< הוֹשֵׁעַ 12 >
אֶפְרַ֜יִם רֹעֶ֥ה ר֙וּחַ֙ וְרֹדֵ֣ף קָדִ֔ים כָּל־הַיֹּ֕ום כָּזָ֥ב וָשֹׁ֖ד יַרְבֶּ֑ה וּבְרִית֙ עִם־אַשּׁ֣וּר יִכְרֹ֔תוּ וְשֶׁ֖מֶן לְמִצְרַ֥יִם יוּבָֽל׃ | 1 |
೧ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.
וְרִ֥יב לַֽיהוָ֖ה עִם־יְהוּדָ֑ה וְלִפְקֹ֤ד עַֽל־יַעֲקֹב֙ כִּדְרָכָ֔יו כְּמַעֲלָלָ֖יו יָשִׁ֥יב לֹֽו׃ | 2 |
೨ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.
בַּבֶּ֖טֶן עָקַ֣ב אֶת־אָחִ֑יו וּבְאֹונֹ֖ו שָׂרָ֥ה אֶת־אֱלֹהִֽים׃ | 3 |
೩ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;
וָיָּ֤שַׂר אֶל־מַלְאָךְ֙ וַיֻּכָ֔ל בָּכָ֖ה וַיִּתְחַנֶּן־לֹ֑ו בֵּֽית־אֵל֙ יִמְצָאֶ֔נּוּ וְשָׁ֖ם יְדַבֵּ֥ר עִמָּֽנוּ׃ | 4 |
೪ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.
וַֽיהוָ֖ה אֱלֹהֵ֣י הַצְּבָאֹ֑ות יְהוָ֖ה זִכְרֹֽו׃ | 5 |
೫ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ.
וְאַתָּ֖ה בֵּאלֹהֶ֣יךָ תָשׁ֑וּב חֶ֤סֶד וּמִשְׁפָּט֙ שְׁמֹ֔ר וְקַוֵּ֥ה אֶל־אֱלֹהֶ֖יךָ תָּמִֽיד׃ | 6 |
೬ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.
כְּנַ֗עַן בְּיָדֹ֛ו מֹאזְנֵ֥י מִרְמָ֖ה לַעֲשֹׁ֥ק אָהֵֽב׃ | 7 |
೭ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.
וַיֹּ֣אמֶר אֶפְרַ֔יִם אַ֣ךְ עָשַׁ֔רְתִּי מָצָ֥אתִי אֹ֖ון לִ֑י כָּל־יְגִיעַ֕י לֹ֥א יִמְצְאוּ־לִ֖י עָוֹ֥ן אֲשֶׁר־חֵֽטְא׃ | 8 |
೮ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?
וְאָנֹכִ֛י יְהוָ֥ה אֱלֹהֶ֖יךָ מֵאֶ֣רֶץ מִצְרָ֑יִם עֹ֛ד אֹושִֽׁיבְךָ֥ בָאֳהָלִ֖ים כִּימֵ֥י מֹועֵֽד׃ | 9 |
೯ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.
וְדִבַּ֙רְתִּי֙ עַל־הַנְּבִיאִ֔ים וְאָנֹכִ֖י חָזֹ֣ון הִרְבֵּ֑יתִי וּבְיַ֥ד הַנְּבִיאִ֖ים אֲדַמֶּֽה׃ | 10 |
೧೦ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.
אִם־גִּלְעָ֥ד אָ֙וֶן֙ אַךְ־שָׁ֣וְא הָי֔וּ בַּגִּלְגָּ֖ל שְׁוָרִ֣ים זִבֵּ֑חוּ גַּ֤ם מִזְבְּחֹותָם֙ כְּגַלִּ֔ים עַ֖ל תַּלְמֵ֥י שָׂדָֽי׃ | 11 |
೧೧ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.
וַיִּבְרַ֥ח יַעֲקֹ֖ב שְׂדֵ֣ה אֲרָ֑ם וַיַּעֲבֹ֤ד יִשְׂרָאֵל֙ בְּאִשָּׁ֔ה וּבְאִשָּׁ֖ה שָׁמָֽר׃ | 12 |
೧೨ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.
וּבְנָבִ֕יא הֶעֱלָ֧ה יְהוָ֛ה אֶת־יִשְׂרָאֵ֖ל מִמִּצְרָ֑יִם וּבְנָבִ֖יא נִשְׁמָֽר׃ | 13 |
೧೩ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.
הִכְעִ֥יס אֶפְרַ֖יִם תַּמְרוּרִ֑ים וְדָמָיו֙ עָלָ֣יו יִטֹּ֔ושׁ וְחֶ֨רְפָּתֹ֔ו יָשִׁ֥יב לֹ֖ו אֲדֹנָֽיו׃ | 14 |
೧೪ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.