< שְׁמֹות 29 >
וְזֶ֨ה הַדָּבָ֜ר אֲשֶֽׁר־תַּעֲשֶׂ֥ה לָהֶ֛ם לְקַדֵּ֥שׁ אֹתָ֖ם לְכַהֵ֣ן לִ֑י לְ֠קַח פַּ֣ר אֶחָ֧ד בֶּן־בָּקָ֛ר וְאֵילִ֥ם שְׁנַ֖יִם תְּמִימִֽם׃ | 1 |
“ಅವರು ನನಗೆ ಯಾಜಕ ಸೇವೆಮಾಡುವಂತೆ ನೀನು ಅವರನ್ನು ಶುದ್ಧ ಮಾಡಲು ಮಾಡಬೇಕಾದದ್ದೇನೆಂದರೆ: ದೋಷವಿಲ್ಲದ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ,
וְלֶ֣חֶם מַצֹּ֗ות וְחַלֹּ֤ת מַצֹּת֙ בְּלוּלֹ֣ת בַּשֶּׁ֔מֶן וּרְקִיקֵ֥י מַצֹּ֖ות מְשֻׁחִ֣ים בַּשָּׁ֑מֶן סֹ֥לֶת חִטִּ֖ים תַּעֲשֶׂ֥ה אֹתָֽם׃ | 2 |
ಅತ್ಯುತ್ತಮ ಗೋಧಿಯ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹೊಯ್ದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಚ್ಚಿದ ಹುಳಿಯಿಲ್ಲದ ಪೂರಿಗಳನ್ನೂ ತೆಗೆದುಕೊಳ್ಳಬೇಕು.
וְנָתַתָּ֤ אֹותָם֙ עַל־סַ֣ל אֶחָ֔ד וְהִקְרַבְתָּ֥ אֹתָ֖ם בַּסָּ֑ל וְאֶ֨ת־הַפָּ֔ר וְאֵ֖ת שְׁנֵ֥י הָאֵילִֽם׃ | 3 |
ಇವುಗಳನ್ನು ಒಂದೇ ಬುಟ್ಟಿಯಲ್ಲಿ ಇಟ್ಟುಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತೆಗೆದುಕೊಂಡು ಬರಬೇಕು.
וְאֶת־אַהֲרֹ֤ן וְאֶת־בָּנָיו֙ תַּקְרִ֔יב אֶל־פֶּ֖תַח אֹ֣הֶל מֹועֵ֑ד וְרָחַצְתָּ֥ אֹתָ֖ם בַּמָּֽיִם׃ | 4 |
ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ತಂದು, ನೀರಿನಲ್ಲಿ ಅವರನ್ನು ತೊಳೆಯಬೇಕು.
וְלָקַחְתָּ֣ אֶת־הַבְּגָדִ֗ים וְהִלְבַּשְׁתָּ֤ אֶֽת־אַהֲרֹן֙ אֶת־הַכֻּתֹּ֔נֶת וְאֵת֙ מְעִ֣יל הָאֵפֹ֔ד וְאֶת־הָאֵפֹ֖ד וְאֶת־הַחֹ֑שֶׁן וְאָפַדְתָּ֣ לֹ֔ו בְּחֵ֖שֶׁב הָאֵפֹֽד׃ | 5 |
ತರುವಾಯ ಆ ವಸ್ತ್ರಗಳನ್ನು ತೆಗೆದುಕೊಂಡು ಆರೋನನಿಗೆ ಅಂಗಿಯನ್ನೂ ಏಫೋದಿನ ನಿಲುವಂಗಿಯನ್ನೂ ಏಫೋದನ್ನೂ ಎದೆಪದಕವನ್ನೂ ತೊಡಿಸಿ, ಏಫೋದಿನ ಕಲಾತ್ಮಕವಾದ ನಡುಕಟ್ಟಿನಿಂದ ಅವನ ನಡುವನ್ನೂ ಕಟ್ಟಿ,
וְשַׂמְתָּ֥ הַמִּצְנֶ֖פֶת עַל־רֹאשֹׁ֑ו וְנָתַתָּ֛ אֶת־נֵ֥זֶר הַקֹּ֖דֶשׁ עַל־הַמִּצְנָֽפֶת׃ | 6 |
ಅವನ ತಲೆಗೆ ಮುಂಡಾಸವನ್ನು ಇಟ್ಟು, ಮುಂಡಾಸದ ಮೇಲೆ ಪರಿಶುದ್ಧ ಪಟ್ಟವನ್ನು ಇಟ್ಟು,
וְלָֽקַחְתָּ֙ אֶת־שֶׁ֣מֶן הַמִּשְׁחָ֔ה וְיָצַקְתָּ֖ עַל־רֹאשֹׁ֑ו וּמָשַׁחְתָּ֖ אֹתֹֽו׃ | 7 |
ಅಭಿಷೇಕಿಸುವ ಎಣ್ಣೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನನ್ನು ಅಭಿಷೇಕಿಸಬೇಕು.
וְאֶת־בָּנָ֖יו תַּקְרִ֑יב וְהִלְבַּשְׁתָּ֖ם כֻּתֳּנֹֽת׃ | 8 |
ನೀನು ಅವನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ,
וְחָגַרְתָּ֩ אֹתָ֨ם אַבְנֵ֜ט אַהֲרֹ֣ן וּבָנָ֗יו וְחָבַשְׁתָּ֤ לָהֶם֙ מִגְבָּעֹ֔ת וְהָיְתָ֥ה לָהֶ֛ם כְּהֻנָּ֖ה לְחֻקַּ֣ת עֹולָ֑ם וּמִלֵּאתָ֥ יֽ͏ַד־אַהֲרֹ֖ן וְיַד־בָּנָֽיו׃ | 9 |
ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
וְהִקְרַבְתָּ֙ אֶת־הַפָּ֔ר לִפְנֵ֖י אֹ֣הֶל מֹועֵ֑ד וְסָמַ֨ךְ אַהֲרֹ֧ן וּבָנָ֛יו אֶת־יְדֵיהֶ֖ם עַל־רֹ֥אשׁ הַפָּֽר׃ | 10 |
“ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಪುತ್ರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
וְשָׁחַטְתָּ֥ אֶת־הַפָּ֖ר לִפְנֵ֣י יְהוָ֑ה פֶּ֖תַח אֹ֥הֶל מֹועֵֽד׃ | 11 |
ತರುವಾಯ ನೀನು ಆ ಹೋರಿಯನ್ನು ಯೆಹೋವ ದೇವರ ಮುಂದೆ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.
וְלָֽקַחְתָּ֙ מִדַּ֣ם הַפָּ֔ר וְנָתַתָּ֛ה עַל־קַרְנֹ֥ת הַמִּזְבֵּ֖חַ בְּאֶצְבָּעֶ֑ךָ וְאֶת־כָּל־הַדָּ֣ם תִּשְׁפֹּ֔ךְ אֶל־יְסֹ֖וד הַמִּזְבֵּֽחַ׃ | 12 |
ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.
וְלָֽקַחְתָּ֗ אֶֽת־כָּל־הַחֵלֶב֮ הַֽמְכַסֶּ֣ה אֶת־הַקֶּרֶב֒ וְאֵ֗ת הַיֹּתֶ֙רֶת֙ עַל־הַכָּבֵ֔ד וְאֵת֙ שְׁתֵּ֣י הַכְּלָיֹ֔ת וְאֶת־הַחֵ֖לֶב אֲשֶׁ֣ר עֲלֵיהֶ֑ן וְהִקְטַרְתָּ֖ הַמִּזְבֵּֽחָה׃ | 13 |
ನೀನು ಕರುಳುಗಳನ್ನೂ ಅವುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.
וְאֶת־בְּשַׂ֤ר הַפָּר֙ וְאֶת־עֹרֹ֣ו וְאֶת־פִּרְשֹׁ֔ו תִּשְׂרֹ֣ף בָּאֵ֔שׁ מִח֖וּץ לַֽמַּחֲנֶ֑ה חַטָּ֖את הֽוּא׃ | 14 |
ಇದಲ್ಲದೆ ಹೋರಿಯ ಮಾಂಸವನ್ನೂ ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿದೆ.
וְאֶת־הָאַ֥יִל הָאֶחָ֖ד תִּקָּ֑ח וְסָ֨מְכ֜וּ אַהֲרֹ֧ן וּבָנָ֛יו אֶת־יְדֵיהֶ֖ם עַל־רֹ֥אשׁ הָאָֽיִל׃ | 15 |
“ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
וְשָׁחַטְתָּ֖ אֶת־הָאָ֑יִל וְלָֽקַחְתָּ֙ אֶת־דָּמֹ֔ו וְזָרַקְתָּ֥ עַל־הַמִּזְבֵּ֖חַ סָבִֽיב׃ | 16 |
ತರುವಾಯ ಆ ಟಗರನ್ನು ನೀನು ವಧಿಸಿ, ಅದರ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.
וְאֶ֨ת־הָאַ֔יִל תְּנַתֵּ֖חַ לִנְתָחָ֑יו וְרָחַצְתָּ֤ קִרְבֹּו֙ וּכְרָעָ֔יו וְנָתַתָּ֥ עַל־נְתָחָ֖יו וְעַל־רֹאשֹֽׁו׃ | 17 |
ಇದಲ್ಲದೆ ಆ ಟಗರನ್ನು ತುಂಡುತುಂಡಾಗಿ ಕಡಿದು, ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು, ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
וְהִקְטַרְתָּ֤ אֶת־כָּל־הָאַ֙יִל֙ הַמִּזְבֵּ֔חָה עֹלָ֥ה ה֖וּא לַֽיהוָ֑ה רֵ֣יחַ נִיחֹ֔וחַ אִשֶּׁ֥ה לַיהוָ֖ה הֽוּא׃ | 18 |
ಅದನ್ನೆಲ್ಲಾ ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ದಹನಬಲಿಯಾಗಿದೆ. ಅದು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ.
וְלָ֣קַחְתָּ֔ אֵ֖ת הָאַ֣יִל הַשֵּׁנִ֑י וְסָמַ֨ךְ אַהֲרֹ֧ן וּבָנָ֛יו אֶת־יְדֵיהֶ֖ם עַל־רֹ֥אשׁ הָאָֽיִל׃ | 19 |
“ಆ ಇನ್ನೊಂದು ಟಗರನ್ನು ನೀನು ತಂದಾಗ, ಆರೋನನೂ ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
וְשָׁחַטְתָּ֣ אֶת־הָאַ֗יִל וְלָקַחְתָּ֤ מִדָּמֹו֙ וְנָֽתַתָּ֡ה עַל־תְּנוּךְ֩ אֹ֨זֶן אַהֲרֹ֜ן וְעַל־תְּנ֨וּךְ אֹ֤זֶן בָּנָיו֙ הַיְמָנִ֔ית וְעַל־בֹּ֤הֶן יָדָם֙ הַיְמָנִ֔ית וְעַל־בֹּ֥הֶן רַגְלָ֖ם הַיְמָנִ֑ית וְזָרַקְתָּ֧ אֶת־הַדָּ֛ם עַל־הַמִּזְבֵּ֖חַ סָבִֽיב׃ | 20 |
ತರುವಾಯ ನೀನು ಅದನ್ನು ವಧಿಸಿ, ಅದರ ರಕ್ತವನ್ನು ಆರೋನನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
וְלָקַחְתָּ֞ מִן־הַדָּ֨ם אֲשֶׁ֥ר עַֽל־הַמִּזְבֵּחַ֮ וּמִשֶּׁ֣מֶן הַמִּשְׁחָה֒ וְהִזֵּיתָ֤ עַֽל־אַהֲרֹן֙ וְעַל־בְּגָדָ֔יו וְעַל־בָּנָ֛יו וְעַל־בִּגְדֵ֥י בָנָ֖יו אִתֹּ֑ו וְקָדַ֥שׁ הוּא֙ וּבְגָדָ֔יו וּבָנָ֛יו וּבִגְדֵ֥י בָנָ֖יו אִתֹּֽו׃ | 21 |
ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಪುತ್ರರೂ ಅವರ ವಸ್ತ್ರಗಳೂ ಪರಿಶುದ್ಧವಾಗುವ ಹಾಗೆ ಬಲಿಪೀಠದ ಮೇಲಿರುವ ರಕ್ತವನ್ನೂ, ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಪುತ್ರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
וְלָקַחְתָּ֣ מִן־הָ֠אַיִל הַחֵ֨לֶב וְהָֽאַלְיָ֜ה וְאֶת־הַחֵ֣לֶב ׀ הַֽמְכַסֶּ֣ה אֶת־הַקֶּ֗רֶב וְאֵ֨ת יֹתֶ֤רֶת הַכָּבֵד֙ וְאֵ֣ת ׀ שְׁתֵּ֣י הַכְּלָיֹ֗ת וְאֶת־הַחֵ֙לֶב֙ אֲשֶׁ֣ר עֲלֵהֶ֔ן וְאֵ֖ת שֹׁ֣וק הַיָּמִ֑ין כִּ֛י אֵ֥יל מִלֻּאִ֖ים הֽוּא׃ | 22 |
“ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಳ್ಳಬೇಕು. ಏಕೆಂದರೆ ಅದು ಪ್ರತಿಷ್ಠೆಯ ಟಗರು.
וְכִכַּ֨ר לֶ֜חֶם אַחַ֗ת וַֽחַלַּ֨ת לֶ֥חֶם שֶׁ֛מֶן אַחַ֖ת וְרָקִ֣יק אֶחָ֑ד מִסַּל֙ הַמַּצֹּ֔ות אֲשֶׁ֖ר לִפְנֵ֥י יְהוָֽה׃ | 23 |
ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ
וְשַׂמְתָּ֣ הַכֹּ֔ל עַ֚ל כַּפֵּ֣י אַהֲרֹ֔ן וְעַ֖ל כַּפֵּ֣י בָנָ֑יו וְהֵנַפְתָּ֥ אֹתָ֛ם תְּנוּפָ֖ה לִפְנֵ֥י יְהוָֽה׃ | 24 |
ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಅವರು ಯೆಹೋವ ದೇವರ ಮುಂದೆ ಅದನ್ನು ನೈವೇದ್ಯವಾಗಿ ನಿವಾಳಿಸಬೇಕು.
וְלָקַחְתָּ֤ אֹתָם֙ מִיָּדָ֔ם וְהִקְטַרְתָּ֥ הַמִּזְבֵּ֖חָה עַל־הָעֹלָ֑ה לְרֵ֤יחַ נִיחֹ֙וחַ֙ לִפְנֵ֣י יְהוָ֔ה אִשֶּׁ֥ה ה֖וּא לַיהוָֽה׃ | 25 |
ನೀನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರ ಮುಂದೆ ಸುವಾಸನೆಗೋಸ್ಕರ ದಹಿಸಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
וְלָקַחְתָּ֣ אֶת־הֶֽחָזֶ֗ה מֵאֵ֤יל הַמִּלֻּאִים֙ אֲשֶׁ֣ר לְאַהֲרֹ֔ן וְהֵנַפְתָּ֥ אֹתֹ֛ו תְּנוּפָ֖ה לִפְנֵ֣י יְהוָ֑ה וְהָיָ֥ה לְךָ֖ לְמָנָֽה׃ | 26 |
ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು, ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನ್ನ ಪಾಲಾಗಿರುವುದು.
וְקִדַּשְׁתָּ֞ אֵ֣ת ׀ חֲזֵ֣ה הַתְּנוּפָ֗ה וְאֵת֙ שֹׁ֣וק הַתְּרוּמָ֔ה אֲשֶׁ֥ר הוּנַ֖ף וַאֲשֶׁ֣ר הוּרָ֑ם מֵאֵיל֙ הַמִּלֻּאִ֔ים מֵאֲשֶׁ֥ר לְאַהֲרֹ֖ן וּמֵאֲשֶׁ֥ר לְבָנָֽיו׃ | 27 |
“ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.
וְהָיָה֩ לְאַהֲרֹ֨ן וּלְבָנָ֜יו לְחָק־עֹולָ֗ם מֵאֵת֙ בְּנֵ֣י יִשְׂרָאֵ֔ל כִּ֥י תְרוּמָ֖ה ה֑וּא וּתְרוּמָ֞ה יִהְיֶ֨ה מֵאֵ֤ת בְּנֵֽי־יִשְׂרָאֵל֙ מִזִּבְחֵ֣י שַׁלְמֵיהֶ֔ם תְּרוּמָתָ֖ם לַיהוָֽה׃ | 28 |
ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.
וּבִגְדֵ֤י הַקֹּ֙דֶשׁ֙ אֲשֶׁ֣ר לְאַהֲרֹ֔ן יִהְי֥וּ לְבָנָ֖יו אַחֲרָ֑יו לְמָשְׁחָ֣ה בָהֶ֔ם וּלְמַלֵּא־בָ֖ם אֶת־יָדָֽם׃ | 29 |
“ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಪುತ್ರರಿಗೆ ಆಗಬೇಕು. ಅವರು ಅಭಿಷಿಕ್ತರಾಗಿ ಅವುಗಳನ್ನು ಧರಿಸಿಕೊಂಡು, ಪ್ರತಿಷ್ಠಿತರಾಗಬೇಕು.
שִׁבְעַ֣ת יָמִ֗ים יִלְבָּשָׁ֧ם הַכֹּהֵ֛ן תַּחְתָּ֖יו מִבָּנָ֑יו אֲשֶׁ֥ר יָבֹ֛א אֶל־אֹ֥הֶל מֹועֵ֖ד לְשָׁרֵ֥ת בַּקֹּֽדֶשׁ׃ | 30 |
ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡೆಸಿ, ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಅವುಗಳನ್ನು ಏಳು ದಿನಗಳವರೆಗೆ ತೊಟ್ಟುಕೊಳ್ಳಬೇಕು.
וְאֵ֛ת אֵ֥יל הַמִּלֻּאִ֖ים תִּקָּ֑ח וּבִשַּׁלְתָּ֥ אֶת־בְּשָׂרֹ֖ו בְּמָקֹ֥ם קָדֹֽשׁ׃ | 31 |
“ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸಬೇಕು.
וְאָכַ֨ל אַהֲרֹ֤ן וּבָנָיו֙ אֶת־בְּשַׂ֣ר הָאַ֔יִל וְאֶת־הַלֶּ֖חֶם אֲשֶׁ֣ר בַּסָּ֑ל פֶּ֖תַח אֹ֥הֶל מֹועֵֽד׃ | 32 |
ಆರೋನನೂ ಅವನ ಪುತ್ರರೂ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಊಟಮಾಡಬೇಕು.
וְאָכְל֤וּ אֹתָם֙ אֲשֶׁ֣ר כֻּפַּ֣ר בָּהֶ֔ם לְמַלֵּ֥א אֶת־יָדָ֖ם לְקַדֵּ֣שׁ אֹתָ֑ם וְזָ֥ר לֹא־יֹאכַ֖ל כִּי־קֹ֥דֶשׁ הֵֽם׃ | 33 |
ಅವರನ್ನು ಪ್ರತಿಷ್ಠೆ ಮಾಡುವುದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವುದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿದವುಗಳನ್ನು ಅವರೇ ಊಟಮಾಡಬೇಕು. ಇತರರು ಅದನ್ನು ಉಣ್ಣಬಾರದು. ಏಕೆಂದರೆ ಅವು ಪರಿಶುದ್ಧವಾದವುಗಳು.
וְֽאִם־יִוָּתֵ֞ר מִבְּשַׂ֧ר הַמִּלֻּאִ֛ים וּמִן־הַלֶּ֖חֶם עַד־הַבֹּ֑קֶר וְשָׂרַפְתָּ֤ אֶת־הַנֹּותָר֙ בָּאֵ֔שׁ לֹ֥א יֵאָכֵ֖ל כִּי־קֹ֥דֶשׁ הֽוּא׃ | 34 |
ಪ್ರತಿಷ್ಠೆ ಬಲಿ ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಡಬೇಕು. ಅದು ಪರಿಶುದ್ಧವಾಗಿರುವುದರಿಂದ ಅದನ್ನು ಮರುದಿನ ತಿನ್ನಬಾರದು.
וְעָשִׂ֜יתָ לְאַהֲרֹ֤ן וּלְבָנָיו֙ כָּ֔כָה כְּכֹ֥ל אֲשֶׁר־צִוִּ֖יתִי אֹתָ֑כָה שִׁבְעַ֥ת יָמִ֖ים תְּמַלֵּ֥א יָדָֽם׃ | 35 |
“ಹೀಗೆ ಆರೋನನಿಗೂ ಅವನ ಪುತ್ರಿರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರಮಾಡಿ, ಏಳು ದಿವಸ ಅವರನ್ನು ಪ್ರತಿಷ್ಠೆ ಕ್ರಮವನ್ನು ಮಾಡಬೇಕು.
וּפַ֨ר חַטָּ֜את תַּעֲשֶׂ֤ה לַיֹּום֙ עַל־הַכִּפֻּרִ֔ים וְחִטֵּאתָ֙ עַל־הַמִּזְבֵּ֔חַ בְּכַפֶּרְךָ֖ עָלָ֑יו וּמָֽשַׁחְתָּ֥ אֹתֹ֖ו לְקַדְּשֹֽׁו׃ | 36 |
ಪ್ರತಿದಿನ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞ ಮಾಡಬೇಕು. ಬಲಿಪೀಠವನ್ನು ಶುದ್ಧಿಮಾಡುವುದಕ್ಕಾಗಿ ಅದರ ಮೇಲೆ ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.
שִׁבְעַ֣ת יָמִ֗ים תְּכַפֵּר֙ עַל־הַמִּזְבֵּ֔חַ וְקִדַּשְׁתָּ֖ אֹתֹ֑ו וְהָיָ֤ה הַמִּזְבֵּ֙חַ֙ קֹ֣דֶשׁ קָֽדָשִׁ֔ים כָּל־הַנֹּגֵ֥עַ בַּמִּזְבֵּ֖חַ יִקְדָּֽשׁ׃ ס | 37 |
ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.
וְזֶ֕ה אֲשֶׁ֥ר תַּעֲשֶׂ֖ה עַל־הַמִּזְבֵּ֑חַ כְּבָשִׂ֧ים בְּנֵֽי־שָׁנָ֛ה שְׁנַ֥יִם לַיֹּ֖ום תָּמִֽיד׃ | 38 |
“ಬಲಿಪೀಠದ ಮೇಲೆ ನೀನು ಅರ್ಪಿಸಬೇಕಾದದ್ದು ಇದೇ: ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಟ್ಟುಬಿಡದೆ ದಹನಬಲಿಯಾಗಿ ಅರ್ಪಿಸಬೇಕು.
אֶת־הַכֶּ֥בֶשׂ הָאֶחָ֖ד תַּעֲשֶׂ֣ה בַבֹּ֑קֶר וְאֵת֙ הַכֶּ֣בֶשׂ הַשֵּׁנִ֔י תַּעֲשֶׂ֖ה בֵּ֥ין הָעַרְבָּֽיִם׃ | 39 |
ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.
וְעִשָּׂרֹ֨ן סֹ֜לֶת בָּל֨וּל בְּשֶׁ֤מֶן כָּתִית֙ רֶ֣בַע הַהִ֔ין וְנֵ֕סֶךְ רְבִעִ֥ית הַהִ֖ין יָ֑יִן לַכֶּ֖בֶשׂ הָאֶחָֽד׃ | 40 |
ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು.
וְאֵת֙ הַכֶּ֣בֶשׂ הַשֵּׁנִ֔י תַּעֲשֶׂ֖ה בֵּ֣ין הָעַרְבָּ֑יִם כְּמִנְחַ֨ת הַבֹּ֤קֶר וּכְנִסְכָּהּ֙ תּֽ͏ַעֲשֶׂה־לָּ֔הּ לְרֵ֣יחַ נִיחֹ֔חַ אִשֶּׁ֖ה לַיהוָֽה׃ | 41 |
ಇನ್ನೊಂದು ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಬೆಳಿಗ್ಗೆ ಮಾಡಿದಂತೆಯೇ ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
עֹלַ֤ת תָּמִיד֙ לְדֹרֹ֣תֵיכֶ֔ם פֶּ֥תַח אֹֽהֶל־מֹועֵ֖ד לִפְנֵ֣י יְהוָ֑ה אֲשֶׁ֨ר אִוָּעֵ֤ד לָכֶם֙ שָׁ֔מָּה לְדַבֵּ֥ר אֵלֶ֖יךָ שָֽׁם׃ | 42 |
“ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ದೇವದರ್ಶನದ ಗುಡಾರದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವುದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವುದು.
וְנֹעַדְתִּ֥י שָׁ֖מָּה לִבְנֵ֣י יִשְׂרָאֵ֑ל וְנִקְדַּ֖שׁ בִּכְבֹדִֽי׃ | 43 |
ಅಲ್ಲಿ ನಾನು ಇಸ್ರಾಯೇಲರನ್ನು ಸಂಧಿಸುವೆನು. ಅದು ನನ್ನ ಮಹಿಮೆಯಿಂದ ಪವಿತ್ರವಾಗುವುದು.
וְקִדַּשְׁתִּ֛י אֶת־אֹ֥הֶל מֹועֵ֖ד וְאֶת־הַמִּזְבֵּ֑חַ וְאֶת־אַהֲרֹ֧ן וְאֶת־בָּנָ֛יו אֲקַדֵּ֖שׁ לְכַהֵ֥ן לִֽי׃ | 44 |
“ನಾನು ದೇವದರ್ಶನದ ಗುಡಾರವನ್ನೂ ಬಲಿಪೀಠವನ್ನೂ ಪರಿಶುದ್ಧ ಮಾಡುವೆನು. ಆರೋನನನ್ನೂ ಅವನ ಪುತ್ರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರ ಮಾಡುವೆನು.
וְשָׁ֣כַנְתִּ֔י בְּתֹ֖וךְ בְּנֵ֣י יִשְׂרָאֵ֑ל וְהָיִ֥יתִי לָהֶ֖ם לֵאלֹהִֽים׃ | 45 |
ಇಸ್ರಾಯೇಲರ ಮಧ್ಯದಲ್ಲಿ ನಾನು ವಾಸಮಾಡಿ, ಅವರಿಗೆ ನಾನು ದೇವರಾಗಿರುವೆನು.
וְיָדְע֗וּ כִּ֣י אֲנִ֤י יְהוָה֙ אֱלֹ֣הֵיהֶ֔ם אֲשֶׁ֨ר הֹוצֵ֧אתִי אֹתָ֛ם מֵאֶ֥רֶץ מִצְרַ֖יִם לְשָׁכְנִ֣י בְתֹוכָ֑ם אֲנִ֖י יְהוָ֥ה אֱלֹהֵיהֶֽם׃ פ | 46 |
ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ಅವರ ದೇವರಾದ ಯೆಹೋವ ದೇವರು ನಾನೇ ಎಂದು ಅವರಿಗೆ ತಿಳಿಯುವುದು. ನಾನೇ ಅವರ ದೇವರಾದ ಯೆಹೋವ ದೇವರು.