< יִרְמְיָהוּ 36 >
וַֽיְהִי֙ בַּשָּׁנָ֣ה הָרְבִיעִ֔ת לִיהֹויָקִ֥ים בֶּן־יֹאשִׁיָּ֖הוּ מֶ֣לֶךְ יְהוּדָ֑ה הָיָ֞ה הַדָּבָ֤ר הַזֶּה֙ אֶֽל־יִרְמְיָ֔הוּ מֵאֵ֥ת יְהוָ֖ה לֵאמֹֽר׃ | 1 |
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಈ ವಾಕ್ಯವು ಬಂದಿತು:
קַח־לְךָ֮ מְגִלַּת־סֵפֶר֒ וְכָתַבְתָּ֣ אֵלֶ֗יהָ אֵ֣ת כָּל־הַדְּבָרִ֞ים אֲשֶׁר־דִּבַּ֧רְתִּי אֵלֶ֛יךָ עַל־יִשְׂרָאֵ֥ל וְעַל־יְהוּדָ֖ה וְעַל־כָּל־הַגֹּויִ֑ם מִיֹּ֞ום דִּבַּ֤רְתִּי אֵלֶ֙יךָ֙ מִימֵ֣י יֹאשִׁיָּ֔הוּ וְעַ֖ד הַיֹּ֥ום הַזֶּֽה׃ | 2 |
“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
אוּלַ֤י יִשְׁמְעוּ֙ בֵּ֣ית יְהוּדָ֔ה אֵ֚ת כָּל־הָ֣רָעָ֔ה אֲשֶׁ֛ר אָנֹכִ֥י חֹשֵׁ֖ב לַעֲשֹׂ֣ות לָהֶ֑ם לְמַ֣עַן יָשׁ֗וּבוּ אִ֚ישׁ מִדַּרְכֹּ֣ו הָרָעָ֔ה וְסָלַחְתִּ֥י לַעֲוֹנָ֖ם וּלְחַטָּאתָֽם׃ ס | 3 |
ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.
וַיִּקְרָ֣א יִרְמְיָ֔הוּ אֶת־בָּר֖וּךְ בֶּן־נֵֽרִיָּ֑ה וַיִּכְתֹּ֨ב בָּר֜וּךְ מִפִּ֣י יִרְמְיָ֗הוּ אֵ֣ת כָּל־דִּבְרֵ֧י יְהוָ֛ה אֲשֶׁר־דִּבֶּ֥ר אֵלָ֖יו עַל־מְגִלַּת־סֵֽפֶר׃ | 4 |
ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆದನು. ಬಾರೂಕನು ಯೆರೆಮೀಯನ ಬಾಯಿಂದ ಯೆಹೋವ ದೇವರು ಅವನಿಗೆ ಹೇಳಿದ್ದ ಮಾತುಗಳನ್ನೆಲ್ಲಾ ಕೇಳಿ, ಗ್ರಂಥದ ಸುರುಳಿಯನ್ನು ಬರೆದನು.
וַיְצַוֶּ֣ה יִרְמְיָ֔הוּ אֶת־בָּר֖וּךְ לֵאמֹ֑ר אֲנִ֣י עָצ֔וּר לֹ֣א אוּכַ֔ל לָבֹ֖וא בֵּ֥ית יְהוָֽה׃ | 5 |
ಆಮೇಲೆ ಯೆರೆಮೀಯನು ಬಾರೂಕನಿಗೆ ಆಜ್ಞಾಪಿಸಿದ್ದೇನೆಂದರೆ, “ನಾನು ಇಲ್ಲಿ ಬಂಧಿಸಲಾಗಿದ್ದೇನೆ. ಯೆಹೋವ ದೇವರ ಆಲಯಕ್ಕೆ ಹೋಗಲಾರೆನು.
וּבָאתָ֣ אַתָּ֡ה וְקָרָ֣אתָ בַמְּגִלָּ֣ה אֲשֶׁר־כָּתַֽבְתָּ־מִפִּי֩ אֶת־דִּבְרֵ֨י יְהוָ֜ה בְּאָזְנֵ֥י הָעָ֛ם בֵּ֥ית יְהוָ֖ה בְּיֹ֣ום צֹ֑ום וְגַ֨ם בְּאָזְנֵ֧י כָל־יְהוּדָ֛ה הַבָּאִ֥ים מֵעָרֵיהֶ֖ם תִּקְרָאֵֽם׃ | 6 |
ಆದ್ದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ, ನೀನು ಬರೆದು ಸುರುಳಿಯಲ್ಲಿ ಯೆಹೋವ ದೇವರ ಆಲಯದೊಳಗೆ ಉಪವಾಸದ ದಿವಸದಲ್ಲಿ ಯೆಹೋವ ದೇವರ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
אוּלַ֞י תִּפֹּ֤ל תְּחִנָּתָם֙ לִפְנֵ֣י יְהוָ֔ה וְיָשֻׁ֕בוּ אִ֖ישׁ מִדַּרְכֹּ֣ו הָרָעָ֑ה כִּֽי־גָדֹ֤ול הָאַף֙ וְהַ֣חֵמָ֔ה אֲשֶׁר־דִּבֶּ֥ר יְהוָ֖ה אֶל־הָעָ֥ם הַזֶּֽה׃ | 7 |
ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”
וַיַּ֗עַשׂ בָּרוּךְ֙ בֶּן־נֵ֣רִיָּ֔ה כְּכֹ֥ל אֲשֶׁר־צִוָּ֖הוּ יִרְמְיָ֣הוּ הַנָּבִ֑יא לִקְרֹ֥א בַסֵּ֛פֶר דִּבְרֵ֥י יְהוָ֖ה בֵּ֥ית יְהֹוָֽה׃ ס | 8 |
ಆಗ ನೇರೀಯನ ಮಗ ಬಾರೂಕನು ಪ್ರವಾದಿಯಾದ ಯೆರೆಮೀಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿ, ಸುರುಳಿಯಲ್ಲಿನ ಯೆಹೋವ ದೇವರ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಓದಿದನು.
וַיְהִ֣י בַשָּׁנָ֣ה הַ֠חֲמִשִׁית לִיהֹויָקִ֨ים בֶּן־יֹאשִׁיָּ֤הוּ מֶֽלֶךְ־יְהוּדָה֙ בַּחֹ֣דֶשׁ הַתְּשִׁעִ֔י קָרְא֨וּ צֹ֜ום לִפְנֵ֧י יְהוָ֛ה כָּל־הָעָ֖ם בִּירֽוּשָׁלָ֑͏ִם וְכָל־הָעָ֗ם הַבָּאִ֛ים מֵעָרֵ֥י יְהוּדָ֖ה בִּירוּשָׁלָֽ͏ִם׃ | 9 |
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.
וַיִּקְרָ֨א בָר֥וּךְ בַּסֵּ֛פֶר אֶת־דִּבְרֵ֥י יִרְמְיָ֖הוּ בֵּ֣ית יְהוָ֑ה בְּלִשְׁכַּ֡ת גְּמַרְיָהוּ֩ בֶן־שָׁפָ֨ן הַסֹּפֵ֜ר בֶּחָצֵ֣ר הָעֶלְיֹ֗ון פֶּ֣תַח שַׁ֤עַר בֵּית־יְהוָה֙ הֶֽחָדָ֔שׁ בְּאָזְנֵ֖י כָּל־הָעָֽם׃ | 10 |
ಆಗ ಬಾರೂಕನು ಪುಸ್ತಕದಿಂದ ಯೆರೆಮೀಯನ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಲೇಖಕನಾಗಿರುವ ಶಾಫಾನನ ಮಗನಾಗಿರುವ ಗೆಮರೀಯನ ಕೊಠಡಿಯಲ್ಲಿ ಮೇಲಿನ ಅಂಗಳದಲ್ಲಿ, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರು ಕೇಳುವಂತೆ ಓದಿ ಹೇಳಿದನು.
וַ֠יִּשְׁמַ֗ע מִכָ֨יְהוּ בֶן־גְּמַרְיָ֧הוּ בֶן־שָׁפָ֛ן אֶת־כָּל־דִּבְרֵ֥י יְהוָ֖ה מֵעַ֥ל הַסֵּֽפֶר׃ | 11 |
ಶಾಫಾನನ ಮೊಮ್ಮಗನೂ, ಗೆಮರೀಯನ ಮಗನೂ ಆದ ಮೀಕಾಯನು ಸುರುಳಿಯಿಂದ ಓದಲಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿದನು. ಅಲ್ಲಿಂದ ಅರಮನೆಯಲ್ಲಿದ್ದ ಲೇಖಕನ ಕೊಠಡಿಗೆ ಇಳಿದು ಹೋದನು.
וַיֵּ֤רֶד בֵּית־הַמֶּ֙לֶךְ֙ עַל־לִשְׁכַּ֣ת הַסֹּפֵ֔ר וְהִ֨נֵּה־שָׁ֔ם כָּל־הַשָּׂרִ֖ים יֹֽושְׁבִ֑ים אֱלִישָׁמָ֣ע הַסֹּפֵ֡ר וּדְלָיָ֣הוּ בֶן־שְׁ֠מַעְיָהוּ וְאֶלְנָתָ֨ן בֶּן־עַכְבֹּ֜ור וּגְמַרְיָ֧הוּ בֶן־שָׁפָ֛ן וְצִדְקִיָּ֥הוּ בֶן־חֲנַנְיָ֖הוּ וְכָל־הַשָּׂרִֽים׃ | 12 |
ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶಾಫಾನನ ಮಗ ಗೆಮರೀಯನು, ಹನನ್ಯನ ಮಗ ಚಿದ್ಕೀಯನು ಹೀಗೆ ರಾಜ್ಯಾಧಿಕಾರಿಗಳೆಲ್ಲರೂ ಕುಳಿತುಕೊಂಡಿದ್ದರು.
וַיַּגֵּ֤ד לָהֶם֙ מִכָ֔יְהוּ אֵ֥ת כָּל־הַדְּבָרִ֖ים אֲשֶׁ֣ר שָׁמֵ֑עַ בִּקְרֹ֥א בָר֛וּךְ בַּסֵּ֖פֶר בְּאָזְנֵ֥י הָעָֽם׃ | 13 |
ಆಗ ಮೀಕಾಯನು ಅವರಿಗೆ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ, ತಾನು ಕೇಳಿದ ವಾಕ್ಯಗಳನ್ನೆಲ್ಲಾ ತಿಳಿಸಿದನು.
וַיִּשְׁלְח֨וּ כָל־הַשָּׂרִ֜ים אֶל־בָּר֗וּךְ אֶת־יְהוּדִ֡י בֶּן־נְ֠תַנְיָהוּ בֶּן־שֶׁלֶמְיָ֣הוּ בֶן־כּוּשִׁי֮ לֵאמֹר֒ הַמְּגִלָּ֗ה אֲשֶׁ֨ר קָרָ֤אתָ בָּהּ֙ בְּאָזְנֵ֣י הָעָ֔ם קָחֶ֥נָּה בְיָדְךָ֖ וָלֵ֑ךְ וַ֠יִּקַּח בָּר֨וּךְ בֶּן־נֵרִיָּ֤הוּ אֶת־הַמְּגִלָּה֙ בְּיָדֹ֔ו וַיָּבֹ֖א אֲלֵיהֶֽם׃ | 14 |
ಅಧಿಕಾರಿಗಳೆಲ್ಲರು ಸೇರಿ ನೆತನ್ಯನ ಮಗನೂ, ಶೆಲೆಮ್ಯನ ಮೊಮ್ಮಗನೂ, ಕೂಷಿಯ ಮರಿಮಗನೂ ಆದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿದನು. “ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ,” ಎಂದು ಹೇಳಿ ಕಳುಹಿಸಿದರು. ಅಂತೆಯೇ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು.
וַיֹּאמְר֣וּ אֵלָ֔יו שֵׁ֣ב נָ֔א וּקְרָאֶ֖נָּה בְּאָזְנֵ֑ינוּ וַיִּקְרָ֥א בָר֖וּךְ בְּאָזְנֵיהֶֽם׃ | 15 |
ಆಗ ಅವರು ಅವನಿಗೆ, “ಈಗ ಕುಳಿತುಕೊಂಡು ನಮಗೆ ಓದಿ ಹೇಳು,” ಎಂದರು. ಆಗ ಬಾರೂಕನು ಅವರಿಗೆ ಓದಿ ಹೇಳಿದನು.
וַיְהִ֗י כְּשָׁמְעָם֙ אֶת־כָּל־הַדְּבָרִ֔ים פָּחֲד֖וּ אִ֣ישׁ אֶל־רֵעֵ֑הוּ וַיֹּֽאמְרוּ֙ אֶל־בָּר֔וּךְ הַגֵּ֤יד נַגִּיד֙ לַמֶּ֔לֶךְ אֵ֥ת כָּל־הַדְּבָרִ֖ים הָאֵֽלֶּה׃ | 16 |
ಆಗ ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು, “ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇವೆ,” ಎಂದು ಬಾರೂಕನಿಗೆ ಹೇಳಿದರು.
וְאֶ֨ת־בָּר֔וּךְ שָׁאֲל֖וּ לֵאמֹ֑ר הַגֶּד־נָ֣א לָ֔נוּ אֵ֗יךְ כָּתַ֛בְתָּ אֶת־כָּל־הַדְּבָרִ֥ים הָאֵ֖לֶּה מִפִּֽיו׃ | 17 |
ಅವರು ಬಾರೂಕನಿಗೆ, “ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದೆ, ನಮಗೆ ತಿಳಿಸು,” ಎಂದರು.
וַיֹּ֤אמֶר לָהֶם֙ בָּר֔וּךְ מִפִּיו֙ יִקְרָ֣א אֵלַ֔י אֵ֥ת כָּל־הַדְּבָרִ֖ים הָאֵ֑לֶּה וַאֲנִ֛י כֹּתֵ֥ב עַל־הַסֵּ֖פֶר בַּדְּיֹֽו׃ פ | 18 |
ಆಗ ಬಾರೂಕನು ಅವರಿಗೆ, “ಅವನು ಈ ವಾಕ್ಯಗಳನ್ನೆಲ್ಲಾ ನನಗೆ ಹೇಳಿಕೊಟ್ಟನು. ನಾನು ಅವುಗಳನ್ನು ಮಸಿಯಿಂದ ಸುರುಳಿಯಲ್ಲಿ ಬರೆದೆನು,” ಎಂದನು.
וַיֹּאמְר֤וּ הַשָּׂרִים֙ אֶל־בָּר֔וּךְ לֵ֥ךְ הִסָּתֵ֖ר אַתָּ֣ה וְיִרְמְיָ֑הוּ וְאִ֥ישׁ אַל־יֵדַ֖ע אֵיפֹ֥ה אַתֶּֽם׃ | 19 |
ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು.
וַיָּבֹ֤אוּ אֶל־הַמֶּ֙לֶךְ֙ חָצֵ֔רָה וְאֶת־הַמְּגִלָּ֣ה הִפְקִ֔דוּ בְּלִשְׁכַּ֖ת אֱלִישָׁמָ֣ע הַסֹּפֵ֑ר וַיַּגִּ֙ידוּ֙ בְּאָזְנֵ֣י הַמֶּ֔לֶךְ אֵ֖ת כָּל־הַדְּבָרִֽים׃ | 20 |
ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರುಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು ಮತ್ತು ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.
וַיִּשְׁלַ֨ח הַמֶּ֜לֶךְ אֶת־יְהוּדִ֗י לָקַ֙חַת֙ אֶת־הַמְּגִלָּ֔ה וַיִּ֨קָּחֶ֔הָ מִלִּשְׁכַּ֖ת אֱלִישָׁמָ֣ע הַסֹּפֵ֑ר וַיִּקְרָאֶ֤הָ יְהוּדִי֙ בְּאָזְנֵ֣י הַמֶּ֔לֶךְ וּבְאָזְנֵי֙ כָּל־הַשָּׂרִ֔ים הָעֹמְדִ֖ים מֵעַ֥ל הַמֶּֽלֶךְ׃ | 21 |
ಹೀಗೆ ಅರಸನು ಯೆಹೂದಿಯನ್ನು, ಆ ಸುರುಳಿಯನ್ನು ತೆಗೆದುಕೊಂಡು ಬರುವ ಹಾಗೆ ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು. ಯೆಹೂದಿಯು ಅದನ್ನು ಅರಸನಿಗೂ, ಅರಸನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನರಿಗೂ ಓದಿ ಹೇಳಿದನು.
וְהַמֶּ֗לֶךְ יֹושֵׁב֙ בֵּ֣ית הַחֹ֔רֶף בַּחֹ֖דֶשׁ הַתְּשִׁיעִ֑י וְאֶת־הָאָ֖ח לְפָנָ֥יו מְבֹעָֽרֶת׃ | 22 |
ಆಗ ಒಂಬತ್ತನೆಯ ತಿಂಗಳಿನ ಅರಸನು ಚಳಿಗಾಲದ ಮನೆಯಲ್ಲಿ ಕುಳಿತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು.
וַיְהִ֣י ׀ כִּקְרֹ֣וא יְהוּדִ֗י שָׁלֹ֣שׁ דְּלָתֹות֮ וְאַרְבָּעָה֒ יִֽקְרָעֶ֙הָ֙ בְּתַ֣עַר הַסֹּפֵ֔ר וְהַשְׁלֵ֕ךְ אֶל־הָאֵ֖שׁ אֲשֶׁ֣ר אֶל־הָאָ֑ח עַד־תֹּם֙ כָּל־הַמְּגִלָּ֔ה עַל־הָאֵ֖שׁ אֲשֶׁ֥ר עַל־הָאָֽח׃ | 23 |
ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು.
וְלֹ֣א פָחֲד֔וּ וְלֹ֥א קָרְע֖וּ אֶת־בִּגְדֵיהֶ֑ם הַמֶּ֙לֶךְ֙ וְכָל־עֲבָדָ֔יו הַשֹּׁ֣מְעִ֔ים אֵ֥ת כָּל־הַדְּבָרִ֖ים הָאֵֽלֶּה׃ | 24 |
ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.
וְגַם֩ אֶלְנָתָ֨ן וּדְלָיָ֤הוּ וּגְמַרְיָ֙הוּ֙ הִפְגִּ֣עוּ בַמֶּ֔לֶךְ לְבִלְתִּ֥י שְׂרֹ֖ף אֶת־הַמְּגִלָּ֑ה וְלֹ֥א שָׁמַ֖ע אֲלֵיהֶֽם׃ | 25 |
ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
וַיְצַוֶּ֣ה הַ֠מֶּלֶךְ אֶת־יְרַחְמְאֵ֨ל בֶּן־הַמֶּ֜לֶךְ וְאֶת־שְׂרָיָ֣הוּ בֶן־עַזְרִיאֵ֗ל וְאֶת־שֶֽׁלֶמְיָ֙הוּ֙ בֶּֽן־עַבְדְּאֵ֔ל לָקַ֙חַת֙ אֶת־בָּר֣וּךְ הַסֹּפֵ֔ר וְאֵ֖ת יִרְמְיָ֣הוּ הַנָּבִ֑יא וַיַּסְתִּרֵ֖ם יְהוָֽה׃ ס | 26 |
ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು.
וַיְהִ֥י דְבַר־יְהוָ֖ה אֶֽל־יִרְמְיָ֑הוּ אַחֲרֵ֣י ׀ שְׂרֹ֣ף הַמֶּ֗לֶךְ אֶת־הַמְּגִלָּה֙ וְאֶת־הַדְּבָרִ֔ים אֲשֶׁ֨ר כָּתַ֥ב בָּר֛וּךְ מִפִּ֥י יִרְמְיָ֖הוּ לֵאמֹֽר׃ | 27 |
ಅರಸನು ಆ ಸುರುಳಿಯನ್ನು ಬಾರೂಕನು ಯೆರೆಮೀಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ, ಸುಟ್ಟ ಮೇಲೆ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು:
שׁ֥וּב קַח־לְךָ֖ מְגִלָּ֣ה אַחֶ֑רֶת וּכְתֹ֣ב עָלֶ֗יהָ אֵ֤ת כָּל־הַדְּבָרִים֙ הָרִ֣אשֹׁנִ֔ים אֲשֶׁ֣ר הָי֗וּ עַל־הַמְּגִלָּה֙ הָרִ֣אשֹׁנָ֔ה אֲשֶׁ֥ר שָׂרַ֖ף יְהֹויָקִ֥ים מֶֽלֶךְ־יְהוּדָֽה׃ | 28 |
“ನೀನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
וְעַל־יְהֹויָקִ֤ים מֶֽלֶךְ־יְהוּדָה֙ תֹּאמַ֔ר כֹּ֖ה אָמַ֣ר יְהוָ֑ה אַ֠תָּה שָׂרַ֜פְתָּ אֶת־הַמְּגִלָּ֤ה הַזֹּאת֙ לֵאמֹ֔ר מַדּוּעַ֩ כָּתַ֨בְתָּ עָלֶ֜יהָ לֵאמֹ֗ר בֹּֽא־יָבֹ֤וא מֶֽלֶךְ־בָּבֶל֙ וְהִשְׁחִית֙ אֶת־הָאָ֣רֶץ הַזֹּ֔את וְהִשְׁבִּ֥ית מִמֶּ֖נָּה אָדָ֥ם וּבְהֵמָֽה׃ ס | 29 |
ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.
לָכֵ֞ן כֹּֽה־אָמַ֣ר יְהוָ֗ה עַל־יְהֹֽויָקִים֙ מֶ֣לֶךְ יְהוּדָ֔ה לֹא־יִֽהְיֶה־לֹּ֥ו יֹושֵׁ֖ב עַל־כִּסֵּ֣א דָוִ֑ד וְנִבְלָתֹו֙ תִּֽהְיֶ֣ה מֻשְׁלֶ֔כֶת לַחֹ֥רֶב בַּיֹּ֖ום וְלַקֶּ֥רַח בַּלָּֽיְלָה׃ | 30 |
ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು.
וּפָקַדְתִּ֨י עָלָ֧יו וְעַל־זַרְעֹ֛ו וְעַל־עֲבָדָ֖יו אֶת־עֲוֹנָ֑ם וְהֵבֵאתִ֣י עֲ֠לֵיהֶם וְעַל־יֹשְׁבֵ֨י יְרוּשָׁלַ֜͏ִם וְאֶל־אִ֣ישׁ יְהוּדָ֗ה אֵ֧ת כָּל־הָרָעָ֛ה אֲשֶׁר־דִּבַּ֥רְתִּי אֲלֵיהֶ֖ם וְלֹ֥א שָׁמֵֽעוּ׃ ס | 31 |
ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’”
וְיִרְמְיָ֜הוּ לָקַ֣ח ׀ מְגִלָּ֣ה אַחֶ֗רֶת וַֽיִּתְּנָהּ֮ אֶל־בָּר֣וּךְ בֶּן־נֵרִיָּהוּ֮ הַסֹּפֵר֒ וַיִּכְתֹּ֤ב עָלֶ֙יהָ֙ מִפִּ֣י יִרְמְיָ֔הוּ אֵ֚ת כָּל־דִּבְרֵ֣י הַסֵּ֔פֶר אֲשֶׁ֥ר שָׂרַ֛ף יְהֹויָקִ֥ים מֶֽלֶךְ־יְהוּדָ֖ה בָּאֵ֑שׁ וְעֹ֨וד נֹוסַ֧ף עֲלֵיהֶ֛ם דְּבָרִ֥ים רַבִּ֖ים כָּהֵֽמָּה׃ ס | 32 |
ಆಗ ಯೆರೆಮೀಯನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗ ಲೇಖಕನಾದ ಬಾರೂಕನಿಗೆ ಕೊಟ್ಟನು. ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಸುರುಳಿಯ ವಾಕ್ಯಗಳನ್ನೆಲ್ಲಾ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲಾದವು.