< בְּרֵאשִׁית 25 >
וַיֹּ֧סֶף אַבְרָהָ֛ם וַיִּקַּ֥ח אִשָּׁ֖ה וּשְׁמָ֥הּ קְטוּרָֽה׃ | 1 |
ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬಳನ್ನು ಮದುವೆಮಾಡಿಕೊಂಡನು.
וַתֵּ֣לֶד לֹ֗ו אֶת־זִמְרָן֙ וְאֶת־יָקְשָׁ֔ן וְאֶת־מְדָ֖ן וְאֶת־מִדְיָ֑ן וְאֶת־יִשְׁבָּ֖ק וְאֶת־שֽׁוּחַ׃ | 2 |
ಆಕೆಯು ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.
וְיָקְשָׁ֣ן יָלַ֔ד אֶת־שְׁבָ֖א וְאֶת־דְּדָ֑ן וּבְנֵ֣י דְדָ֔ן הָי֛וּ אַשּׁוּרִ֥ם וּלְטוּשִׁ֖ים וּלְאֻמִּֽים׃ | 3 |
ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು. ದೆದಾನನ ಪುತ್ರರು ಅಶ್ಯೂರರು, ಲೆಟೂಶ್ಯರೂ, ಲೆಯುಮ್ಯರೂ.
וּבְנֵ֣י מִדְיָ֗ן עֵיפָ֤ה וָעֵ֙פֶר֙ וַחֲנֹ֔ךְ וַאֲבִידָ֖ע וְאֶלְדָּעָ֑ה כָּל־אֵ֖לֶּה בְּנֵ֥י קְטוּרָֽה׃ | 4 |
ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು.
וַיִּתֵּ֧ן אַבְרָהָ֛ם אֶת־כָּל־אֲשֶׁר־לֹ֖ו לְיִצְחָֽק׃ | 5 |
ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕನಿಗೆ ಕೊಟ್ಟನು.
וְלִבְנֵ֤י הַפִּֽילַגְשִׁים֙ אֲשֶׁ֣ר לְאַבְרָהָ֔ם נָתַ֥ן אַבְרָהָ֖ם מַתָּנֹ֑ת וַֽיְשַׁלְּחֵ֞ם מֵעַ֨ל יִצְחָ֤ק בְּנֹו֙ בְּעֹודֶ֣נּוּ חַ֔י קֵ֖דְמָה אֶל־אֶ֥רֶץ קֶֽדֶם׃ | 6 |
ಅಬ್ರಹಾಮನಿಗೆ ಇದ್ದ ಉಪಪತ್ನಿಯರ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು, ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಕಳುಹಿಸಿದನು.
וְאֵ֗לֶּה יְמֵ֛י שְׁנֵֽי־חַיֵּ֥י אַבְרָהָ֖ם אֲשֶׁר־חָ֑י מְאַ֥ת שָׁנָ֛ה וְשִׁבְעִ֥ים שָׁנָ֖ה וְחָמֵ֥שׁ שָׁנִֽים׃ | 7 |
ಅಬ್ರಹಾಮನು ನೂರೆಪ್ಪತ್ತೈದು ವರ್ಷಗಳವರೆಗೆ ಜೀವಿಸಿದನು.
וַיִּגְוַ֨ע וַיָּ֧מָת אַבְרָהָ֛ם בְּשֵׂיבָ֥ה טֹובָ֖ה זָקֵ֣ן וְשָׂבֵ֑עַ וַיֵּאָ֖סֶף אֶל־עַמָּֽיו׃ | 8 |
ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿ ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.
וַיִּקְבְּר֨וּ אֹתֹ֜ו יִצְחָ֤ק וְיִשְׁמָעֵאל֙ בָּנָ֔יו אֶל־מְעָרַ֖ת הַמַּכְפֵּלָ֑ה אֶל־שְׂדֵ֞ה עֶפְרֹ֤ן בֶּן־צֹ֙חַר֙ הַֽחִתִּ֔י אֲשֶׁ֖ר עַל־פְּנֵ֥י מַמְרֵֽא׃ | 9 |
ಅವನ ಪುತ್ರರಾದ ಇಸಾಕನೂ, ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಳಿಟ್ಟರು.
הַשָּׂדֶ֛ה אֲשֶׁר־קָנָ֥ה אַבְרָהָ֖ם מֵאֵ֣ת בְּנֵי־חֵ֑ת שָׁ֛מָּה קֻבַּ֥ר אַבְרָהָ֖ם וְשָׂרָ֥ה אִשְׁתֹּֽו׃ | 10 |
ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅಬ್ರಹಾಮನಿಗೂ, ಅವನ ಹೆಂಡತಿ ಸಾರಳಿಗೂ ಒಂದೇ ಸ್ಥಳದಲ್ಲಿ ಸಮಾಧಿ ಆಯಿತು.
וַיְהִ֗י אַחֲרֵי֙ מֹ֣ות אַבְרָהָ֔ם וַיְבָ֥רֶךְ אֱלֹהִ֖ים אֶת־יִצְחָ֣ק בְּנֹ֑ו וַיֵּ֣שֶׁב יִצְחָ֔ק עִם־בְּאֵ֥ר לַחַ֖י רֹאִֽי׃ ס | 11 |
ಅಬ್ರಹಾಮನು ಸತ್ತ ನಂತರ ದೇವರು ಅವನ ಮಗ ಇಸಾಕನನ್ನು ಆಶೀರ್ವದಿಸಿದರು. ಇಸಾಕನು ಬೇರ್ ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.
וְאֵ֛לֶּה תֹּלְדֹ֥ת יִשְׁמָעֵ֖אל בֶּן־אַבְרָהָ֑ם אֲשֶׁ֨ר יָלְדָ֜ה הָגָ֧ר הַמִּצְרִ֛ית שִׁפְחַ֥ת שָׂרָ֖ה לְאַבְרָהָֽם׃ | 12 |
ಸಾರಳ ದಾಸಿ ಈಜಿಪ್ಟಿನ ಹಾಗರಳು ಅಬ್ರಹಾಮನಿಗೆ ಹೆತ್ತ ಮಗ ಇಷ್ಮಾಯೇಲನ ವಂಶಾವಳಿ:
וְאֵ֗לֶּה שְׁמֹות֙ בְּנֵ֣י יִשְׁמָעֵ֔אל בִּשְׁמֹתָ֖ם לְתֹולְדֹתָ֑ם בְּכֹ֤ר יִשְׁמָעֵאל֙ נְבָיֹ֔ת וְקֵדָ֥ר וְאַדְבְּאֵ֖ל וּמִבְשָֽׂם׃ | 13 |
ಜನನದ ಪ್ರಕಾರ ಇಷ್ಮಾಯೇಲನ ಪುತ್ರರ ಹೆಸರುಗಳು ಇವೇ: ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತ್, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
וּמִשְׁמָ֥ע וְדוּמָ֖ה וּמַשָּֽׂא׃ | 14 |
ಮಿಷ್ಮಾ, ದೂಮಾ, ಮಸ್ಸಾ,
חֲדַ֣ד וְתֵימָ֔א יְט֥וּר נָפִ֖ישׁ וָקֵֽדְמָה׃ | 15 |
ಹದದ್, ತೇಮಾ, ಯೆಟೂರ್, ನಾಫೀಷ್, ಕೇದೆಮ.
אֵ֣לֶּה הֵ֞ם בְּנֵ֤י יִשְׁמָעֵאל֙ וְאֵ֣לֶּה שְׁמֹתָ֔ם בְּחַצְרֵיהֶ֖ם וּבְטִֽירֹתָ֑ם שְׁנֵים־עָשָׂ֥ר נְשִׂיאִ֖ם לְאֻמֹּתָֽם׃ | 16 |
ಇವರೇ ಇಷ್ಮಾಯೇಲನ ಪುತ್ರರು. ಇವುಗಳೇ ಅವರ ಗ್ರಾಮಗಳ ಪ್ರಕಾರವಾಗಿಯೂ, ಪಾಳೆಯಗಳ ಪ್ರಕಾರವಾಗಿಯೂ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.
וְאֵ֗לֶּה שְׁנֵי֙ חַיֵּ֣י יִשְׁמָעֵ֔אל מְאַ֥ת שָׁנָ֛ה וּשְׁלֹשִׁ֥ים שָׁנָ֖ה וְשֶׁ֣בַע שָׁנִ֑ים וַיִּגְוַ֣ע וַיָּ֔מָת וַיֵּאָ֖סֶף אֶל־עַמָּֽיו׃ | 17 |
ಇಷ್ಮಾಯೇಲನು ಬದುಕಿದ ವರ್ಷಗಳು ನೂರಮೂವತ್ತೇಳು. ಅವನು ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.
וַיִּשְׁכְּנ֨וּ מֽ͏ֵחֲוִילָ֜ה עַד־שׁ֗וּר אֲשֶׁר֙ עַל־פְּנֵ֣י מִצְרַ֔יִם בֹּאֲכָ֖ה אַשּׁ֑וּרָה עַל־פְּנֵ֥י כָל־אֶחָ֖יו נָפָֽל׃ פ | 18 |
ಅವನ ವಂಶಸ್ಥರು ಅಸ್ಸೀರಿಯಗೆ ಹೋಗುವ, ಈಜಿಪ್ಟಿನ ಮೇರೆಯಲ್ಲಿ ಹವೀಲದಿಂದ ಶೂರ್‌ವರೆಗಿನ ಪ್ರದೇಶದಲ್ಲಿ ವಾಸಿಸಿದರು. ಅವರು ತಮ್ಮ ಎಲ್ಲಾ ಸಹೋದರರೊಂದಿಗೆ ಎದುರುಬದಿರಿನಲ್ಲೇ ವಾಸಮಾಡಿದರು.
וְאֵ֛לֶּה תֹּולְדֹ֥ת יִצְחָ֖ק בֶּן־אַבְרָהָ֑ם אַבְרָהָ֖ם הֹולִ֥יד אֶת־יִצְחָֽק׃ | 19 |
ಅಬ್ರಹಾಮನ ಮಗ ಇಸಾಕನ ವಂಶಾವಳಿ: ಅಬ್ರಹಾಮನಿಂದ ಇಸಾಕನು ಹುಟ್ಟಿದನು.
וַיְהִ֤י יִצְחָק֙ בֶּן־אַרְבָּעִ֣ים שָׁנָ֔ה בְּקַחְתֹּ֣ו אֶת־רִבְקָ֗ה בַּת־בְּתוּאֵל֙ הֽ͏ָאֲרַמִּ֔י מִפַּדַּ֖ן אֲרָ֑ם אֲחֹ֛ות לָבָ֥ן הָאֲרַמִּ֖י לֹ֥ו לְאִשָּֽׁה׃ | 20 |
ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.
וַיֶּעְתַּ֨ר יִצְחָ֤ק לֽ͏ַיהוָה֙ לְנֹ֣כַח אִשְׁתֹּ֔ו כִּ֥י עֲקָרָ֖ה הִ֑וא וַיֵּעָ֤תֶר לֹו֙ יְהוָ֔ה וַתַּ֖הַר רִבְקָ֥ה אִשְׁתֹּֽו׃ | 21 |
ಆದರೆ ಆಕೆಯು ಬಂಜೆಯಾಗಿದ್ದುದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವ ದೇವರನ್ನು ಬೇಡಿಕೊಂಡನು. ಯೆಹೋವ ದೇವರು ಅವನ ಬೇಡಿಕೆಯನ್ನು ಪೂರೈಸಿದರು. ಆದ್ದರಿಂದ ಅವನ ಹೆಂಡತಿ ರೆಬೆಕ್ಕಳು ಗರ್ಭಿಣಿಯಾದಳು.
וַיִּתְרֹֽצֲצ֤וּ הַבָּנִים֙ בְּקִרְבָּ֔הּ וַתֹּ֣אמֶר אִם־כֵּ֔ן לָ֥מָּה זֶּ֖ה אָנֹ֑כִי וַתֵּ֖לֶךְ לִדְרֹ֥שׁ אֶת־יְהוָֽה׃ | 22 |
ಅವಳ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು, “ನನಗೆ ಏಕೆ ಹೀಗಾಗುತ್ತಿದೆ?” ಎಂದು ಕೇಳಿ, ಯೆಹೋವ ದೇವರ ಬಳಿಗೆ ವಿಚಾರಿಸುವುದಕ್ಕೆ ಹೋದಳು.
וַיֹּ֨אמֶר יְהוָ֜ה לָ֗הּ שְׁנֵ֤י גֹיִים (גֹויִם֙) בְּבִטְנֵ֔ךְ וּשְׁנֵ֣י לְאֻמִּ֔ים מִמֵּעַ֖יִךְ יִפָּרֵ֑דוּ וּלְאֹם֙ מִלְאֹ֣ם יֶֽאֱמָ֔ץ וְרַ֖ב יַעֲבֹ֥ד צָעִֽיר׃ | 23 |
ಯೆಹೋವ ದೇವರು ಆಕೆಗೆ ಹೀಗೆ ಹೇಳಿದರು: “ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ಜನಾಂಗಗಳು ಹೊರಟುಬಂದು ಬೇರೆಯಾಗುವುವು. ಒಂದು ಇನ್ನೊಂದಕ್ಕಿಂತ ಬಲವಾಗಿರುವುದು. ಇದಲ್ಲದೆ ಹಿರಿಯನು ಕಿರಿಯವನಿಗೆ ಸೇವೆಮಾಡುವನು.”
וַיִּמְלְא֥וּ יָמֶ֖יהָ לָלֶ֑דֶת וְהִנֵּ֥ה תֹומִ֖ם בְּבִטְנָֽהּ׃ | 24 |
ಆಕೆಯು ಹೆರುವುದಕ್ಕೆ ದಿನತುಂಬಿದಾಗ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು.
וַיֵּצֵ֤א הָרִאשֹׁון֙ אַדְמֹונִ֔י כֻּלֹּ֖ו כְּאַדֶּ֣רֶת שֵׂעָ֑ר וַיִּקְרְא֥וּ שְׁמֹ֖ו עֵשָֽׂו׃ | 25 |
ಮೊದಲನೆಯವನು ಕೆಂಪಾಗಿಯೂ ಕೂದಲಿನ ವಸ್ತ್ರದಂತೆ ಇಡೀ ದೇಹವು ಇದ್ದುದರಿಂದ ಅವನಿಗೆ, ಏಸಾವ, ಎಂದು ಹೆಸರಿಟ್ಟರು.
וְאַֽחֲרֵי־כֵ֞ן יָצָ֣א אָחִ֗יו וְיָדֹ֤ו אֹחֶ֙זֶת֙ בַּעֲקֵ֣ב עֵשָׂ֔ו וַיִּקְרָ֥א שְׁמֹ֖ו יַעֲקֹ֑ב וְיִצְחָ֛ק בֶּן־שִׁשִּׁ֥ים שָׁנָ֖ה בְּלֶ֥דֶת אֹתָֽם׃ | 26 |
ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹೊರಗೆ ಬಂದನು. ಅವನಿಗೆ, ಯಾಕೋಬ, ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರವತ್ತು ವರ್ಷದವನಾಗಿದ್ದನು.
וֽ͏ַיִּגְדְּלוּ֙ הַנְּעָרִ֔ים וַיְהִ֣י עֵשָׂ֗ו אִ֛ישׁ יֹדֵ֥עַ צַ֖יִד אִ֣ישׁ שָׂדֶ֑ה וְיַעֲקֹב֙ אִ֣ישׁ תָּ֔ם יֹשֵׁ֖ב אֹהָלִֽים׃ | 27 |
ಆ ಹುಡುಗರು ಬೆಳೆದಾಗ ಏಸಾವನು ಬೇಟೆಯಾಡುವುದರಲ್ಲಿ ಜಾಣನಾಗಿದ್ದು, ಅಡವಿಯ ಮನುಷ್ಯನಾದನು. ಯಾಕೋಬನು ಗುಡಾರಗಳಲ್ಲಿ ವಾಸಮಾಡುವ ಸಾಧು ಮನುಷ್ಯನಾಗಿದ್ದನು.
וַיֶּאֱהַ֥ב יִצְחָ֛ק אֶת־עֵשָׂ֖ו כִּי־צַ֣יִד בְּפִ֑יו וְרִבְקָ֖ה אֹהֶ֥בֶת אֶֽת־יַעֲקֹֽב׃ | 28 |
ಬೇಟೆಯಲ್ಲಿ ಆಸಕ್ತನಾಗಿದ್ದ ಇಸಾಕನು ಏಸಾವನನ್ನು ಪ್ರೀತಿಸಿದನು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
וַיָּ֥זֶד יַעֲקֹ֖ב נָזִ֑יד וַיָּבֹ֥א עֵשָׂ֛ו מִן־הַשָּׂדֶ֖ה וְה֥וּא עָיֵֽף׃ | 29 |
ಒಂದು ಸಾರಿ ಯಾಕೋಬನು ಅಡಿಗೆ ಮಾಡುತ್ತಿದ್ದಾಗ, ಏಸಾವನು ದಣಿದು ಅಡವಿಯಿಂದ ಬಂದನು.
וַיֹּ֨אמֶר עֵשָׂ֜ו אֶֽל־יַעֲקֹ֗ב הַלְעִיטֵ֤נִי נָא֙ מִן־הָאָדֹ֤ם הָאָדֹם֙ הַזֶּ֔ה כִּ֥י עָיֵ֖ף אָנֹ֑כִי עַל־כֵּ֥ן קָרָֽא־שְׁמֹ֖ו אֱדֹֽום׃ | 30 |
ಏಸಾವನು ಯಾಕೋಬನಿಗೆ, “ಆ ಕೆಂಪಾದ ಪದಾರ್ಥವನ್ನು ತಿನ್ನುವುದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ,” ಎಂದನು. ಆದ್ದರಿಂದ ಅವನಿಗೆ, ಎದೋಮ್, ಎಂದು ಹೆಸರಾಯಿತು.
וַיֹּ֖אמֶר יַעֲקֹ֑ב מִכְרָ֥ה כַיֹּ֛ום אֶת־בְּכֹֽרָתְךָ֖ לִֽי׃ | 31 |
ಆಗ ಯಾಕೋಬನು, “ಈ ಹೊತ್ತು ನಿನ್ನ ಜೇಷ್ಠ ಪುತ್ರನ ಹಕ್ಕನ್ನು ನನಗೆ ಮಾರು,” ಎಂದನು.
וַיֹּ֣אמֶר עֵשָׂ֔ו הִנֵּ֛ה אָנֹכִ֥י הֹולֵ֖ךְ לָמ֑וּת וְלָמָּה־זֶּ֥ה לִ֖י בְּכֹרָֽה׃ | 32 |
ಏಸಾವನು, “ಇಗೋ, ನಾನು ಸಾಯುತ್ತಿದ್ದೇನೆ, ಜೇಷ್ಠ ಪುತ್ರನ ಹಕ್ಕಿನಿಂದ ನನಗೇನು ಲಾಭ?” ಎಂದನು.
וַיֹּ֣אמֶר יַעֲקֹ֗ב הִשָּׁ֤בְעָה לִּי֙ כַּיֹּ֔ום וַיִּשָּׁבַ֖ע לֹ֑ו וַיִּמְכֹּ֥ר אֶת־בְּכֹרָתֹ֖ו לְיַעֲקֹֽב׃ | 33 |
ಯಾಕೋಬನು, “ಈ ಹೊತ್ತು ನನಗೆ ಪ್ರಮಾಣಮಾಡು,” ಎಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ, ತನ್ನ ಜೇಷ್ಠ ಪುತ್ರನ ಹಕ್ಕನ್ನು ಅವನಿಗೆ ಮಾರಿದನು.
וְיַעֲקֹ֞ב נָתַ֣ן לְעֵשָׂ֗ו לֶ֚חֶם וּנְזִ֣יד עֲדָשִׁ֔ים וַיֹּ֣אכַל וַיֵּ֔שְׁתְּ וַיָּ֖קָם וַיֵּלַ֑ךְ וַיִּ֥בֶז עֵשָׂ֖ו אֶת־הַבְּכֹרָֽה׃ ס | 34 |
ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ, ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಅವನು ತಿಂದು, ಕುಡಿದು ಎದ್ದು ಹೋದನು. ಹೀಗೆ ಏಸಾವನು ತನ್ನ ಜೇಷ್ಠ ಪುತ್ರನ ಹಕ್ಕನ್ನು ತಾತ್ಸಾರದಿಂದ ಕಂಡನು.