< יְשַׁעְיָהוּ 57 >
הַצַּדִּ֣יק אָבָ֔ד וְאֵ֥ין אִ֖ישׁ שָׂ֣ם עַל־לֵ֑ב וְאַנְשֵׁי־חֶ֤סֶד נֶֽאֱסָפִים֙ בְּאֵ֣ין מֵבִ֔ין כִּֽי־מִפְּנֵ֥י הָרָעָ֖ה נֶאֱסַ֥ף הַצַּדִּֽיק׃ | 1 |
ನೀತಿವಂತನು ನಾಶವಾಗುವನು ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಭಕ್ತಿಯುಳ್ಳ ಮನುಷ್ಯರು ಕಣ್ಮರೆಯಾಗುವರು. ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾದರು ಎಂಬುದನ್ನು ಯಾರೂ ಯೋಚಿಸರು.
יָבֹ֣וא שָׁלֹ֔ום יָנ֖וּחוּ עַל־מִשְׁכְּבֹותָ֑ם הֹלֵ֖ךְ נְכֹחֹֽו׃ | 2 |
ಅವರು ಸಮಾಧಾನಕ್ಕೆ ಪ್ರವೇಶಿಸುತ್ತಾರೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬರೂ ತಮ್ಮ ಮರಣದ ಹಾಸಿಗೆಗಳಲ್ಲಿ ವಿಶ್ರಮಿಸಿಕೊಳ್ಳುತ್ತಾರೆ.
וְאַתֶּ֥ם קִרְבוּ־הֵ֖נָּה בְּנֵ֣י עֹנְנָ֑ה זֶ֥רַע מְנָאֵ֖ף וַתִּזְנֶֽה׃ | 3 |
“ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.
עַל־מִי֙ תִּתְעַנָּ֔גוּ עַל־מִ֛י תַּרְחִ֥יבוּ פֶ֖ה תַּאֲרִ֣יכוּ לָשֹׁ֑ון הֲלֹֽוא־אַתֶּ֥ם יִלְדֵי־פֶ֖שַׁע זֶ֥רַע שָֽׁקֶר׃ | 4 |
ಯಾರನ್ನು ಹಾಸ್ಯಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲಿಸಿ, ನಾಲಿಗೆಯನ್ನು ಚಾಚುತ್ತೀರಿ?
הַנֵּֽחָמִים֙ בָּֽאֵלִ֔ים תַּ֖חַת כָּל־עֵ֣ץ רַעֲנָ֑ן שֹׁחֲטֵ֤י הַיְלָדִים֙ בַּנְּחָלִ֔ים תַּ֖חַת סְעִפֵ֥י הַסְּלָעִֽים׃ | 5 |
ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿಕೊಂಡು, ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ, ಸುಳ್ಳಿನ ಸಂತತಿಯೂ ಅಲ್ಲವೋ?
בְּחַלְּקֵי־נַ֣חַל חֶלְקֵ֔ךְ הֵ֥ם הֵ֖ם גֹּורָלֵ֑ךְ גַּם־לָהֶ֞ם שָׁפַ֥כְתְּ נֶ֙סֶךְ֙ הֶעֱלִ֣ית מִנְחָ֔ה הַ֥עַל אֵ֖לֶּה אֶנָּחֵֽם׃ | 6 |
ಹಳ್ಳದ ನುಣುಪಾದ ಕಲ್ಲುಗಳು ನಿಮ್ಮ ಪಾಲು. ಅವುಗಳೇ ಹೌದು, ಅವೇ ನಿನ್ನ ಪಾಲು. ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಧಾನ್ಯ ಸಮರ್ಪಣೆಯನ್ನು ಅರ್ಪಿಸಿದ್ದೀಯೆ. ನಾನು ಇದನ್ನೆಲ್ಲಾ ಕಂಡು ನನ್ನ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?
עַ֤ל הַר־גָּבֹ֙הַּ֙ וְנִשָּׂ֔א שַׂ֖מְתְּ מִשְׁכָּבֵ֑ךְ גַּם־שָׁ֥ם עָלִ֖ית לִזְבֹּ֥חַ זָֽבַח׃ | 7 |
ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀಯೆ, ಬಲಿಯನ್ನರ್ಪಿಸಲು ಆ ಬೆಟ್ಟವನ್ನೇರಿದ್ದೀ.
וְאַחַ֤ר הַדֶּ֙לֶת֙ וְהַמְּזוּזָ֔ה שַׂ֖מְתְּ זִכְרֹונֵ֑ךְ כִּ֣י מֵאִתִּ֞י גִּלִּ֣ית וַֽתַּעֲלִ֗י הִרְחַ֤בְתְּ מִשְׁכָּבֵךְ֙ וַתִּכְרָת־לָ֣ךְ מֵהֶ֔ם אָהַ֥בְתְּ מִשְׁכָּבָ֖ם יָ֥ד חָזִֽית׃ | 8 |
ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕದ ಚಿಹ್ನೆಯನ್ನು ಇಟ್ಟಿದ್ದೀಯೆ. ಏಕೆಂದರೆ ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿಕೊಂಡಿದ್ದೀ. ಏರಿಹೋಗಿ ನಿನ್ನ ಮಂಚವನ್ನು ಅಗಲಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ. ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿ ಮಾಡಿದ್ದೀಯೆ.
וַתָּשֻׁ֤רִי לַמֶּ֙לֶךְ֙ בַּשֶּׁ֔מֶן וַתַּרְבִּ֖י רִקֻּחָ֑יִךְ וַתְּשַׁלְּחִ֤י צִרַ֙יךְ֙ עַד־מֵ֣רָחֹ֔ק וַתַּשְׁפִּ֖ילִי עַד־שְׁאֹֽול׃ (Sheol ) | 9 |
ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ. ದೂರಕ್ಕೆ ನಿನ್ನ ರಾಯಭಾರಿಗಳನ್ನು ಕಳುಹಿಸಿದ್ದೀ. ಪಾತಾಳದಷ್ಟು ನೀಚಸ್ಥಿತಿಗೆ ಇಳಿದಿದ್ದೀಯೆ. (Sheol )
בְּרֹ֤ב דַּרְכֵּךְ֙ יָגַ֔עַתְּ לֹ֥א אָמַ֖רְתְּ נֹואָ֑שׁ חַיַּ֤ת יָדֵךְ֙ מָצָ֔את עַל־כֵּ֖ן לֹ֥א חָלִֽית׃ | 10 |
ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ, ‘ಏನೂ ಪ್ರಯೋಜನವಿಲ್ಲ,’ ಎಂದುಕೊಳ್ಳಲಿಲ್ಲ. ನೀನು ಹೊಸ ಬಲವನ್ನು ತಂದುಕೊಂಡು, ಬೇಸರಗೊಳ್ಳದೆ ಮುಂದುವರೆದಿರುವೆ.
וְאֶת־מִ֞י דָּאַ֤גְתְּ וַתִּֽירְאִי֙ כִּ֣י תְכַזֵּ֔בִי וְאֹותִי֙ לֹ֣א זָכַ֔רְתְּ לֹא־שַׂ֖מְתְּ עַל־לִבֵּ֑ךְ הֲלֹ֨א אֲנִ֤י מַחְשֶׁה֙ וּמֵ֣עֹלָ֔ם וְאֹותִ֖י לֹ֥א תִירָֽאִי׃ | 11 |
“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?
אֲנִ֥י אַגִּ֖יד צִדְקָתֵ֑ךְ וְאֶֽת־מַעֲשַׂ֖יִךְ וְלֹ֥א יֹועִילֽוּךְ׃ | 12 |
ನಾನೇ ನಿನ್ನ ನೀತಿಯನ್ನೂ, ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಏಕೆಂದರೆ ಅವು ನಿನಗೆ ಪ್ರಯೋಜನವಾಗುವುದಿಲ್ಲ.
בְּזַֽעֲקֵךְ֙ יַצִּילֻ֣ךְ קִבּוּצַ֔יִךְ וְאֶת־כֻּלָּ֥ם יִשָּׂא־ר֖וּחַ יִקַּח־הָ֑בֶל וְהַחֹוסֶ֥ה בִי֙ יִנְחַל־אֶ֔רֶץ וְיִירַ֖שׁ הַר־קָדְשִֽׁי׃ | 13 |
ನೀನು ಸಹಾಯಕ್ಕಾಗಿ ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ರಕ್ಷಿಸಲಿ. ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು. ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವುದು. ಆದರೆ ನನ್ನಲ್ಲಿ ಆಶ್ರಯಿಸುವವನು, ದೇಶವನ್ನು ವಶಮಾಡಿಕೊಂಡು, ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.”
וְאָמַ֥ר סֹֽלּוּ־סֹ֖לּוּ פַּנּוּ־דָ֑רֶךְ הָרִ֥ימוּ מִכְשֹׁ֖ול מִדֶּ֥רֶךְ עַמִּֽי׃ ס | 14 |
ನಂತರ ಹೀಗೆ ಹೇಳಲಾಗುವುದು: ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ, ನನ್ನ ಜನರ ದಾರಿಯೊಳಗಿಂದ ಆತಂಕವನ್ನು ಎತ್ತಿ ಹಾಕಿರಿ,
כִּי֩ כֹ֨ה אָמַ֜ר רָ֣ם וְנִשָּׂ֗א שֹׁכֵ֥ן עַד֙ וְקָדֹ֣ושׁ שְׁמֹ֔ו מָרֹ֥ום וְקָדֹ֖ושׁ אֶשְׁכֹּ֑ון וְאֶת־דַּכָּא֙ וּשְׁפַל־ר֔וּחַ לְהַחֲיֹות֙ ר֣וּחַ שְׁפָלִ֔ים וּֽלְהַחֲיֹ֖ות לֵ֥ב נִדְכָּאִֽים׃ | 15 |
ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.
כִּ֣י לֹ֤א לְעֹולָם֙ אָרִ֔יב וְלֹ֥א לָנֶ֖צַח אֶקְּצֹ֑וף כִּי־ר֙וּחַ֙ מִלְּפָנַ֣י יַֽעֲטֹ֔וף וּנְשָׁמֹ֖ות אֲנִ֥י עָשִֽׂיתִי׃ | 16 |
ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
בַּעֲוֹ֥ן בִּצְעֹ֛ו קָצַ֥פְתִּי וְאַכֵּ֖הוּ הַסְתֵּ֣ר וְאֶקְצֹ֑ף וַיֵּ֥לֶךְ שֹׁובָ֖ב בְּדֶ֥רֶךְ לִבֹּֽו׃ | 17 |
ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪಗೊಂಡು, ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾದೆನು. ಅವನು ಮೊಂಡುತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
דְּרָכָ֥יו רָאִ֖יתִי וְאֶרְפָּאֵ֑הוּ וְאַנְחֵ֕הוּ וַאֲשַׁלֵּ֧ם נִֽחֻמִ֛ים לֹ֖ו וְלַאֲבֵלָֽיו׃ | 18 |
ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.
בֹּורֵ֖א נוּב (נִ֣יב) שְׂפָתָ֑יִם שָׁלֹ֨ום ׀ שָׁלֹ֜ום לָרָחֹ֧וק וְלַקָּרֹ֛וב אָמַ֥ר יְהוָ֖ה וּרְפָאתִֽיו׃ | 19 |
ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
וְהָרְשָׁעִ֖ים כַּיָּ֣ם נִגְרָ֑שׁ כִּ֤י הַשְׁקֵט֙ לֹ֣א יוּכָ֔ל וַיִּגְרְשׁ֥וּ מֵימָ֖יו רֶ֥פֶשׁ וָטִֽיט׃ | 20 |
ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ, ಮೈಲಿಗೆಯನ್ನೂ ಕಾರುವಂಥ ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿದ್ದಾರೆ.
אֵ֣ין שָׁלֹ֔ום אָמַ֥ר אֱלֹהַ֖י לָרְשָׁעִֽים׃ ס | 21 |
“ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ನನ್ನ ದೇವರು ಹೇಳುತ್ತಾರೆ.