< שְׁמֹות 8 >

וַיֹּ֤אמֶר יְהוָה֙ אֶל־מֹשֶׁ֔ה בֹּ֖א אֶל־פַּרְעֹ֑ה וְאָמַרְתָּ֣ אֵלָ֗יו כֹּ֚ה אָמַ֣ר יְהוָ֔ה שַׁלַּ֥ח אֶת־עַמִּ֖י וְיַֽעַבְדֻֽנִי׃ 1
ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.
וְאִם־מָאֵ֥ן אַתָּ֖ה לְשַׁלֵּ֑חַ הִנֵּ֣ה אָנֹכִ֗י נֹגֵ֛ף אֶת־כָּל־גְּבוּלְךָ֖ בַּֽצְפַרְדְּעִֽים׃ 2
ಕಳುಹಿಸುವುದಕ್ಕೆ ನಿರಾಕರಿಸಿದರೆ, ನಾನು ನಿನ್ನ ದೇಶವನ್ನೆಲ್ಲಾ ಕಪ್ಪೆಗಳಿಂದ ಉಪದ್ರವ ತರುವೆನು.
וְשָׁרַ֣ץ הַיְאֹר֮ צְפַרְדְּעִים֒ וְעָלוּ֙ וּבָ֣אוּ בְּבֵיתֶ֔ךָ וּבַחֲדַ֥ר מִשְׁכָּבְךָ֖ וְעַל־מִטָּתֶ֑ךָ וּבְבֵ֤ית עֲבָדֶ֙יךָ֙ וּבְעַמֶּ֔ךָ וּבְתַנּוּרֶ֖יךָ וּבְמִשְׁאֲרֹותֶֽיךָ׃ 3
ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ನಿನ್ನ ಅರಮನೆಯಲ್ಲಿಯೂ ನೀನು ಮಲಗುವ ಕೊಠಡಿಯಲ್ಲಿಯೂ ನಿನ್ನ ಹಾಸಿಗೆಯ ಮೇಲೂ ನಿನ್ನ ಸೇವಕರ ಮನೆಗಳಲ್ಲಿಯೂ ನಿನ್ನ ಜನರ ಮೇಲೆಯೂ ನಿನ್ನ ಒಲೆಗಳಲ್ಲಿಯೂ ನಿನ್ನ ಹಿಟ್ಟು ನಾದುವ ಹರಿವಾಣಗಳಲ್ಲಿಯೂ ಕಾಣಿಸಿಕೊಳ್ಳುವುವು.
וּבְכָ֥ה וּֽבְעַמְּךָ֖ וּבְכָל־עֲבָדֶ֑יךָ יַעֲל֖וּ הַֽצְפַרְדְּעִֽים׃ 4
ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಅಧಿಕಾರಿಗಳ ಮೇಲೆಯೂ ಕಪ್ಪೆಗಳು ಏರಿ ಬರುವುವು,’ ಎಂದು ಹೇಳು,” ಎಂದರು.
וַיֹּ֣אמֶר יְהוָה֮ אֶל־מֹשֶׁה֒ אֱמֹ֣ר אֶֽל־אַהֲרֹ֗ן נְטֵ֤ה אֶת־יָדְךָ֙ בְּמַטֶּ֔ךָ עַל־הַ֨נְּהָרֹ֔ת עַל־הַיְאֹרִ֖ים וְעַל־הָאֲגַמִּ֑ים וְהַ֥עַל אֶת־הַֽצְפַרְדְּעִ֖ים עַל־אֶ֥רֶץ מִצְרָֽיִם׃ 5
ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಹಿಡಿದುಕೊಂಡು ನದಿ, ಕಾಲುವೆ, ಕೆರೆಗಳ ಮೇಲೆಲ್ಲಾ ನಿನ್ನ ಕೈಚಾಚಿ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಬರುವಂತೆ ಮಾಡು,’ ಎಂದು ಹೇಳಬೇಕು,” ಎಂದರು.
וַיֵּ֤ט אַהֲרֹן֙ אֶת־יָדֹ֔ו עַ֖ל מֵימֵ֣י מִצְרָ֑יִם וַתַּ֙עַל֙ הַצְּפַרְדֵּ֔עַ וַתְּכַ֖ס אֶת־אֶ֥רֶץ מִצְרָֽיִם׃ 6
ಆರೋನನು ಈಜಿಪ್ಟಿನ ನೀರಿನ ಮೇಲೆ ಕೈಚಾಚಿದಾಗ, ಕಪ್ಪೆಗಳು ಏರಿಬಂದು ಈಜಿಪ್ಟ್ ದೇಶವನ್ನು ಮುತ್ತಿಕೊಂಡವು.
וַיַּֽעֲשׂוּ־כֵ֥ן הֽ͏ַחֲרְטֻמִּ֖ים בְּלָטֵיהֶ֑ם וַיַּעֲל֥וּ אֶת־הַֽצְפַרְדְּעִ֖ים עַל־אֶ֥רֶץ מִצְרָֽיִם׃ 7
ಆದರೆ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿ, ಕಪ್ಪೆಗಳನ್ನು ಈಜಿಪ್ಟ್ ದೇಶದ ಮೇಲೆ ಬರಮಾಡಿದರು.
וַיִּקְרָ֨א פַרְעֹ֜ה לְמֹשֶׁ֣ה וּֽלְאַהֲרֹ֗ן וַיֹּ֙אמֶר֙ הַעְתִּ֣ירוּ אֶל־יְהוָ֔ה וְיָסֵר֙ הַֽצְפַרְדְּעִ֔ים מִמֶּ֖נִּי וּמֵֽעַמִּ֑י וַאֲשַׁלְּחָה֙ אֶת־הָעָ֔ם וְיִזְבְּח֖וּ לַיהוָֽה׃ 8
ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.
וַיֹּ֣אמֶר מֹשֶׁ֣ה לְפַרְעֹה֮ הִתְפָּאֵ֣ר עָלַי֒ לְמָתַ֣י ׀ אַעְתִּ֣יר לְךָ֗ וְלַעֲבָדֶ֙יךָ֙ וּֽלְעַמְּךָ֔ לְהַכְרִית֙ הַֽצֲפַרְדְּעִ֔ים מִמְּךָ֖ וּמִבָּתֶּ֑יךָ רַ֥ק בַּיְאֹ֖ר תִּשָּׁאַֽרְנָה׃ 9
ಅದಕ್ಕೆ ಮೋಶೆ, “ಈ ಕಪ್ಪೆಗಳು ತಮ್ಮ ಬಳಿಯಿಂದಲೂ ನಿನ್ನ ಮನೆಗಳಿಂದಲೂ ತೊಲಗಿ ಹೋಗಿ, ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ಯಾವಾಗ ನಿನ್ನ ಪರವಾಗಿ, ನಿನ್ನ ಪ್ರಜಾ ಪರಿವಾರದ ಪರವಾಗಿ ಪ್ರಾರ್ಥನೆ ಸಲ್ಲಿಸಬೇಕು? ನಿನಗೆ ಸರಿದೋರಿದಂತೆ ನೀನೇ ಅದಕ್ಕೊಂದು ಕಾಲವನ್ನು ನಿಗದಿಮಾಡಬೇಕು,” ಎಂದು ಫರೋಹನನ್ನು ವಿನಂತಿಸಿದನು.
וַיֹּ֖אמֶר לְמָחָ֑ר וַיֹּ֙אמֶר֙ כִּדְבָ֣רְךָ֔ לְמַ֣עַן תֵּדַ֔ע כִּי־אֵ֖ין כַּיהוָ֥ה אֱלֹהֵֽינוּ׃ 10
ಫರೋಹನು ಮೋಶೆಗೆ, “ನಾಳೆ,” ಎಂದನು. ಆಗ ಮೋಶೆಯು, “ನಮ್ಮ ದೇವರಾಗಿರುವ ಯೆಹೋವ ದೇವರ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ನಿನ್ನ ಮಾತಿನ ಪ್ರಕಾರ ಆಗಲಿ.
וְסָר֣וּ הַֽצְפַרְדְּעִ֗ים מִמְּךָ֙ וּמִבָּ֣תֶּ֔יךָ וּמֵעֲבָדֶ֖יךָ וּמֵעַמֶּ֑ךָ רַ֥ק בַּיְאֹ֖ר תִּשָּׁאַֽרְנָה׃ 11
ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ, ನೈಲ್ ನದಿಯಲ್ಲಿ ಮಾತ್ರ ಇರುವುವು,” ಎಂದನು.
וַיֵּצֵ֥א מֹשֶׁ֛ה וְאַהֲרֹ֖ן מֵעִ֣ם פַּרְעֹ֑ה וַיִּצְעַ֤ק מֹשֶׁה֙ אֶל־יְהוָ֔ה עַל־דְּבַ֥ר הַֽצְפַרְדְּעִ֖ים אֲשֶׁר־שָׂ֥ם לְפַרְעֹֽה׃ 12
ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ, ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ಕಾಟದ ಬಗ್ಗೆ ಯೆಹೋವ ದೇವರಿಗೆ ಮೊರೆಯಿಟ್ಟನು.
וַיַּ֥עַשׂ יְהוָ֖ה כִּדְבַ֣ר מֹשֶׁ֑ה וַיָּמֻ֙תוּ֙ הַֽצְפַרְדְּעִ֔ים מִן־הַבָּתִּ֥ים מִן־הַחֲצֵרֹ֖ת וּמִן־הַשָּׂדֹֽת׃ 13
ಮೋಶೆ ಹೇಳಿದ ಪ್ರಕಾರ ಯೆಹೋವ ದೇವರು ಮಾಡಿದರು. ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.
וַיִּצְבְּר֥וּ אֹתָ֖ם חֳמָרִ֣ם חֳמָרִ֑ם וַתִּבְאַ֖שׁ הָאָֽרֶץ׃ 14
ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.
וַיַּ֣רְא פַּרְעֹ֗ה כִּ֤י הָֽיְתָה֙ הָֽרְוָחָ֔ה וְהַכְבֵּד֙ אֶת־לִבֹּ֔ו וְלֹ֥א שָׁמַ֖ע אֲלֵהֶ֑ם כַּאֲשֶׁ֖ר דִּבֶּ֥ר יְהוָֽה׃ ס 15
ಆದರೆ ಫರೋಹನು ತನಗೆ ಉಪಶಮನವಾಯಿತೆಂದು ನೋಡಿದಾಗ, ಯೆಹೋವ ದೇವರು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣ ಮಾಡಿಕೊಂಡು, ಮೋಶೆ ಮತ್ತು ಆರೋನರ ಮಾತನ್ನು ಕೇಳಲಿಲ್ಲ.
וַיֹּ֣אמֶר יְהוָה֮ אֶל־מֹשֶׁה֒ אֱמֹר֙ אֶֽל־אַהֲרֹ֔ן נְטֵ֣ה אֶֽת־מַטְּךָ֔ וְהַ֖ךְ אֶת־עֲפַ֣ר הָאָ֑רֶץ וְהָיָ֥ה לְכִנִּ֖ם בְּכָל־אֶ֥רֶץ מִצְרָֽיִם׃ 16
ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಈಜಿಪ್ಟ್ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವುವು,’ ಎಂದು ಹೇಳು,” ಎಂದರು.
וַיַּֽעֲשׂוּ־כֵ֗ן וַיֵּט֩ אַהֲרֹ֨ן אֶת־יָדֹ֤ו בְמַטֵּ֙הוּ֙ וַיַּךְ֙ אֶת־עֲפַ֣ר הָאָ֔רֶץ וַתְּהִי֙ הַכִּנָּ֔ם בָּאָדָ֖ם וּבַבְּהֵמָ֑ה כָּל־עֲפַ֥ר הָאָ֛רֶץ הָיָ֥ה כִנִּ֖ים בְּכָל־אֶ֥רֶץ מִצְרָֽיִם׃ 17
ಅವರು ಹಾಗೆಯೇ ಮಾಡಲಾರಂಭಿಸಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು, ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾದವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು
וַיַּעֲשׂוּ־כֵ֨ן הַחַרְטֻמִּ֧ים בְּלָטֵיהֶ֛ם לְהֹוצִ֥יא אֶת־הַכִּנִּ֖ים וְלֹ֣א יָכֹ֑לוּ וַתְּהִי֙ הַכִּנָּ֔ם בָּאָדָ֖ם וּבַבְּהֵמָֽה׃ 18
ಮಂತ್ರಗಾರರು ಹೇನುಗಳನ್ನು ಬರಮಾಡುವುದಕ್ಕೆ ತಮ್ಮ ಮಾಟಗಳಿಂದ ಪ್ರಯತ್ನಿಸಿದರು, ಆದರೆ ಸಾಧ್ಯವಾಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.
וַיֹּאמְר֤וּ הַֽחַרְטֻמִּים֙ אֶל־פַּרְעֹ֔ה אֶצְבַּ֥ע אֱלֹהִ֖ים הִ֑וא וַיֶּחֱזַ֤ק לֵב־פַּרְעֹה֙ וְלֹֽא־שָׁמַ֣ע אֲלֵהֶ֔ם כַּאֲשֶׁ֖ר דִּבֶּ֥ר יְהוָֽה׃ ס 19
ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
וַיֹּ֨אמֶר יְהוָ֜ה אֶל־מֹשֶׁ֗ה הַשְׁכֵּ֤ם בַּבֹּ֙קֶר֙ וְהִתְיַצֵּב֙ לִפְנֵ֣י פַרְעֹ֔ה הִנֵּ֖ה יֹוצֵ֣א הַמָּ֑יְמָה וְאָמַרְתָּ֣ אֵלָ֗יו כֹּ֚ה אָמַ֣ר יְהוָ֔ה שַׁלַּ֥ח עַמִּ֖י וְיַֽעַבְדֻֽנִי׃ 20
ಆಗ ಯೆಹೋವ ದೇವರು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜನರು ನನ್ನನ್ನು ಆರಾಧಿಸುವಂತೆ ಅವರನ್ನು ಕಳುಹಿಸು.
כִּ֣י אִם־אֵינְךָ֮ מְשַׁלֵּ֣חַ אֶת־עַמִּי֒ הִנְנִי֩ מַשְׁלִ֨יחַ בְּךָ֜ וּבַעֲבָדֶ֧יךָ וּֽבְעַמְּךָ֛ וּבְבָתֶּ֖יךָ אֶת־הֶעָרֹ֑ב וּמָ֨לְא֜וּ בָּתֵּ֤י מִצְרַ֙יִם֙ אֶת־הֶ֣עָרֹ֔ב וְגַ֥ם הָאֲדָמָ֖ה אֲשֶׁר־הֵ֥ם עָלֶֽיהָ׃ 21
ನೀನು ನನ್ನ ಜನರನ್ನು ಕಳುಹಿಸದೆ ಹೋದರೆ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಿಗೂ ನೊಣಗಳನ್ನು ಕಳುಹಿಸುವೆನು. ಈಜಿಪ್ಟಿನವರ ಮನೆಗಳೂ, ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವುವು.
וְהִפְלֵיתִי֩ בַיֹּ֨ום הַה֜וּא אֶת־אֶ֣רֶץ גֹּ֗שֶׁן אֲשֶׁ֤ר עַמִּי֙ עֹמֵ֣ד עָלֶ֔יהָ לְבִלְתִּ֥י הֱיֹֽות־שָׁ֖ם עָרֹ֑ב לְמַ֣עַן תֵּדַ֔ע כִּ֛י אֲנִ֥י יְהוָ֖ה בְּקֶ֥רֶב הָאָֽרֶץ׃ 22
“‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.
וְשַׂמְתִּ֣י פְדֻ֔ת בֵּ֥ין עַמִּ֖י וּבֵ֣ין עַמֶּ֑ךָ לְמָחָ֥ר יִהְיֶ֖ה הָאֹ֥ת הַזֶּֽה׃ 23
ನನ್ನ ಜನರನ್ನೂ, ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಸೂಚಕಕಾರ್ಯ ಕಾಣುವುದು,’ ಎಂದು ಹೇಳು,” ಎಂದರು.
וַיַּ֤עַשׂ יְהוָה֙ כֵּ֔ן וַיָּבֹא֙ עָרֹ֣ב כָּבֵ֔ד בֵּ֥יתָה פַרְעֹ֖ה וּבֵ֣ית עֲבָדָ֑יו וּבְכָל־אֶ֧רֶץ מִצְרַ֛יִם תִּשָּׁחֵ֥ת הָאָ֖רֶץ מִפְּנֵ֥י הֶעָרֹֽב׃ 24
ಯೆಹೋವ ದೇವರು ಹಾಗೆಯೇ ಮಾಡಲಾರಂಭಿಸಿದರು. ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಈಜಿಪ್ಟ್ ದೇಶದಲ್ಲಿಯೂ ಬಂದವು. ನೊಣಗಳಿಂದ ದೇಶವು ಹಾಳಾಗಿ ಹೋಯಿತು.
וַיִּקְרָ֣א פַרְעֹ֔ה אֶל־מֹשֶׁ֖ה וּֽלְאַהֲרֹ֑ן וַיֹּ֗אמֶר לְכ֛וּ זִבְח֥וּ לֽ͏ֵאלֹהֵיכֶ֖ם בָּאָֽרֶץ׃ 25
ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ,” ಎಂದನು.
וַיֹּ֣אמֶר מֹשֶׁ֗ה לֹ֤א נָכֹון֙ לַעֲשֹׂ֣ות כֵּ֔ן כִּ֚י תֹּועֲבַ֣ת מִצְרַ֔יִם נִזְבַּ֖ח לַיהוָ֣ה אֱלֹהֵ֑ינוּ הֵ֣ן נִזְבַּ֞ח אֶת־תֹּועֲבַ֥ת מִצְרַ֛יִם לְעֵינֵיהֶ֖ם וְלֹ֥א יִסְקְלֻֽנוּ׃ 26
ಆದರೆ ಮೋಶೆಯು ಫರೋಹನಿಗೆ, “ಹಾಗೆ ಮಾಡುವುದು ಯುಕ್ತವಲ್ಲ. ಏಕೆಂದರೆ ನಮ್ಮ ಯೆಹೋವ ದೇವರಾದ ದೇವರಿಗೆ ಯಜ್ಞವನ್ನರ್ಪಿಸುವುದು ಈಜಿಪ್ಟಿನವರಿಗೆ ಅಸಹ್ಯವಾಗಿರುವುದು. ಈಜಿಪ್ಟಿನವರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಅರ್ಪಿಸಿದರೆ, ಅವರು ನಮ್ಮ ಮೇಲೆ ಕಲ್ಲೆಸೆದಾರು.
דֶּ֚רֶךְ שְׁלֹ֣שֶׁת יָמִ֔ים נֵלֵ֖ךְ בַּמִּדְבָּ֑ר וְזָבַ֙חְנוּ֙ לַֽיהוָ֣ה אֱלֹהֵ֔ינוּ כַּאֲשֶׁ֖ר יֹאמַ֥ר אֵלֵֽינוּ׃ 27
ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವ ದೇವರಿಗೆ ಅವರ ಅಪ್ಪಣೆಯಂತೆ ಯಜ್ಞಮಾಡುವೆವು,” ಎಂದು ಹೇಳಿದನು.
וַיֹּ֣אמֶר פַּרְעֹ֗ה אָנֹכִ֞י אֲשַׁלַּ֤ח אֶתְכֶם֙ וּזְבַחְתֶּ֞ם לַיהוָ֤ה אֱלֹֽהֵיכֶם֙ בַּמִּדְבָּ֔ר רַ֛ק הַרְחֵ֥ק לֹא־תַרְחִ֖יקוּ לָלֶ֑כֶת הַעְתִּ֖ירוּ בַּעֲדִֽי׃ 28
ಅದಕ್ಕೆ ಫರೋಹನು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರಿಗೆ ಮರುಭೂಮಿಯಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿಸುತ್ತೇನೆ. ಆದರೆ ದೂರ ಹೋಗಬೇಡಿರಿ, ನನಗೋಸ್ಕರ ಪ್ರಾರ್ಥನೆಮಾಡಿರಿ,” ಎಂದನು.
וַיֹּ֣אמֶר מֹשֶׁ֗ה הִנֵּ֨ה אָנֹכִ֜י יֹוצֵ֤א מֵֽעִמָּךְ֙ וְהַעְתַּרְתִּ֣י אֶל־יְהוָ֔ה וְסָ֣ר הֶעָרֹ֗ב מִפַּרְעֹ֛ה מֵעֲבָדָ֥יו וּמֵעַמֹּ֖ו מָחָ֑ר רַ֗ק אַל־יֹסֵ֤ף פַּרְעֹה֙ הָתֵ֔ל לְבִלְתִּי֙ שַׁלַּ֣ח אֶת־הָעָ֔ם לִזְבֹּ֖חַ לַֽיהוָֽה׃ 29
ಆಗ ಮೋಶೆಯು ಅವನಿಗೆ, “ನಾನು ನಿನ್ನನ್ನು ಬಿಟ್ಟು ಹೋಗಿ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ, ಅವನ ಸೇವಕರನ್ನೂ, ಅವರ ಜನರನ್ನೂ ಬಿಟ್ಟು ಹೋಗುವುವು. ಆದರೆ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುವುದಕ್ಕೆ ಫರೋಹನಾದ ನೀನು ಜನರನ್ನು ಕಳುಹಿಸದೆ ಇನ್ನು ಮೇಲೆ ವಂಚಿಸಬಾರದು,” ಎಂದನು.
וַיֵּצֵ֥א מֹשֶׁ֖ה מֵעִ֣ם פַּרְעֹ֑ה וַיֶּעְתַּ֖ר אֶל־יְהוָֽה׃ 30
ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ, ಯೆಹೋವ ದೇವರನ್ನು ಬೇಡಿಕೊಂಡನು.
וַיַּ֤עַשׂ יְהוָה֙ כִּדְבַ֣ר מֹשֶׁ֔ה וַיָּ֙סַר֙ הֶעָרֹ֔ב מִפַּרְעֹ֖ה מֵעֲבָדָ֣יו וּמֵעַמֹּ֑ו לֹ֥א נִשְׁאַ֖ר אֶחָֽד׃ 31
ಮೋಶೆಯು ಕೇಳಿದಂತೆಯೇ ಯೆಹೋವ ದೇವರು ಮಾಡಿದರು. ಅವರು ಫರೋಹನಿಂದಲೂ ಅವನ ಸೇವಕರಿಂದಲೂ, ಅವರ ಜನರಿಂದಲೂ ನೊಣಗಳನ್ನು ತೆಗೆದುಹಾಕಿದರು. ಅಲ್ಲಿ ಒಂದಾದರೂ ಉಳಿಯಲಿಲ್ಲ.
וַיַּכְבֵּ֤ד פַּרְעֹה֙ אֶת־לִבֹּ֔ו גַּ֖ם בַּפַּ֣עַם הַזֹּ֑את וְלֹ֥א שִׁלַּ֖ח אֶת־הָעָֽם׃ פ 32
ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡಿದ್ದಲ್ಲದೆ, ಜನರನ್ನೂ ಹೋಗಗೊಡಿಸಲಿಲ್ಲ.

< שְׁמֹות 8 >