וּבְחֹ֣וף הַיָּ֑ם אֶ֤רֶץ הַֽכְּנַעֲנִי֙ וְהַלְּבָנֹ֔ון עַד־הַנָּהָ֥ר הַגָּדֹ֖ל נְהַר־פְּרָֽת׃ | 7 |
೭ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.
רְאֵ֛ה נָתַ֥תִּי לִפְנֵיכֶ֖ם אֶת־הָאָ֑רֶץ בֹּ֚אוּ וּרְשׁ֣וּ אֶת־הָאָ֔רֶץ אֲשֶׁ֣ר נִשְׁבַּ֣ע יְ֠הוָה לַאֲבֹ֨תֵיכֶ֜ם לְאַבְרָהָ֨ם לְיִצְחָ֤ק וּֽלְיַעֲקֹב֙ לָתֵ֣ת לָהֶ֔ם וּלְזַרְעָ֖ם אַחֲרֵיהֶֽם׃ | 8 |
೮ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.
וָאֹמַ֣ר אֲלֵכֶ֔ם בָּעֵ֥ת הַהִ֖וא לֵאמֹ֑ר לֹא־אוּכַ֥ל לְבַדִּ֖י שְׂאֵ֥ת אֶתְכֶֽם׃ | 9 |
೯ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತನಾಡಿ, “ನಿಮ್ಮ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ.
יְהוָ֥ה אֱלֹהֵיכֶ֖ם הִרְבָּ֣ה אֶתְכֶ֑ם וְהִנְּכֶ֣ם הַיֹּ֔ום כְּכֹוכְבֵ֥י הַשָּׁמַ֖יִם לָרֹֽב׃ | 10 |
೧೦ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.
יְהוָ֞ה אֱלֹהֵ֣י אֲבֹֽותֵכֶ֗ם יֹסֵ֧ף עֲלֵיכֶ֛ם כָּכֶ֖ם אֶ֣לֶף פְּעָמִ֑ים וִיבָרֵ֣ךְ אֶתְכֶ֔ם כַּאֲשֶׁ֖ר דִּבֶּ֥ר לָכֶֽם׃ | 11 |
೧೧ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.
אֵיכָ֥ה אֶשָּׂ֖א לְבַדִּ֑י טָרְחֲכֶ֥ם וּמַֽשַּׂאֲכֶ֖ם וְרִֽיבְכֶֽם׃ | 12 |
೧೨ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ, ಹೊಣೆಯನ್ನು ಮತ್ತು ವ್ಯಾಜ್ಯಗಳನ್ನೂ ನಾನೊಬ್ಬನೇ ನಿಭಾಯಿಸುವುದು ಹೇಗೆ?
הָב֣וּ לָ֠כֶם אֲנָשִׁ֨ים חֲכָמִ֧ים וּנְבֹנִ֛ים וִידֻעִ֖ים לְשִׁבְטֵיכֶ֑ם וַאֲשִׂימֵ֖ם בְּרָאשֵׁיכֶֽם׃ | 13 |
೧೩ಆದುದರಿಂದ ನೀವು ಪ್ರತಿಯೊಂದು ಕುಲದಿಂದ ಬುದ್ಧಿವಿವೇಕಗಳಿಂದ ಪ್ರಸಿದ್ಧರಾದ ಪುರುಷರನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುವೆನು” ಎಂದು ಹೇಳಿದೆನು.
וַֽתַּעֲנ֖וּ אֹתִ֑י וַתֹּ֣אמְר֔וּ טֹֽוב־הַדָּבָ֥ר אֲשֶׁר־דִּבַּ֖רְתָּ לַעֲשֹֽׂות׃ | 14 |
೧೪ಅದಕ್ಕೆ ನೀವು, “ನಿನ್ನ ಆಲೋಚನೆಯಂತೆ ನಡೆಯುವುದು ಹಿತವಾದದ್ದೇ” ಎಂದು ಉತ್ತರಕೊಟ್ಟಿರಿ.
וָאֶקַּ֞ח אֶת־רָאשֵׁ֣י שִׁבְטֵיכֶ֗ם אֲנָשִׁ֤ים חֲכָמִים֙ וִֽידֻעִ֔ים וָאֶתֵּ֥ן אֹתָ֛ם רָאשִׁ֖ים עֲלֵיכֶ֑ם שָׂרֵ֨י אֲלָפִ֜ים וְשָׂרֵ֣י מֵאֹ֗ות וְשָׂרֵ֤י חֲמִשִּׁים֙ וְשָׂרֵ֣י עֲשָׂרֹ֔ת וְשֹׁטְרִ֖ים לְשִׁבְטֵיכֶֽם׃ | 15 |
೧೫ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ, ಬುದ್ಧಿವಂತರನ್ನು ಆರಿಸಿಕೊಂಡು ಒಂದೊಂದು ಕುಲದಲ್ಲಿ ಸಾವಿರ ಜನರಿಗೆ ಒಬ್ಬರಂತೆ, ನೂರು ಜನರಿಗೆ ಒಬ್ಬರಂತೆ, ಐವತ್ತು ಜನರಿಗೆ ಒಬ್ಬರಂತೆ ಮತ್ತು ಹತ್ತು ಜನರಿಗೆ ಒಬ್ಬರಂತೆ ಅಧಿಕಾರಿಗಳನ್ನಾಗಿಯೂ ಮತ್ತು ಉಪ ಅಧಿಕಾರಿಗಳನ್ನಾಗಿಯೂ ನೇಮಿಸಿದೆನು.
וָאֲצַוֶּה֙ אֶת־שֹׁ֣פְטֵיכֶ֔ם בָּעֵ֥ת הַהִ֖וא לֵאמֹ֑ר שָׁמֹ֤עַ בֵּין־אֲחֵיכֶם֙ וּשְׁפַטְתֶּ֣ם צֶ֔דֶק בֵּֽין־אִ֥ישׁ וּבֵין־אָחִ֖יו וּבֵ֥ין גֵּרֹֽו׃ | 16 |
೧೬ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.
לֹֽא־תַכִּ֨ירוּ פָנִ֜ים בַּמִּשְׁפָּ֗ט כַּקָּטֹ֤ן כַּגָּדֹל֙ תִּשְׁמָע֔וּן לֹ֤א תָג֙וּרוּ֙ מִפְּנֵי־אִ֔ישׁ כִּ֥י הַמִּשְׁפָּ֖ט לֵאלֹהִ֣ים ה֑וּא וְהַדָּבָר֙ אֲשֶׁ֣ר יִקְשֶׁ֣ה מִכֶּ֔ם תַּקְרִב֥וּן אֵלַ֖י וּשְׁמַעְתִּֽיו׃ | 17 |
೧೭ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.
וָאֲצַוֶּ֥ה אֶתְכֶ֖ם בָּעֵ֣ת הַהִ֑וא אֵ֥ת כָּל־הַדְּבָרִ֖ים אֲשֶׁ֥ר תַּעֲשֽׂוּן׃ | 18 |
೧೮ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆಕೊಟ್ಟೆನು.
וַנִּסַּ֣ע מֵחֹרֵ֗ב וַנֵּ֡לֶךְ אֵ֣ת כָּל־הַמִּדְבָּ֣ר הַגָּדֹול֩ וְהַנֹּורָ֨א הַה֜וּא אֲשֶׁ֣ר רְאִיתֶ֗ם דֶּ֚רֶךְ הַ֣ר הֽ͏ָאֱמֹרִ֔י כַּאֲשֶׁ֥ר צִוָּ֛ה יְהוָ֥ה אֱלֹהֵ֖ינוּ אֹתָ֑נוּ וַנָּבֹ֕א עַ֖ד קָדֵ֥שׁ בַּרְנֵֽעַ׃ | 19 |
೧೯ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.
וָאֹמַ֖ר אֲלֵכֶ֑ם בָּאתֶם֙ עַד־הַ֣ר הָאֱמֹרִ֔י אֲשֶׁר־יְהוָ֥ה אֱלֹהֵ֖ינוּ נֹתֵ֥ן לָֽנוּ׃ | 20 |
೨೦ಆಗ ನಾನು, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಅಮೋರಿಯರ ಬೆಟ್ಟದ ಸೀಮೆಯ ಹತ್ತಿರಕ್ಕೆ ಬಂದಿದ್ದೀರಿ.
רְ֠אֵה נָתַ֨ן יְהוָ֧ה אֱלֹהֶ֛יךָ לְפָנֶ֖יךָ אֶת־הָאָ֑רֶץ עֲלֵ֣ה רֵ֗שׁ כַּאֲשֶׁר֩ דִּבֶּ֨ר יְהוָ֜ה אֱלֹהֵ֤י אֲבֹתֶ֙יךָ֙ לָ֔ךְ אַל־תִּירָ֖א וְאַל־תֵּחָֽת׃ | 21 |
೨೧ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೇಳಿದಂತೆ ಆ ಬೆಟ್ಟವನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ಭಯಪಡದೆ ಧೈರ್ಯವಾಗಿಯೇ ಇರಬೇಕು” ಎಂದು ಹೇಳಿದೆನು.
וַתִּקְרְב֣וּן אֵלַי֮ כֻּלְּכֶם֒ וַתֹּאמְר֗וּ נִשְׁלְחָ֤ה אֲנָשִׁים֙ לְפָנֵ֔ינוּ וְיַחְפְּרוּ־לָ֖נוּ אֶת־הָאָ֑רֶץ וְיָשִׁ֤בוּ אֹתָ֙נוּ֙ דָּבָ֔ר אֶת־הַדֶּ֙רֶךְ֙ אֲשֶׁ֣ר נַעֲלֶה־בָּ֔הּ וְאֵת֙ הֶֽעָרִ֔ים אֲשֶׁ֥ר נָבֹ֖א אֲלֵיהֶֽן׃ | 22 |
೨೨ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, “ನಮಗಿಂತ ಮುಂದಾಗಿ ಜನರನ್ನು ಕಳುಹಿಸುವೆವು. ಅವರು ನಮಗೋಸ್ಕರ ಆ ದೇಶವನ್ನು ಪರೀಕ್ಷಿಸಿ ನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ವಿಷಯದಲ್ಲೂ ಮತ್ತು ಸೇರಬೇಕಾದ ಊರುಗಳ ವಿಷಯದಲ್ಲೂ ನಮಗೆ ವರ್ತಮಾನ ತಿಳಿಸಲಿ” ಎಂದು ಹೇಳಿದಿರಿ.
וַיִּיטַ֥ב בְּעֵינַ֖י הַדָּבָ֑ר וָאֶקַּ֤ח מִכֶּם֙ שְׁנֵ֣ים עָשָׂ֣ר אֲנָשִׁ֔ים אִ֥ישׁ אֶחָ֖ד לַשָּֽׁבֶט׃ | 23 |
೨೩ಅದು ಒಳ್ಳೆಯ ಆಲೋಚನೆಯೆಂದು ನಾನು ತಿಳಿದುಕೊಂಡು ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಜನರನ್ನು ಆರಿಸಿಕೊಂಡೆನು.
וַיִּפְנוּ֙ וַיַּעֲל֣וּ הָהָ֔רָה וַיָּבֹ֖אוּ עַד־נַ֣חַל אֶשְׁכֹּ֑ל וַֽיְרַגְּל֖וּ אֹתָֽהּ׃ | 24 |
೨೪ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ, ಎಷ್ಕೋಲ್ ಎಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶದಲ್ಲಿ ಸಂಚರಿಸಿ ನೋಡಿದರು.
וַיִּקְח֤וּ בְיָדָם֙ מִפְּרִ֣י הָאָ֔רֶץ וַיֹּורִ֖דוּ אֵלֵ֑ינוּ וַיָּשִׁ֨בוּ אֹתָ֤נוּ דָבָר֙ וַיֹּ֣אמְר֔וּ טֹובָ֣ה הָאָ֔רֶץ אֲשֶׁר־יְהוָ֥ה אֱלֹהֵ֖ינוּ נֹתֵ֥ן לָֽנוּ׃ | 25 |
೨೫ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶ” ಎಂದು ನಮಗೆ ತಿಳಿಸಿದರು.
וְלֹ֥א אֲבִיתֶ֖ם לַעֲלֹ֑ת וַתַּמְר֕וּ אֶת־פִּ֥י יְהוָ֖ה אֱלֹהֵיכֶֽם׃ | 26 |
೨೬ಆದರೂ ನೀವು ಬೆಟ್ಟವನ್ನು ಹತ್ತಿ ನೋಡಲು ಇಷ್ಟಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿದಿರಿ.
וַתֵּרָגְנ֤וּ בְאָהֳלֵיכֶם֙ וַתֹּ֣אמְר֔וּ בְּשִׂנְאַ֤ת יְהוָה֙ אֹתָ֔נוּ הֹוצִיאָ֖נוּ מֵאֶ֣רֶץ מִצְרָ֑יִם לָתֵ֥ת אֹתָ֛נוּ בְּיַ֥ד הָאֱמֹרִ֖י לְהַשְׁמִידֵֽנוּ׃ | 27 |
೨೭ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, “ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.
אָנָ֣ה ׀ אֲנַ֣חְנוּ עֹלִ֗ים אַחֵינוּ֩ הֵמַ֨סּוּ אֶת־לְבָבֵ֜נוּ לֵאמֹ֗ר עַ֣ם גָּדֹ֤ול וָרָם֙ מִמֶּ֔נּוּ עָרִ֛ים גְּדֹלֹ֥ת וּבְצוּרֹ֖ת בַּשָּׁמָ֑יִם וְגַם־בְּנֵ֥י עֲנָקִ֖ים רָאִ֥ינוּ שָֽׁם׃ | 28 |
೨೮ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.
וָאֹמַ֖ר אֲלֵכֶ֑ם לֹא־תֽ͏ַעַרְצ֥וּן וְֽלֹא־תִֽירְא֖וּן מֵהֶֽם׃ | 29 |
೨೯ಅದಕ್ಕೆ ನಾನು, “ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ.
יְהוָ֤ה אֱלֹֽהֵיכֶם֙ הַהֹלֵ֣ךְ לִפְנֵיכֶ֔ם ה֖וּא יִלָּחֵ֣ם לָכֶ֑ם כְּ֠כֹל אֲשֶׁ֨ר עָשָׂ֧ה אִתְּכֶ֛ם בְּמִצְרַ֖יִם לְעֵינֵיכֶֽם׃ | 30 |
೩೦ನಿಮ್ಮ ಮುಂದೆ ಮಾರ್ಗದರ್ಶಕನಾಗಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ, ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮವನಾಗಿ ಯುದ್ಧಮಾಡುವನು.
וּבַמִּדְבָּר֙ אֲשֶׁ֣ר רָאִ֔יתָ אֲשֶׁ֤ר נְשָׂאֲךָ֙ יְהוָ֣ה אֱלֹהֶ֔יךָ כַּאֲשֶׁ֥ר יִשָּׂא־אִ֖ישׁ אֶת־בְּנֹ֑ו בְּכָל־הַדֶּ֙רֶךְ֙ אֲשֶׁ֣ר הֲלַכְתֶּ֔ם עַד־בֹּאֲכֶ֖ם עַד־הַמָּקֹ֥ום הַזֶּֽה׃ | 31 |
೩೧ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?” ಎಂದು ನಿಮಗೆ ಹೇಳಿದೆನು.
וּבַדָּבָ֖ר הַזֶּ֑ה אֵֽינְכֶם֙ מַאֲמִינִ֔ם בַּיהוָ֖ה אֱלֹהֵיכֶֽם׃ | 32 |
೩೨ಆದರೂ ನೀವು ನಿಮ್ಮ ದೇವರಾದ ಯೆಹೋವನನ್ನು ನಂಬಲೇ ಇಲ್ಲ.
הַהֹלֵ֨ךְ לִפְנֵיכֶ֜ם בַּדֶּ֗רֶךְ לָת֥וּר לָכֶ֛ם מָקֹ֖ום לֽ͏ַחֲנֹֽתְכֶ֑ם בָּאֵ֣שׁ ׀ לַ֗יְלָה לַרְאֹֽתְכֶם֙ בַּדֶּ֙רֶךְ֙ אֲשֶׁ֣ר תֵּֽלְכוּ־בָ֔הּ וּבֶעָנָ֖ן יֹומָֽם׃ | 33 |
೩೩ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ, ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ರಾತ್ರಿಯಲ್ಲಿ ಬೆಂಕಿಯೋಪಾದಿಯಲ್ಲಿಯೂ ಮತ್ತು ಹಗಲಿನಲ್ಲಿ ಮೇಘದೋಪಾದಿಯಲ್ಲಿಯೂ ನಿಮ್ಮ ಮಾರ್ಗದಲ್ಲಿ ನಿಮ್ಮನ್ನು ಮುನ್ನಡೆಸಿದ ದೇವರನ್ನು ನೀವು ನಂಬಲಿಲ್ಲ.
וַיִּשְׁמַ֥ע יְהוָ֖ה אֶת־קֹ֣ול דִּבְרֵיכֶ֑ם וַיִּקְצֹ֖ף וַיִּשָּׁבַ֥ע לֵאמֹֽר׃ | 34 |
೩೪ಯೆಹೋವನು ನಿಮ್ಮ ಮಾತುಗಳನ್ನು ಕೇಳಿ ಕೋಪಗೊಂಡನು.
אִם־יִרְאֶ֥ה אִישׁ֙ בָּאֲנָשִׁ֣ים הָאֵ֔לֶּה הַדֹּ֥ור הָרָ֖ע הַזֶּ֑ה אֵ֚ת הָאָ֣רֶץ הַטֹּובָ֔ה אֲשֶׁ֣ר נִשְׁבַּ֔עְתִּי לָתֵ֖ת לַאֲבֹתֵיכֶֽם׃ | 35 |
೩೫ಆತನು, “ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ” ಎಂದು ಪ್ರಮಾಣಮಾಡಿದನು.
זֽוּלָתִ֞י כָּלֵ֤ב בֶּן־יְפֻנֶּה֙ ה֣וּא יִרְאֶ֔נָּה וְלֹֽו־אֶתֵּ֧ן אֶת־הָאָ֛רֶץ אֲשֶׁ֥ר דָּֽרַךְ־בָּ֖הּ וּלְבָנָ֑יו יַ֕עַן אֲשֶׁ֥ר מִלֵּ֖א אַחֲרֵ֥י יְהוָֽה׃ | 36 |
೩೬ಮತ್ತು ಯೆಹೋವನು “ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ, ಅವನೇ ಅದನ್ನು ನೋಡುವನು. ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಮತ್ತು ಅವನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.
גַּם־בִּי֙ הִתְאַנַּ֣ף יְהוָ֔ה בִּגְלַלְכֶ֖ם לֵאמֹ֑ר גַּם־אַתָּ֖ה לֹא־תָבֹ֥א שָֽׁם׃ | 37 |
೩೭ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;
יְהֹושֻׁ֤עַ בִּן־נוּן֙ הָעֹמֵ֣ד לְפָנֶ֔יךָ ה֖וּא יָ֣בֹא שָׁ֑מָּה אֹתֹ֣ו חַזֵּ֔ק כִּי־ה֖וּא יַנְחִלֶ֥נָּה אֶת־יִשְׂרָאֵֽל׃ | 38 |
೩೮ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.
וְטַפְּכֶם֩ אֲשֶׁ֨ר אֲמַרְתֶּ֜ם לָבַ֣ז יִהְיֶ֗ה וּ֠בְנֵיכֶם אֲשֶׁ֨ר לֹא־יָדְע֤וּ הַיֹּום֙ טֹ֣וב וָרָ֔ע הֵ֖מָּה יָבֹ֣אוּ שָׁ֑מָּה וְלָהֶ֣ם אֶתְּנֶ֔נָּה וְהֵ֖ם יִירָשֽׁוּהָ׃ | 39 |
೩೯ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.
וְאַתֶּ֖ם פְּנ֣וּ לָכֶ֑ם וּסְע֥וּ הַמִּדְבָּ֖רָה דֶּ֥רֶךְ יַם־סֽוּף׃ | 40 |
೪೦ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಅರಣ್ಯಕ್ಕೆ ಹೊರಟುಹೋಗಿರಿ” ಎಂದು ಆಜ್ಞಾಪಿಸಿದನು.
וַֽתַּעֲנ֣וּ ׀ וַתֹּאמְר֣וּ אֵלַ֗י חָטָאנוּ֮ לַֽיהוָה֒ אֲנַ֤חְנוּ נַעֲלֶה֙ וְנִלְחַ֔מְנוּ כְּכֹ֥ל אֲשֶׁר־צִוָּ֖נוּ יְהוָ֣ה אֱלֹהֵ֑ינוּ וַֽתַּחְגְּר֗וּ אִ֚ישׁ אֶת־כְּלֵ֣י מִלְחַמְתֹּ֔ו וַתָּהִ֖ינוּ לַעֲלֹ֥ת הָהָֽרָה׃ | 41 |
೪೧ಅದಕ್ಕೆ ನೀವು, “ನಾವು ಯೆಹೋವನಿಗೆ ದ್ರೋಹಿಗಳಾದೆವು. ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು” ಎಂದು ಉತ್ತರಕೊಟ್ಟಿರಿ. ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು, ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.
וַיֹּ֨אמֶר יְהוָ֜ה אֵלַ֗י אֱמֹ֤ר לָהֶם֙ לֹ֤א תֽ͏ַעֲלוּ֙ וְלֹא־תִלָּ֣חֲמ֔וּ כִּ֥י אֵינֶ֖נִּי בְּקִרְבְּכֶ֑ם וְלֹא֙ תִּנָּֽגְפ֔וּ לִפְנֵ֖י אֹיְבֵיכֶֽם׃ | 42 |
೪೨ಆದರೆ ಯೆಹೋವನು ನನಗೆ, “ನಾನು ಇವರ ಮಧ್ಯದಲ್ಲಿ ಇರುವುದಿಲ್ಲವಾದುದರಿಂದ ಇವರು ಸೋತುಹೋಗುವರು. ಇವರು ಯುದ್ಧಮಾಡಲೂ ಬಾರದು, ಆ ಬೆಟ್ಟದ ಸೀಮೆಗೆ ಹೋಗಲೂ ಬಾರದು ಎಂದು ಇವರಿಗೆ ಆಜ್ಞಾಪಿಸು” ಎಂದು ಹೇಳಿದನು.
וָאֲדַבֵּ֥ר אֲלֵיכֶ֖ם וְלֹ֣א שְׁמַעְתֶּ֑ם וַתַּמְרוּ֙ אֶת־פִּ֣י יְהוָ֔ה וַתָּזִ֖דוּ וַתַּעֲל֥וּ הָהָֽרָה׃ | 43 |
೪೩ನಾನು ಆ ಮಾತನ್ನು ನಿಮಗೆ ತಿಳಿಸಿದರೂ, ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.
וַיֵּצֵ֨א הָאֱמֹרִ֜י הַיֹּשֵׁ֨ב בָּהָ֤ר הַהוּא֙ לִקְרַאתְכֶ֔ם וַיִּרְדְּפ֣וּ אֶתְכֶ֔ם כַּאֲשֶׁ֥ר תַּעֲשֶׂ֖ינָה הַדְּבֹרִ֑ים וֽ͏ַיַּכְּת֥וּ אֶתְכֶ֛ם בְּשֵׂעִ֖יר עַד־חָרְמָֽה׃ | 44 |
೪೪ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.
וַתָּשֻׁ֥בוּ וַתִּבְכּ֖וּ לִפְנֵ֣י יְהוָ֑ה וְלֹֽא־שָׁמַ֤ע יְהוָה֙ בְּקֹ֣לְכֶ֔ם וְלֹ֥א הֶאֱזִ֖ין אֲלֵיכֶֽם׃ | 45 |
೪೫ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ ಮತ್ತು ರಕ್ಷಿಸಲೂ ಇಲ್ಲ.
וַתֵּשְׁב֥וּ בְקָדֵ֖שׁ יָמִ֣ים רַבִּ֑ים כַּיָּמִ֖ים אֲשֶׁ֥ר יְשַׁבְתֶּֽם׃ | 46 |
೪೬ಆ ಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ ಎಂದು ಹೇಳಿದನು.