< יְחֶזְקֵאל 6 >
וַיְהִ֥י דְבַר־יְהוָ֖ה אֵלַ֥י לֵאמֹֽר׃ | 1 |
ಯೆಹೋವ ದೇವರು ಈ ವಾಕ್ಯವು ನನಗೆ ಬಂದಿತು:
בֶּן־אָדָ֕ם שִׂ֥ים פָּנֶ֖יךָ אֶל־הָרֵ֣י יִשְׂרָאֵ֑ל וְהִנָּבֵ֖א אֲלֵיהֶֽם׃ | 2 |
“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು, ಅವುಗಳಿಗೆ ವಿರೋಧವಾಗಿ ಹೀಗೆ ಪ್ರವಾದಿಸು,
וְאָ֣מַרְתָּ֔ הָרֵי֙ יִשְׂרָאֵ֔ל שִׁמְע֖וּ דְּבַר־אֲדֹנָ֣י יְהוִ֑ה כֹּה־אָמַ֣ר אֲדֹנָ֣י יְ֠הוִה לֶהָרִ֨ים וְלַגְּבָעֹ֜ות לָאֲפִיקִ֣ים וְלַגֵּאָיֹת (וְלַגֵּאָיֹ֗ות) הִנְנִ֨י אֲנִ֜י מֵבִ֤יא עֲלֵיכֶם֙ חֶ֔רֶב וְאִבַּדְתִּ֖י בָּמֹֽותֵיכֶֽם׃ | 3 |
‘ಇಸ್ರಾಯೇಲಿನ ಪರ್ವತಗಳೇ, ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಹೌದು, ಸಾರ್ವಭೌಮ ಯೆಹೋವ ದೇವರು ಪರ್ವತಗಳಿಗೂ ಗುಡ್ಡಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳುತ್ತಾರೆ, ನಾನೇ ನಿಮ್ಮ ಮೇಲೆ ಖಡ್ಗವನ್ನು ಹಿಡಿದು, ನಿಮ್ಮ ಪೂಜಾಸ್ಥಳಗಳನ್ನು ನಾಶಮಾಡುತ್ತೇನೆ.
וְנָשַׁ֙מּוּ֙ מִזְבְּחֹ֣ותֵיכֶ֔ם וְנִשְׁבְּר֖וּ חַמָּֽנֵיכֶ֑ם וְהִפַּלְתִּי֙ חַלְלֵיכֶ֔ם לִפְנֵ֖י גִּלּוּלֵיכֶֽם׃ | 4 |
ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಧೂಪವೇದಿಗಳು ಚೂರುಚೂರಾಗುವುವು. ನಿಮ್ಮ ಜನರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.
וְנָתַתִּ֗י אֶת־פִּגְרֵי֙ בְּנֵ֣י יִשְׂרָאֵ֔ל לִפְנֵ֖י גִּלּֽוּלֵיהֶ֑ם וְזֵרִיתִי֙ אֶת־עַצְמֹ֣ותֵיכֶ֔ם סְבִיבֹ֖ות מִזְבְּחֹותֵיכֶֽם׃ | 5 |
ಇಸ್ರಾಯೇಲರ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಬಲಿಪೀಠಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿ ಬಿಡುವೆನು.
בְּכֹל֙ מֹושְׁבֹ֣ותֵיכֶ֔ם הֶעָרִ֣ים תֶּחֱרַ֔בְנָה וְהַבָּמֹ֖ות תִּישָׁ֑מְנָה לְמַעַן֩ יֶחֶרְב֨וּ וְיֶאְשְׁמ֜וּ מִזְבְּחֹֽותֵיכֶ֗ם וְנִשְׁבְּר֤וּ וְנִשְׁבְּתוּ֙ גִּלּ֣וּלֵיכֶ֔ם וְנִגְדְּעוּ֙ חַמָּ֣נֵיכֶ֔ם וְנִמְח֖וּ מַעֲשֵׂיכֶֽם׃ | 6 |
ನೀವು ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳಾಗುವುವು. ಪೂಜಾ ಸ್ಥಳಗಳೂ ನಾಶವಾಗುವುವು. ಹೀಗೆ ನಿಮ್ಮ ಬಲಿಪೀಠಗಳು ಸಹ ನಾಶವಾಗಿ, ನಿಮ್ಮ ವಿಗ್ರಹಗಳು ಒಡೆದುಹೋಗಿ ಇಲ್ಲದಂತಾಗುವುವು. ನೀವು ರೂಪಿಸಿದ ಎಲ್ಲವೂ ಕಡಿದು ಬಿದ್ದು ಅಳಿದುಹೋಗುವುವು.
וְנָפַ֥ל חָלָ֖ל בְּתֹֽוכְכֶ֑ם וִֽידַעְתֶּ֖ם כִּֽי־אֲנִ֥י יְהוָֽה׃ | 7 |
ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.
וְהֹותַרְתִּ֗י בִּהְיֹ֥ות לָכֶ֛ם פְּלִ֥יטֵי חֶ֖רֶב בַּגֹּויִ֑ם בְּהִזָּרֹֽותֵיכֶ֖ם בָּאֲרָצֹֽות׃ | 8 |
“‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.
וְזָכְר֨וּ פְלִֽיטֵיכֶ֜ם אֹותִ֗י בַּגֹּויִם֮ אֲשֶׁ֣ר נִשְׁבּוּ־שָׁם֒ אֲשֶׁ֨ר נִשְׁבַּ֜רְתִּי אֶת־לִבָּ֣ם הַזֹּונֶ֗ה אֲשֶׁר־סָר֙ מֵֽעָלַ֔י וְאֵת֙ עֵֽינֵיהֶ֔ם הַזֹּנֹ֕ות אַחֲרֵ֖י גִּלּֽוּלֵיהֶ֑ם וְנָקֹ֙טּוּ֙ בִּפְנֵיהֶ֔ם אֶל־הָֽרָעֹות֙ אֲשֶׁ֣ר עָשׂ֔וּ לְכֹ֖ל תֹּועֲבֹתֵיהֶֽם׃ | 9 |
ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.
וְיָדְע֖וּ כִּֽי־אֲנִ֣י יְהוָ֑ה לֹ֤א אֶל־חִנָּם֙ דִּבַּ֔רְתִּי לַעֲשֹׂ֥ות לָהֶ֖ם הָרָעָ֥ה הַזֹּֽאת׃ פ | 10 |
ನಾನೇ ಯೆಹೋವ ದೇವರೆಂದೂ, ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ, ನಾನು ವ್ಯರ್ಥವಾಗಿ ಹೇಳುವುದಿಲ್ಲವೆಂದೂ ತಿಳಿದುಕೊಳ್ಳುವರು.
כֹּֽה־אָמַ֞ר אֲדֹנָ֣י יְהוִ֗ה הַכֵּ֨ה בְכַפְּךָ֜ וּרְקַ֤ע בְּרַגְלְךָ֙ וֶֽאֱמָר־אָ֔ח אֶ֛ל כָּל־תֹּועֲבֹ֥ות רָעֹ֖ות בֵּ֣ית יִשְׂרָאֵ֑ל אֲשֶׁ֗ר בַּחֶ֛רֶב בָּרָעָ֥ב וּבַדֶּ֖בֶר יִפֹּֽלוּ׃ | 11 |
“‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, “ಆಹಾ!” ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.
הָרָחֹ֞וק בַּדֶּ֣בֶר יָמ֗וּת וְהַקָּרֹוב֙ בַּחֶ֣רֶב יִפֹּ֔ול וְהַנִּשְׁאָר֙ וְהַנָּצ֔וּר בָּרָעָ֖ב יָמ֑וּת וְכִלֵּיתִ֥י חֲמָתִ֖י בָּֽם׃ | 12 |
ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು. ಹತ್ತಿರದಲ್ಲಿರುವವನು ಖಡ್ಗದಿಂದ ಬೀಳುವನು. ಉಳಿದ ಮುತ್ತಿಗೆಯಲ್ಲಿರುವವನು ಕ್ಷಾಮದಿಂದ ಸಾಯುವನು. ಹೀಗೆ ನಾನು ಅವರ ಮೇಲೆ ನನ್ನ ರೋಷವನ್ನು ತೀರಿಸಿಕೊಳ್ಳುವೆನು.
וִֽידַעְתֶּם֙ כִּֽי־אֲנִ֣י יְהוָ֔ה בִּֽהְיֹ֣ות חַלְלֵיהֶ֗ם בְּתֹוךְ֙ גִּלּ֣וּלֵיהֶ֔ם סְבִיבֹ֖ות מִזְבְּחֹֽותֵיהֶ֑ם אֶל֩ כָּל־גִּבְעָ֨ה רָמָ֜ה בְּכֹ֣ל ׀ רָאשֵׁ֣י הֶהָרִ֗ים וְתַ֨חַת כָּל־עֵ֤ץ רַֽעֲנָן֙ וְתַ֙חַת֙ כָּל־אֵלָ֣ה עֲבֻתָּ֔ה מְקֹ֗ום אֲשֶׁ֤ר נָֽתְנוּ־שָׁם֙ רֵ֣יחַ נִיחֹ֔חַ לְכֹ֖ל גִּלּוּלֵיהֶֽם׃ | 13 |
ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.
וְנָטִ֤יתִי אֶת־יָדִי֙ עֲלֵיהֶ֔ם וְנָתַתִּ֨י אֶת־הָאָ֜רֶץ שְׁמָמָ֤ה וּמְשַׁמָּה֙ מִמִּדְבַּ֣ר דִּבְלָ֔תָה בְּכֹ֖ל מֹושְׁבֹֽותֵיהֶ֑ם וְיָדְע֖וּ כִּֽי־אֲנִ֥י יְהוָֽה׃ פ | 14 |
ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’”