< יְשַׁעְיָהוּ 39 >
בָּעֵ֣ת הַהִ֡וא שָׁלַ֡ח מְרֹדַ֣ךְ בַּ֠לְאֲדָן בֶּֽן־בַּלְאֲדָ֧ן מֶֽלֶךְ־בָּבֶ֛ל סְפָרִ֥ים וּמִנְחָ֖ה אֶל־חִזְקִיָּ֑הוּ וַיִּשְׁמַ֕ע כִּ֥י חָלָ֖ה וֽ͏ַיֶּחֱזָֽק׃ | 1 |
ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಕಳುಹಿಸಿದನು.
וַיִּשְׂמַ֣ח עֲלֵיהֶם֮ חִזְקִיָּהוּ֒ וַיַּרְאֵ֣ם אֶת־בֵּ֣ית נְכֹתָה (נְכֹתֹ֡ו) אֶת־הַכֶּסֶף֩ וְאֶת־הַזָּהָ֨ב וְאֶת־הַבְּשָׂמִ֜ים וְאֵ֣ת ׀ הַשֶּׁ֣מֶן הַטֹּ֗וב וְאֵת֙ כָּל־בֵּ֣ית כֵּלָ֔יו וְאֵ֛ת כָּל־אֲשֶׁ֥ר נִמְצָ֖א בְּאֹֽצְרֹתָ֑יו לֹֽא־הָיָ֣ה דָבָ֗ר אֲ֠שֶׁר לֹֽא־הֶרְאָ֧ם חִזְקִיָּ֛הוּ בְּבֵיתֹ֖ו וּבְכָל־מֶמְשַׁלְתֹּֽו׃ | 2 |
ಹಿಜ್ಕೀಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
וַיָּבֹא֙ יְשַׁעְיָ֣הוּ הַנָּבִ֔יא אֶל־הַמֶּ֖לֶךְ חִזְקִיָּ֑הוּ וַיֹּ֨אמֶר אֵלָ֜יו מָ֥ה אָמְר֣וּ ׀ הָאֲנָשִׁ֣ים הָאֵ֗לֶּה וּמֵאַ֙יִן֙ יָבֹ֣אוּ אֵלֶ֔יךָ וַיֹּ֙אמֶר֙ חִזְקִיָּ֔הוּ מֵאֶ֧רֶץ רְחֹוקָ֛ה בָּ֥אוּ אֵלַ֖י מִבָּבֶֽל׃ | 3 |
ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ನನ್ನ ಬಳಿಗೆ ಬಂದವರು,” ಎಂದು ಹೇಳಿದನು.
וַיֹּ֕אמֶר מָ֥ה רָא֖וּ בְּבֵיתֶ֑ךָ וַיֹּ֣אמֶר חִזְקִיָּ֗הוּ אֵ֣ת כָּל־אֲשֶׁ֤ר בְּבֵיתִי֙ רָא֔וּ לֹֽא־הָיָ֥ה דָבָ֛ר אֲשֶׁ֥ר לֹֽא־הִרְאִיתִ֖ים בְּאֹוצְרֹתָֽי׃ | 4 |
ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.
וַיֹּ֥אמֶר יְשַׁעְיָ֖הוּ אֶל־חִזְקִיָּ֑הוּ שְׁמַ֖ע דְּבַר־יְהוָ֥ה צְבָאֹֽות׃ | 5 |
ಆಗ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರ ಯೆಹೋವ ದೇವರ ವಾಕ್ಯವನ್ನು ಕೇಳು.
הִנֵּה֮ יָמִ֣ים בָּאִים֒ וְנִשָּׂ֣א ׀ כָּל־אֲשֶׁ֣ר בְּבֵיתֶ֗ךָ וַאֲשֶׁ֨ר אָצְר֧וּ אֲבֹתֶ֛יךָ עַד־הַיֹּ֥ום הַזֶּ֖ה בָּבֶ֑ל לֹֽא־יִוָּתֵ֥ר דָּבָ֖ר אָמַ֥ר יְהוָֽה׃ | 6 |
ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವ ದೇವರು ಹೇಳಿದರು.
וּמִבָּנֶ֜יךָ אֲשֶׁ֨ר יֵצְא֧וּ מִמְּךָ֛ אֲשֶׁ֥ר תֹּולִ֖יד יִקָּ֑חוּ וְהָיוּ֙ סָרִיסִ֔ים בְּהֵיכַ֖ל מֶ֥לֶךְ בָּבֶֽל׃ | 7 |
ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು.
וַיֹּ֤אמֶר חִזְקִיָּ֙הוּ֙ אֶֽל־יְשַׁעְיָ֔הוּ טֹ֥וב דְּבַר־יְהוָ֖ה אֲשֶׁ֣ר דִּבַּ֑רְתָּ וַיֹּ֕אמֶר כִּ֥י יִהְיֶ֛ה שָׁלֹ֥ום וֶאֱמֶ֖ת בְּיָמָֽי׃ פ | 8 |
ಆಗ ಹಿಜ್ಕೀಯನು, “ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು,” ಎಂದುಕೊಂಡು ಯೆಶಾಯನಿಗೆ, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ!” ಎಂದನು.