< בְּרֵאשִׁית 22 >
וַיְהִ֗י אַחַר֙ הַדְּבָרִ֣ים הָאֵ֔לֶּה וְהָ֣אֱלֹהִ֔ים נִסָּ֖ה אֶת־אַבְרָהָ֑ם וַיֹּ֣אמֶר אֵלָ֔יו אַבְרָהָ֖ם וַיֹּ֥אמֶר הִנֵּֽנִי׃ | 1 |
೧ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.
וַיֹּ֡אמֶר קַח־נָ֠א אֶת־בִּנְךָ֙ אֶת־יְחִֽידְךָ֤ אֲשֶׁר־אָהַ֙בְתָּ֙ אֶת־יִצְחָ֔ק וְלֶךְ־לְךָ֔ אֶל־אֶ֖רֶץ הַמֹּרִיָּ֑ה וְהַעֲלֵ֤הוּ שָׁם֙ לְעֹלָ֔ה עַ֚ל אַחַ֣ד הֶֽהָרִ֔ים אֲשֶׁ֖ר אֹמַ֥ר אֵלֶֽיךָ׃ | 2 |
೨ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.
וַיַּשְׁכֵּ֨ם אַבְרָהָ֜ם בַּבֹּ֗קֶר וַֽיַּחֲבֹשׁ֙ אֶת־חֲמֹרֹ֔ו וַיִּקַּ֞ח אֶת־שְׁנֵ֤י נְעָרָיו֙ אִתֹּ֔ו וְאֵ֖ת יִצְחָ֣ק בְּנֹ֑ו וַיְבַקַּע֙ עֲצֵ֣י עֹלָ֔ה וַיָּ֣קָם וַיֵּ֔לֶךְ אֶל־הַמָּקֹ֖ום אֲשֶׁר־אָֽמַר־לֹ֥ו הָאֱלֹהִֽים׃ | 3 |
೩ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.
בַּיֹּ֣ום הַשְּׁלִישִׁ֗י וַיִּשָּׂ֨א אַבְרָהָ֧ם אֶת־עֵינָ֛יו וַיַּ֥רְא אֶת־הַמָּקֹ֖ום מֵרָחֹֽק׃ | 4 |
೪ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ,
וַיֹּ֨אמֶר אַבְרָהָ֜ם אֶל־נְעָרָ֗יו שְׁבוּ־לָכֶ֥ם פֹּה֙ עִֽם־הַחֲמֹ֔ור וַאֲנִ֣י וְהַנַּ֔עַר נֵלְכָ֖ה עַד־כֹּ֑ה וְנִֽשְׁתַּחֲוֶ֖ה וְנָשׁ֥וּבָה אֲלֵיכֶֽם׃ | 5 |
೫“ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು.
וַיִּקַּ֨ח אַבְרָהָ֜ם אֶת־עֲצֵ֣י הָעֹלָ֗ה וַיָּ֙שֶׂם֙ עַל־יִצְחָ֣ק בְּנֹ֔ו וַיִּקַּ֣ח בְּיָדֹ֔ו אֶת־הָאֵ֖שׁ וְאֶת־הַֽמַּאֲכֶ֑לֶת וַיֵּלְכ֥וּ שְׁנֵיהֶ֖ם יַחְדָּֽו׃ | 6 |
೬ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.
וַיֹּ֨אמֶר יִצְחָ֜ק אֶל־אַבְרָהָ֤ם אָבִיו֙ וַיֹּ֣אמֶר אָבִ֔י וַיֹּ֖אמֶר הִנֶּ֣נִּֽי בְנִ֑י וַיֹּ֗אמֶר הִנֵּ֤ה הָאֵשׁ֙ וְהָ֣עֵצִ֔ים וְאַיֵּ֥ה הַשֶּׂ֖ה לְעֹלָֽה׃ | 7 |
೭ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ,
וַיֹּ֙אמֶר֙ אַבְרָהָ֔ם אֱלֹהִ֞ים יִרְאֶה־לֹּ֥ו הַשֶּׂ֛ה לְעֹלָ֖ה בְּנִ֑י וַיֵּלְכ֥וּ שְׁנֵיהֶ֖ם יַחְדָּֽו׃ | 8 |
೮ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.
וַיָּבֹ֗אוּ אֶֽל־הַמָּקֹום֮ אֲשֶׁ֣ר אָֽמַר־לֹ֣ו הָאֱלֹהִים֒ וַיִּ֨בֶן שָׁ֤ם אַבְרָהָם֙ אֶת־הַמִּזְבֵּ֔חַ וַֽיַּעֲרֹ֖ךְ אֶת־הָעֵצִ֑ים וַֽיַּעֲקֹד֙ אֶת־יִצְחָ֣ק בְּנֹ֔ו וַיָּ֤שֶׂם אֹתֹו֙ עַל־הַמִּזְבֵּ֔חַ מִמַּ֖עַל לָעֵצִֽים׃ | 9 |
೯ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
וַיִּשְׁלַ֤ח אַבְרָהָם֙ אֶת־יָדֹ֔ו וַיִּקַּ֖ח אֶת־הַֽמַּאֲכֶ֑לֶת לִשְׁחֹ֖ט אֶת־בְּנֹֽו׃ | 10 |
೧೦ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು.
וַיִּקְרָ֨א אֵלָ֜יו מַלְאַ֤ךְ יְהוָה֙ מִן־הַשָּׁמַ֔יִם וַיֹּ֖אמֶר אַבְרָהָ֣ם ׀ אַבְרָהָ֑ם וַיֹּ֖אמֶר הִנֵּֽנִי׃ | 11 |
೧೧ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.
וַיֹּ֗אמֶר אַל־תִּשְׁלַ֤ח יָֽדְךָ֙ אֶל־הַנַּ֔עַר וְאַל־תַּ֥עַשׂ לֹ֖ו מְא֑וּמָּה כִּ֣י ׀ עַתָּ֣ה יָדַ֗עְתִּי כִּֽי־יְרֵ֤א אֱלֹהִים֙ אַ֔תָּה וְלֹ֥א חָשַׂ֛כְתָּ אֶת־בִּנְךָ֥ אֶת־יְחִידְךָ֖ מִמֶּֽנִּי׃ | 12 |
೧೨ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.
וַיִּשָּׂ֨א אַבְרָהָ֜ם אֶת־עֵינָ֗יו וַיַּרְא֙ וְהִנֵּה־אַ֔יִל אַחַ֕ר נֶאֱחַ֥ז בַּסְּבַ֖ךְ בְּקַרְנָ֑יו וַיֵּ֤לֶךְ אַבְרָהָם֙ וַיִּקַּ֣ח אֶת־הָאַ֔יִל וַיַּעֲלֵ֥הוּ לְעֹלָ֖ה תַּ֥חַת בְּנֹֽו׃ | 13 |
೧೩ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.
וַיִּקְרָ֧א אַבְרָהָ֛ם שֵֽׁם־הַמָּקֹ֥ום הַה֖וּא יְהוָ֣ה ׀ יִרְאֶ֑ה אֲשֶׁר֙ יֵאָמֵ֣ר הַיֹּ֔ום בְּהַ֥ר יְהוָ֖ה יֵרָאֶֽה׃ | 14 |
೧೪ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.
וַיִּקְרָ֛א מַלְאַ֥ךְ יְהוָ֖ה אֶל־אַבְרָהָ֑ם שֵׁנִ֖ית מִן־הַשָּׁמָֽיִם׃ | 15 |
೧೫ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,
וַיֹּ֕אמֶר בִּ֥י נִשְׁבַּ֖עְתִּי נְאֻם־יְהוָ֑ה כִּ֗י יַ֚עַן אֲשֶׁ֤ר עָשִׂ֙יתָ֙ אֶת־הַדָּבָ֣ר הַזֶּ֔ה וְלֹ֥א חָשַׂ֖כְתָּ אֶת־בִּנְךָ֥ אֶת־יְחִידֶֽךָ׃ | 16 |
೧೬“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ
כִּֽי־בָרֵ֣ךְ אֲבָרֶכְךָ֗ וְהַרְבָּ֨ה אַרְבֶּ֤ה אֶֽת־זַרְעֲךָ֙ כְּכֹוכְבֵ֣י הַשָּׁמַ֔יִם וְכַחֹ֕ול אֲשֶׁ֖ר עַל־שְׂפַ֣ת הַיָּ֑ם וְיִרַ֣שׁ זַרְעֲךָ֔ אֵ֖ת שַׁ֥עַר אֹיְבָֽיו׃ | 17 |
೧೭ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.
וְהִתְבָּרֲכ֣וּ בְזַרְעֲךָ֔ כֹּ֖ל גֹּויֵ֣י הָאָ֑רֶץ עֵ֕קֶב אֲשֶׁ֥ר שָׁמַ֖עְתָּ בְּקֹלִֽי׃ | 18 |
೧೮ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.
וַיָּ֤שָׁב אַבְרָהָם֙ אֶל־נְעָרָ֔יו וַיָּקֻ֛מוּ וַיֵּלְכ֥וּ יַחְדָּ֖ו אֶל־בְּאֵ֣ר שָׁ֑בַע וַיֵּ֥שֶׁב אַבְרָהָ֖ם בִּבְאֵ֥ר שָֽׁבַע׃ פ | 19 |
೧೯ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.
וַיְהִ֗י אַחֲרֵי֙ הַדְּבָרִ֣ים הָאֵ֔לֶּה וַיֻּגַּ֥ד לְאַבְרָהָ֖ם לֵאמֹ֑ר הִ֠נֵּה יָלְדָ֨ה מִלְכָּ֥ה גַם־הִ֛וא בָּנִ֖ים לְנָחֹ֥ור אָחִֽיךָ׃ | 20 |
೨೦ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು.
אֶת־ע֥וּץ בְּכֹרֹ֖ו וְאֶת־בּ֣וּז אָחִ֑יו וְאֶת־קְמוּאֵ֖ל אֲבִ֥י אֲרָֽם׃ | 21 |
೨೧ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು.
וְאֶת־כֶּ֣שֶׂד וְאֶת־חֲזֹ֔ו וְאֶת־פִּלְדָּ֖שׁ וְאֶת־יִדְלָ֑ף וְאֵ֖ת בְּתוּאֵֽל׃ | 22 |
೨೨ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬವರೇ.
וּבְתוּאֵ֖ל יָלַ֣ד אֶת־רִבְקָ֑ה שְׁמֹנָ֥ה אֵ֙לֶּה֙ יָלְדָ֣ה מִלְכָּ֔ה לְנָחֹ֖ור אֲחִ֥י אַבְרָהָֽם׃ | 23 |
೨೩ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.
וּפִֽילַגְשֹׁ֖ו וּשְׁמָ֣הּ רְאוּמָ֑ה וַתֵּ֤לֶד גַּם־הִוא֙ אֶת־טֶ֣בַח וְאֶת־גַּ֔חַם וְאֶת־תַּ֖חַשׁ וְאֶֽת־מַעֲכָֽה׃ ס | 24 |
೨೪ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬುವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.