< בְּרֵאשִׁית 27 >

וַיְהִי֙ כִּֽי־זָקֵ֣ן יִצְחָ֔ק וַתִּכְהֶ֥יןָ עֵינָ֖יו מֵרְאֹ֑ת וַיִּקְרָ֞א אֶת־עֵשָׂ֣ו ׀ בְּנֹ֣ו הַגָּדֹ֗ל וַיֹּ֤אמֶר אֵלָיו֙ בְּנִ֔י וַיֹּ֥אמֶר אֵלָ֖יו הִנֵּֽנִי׃ 1
ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು.
וַיֹּ֕אמֶר הִנֵּה־נָ֖א זָקַ֑נְתִּי לֹ֥א יָדַ֖עְתִּי יֹ֥ום מֹותִֽי׃ 2
ಇಸಾಕನು ಅವನಿಗೆ, “ನಾನು ಮುದುಕನಾಗಿದ್ದೇನೆ; ಯಾವಾಗ ಸಾಯುವೆನೋ ಗೊತ್ತಿಲ್ಲ.
וְעַתָּה֙ שָׂא־נָ֣א כֵלֶ֔יךָ תֶּלְיְךָ֖ וְקַשְׁתֶּ֑ךָ וְצֵא֙ הַשָּׂדֶ֔ה וְצ֥וּדָה לִּ֖י צֵידָה (צָֽיִד)׃ 3
ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು
וַעֲשֵׂה־לִ֨י מַטְעַמִּ֜ים כַּאֲשֶׁ֥ר אָהַ֛בְתִּי וְהָבִ֥יאָה לִּ֖י וְאֹכֵ֑לָה בַּעֲב֛וּר תְּבָרֶכְךָ֥ נַפְשִׁ֖י בְּטֶ֥רֶם אָמֽוּת׃ 4
ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.
וְרִבְקָ֣ה שֹׁמַ֔עַת בְּדַבֵּ֣ר יִצְחָ֔ק אֶל־עֵשָׂ֖ו בְּנֹ֑ו וַיֵּ֤לֶךְ עֵשָׂו֙ הַשָּׂדֶ֔ה לָצ֥וּד צַ֖יִד לְהָבִֽיא׃ 5
ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.
וְרִבְקָה֙ אָֽמְרָ֔ה אֶל־יַעֲקֹ֥ב בְּנָ֖הּ לֵאמֹ֑ר הִנֵּ֤ה שָׁמַ֙עְתִּי֙ אֶת־אָבִ֔יךָ מְדַבֵּ֛ר אֶל־עֵשָׂ֥ו אָחִ֖יךָ לֵאמֹֽר׃ 6
ಏಸಾವನು ಬೇಟೆಯಾಡುವುದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, “ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನಿಗೆ,
הָבִ֨יאָה לִּ֥י צַ֛יִד וַעֲשֵׂה־לִ֥י מַטְעַמִּ֖ים וְאֹכֵ֑לָה וַאֲבָרֶכְכָ֛ה לִפְנֵ֥י יְהוָ֖ה לִפְנֵ֥י מֹותִֽי׃ 7
‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ.
וְעַתָּ֥ה בְנִ֖י שְׁמַ֣ע בְּקֹלִ֑י לַאֲשֶׁ֥ר אֲנִ֖י מְצַוָּ֥ה אֹתָֽךְ׃ 8
ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು.
לֶךְ־נָא֙ אֶל־הַצֹּ֔אן וְקַֽח־לִ֣י מִשָּׁ֗ם שְׁנֵ֛י גְּדָיֵ֥י עִזִּ֖ים טֹבִ֑ים וְאֽ͏ֶעֱשֶׂ֨ה אֹתָ֧ם מַטְעַמִּ֛ים לְאָבִ֖יךָ כַּאֲשֶׁ֥ר אָהֵֽב׃ 9
ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.
וְהֵבֵאתָ֥ לְאָבִ֖יךָ וְאָכָ֑ל בַּעֲבֻ֛ר אֲשֶׁ֥ר יְבָרֶכְךָ֖ לִפְנֵ֥י מֹותֹֽו׃ 10
೧೦ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು.
וַיֹּ֣אמֶר יַעֲקֹ֔ב אֶל־רִבְקָ֖ה אִמֹּ֑ו הֵ֣ן עֵשָׂ֤ו אָחִי֙ אִ֣ישׁ שָׂעִ֔ר וְאָנֹכִ֖י אִ֥ישׁ חָלָֽק׃ 11
೧೧ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು.
אוּלַ֤י יְמֻשֵּׁ֙נִי֙ אָבִ֔י וְהָיִ֥יתִי בְעֵינָ֖יו כִּמְתַעְתֵּ֑עַ וְהֵבֵאתִ֥י עָלַ֛י קְלָלָ֖ה וְלֹ֥א בְרָכָֽה׃ 12
೧೨ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು” ಎಂದನು.
וַתֹּ֤אמֶר לֹו֙ אִמֹּ֔ו עָלַ֥י קִלְלָתְךָ֖ בְּנִ֑י אַ֛ךְ שְׁמַ֥ע בְּקֹלִ֖י וְלֵ֥ךְ קַֽח־לִֽי׃ 13
೧೩ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
וַיֵּ֙לֶךְ֙ וַיִּקַּ֔ח וַיָּבֵ֖א לְאִמֹּ֑ו וַתַּ֤עַשׂ אִמֹּו֙ מַטְעַמִּ֔ים כַּאֲשֶׁ֖ר אָהֵ֥ב אָבִֽיו׃ 14
೧೪ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.
וַתִּקַּ֣ח רִ֠בְקָה אֶת־בִּגְדֵ֨י עֵשָׂ֜ו בְּנָ֤הּ הַגָּדֹל֙ הַחֲמֻדֹ֔ת אֲשֶׁ֥ר אִתָּ֖הּ בַּבָּ֑יִת וַתַּלְבֵּ֥שׁ אֶֽת־יַעֲקֹ֖ב בְּנָ֥הּ הַקָּטָֽן׃ 15
೧೫ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು.
וְאֵ֗ת עֹרֹת֙ גְּדָיֵ֣י הָֽעִזִּ֔ים הִלְבִּ֖ישָׁה עַל־יָדָ֑יו וְעַ֖ל חֶלְקַ֥ת צַוָּארָֽיו׃ 16
೧೬ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ, ನುಣುಪಾದ ಕೊರಳಿಗೂ ಸುತ್ತಿದಳು.
וַתִּתֵּ֧ן אֶת־הַמַּטְעַמִּ֛ים וְאֶת־הַלֶּ֖חֶם אֲשֶׁ֣ר עָשָׂ֑תָה בְּיַ֖ד יַעֲקֹ֥ב בְּנָֽהּ׃ 17
೧೭ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
וַיָּבֹ֥א אֶל־אָבִ֖יו וַיֹּ֣אמֶר אָבִ֑י וַיֹּ֣אמֶר הִנֶּ֔נִּי מִ֥י אַתָּ֖ה בְּנִֽי׃ 18
೧೮ಅವನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆಯಲು, ತಂದೆಯು, “ಏನು ಮಗನೇ, ನೀನು ಯಾರು?” ಎಂದು ಕೇಳಿದನು.
וַיֹּ֨אמֶר יַעֲקֹ֜ב אֶל־אָבִ֗יו אָנֹכִי֙ עֵשָׂ֣ו בְּכֹרֶ֔ךָ עָשִׂ֕יתִי כַּאֲשֶׁ֥ר דִּבַּ֖רְתָּ אֵלָ֑י קֽוּם־נָ֣א שְׁבָ֗ה וְאָכְלָה֙ מִצֵּידִ֔י בַּעֲב֖וּר תְּבָרֲכַ֥נִּי נַפְשֶֽׁךָ׃ 19
೧೯ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು,
וַיֹּ֤אמֶר יִצְחָק֙ אֶל־בְּנֹ֔ו מַה־זֶּ֛ה מִהַ֥רְתָּ לִמְצֹ֖א בְּנִ֑י וַיֹּ֕אמֶר כִּ֥י הִקְרָ֛ה יְהוָ֥ה אֱלֹהֶ֖יךָ לְפָנָֽי׃ 20
೨೦ಇಸಾಕನು, “ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು” ಎಂದು ಕೇಳಿದ್ದಕ್ಕೆ ಅವನು, “ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು” ಎಂದನು.
וַיֹּ֤אמֶר יִצְחָק֙ אֶֽל־יַעֲקֹ֔ב גְּשָׁה־נָּ֥א וַאֲמֻֽשְׁךָ֖ בְּנִ֑י הַֽאַתָּ֥ה זֶ֛ה בְּנִ֥י עֵשָׂ֖ו אִם־לֹֽא׃ 21
೨೧ಇಸಾಕನು ಯಾಕೋಬನಿಗೆ, “ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು” ಎಂದು ಹೇಳಿದನು.
וַיִּגַּ֧שׁ יַעֲקֹ֛ב אֶל־יִצְחָ֥ק אָבִ֖יו וַיְמֻשֵּׁ֑הוּ וַיֹּ֗אמֶר הַקֹּל֙ קֹ֣ול יַעֲקֹ֔ב וְהַיָּדַ֖יִם יְדֵ֥י עֵשָֽׂו׃ 22
೨೨ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು” ಎಂದು ಹೇಳಿದನು.
וְלֹ֣א הִכִּירֹ֔ו כִּֽי־הָי֣וּ יָדָ֗יו כִּידֵ֛י עֵשָׂ֥ו אָחִ֖יו שְׂעִרֹ֑ת וַֽיְבָרְכֵֽהוּ׃ 23
೨೩ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು.
וַיֹּ֕אמֶר אַתָּ֥ה זֶ֖ה בְּנִ֣י עֵשָׂ֑ו וַיֹּ֖אמֶר אָֽנִי׃ 24
೨೪ಅವನು, “ನೀನು ನಿಜವಾದ ನನ್ನ ಮಗನಾದ ಏಸಾವನೋ” ಎಂದು ಕೇಳಿದ್ದಕ್ಕೆ ಯಾಕೋಬನು, “ಹೌದು” ಎನ್ನಲು,
וַיֹּ֗אמֶר הַגִּ֤שָׁה לִּי֙ וְאֹֽכְלָה֙ מִצֵּ֣יד בְּנִ֔י לְמַ֥עַן תְּבָֽרֶכְךָ֖ נַפְשִׁ֑י וַיַּגֶּשׁ־לֹו֙ וַיֹּאכַ֔ל וַיָּ֧בֵא לֹ֦ו יַ֖יִן וַיֵּֽשְׁתְּ׃ 25
೨೫ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.
וַיֹּ֥אמֶר אֵלָ֖יו יִצְחָ֣ק אָבִ֑יו גְּשָׁה־נָּ֥א וּשְׁקָה־לִּ֖י בְּנִֽי׃ 26
೨೬ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ, “ಮಗನೇ, ನೀನು ಹತ್ತಿರ ಬಂದು ನನಗೆ ಮುದ್ದಿಡು” ಎಂದು ಹೇಳಲು ಅವನು ಹತ್ತಿರ ಬಂದು ತಂದೆಗೆ ಮುದ್ದಿಟ್ಟನು.
וַיִּגַּשׁ֙ וַיִּשַּׁק־לֹ֔ו וַיָּ֛רַח אֶת־רֵ֥יחַ בְּגָדָ֖יו וֽ͏ַיְבָרֲכֵ֑הוּ וַיֹּ֗אמֶר רְאֵה֙ רֵ֣יחַ בְּנִ֔י כְּרֵ֣יחַ שָׂדֶ֔ה אֲשֶׁ֥ר בֵּרֲכֹ֖ו יְהוָֽה׃ 27
೨೭ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ, “ಆಹಾ, ನನ್ನ ಮಗನ ಸುವಾಸನೆಯು, ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು.
וְיִֽתֶּן־לְךָ֙ הָאֱלֹהִ֔ים מִטַּל֙ הַשָּׁמַ֔יִם וּמִשְׁמַנֵּ֖י הָאָ֑רֶץ וְרֹ֥ב דָּגָ֖ן וְתִירֹֽשׁ׃ 28
೨೮ದೇವರು ನಿನಗೆ ಆಕಾಶದ ಮಂಜನ್ನೂ, ಸಾರವುಳ್ಳ ಭೂಮಿಯನ್ನೂ ಕೊಟ್ಟು ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.
יֽ͏ַעַבְד֣וּךָ עַמִּ֗ים וְיִשְׁתַּחוּ (וְיִֽשְׁתַּחֲו֤וּ) לְךָ֙ לְאֻמִּ֔ים הֱוֵ֤ה גְבִיר֙ לְאַחֶ֔יךָ וְיִשְׁתַּחֲוּ֥וּ לְךָ֖ בְּנֵ֣י אִמֶּ֑ךָ אֹרְרֶ֣יךָ אָר֔וּר וּֽמְבָרֲכֶ֖יךָ בָּרֽוּךְ׃ 29
೨೯ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.
וַיְהִ֗י כַּאֲשֶׁ֨ר כִּלָּ֣ה יִצְחָק֮ לְבָרֵ֣ךְ אֶֽת־יַעֲקֹב֒ וַיְהִ֗י אַ֣ךְ יָצֹ֤א יָצָא֙ יַעֲקֹ֔ב מֵאֵ֥ת פְּנֵ֖י יִצְחָ֣ק אָבִ֑יו וְעֵשָׂ֣ו אָחִ֔יו בָּ֖א מִצֵּידֹֽו׃ 30
೩೦ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು.
וַיַּ֤עַשׂ גַּם־הוּא֙ מַטְעַמִּ֔ים וַיָּבֵ֖א לְאָבִ֑יו וַיֹּ֣אמֶר לְאָבִ֗יו יָקֻ֤ם אָבִי֙ וְיֹאכַל֙ מִצֵּ֣יד בְּנֹ֔ו בַּעֲב֖וּר תְּבָרֲכַ֥נִּי נַפְשֶֽׁךָ׃ 31
೩೧ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು.
וַיֹּ֥אמֶר לֹ֛ו יִצְחָ֥ק אָבִ֖יו מִי־אָ֑תָּה וַיֹּ֕אמֶר אֲנִ֛י בִּנְךָ֥ בְכֹֽרְךָ֖ עֵשָֽׂו׃ 32
೩೨ಅವನ ತಂದೆಯಾದ ಇಸಾಕನು, “ನೀನು ಯಾರು?” ಎಂದು ಅವನನ್ನು ಕೇಳಲು ಅವನು, “ನಾನು ನಿನ್ನ ಚೊಚ್ಚಲ ಮಗನಾದ ಏಸಾವನು” ಎಂದನು.
וַיֶּחֱרַ֨ד יִצְחָ֣ק חֲרָדָה֮ גְּדֹלָ֣ה עַד־מְאֹד֒ וַיֹּ֡אמֶר מִֽי־אֵפֹ֡וא ה֣וּא הַצָּֽד־צַיִד֩ וַיָּ֨בֵא לִ֜י וָאֹכַ֥ל מִכֹּ֛ל בְּטֶ֥רֶם תָּבֹ֖וא וָאֲבָרֲכֵ֑הוּ גַּם־בָּר֖וּךְ יִהְיֶֽה׃ 33
೩೩ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.
כִּשְׁמֹ֤עַ עֵשָׂו֙ אֶת־דִּבְרֵ֣י אָבִ֔יו וַיִּצְעַ֣ק צְעָקָ֔ה גְּדֹלָ֥ה וּמָרָ֖ה עַד־מְאֹ֑ד וַיֹּ֣אמֶר לְאָבִ֔יו בָּרֲכֵ֥נִי גַם־אָ֖נִי אָבִֽי׃ 34
೩೪ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು,
וַיֹּ֕אמֶר בָּ֥א אָחִ֖יךָ בְּמִרְמָ֑ה וַיִּקַּ֖ח בִּרְכָתֶֽךָ׃ 35
೩೫“ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು” ಎಂದನು.
וַיֹּ֡אמֶר הֲכִי֩ קָרָ֨א שְׁמֹ֜ו יַעֲקֹ֗ב וֽ͏ַיַּעְקְבֵ֙נִי֙ זֶ֣ה פַעֲמַ֔יִם אֶת־בְּכֹרָתִ֣י לָקָ֔ח וְהִנֵּ֥ה עַתָּ֖ה לָקַ֣ח בִּרְכָתִ֑י וַיֹּאמַ֕ר הֲלֹא־אָצַ֥לְתָּ לִּ֖י בְּרָכָֽה׃ 36
೩೬ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು,
וַיַּ֨עַן יִצְחָ֜ק וַיֹּ֣אמֶר לְעֵשָׂ֗ו הֵ֣ן גְּבִ֞יר שַׂמְתִּ֥יו לָךְ֙ וְאֶת־כָּל־אֶחָ֗יו נָתַ֤תִּי לֹו֙ לַעֲבָדִ֔ים וְדָגָ֥ן וְתִירֹ֖שׁ סְמַכְתִּ֑יו וּלְכָ֣ה אֵפֹ֔וא מָ֥ה אֽ͏ֶעֱשֶׂ֖ה בְּנִֽי׃ 37
೩೭ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು.
וַיֹּ֨אמֶר עֵשָׂ֜ו אֶל־אָבִ֗יו הַֽבְרָכָ֨ה אַחַ֤ת הִֽוא־לְךָ֙ אָבִ֔י בָּרֲכֵ֥נִי גַם־אָ֖נִי אָבִ֑י וַיִּשָּׂ֥א עֵשָׂ֛ו קֹלֹ֖ו וַיֵּֽבְךְּ׃ 38
೩೮ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು,
וַיַּ֛עַן יִצְחָ֥ק אָבִ֖יו וַיֹּ֣אמֶר אֵלָ֑יו הִנֵּ֞ה מִשְׁמַנֵּ֤י הָאָ֙רֶץ֙ יִהְיֶ֣ה מֹֽושָׁבֶ֔ךָ וּמִטַּ֥ל הַשָּׁמַ֖יִם מֵעָֽל׃ 39
೩೯ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು.
וְעַל־חַרְבְּךָ֣ תִֽחְיֶ֔ה וְאֶת־אָחִ֖יךָ תַּעֲבֹ֑ד וְהָיָה֙ כַּאֲשֶׁ֣ר תָּרִ֔יד וּפָרַקְתָּ֥ עֻלֹּ֖ו מֵעַ֥ל צַוָּארֶֽךָ׃ 40
೪೦ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.
וַיִּשְׂטֹ֤ם עֵשָׂו֙ אֶֽת־יַעֲקֹ֔ב עַל־הַ֨בְּרָכָ֔ה אֲשֶׁ֥ר בֵּרֲכֹ֖ו אָבִ֑יו וַיֹּ֨אמֶר עֵשָׂ֜ו בְּלִבֹּ֗ו יִקְרְבוּ֙ יְמֵי֙ אֵ֣בֶל אָבִ֔י וְאַֽהַרְגָ֖ה אֶת־יַעֲקֹ֥ב אָחִֽי׃ 41
೪೧ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.
וַיֻּגַּ֣ד לְרִבְקָ֔ה אֶת־דִּבְרֵ֥י עֵשָׂ֖ו בְּנָ֣הּ הַגָּדֹ֑ל וַתִּשְׁלַ֞ח וַתִּקְרָ֤א לְיַעֲקֹב֙ בְּנָ֣הּ הַקָּטָ֔ן וַתֹּ֣אמֶר אֵלָ֔יו הִנֵּה֙ עֵשָׂ֣ו אָחִ֔יךָ מִתְנַחֵ֥ם לְךָ֖ לְהָרְגֶֽךָ׃ 42
೪೨ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.
וְעַתָּ֥ה בְנִ֖י שְׁמַ֣ע בְּקֹלִ֑י וְק֧וּם בְּרַח־לְךָ֛ אֶל־לָבָ֥ן אָחִ֖י חָרָֽנָה׃ 43
೪೩ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.
וְיָשַׁבְתָּ֥ עִמֹּ֖ו יָמִ֣ים אֲחָדִ֑ים עַ֥ד אֲשֶׁר־תָּשׁ֖וּב חֲמַ֥ת אָחִֽיךָ׃ 44
೪೪ಕೆಲವು ಕಾಲ, ನಿನ್ನ ಅಣ್ಣನ ಕೋಪವು ಶಮನವಾಗುವ ವರೆಗೂ ಅವನ ಬಳಿಯಲ್ಲೇ ಇರು.
עַד־שׁ֨וּב אַף־אָחִ֜יךָ מִמְּךָ֗ וְשָׁכַח֙ אֵ֣ת אֲשֶׁר־עָשִׂ֣יתָ לֹּ֔ו וְשָׁלַחְתִּ֖י וּלְקַחְתִּ֣יךָ מִשָּׁ֑ם לָמָ֥ה אֶשְׁכַּ֛ל גַּם־שְׁנֵיכֶ֖ם יֹ֥ום אֶחָֽד׃ 45
೪೫ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು.
וַתֹּ֤אמֶר רִבְקָה֙ אֶל־יִצְחָ֔ק קַ֣צְתִּי בְחַיַּ֔י מִפְּנֵ֖י בְּנֹ֣ות חֵ֑ת אִם־לֹקֵ֣חַ יַ֠עֲקֹב אִשָּׁ֨ה מִבְּנֹֽות־חֵ֤ת כָּאֵ֙לֶּה֙ מִבְּנֹ֣ות הָאָ֔רֶץ לָ֥מָּה לִּ֖י חַיִּֽים׃ 46
೪೬ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.

< בְּרֵאשִׁית 27 >